ಮುಖ್ಯ ವಿಷಯಕ್ಕೆ ತೆರಳಿ
Peepal Media
ತಾಜಾ ಸುದ್ದಿ
●ಈಸಕ್ಕಿ ಆಸೆಯನ್ನೂ ಮೀರಿದ ಆಯ್ದಕ್ಕಿ ಲಕ್ಕಮ್ಮ●ಗಾಜಾ ಸ್ಮಶಾನದ ಮೇಲೆ ಮತ್ತೆ ಅರಳುತ್ತಾ ನೆತನ್ಯಾಹು ಕುರ್ಚಿ?●ಅರುಣಾಚಲದಲ್ಲಿ ಚೀನಾ ಸೈನಿಕರೊಂದಿಗೆ ಮುಖಾಮುಖಿ: ಕೇಂದ್ರದ ಮೌನವನ್ನು ಪ್ರಶ್ನಿಸಿದ ಕಾಂಗ್ರೆಸ್‌ನ ಜೈರಾಮ್ ರಮೇಶ್●ಕಡತಗಳ ವಿಲೇವಾರಿ ಪ್ರಕ್ರಿಯೆ ಬದಲಾವಣೆ: ಚುನಾವಣಾ ಆಯುಕ್ತರಿಂದ ಕ್ಯಾಬಿನೆಟ್‌ ಕಾರ್ಯದರ್ಶಿಗೆ ಆಕ್ಷೇಪಣಾ ಪತ್ರ●ಮೋದಿ–ಅದಾನಿ ಕುರಿತ ಸಾಕ್ಷ್ಯಚಿತ್ರ ಹಂಚಿಕೊಂಡ ರಾಜ್‌ ಠಾಕ್ರೆ; ತೆಗೆದುಹಾಕುವಂತೆ ಸೂಚನೆಗಳ ನಡುವೆ ಮುಂದುವರೆದ ಚರ್ಚೆ●ಮಂಡ್ಯದಲ್ಲಿ ARAI ಪರೀಕ್ಷಾ ಕೇಂದ್ರಗಳಿಗೆ ಭೂಮಿ ಹಂಚಿಕೆ ವಿಳಂಬ: ರಾಜ್ಯ ಸರ್ಕಾರಕ್ಕೆ ಎಚ್‌.ಡಿ. ಕುಮಾರಸ್ವಾಮಿ ಪತ್ರ●ರಾಷ್ಟ್ರೀಯತೆಯ ಪಾಠ ನನಗೆ ಬೇಕಿಲ್ಲ; ನಮ್ಮ ಗುರಿ ಆಡಳಿತ, ಸಾಮಾಜಿಕ ಜಾಲತಾಣದ ಪ್ರಚಾರವಲ್ಲ: ಕೆ. ಅಣ್ಣಾಮಲೈ●ಕೇವಲ ಮದುವೆಗಾಗಿ ಧರ್ಮಾಂತರವಾಗುವುದನ್ನು ಒಪ್ಪಲು ಸಾಧ್ಯವಿಲ್ಲ: ಬಾಂಬೆ ಹೈಕೋರ್ಟ್‌●ಇನ್ನು ನೋಂದಾಯಿತ ಸಿಮ್‌ ಇದ್ದರೆ ಮಾತ್ರ ವಾಟ್ಸ್‌ಆ್ಯಪ್‌ ಬಳಕೆ ಸಾಧ್ಯ: ಜನವರಿ 1, 2027ರಿಂದ ಹೊಸ ನಿಯಮ ಜಾರಿ●ಈ-ಮುದ್ರ ಡಿಜಿಟಲ್‌ ಪ್ರಮಾಣಪತ್ರಗಳಲ್ಲಿ ಭದ್ರತಾ ಲೋಪ: ಜಾಗತಿಕ ತಂತ್ರಜ್ಞಾನ ವಲಯದಲ್ಲಿ ಆತಂಕ●ಹಾಸನ ಕಾಳಸಂತೆಗೆ ಪಡಿತರ ಅಕ್ಕಿ ಮಾರಾಟ ಯತ್ನ – ಕ್ವಿಂಟಲ್‌ ಗಟ್ಟಲೆ ಅಕ್ಕಿ, ರಾಗಿ ವಶ●ಸದ್ಯದಲ್ಲೆ ಕಬ್ಬು ಬೆಳೆಗಾರರ ಸಭೆ ಕರೆದಿದ್ದೇನೆ – ಸಿಎಂ ಡಿ.ಕೆ ಶಿವಕುಮಾರ್●ರಾಜ್ಯದಲ್ಲಿ ಐದು ದಿನಗಳಲ್ಲಿ ಮಳೆ ಸಾಧ್ಯತೆ – ಹವಾಮಾನ ಇಲಾಖೆ ಮುನ್ಸೂಚನೆ●ಸಿದ್ದರಾಮಯ್ಯ ಅವರನ್ನು ಅಧಿಕಾರದಿಂದ ಇಳಿಸಲು ವ್ಯವಸ್ಥಿತ ಸಂಚು ರೂಪಿಸಿ ಯಶಸ್ವಿಗೊಂಡಿದ್ದಾರೆ – ಸಿಎಂ ಯಡಿಯೂರಪ್ಪ●ಚುನಾವಣಾ ಆಯುಕ್ತರಿಗೆ ರಕ್ಷಣೆ ನೀಡುವ ಕಾನೂನು ರದ್ದುಗೊಳಿಸಿ – ಮಲ್ಲಿಕಾರ್ಜುನ ಖರ್ಗೆ ಆಗ್ರಹ●ದಸರಾ ವೇಳೆ ಪೊಲೀಸರ ಲಾಠಿ ಏಟಿಗೆ 4 ವರ್ಷದ ಬಾಲಕ ಗಂಭೀರ – ICUನಲ್ಲಿ ಅಂತಿಮ ಹೋರಾಟ●ಸೌದಿ ವಿಮಾನ ನಿಲ್ದಾಣದ ಮೇಲೆ ಭೀಕರ ದಾಳಿ – 8 ಮಂದಿಗೆ ಗಾಯ, ಇಬ್ಬರ ಅಂತ್ಯ●ನಂದಿಧ್ವಜ ಪೂಜೆಗೆ ಸಚಿವರಿಗೆ ಅವಕಾಶ ನಿರಾಕರಿಸಿದ ಅಧಿಕಾರಿಗಳ ವಿರುದ್ಧ ತನಿಖೆಗೆ ಆದೇಶ: ಮುಖ್ಯಮಂತ್ರಿ ಡಿ ಕೆ ಶಿವಕುಮಾರ್‌●300 ವರ್ಷಗಳಷ್ಟು ಹಳೆಯ ಐತಿಹಾಸಿಕ ರೇಸ್‌ಕೋರ್ಸ್ ಮಸೀದಿಯ ವಿದ್ಯುತ್ ಹಾಗೂ ನೀರು ಸಂಪರ್ಕ ಕಡಿತ: ತುರ್ತು ರಕ್ಷಣೆ ಕೋರಿದ ದೆಹಲಿ ವಕ್ಫ್ ಮಂಡಳಿ●ತಿಹಾರ್ ಜೈಲಿನಿಂದ ಬಿಡುಗಡೆಯಾದ ಬೆನ್ನಲ್ಲೇ ಸೌರವ್ ದಾಸ್ ಹಾಗೂ ಅಶೋತ್ ರಾಂಕಾಗೆ ದೆಹಲಿ ಅಪರಾಧ ವಿಭಾಗದಿಂದ ಸಮನ್ಸ್

ಸಿಬಿಐ ಮುಂದೆ 74 ಪ್ರಕರಣಗಳು ತಟಸ್ಥ ; ಹನಿಟ್ರಾಪ್ ಅದರಲ್ಲಿ ಮತ್ತೊಂದಾಗಬೇಕೇ? : ಸಚಿವ ಪ್ರಿಯಾಂಕ್ ಖರ್ಗೆ

P

Peepal Media Desk • ರಾಜಕೀಯ

• 1 ನಿಮಿಷದ ಓದು

ಸಿಬಿಐ ಮುಂದೆ 74 ಪ್ರಕರಣಗಳು ತಟಸ್ಥ ; ಹನಿಟ್ರಾಪ್ ಅದರಲ್ಲಿ ಮತ್ತೊಂದಾಗಬೇಕೇ? : ಸಚಿವ ಪ್ರಿಯಾಂಕ್ ಖರ್ಗೆ


ಈಗಾಗಲೇ ಸಿಬಿಐ ಮುಂದೆ ರಾಜ್ಯದ 74 ಪ್ರಕರಣಗಳು ತನಿಖೆಗೆ ಬಾಕಿ ಇರುವಾಗ ಬಿಜೆಪಿಯವರು ಹನಿಟ್ರಾಪ್ ಪ್ರಕರಣವನ್ನು ಸಿಬಿಐ ತನಿಖೆಗೆ ಕೊಡಬೇಕು ಎಂದು ಹೇಳುವ ಮೂಲಕ ತಮ್ಮ ತಿಳುವಳಿಕೆಯ ಕೊರತೆಯನ್ನು ಮತ್ತೊಮ್ಮೆ ಸಾಬೀತು ಮಾಡಿಕೊಂಡಿದ್ದಾರೆ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ ರಾಜ್‌ ಹಾಗೂ ಮಾಹಿತಿ ತಂತ್ರಜ್ಞಾನ ಸಚಿವ ಪ್ರಿಯಾಂಕ್‌ ಖರ್ಗೆ ಹೇಳಿದ್ದಾರೆ.

ಈ ಸಂಬಂಧ ಪತ್ರಿಕಾ ಹೇಳಿಕೆ ನೀಡಿರುವ ಸಚಿವರು ಏನೇ ನಡೆದರೂ ಅದನ್ನು ಸಿಬಿಐಗೆ ಕೊಡಿ ಎನ್ನುವುದು ಬಿಜೆಪಿಯವರಿಗೆ ಅಭ್ಯಾಸವಾಗಿದೆ, ತಮ್ಮ ಸರ್ಕಾರದ ಅವಧಿಯಲ್ಲಿ ಸಿಡಿ ಪ್ರಕರಣ ನಡೆದಾಗ ಬಿಜೆಪಿಯವರೆಲ್ಲ ತಡೆಯಾಜ್ಞೆ ತಂದಿದ್ದರು, ಅದರ ಬದಲು ಸಿಬಿಐ ತನಿಖೆಗೆ ವಹಿಸಲಿಲ್ಲ ಏಕೆ? ಎಂದು ಪ್ರಶ್ನಿಸಿದ್ದಾರೆ.

ಹನಿಟ್ರಾಪ್ ಕುರಿತು ಚರ್ಚೆಯಾಗುತ್ತಿದೆಯೇ ಹೊರತು ಈವರೆಗೆ ಯಾವುದೇ ದೂರು ದಾಖಲಾಗಿಲ್ಲ, ದೂರು ದಾಖಲಾದರೆ ಸಮರ್ಥವಾಗಿ ತನಿಖೆ ನಡೆಸುವುದಕ್ಕೆ ರಾಜ್ಯದಲ್ಲಿ ಸಮರ್ಥರಾಗಿರುವ ಅಧಿಕಾರಿಗಳಿದ್ದಾರೆ, ಇಷ್ಟಕ್ಕೂ ಹನಿಟ್ರಾಪ್ ವಿಷಯ ಬಗ್ಗೆ ಬಿಜೆಪಿಯವರು ಇಷ್ಟು ಆಸಕ್ತಿ ವಹಿಸುವುದಕ್ಕೆ ಕಾರಣವೇನು, ಭಯವೋ, ಕಾಳಜಿಯೋ? ಎಂದು ಕೇಳಿದ್ದಾರೆ.

ಮಾನವಸಂಪನ್ಮೂಲದ ಕೊರತೆ ಇರುವುದರಿಂದ ಅನಗತ್ಯವಾಗಿ ಪ್ರಕರಣಗಳನ್ನು ನಮಗೆ ವಹಿಸಬೇಡಿ ಎಂದು ಸಿಬಿಐ ಹೇಳಿರುವ ಬಗ್ಗೆ ಬಿಜೆಪಿಯವರಿಗೆ ಅರಿವಿದೆಯೇ? ಇಷ್ಟಕ್ಕೂ ಸಿಬಿಐ ತನಿಖೆಗೆ ವಹಿಸಿದರೆ ಮಾನವ ಸಂಪನ್ಮೂಲವನ್ನು ರಾಜ್ಯ ಸರ್ಕಾರವೇ ಒದಗಿಸಿಕೊಡಬೇಕಾಗಿದೆ, 2024ರ ಜುಲೈ 17ರಂದೇ ಸಿಬಿಐ ರಾಜ್ಯ ಸರ್ಕಾರದ ಅಂದಿನ ಮುಖ್ಯ ಕಾರ್ಯದರ್ಶಿಗಳಿಗೆ ಈ ಬಗ್ಗೆ ಪತ್ರ ಬರೆದಿತ್ತು, ರಾಜ್ಯದ ಅಧಿಕಾರಿಗಳಿಗೆ ತನಿಖೆ ನಡೆಸುವ ಸಾಮರ್ಥ್ಯ ಇರುವಾಗ ಸಿಬಿಐ ತನಿಖೆಯ ಅಗತ್ಯ ಏನಿದೆ ಎಂದು ಸಚಿವ ಪ್ರಿಯಾಂಕ್‌ ಖರ್ಗೆ ಪ್ರಶಿಸಿದ್ದಾರೆ.

ಈ ಹಿಂದೆ ಬಿಜೆಪಿ ಸರ್ಕಾರಕ್ಕಿಂತ ಕಾಂಗ್ರೆಸ್ ಸರ್ಕಾರವೇ ಹೆಚ್ಚು ಪ್ರಕರಣಗಳನ್ನು ಸಿಬಿಐಗೆ ವಹಿಸಿದೆ ಎನ್ನುವುದನ್ನು ಬಿಜೆಪಿಗರು ನೆನಪು ಮಾಡಿಕೊಳ್ಳಲಿ, ಸಿಬಿಐಗೆ ವಹಿಸಿದ ಡಿ ವೈ ಎಸ್ ಪಿ ಗಣಪತಿ ಆತ್ಮಹತ್ಯೆಯ ಪ್ರಕರಣ, ಡಿ.ಕೆ ರವಿ ಆತ್ಮಹತ್ಯೆ ಪ್ರಕರಣ, ಪರೇಶ್ ಮೆಸ್ತಾ ಪ್ರಕರಣ ಸೇರಿದಂತೆ ಹಲವು ಪ್ರಕರಣಗಳಲ್ಲಿ ರಾಜ್ಯದ ತನಿಖಾ ಸಂಸ್ಥೆಗಳು ಹೇಳಿದ್ದನ್ನೇ ಸಿಬಿಐ ಕೂಡ ತನ್ನ ತನಿಖಾ ವರದಿಯಲ್ಲಿ ಹೇಳಿದೆ. ಇದು ರಾಜ್ಯದ ಅಧಿಕಾರಿಗಳ ಕಾರ್ಯಕ್ಷಮತೆಯನ್ನು ಪ್ರತಿಬಿಂಬಿಸುತ್ತದೆ ಎಂದು ಸಚಿವರು ವಿವರಿಸಿದ್ದಾರೆ.

ಈಗಾಗಲೇ ಸಿಬಿಐ ಮುಂದೆ ರಾಜ್ಯದ ಆರ್ಥಿಕ ಅಪರಾಧಗಳಿಗೆ ಸಂಬಂಧಿಸಿದ 74ಕ್ಕೂ ಹೆಚ್ಚು ಪ್ರಕರಣಗಳು ಇತ್ಯರ್ಥಕ್ಕೆ ಬಾಕಿ ಉಳಿದಿವೆ. ಇಂತಹ ಸ್ಥಿತಿ ಇರುವಾಗ ಪ್ರಕರಣಗಳ ಗಂಭೀರತೆಯನ್ನು ಮಾಪನ ಮಾಡದೆ ಸಿಬಿಐಗೆ ಕೊಡಿ ಎನ್ನುವುದು ಬಿಜೆಪಿಯವರ ಅಪ್ರಬುದ್ಧತೆಯಲ್ಲದೆ ಇನ್ನೇನು ಎಂದು ಪ್ರಶ್ನೆ ಹಾಕಿದ್ದಾರಲ್ಲದೆ, ಈಗ ಸಿಬಿಐ ತನಿಖೆಗೆ ಆಗ್ರಹಿಸುತ್ತಿರುವ ಬಿಜೆಪಿಯವರು ಈ ಹಿಂದೆ ತಮ್ಮ ಸರ್ಕಾರದ ಅವಧಿಯಲ್ಲಿ ಸಿಡಿ ಪ್ರಸ್ತಾಪ ಬಂದಾಗಲೆಲ್ಲ ಕೋರ್ಟಿನಿಂದ ತಡೆಯಾಜ್ಞೆ ತಂದು ಸತ್ಯವನ್ನು ಮುಚ್ಚಿಟ್ಟುಕೊಂಡರೆ ವಿನಃ ಸಿಬಿಐ ತನಿಖೆಗೆ ವಹಿಸಲಿಲ್ಲ,
ರಾಜ್ಯದಲ್ಲಿ ಹನಿಟ್ರಾಪ್ ಅನಿಷ್ಠವನ್ನು ಪರಿಚಯಿಸಿದ್ದೇ ಬಿಜೆಪಿಯವರು ಎನ್ನುವುದಕ್ಕೆ ಬಿಜೆಪಿ ಪಕ್ಷದವರ ಹೇಳಿಕೆಗಳೇ ಸಾಕ್ಷಿಯಾಗಿ ನಿಲ್ಲುತ್ತವೆ,
ಅಪ್ಪ ಮಕ್ಕಳ ವಿರುದ್ಧ ನಿರಂತರವಾಗಿ ಮಾತನಾಡುವ ಬಿಜೆಪಿ ಶಾಸಕರೊಬ್ಬರಿಗೆ ಸಿಡಿ ಬಿಡುಗಡೆ ಮಾಡುವ ಬೆದರಿಕೆ ಹಾಕಲಾಗಿತ್ತು.
ಈ ಸಂಬಂಧ ಆ ಶಾಸಕರು ತಡೆಯಾಜ್ಞೆಯನ್ನು ಪಡೆದಿದ್ದರು.

ಬಿಜೆಪಿಯಲ್ಲಿ ಸಿಡಿ ಫ್ಯಾಕ್ಟರಿ ಇದೆ, ಕೆಲವರು ಸಿಡಿ ಇಟ್ಟುಕೊಂಡೇ ಮಂತ್ರಿಯಾಗಿದ್ದಾರೆ ಎಂದೂ ಈ ಶಾಸಕರು ಆರೋಪಿಸಿದ್ದರು. ಈ ಎಲ್ಲಾ ಸಂದರ್ಭಗಳಲ್ಲಿ ಬಿಜೆಪಿಗೆ ಸಿಬಿಐ ನೆನಪಾಗಲಿಲ್ಲವೇ? ಎಂದು ಪ್ರಿಯಾಂಕ್‌ ಖರ್ಗೆ ಪ್ರಶ್ನೆ ಹಾಕಿದ್ದಾರೆ.

P

Peepal Media Desk

Peepal Media · ರಾಜಕೀಯ ವಿಭಾಗ

ಸಂಬಂಧಿತ ಸುದ್ದಿಗಳು

Exit mobile version