ಮುಖ್ಯ ವಿಷಯಕ್ಕೆ ತೆರಳಿ
Peepal Media
ತಾಜಾ ಸುದ್ದಿ
●ಈಸಕ್ಕಿ ಆಸೆಯನ್ನೂ ಮೀರಿದ ಆಯ್ದಕ್ಕಿ ಲಕ್ಕಮ್ಮ●ಗಾಜಾ ಸ್ಮಶಾನದ ಮೇಲೆ ಮತ್ತೆ ಅರಳುತ್ತಾ ನೆತನ್ಯಾಹು ಕುರ್ಚಿ?●ಅರುಣಾಚಲದಲ್ಲಿ ಚೀನಾ ಸೈನಿಕರೊಂದಿಗೆ ಮುಖಾಮುಖಿ: ಕೇಂದ್ರದ ಮೌನವನ್ನು ಪ್ರಶ್ನಿಸಿದ ಕಾಂಗ್ರೆಸ್‌ನ ಜೈರಾಮ್ ರಮೇಶ್●ಕಡತಗಳ ವಿಲೇವಾರಿ ಪ್ರಕ್ರಿಯೆ ಬದಲಾವಣೆ: ಚುನಾವಣಾ ಆಯುಕ್ತರಿಂದ ಕ್ಯಾಬಿನೆಟ್‌ ಕಾರ್ಯದರ್ಶಿಗೆ ಆಕ್ಷೇಪಣಾ ಪತ್ರ●ಮೋದಿ–ಅದಾನಿ ಕುರಿತ ಸಾಕ್ಷ್ಯಚಿತ್ರ ಹಂಚಿಕೊಂಡ ರಾಜ್‌ ಠಾಕ್ರೆ; ತೆಗೆದುಹಾಕುವಂತೆ ಸೂಚನೆಗಳ ನಡುವೆ ಮುಂದುವರೆದ ಚರ್ಚೆ●ಮಂಡ್ಯದಲ್ಲಿ ARAI ಪರೀಕ್ಷಾ ಕೇಂದ್ರಗಳಿಗೆ ಭೂಮಿ ಹಂಚಿಕೆ ವಿಳಂಬ: ರಾಜ್ಯ ಸರ್ಕಾರಕ್ಕೆ ಎಚ್‌.ಡಿ. ಕುಮಾರಸ್ವಾಮಿ ಪತ್ರ●ರಾಷ್ಟ್ರೀಯತೆಯ ಪಾಠ ನನಗೆ ಬೇಕಿಲ್ಲ; ನಮ್ಮ ಗುರಿ ಆಡಳಿತ, ಸಾಮಾಜಿಕ ಜಾಲತಾಣದ ಪ್ರಚಾರವಲ್ಲ: ಕೆ. ಅಣ್ಣಾಮಲೈ●ಕೇವಲ ಮದುವೆಗಾಗಿ ಧರ್ಮಾಂತರವಾಗುವುದನ್ನು ಒಪ್ಪಲು ಸಾಧ್ಯವಿಲ್ಲ: ಬಾಂಬೆ ಹೈಕೋರ್ಟ್‌●ಇನ್ನು ನೋಂದಾಯಿತ ಸಿಮ್‌ ಇದ್ದರೆ ಮಾತ್ರ ವಾಟ್ಸ್‌ಆ್ಯಪ್‌ ಬಳಕೆ ಸಾಧ್ಯ: ಜನವರಿ 1, 2027ರಿಂದ ಹೊಸ ನಿಯಮ ಜಾರಿ●ಈ-ಮುದ್ರ ಡಿಜಿಟಲ್‌ ಪ್ರಮಾಣಪತ್ರಗಳಲ್ಲಿ ಭದ್ರತಾ ಲೋಪ: ಜಾಗತಿಕ ತಂತ್ರಜ್ಞಾನ ವಲಯದಲ್ಲಿ ಆತಂಕ●ಹಾಸನ ಕಾಳಸಂತೆಗೆ ಪಡಿತರ ಅಕ್ಕಿ ಮಾರಾಟ ಯತ್ನ – ಕ್ವಿಂಟಲ್‌ ಗಟ್ಟಲೆ ಅಕ್ಕಿ, ರಾಗಿ ವಶ●ಸದ್ಯದಲ್ಲೆ ಕಬ್ಬು ಬೆಳೆಗಾರರ ಸಭೆ ಕರೆದಿದ್ದೇನೆ – ಸಿಎಂ ಡಿ.ಕೆ ಶಿವಕುಮಾರ್●ರಾಜ್ಯದಲ್ಲಿ ಐದು ದಿನಗಳಲ್ಲಿ ಮಳೆ ಸಾಧ್ಯತೆ – ಹವಾಮಾನ ಇಲಾಖೆ ಮುನ್ಸೂಚನೆ●ಸಿದ್ದರಾಮಯ್ಯ ಅವರನ್ನು ಅಧಿಕಾರದಿಂದ ಇಳಿಸಲು ವ್ಯವಸ್ಥಿತ ಸಂಚು ರೂಪಿಸಿ ಯಶಸ್ವಿಗೊಂಡಿದ್ದಾರೆ – ಸಿಎಂ ಯಡಿಯೂರಪ್ಪ●ಚುನಾವಣಾ ಆಯುಕ್ತರಿಗೆ ರಕ್ಷಣೆ ನೀಡುವ ಕಾನೂನು ರದ್ದುಗೊಳಿಸಿ – ಮಲ್ಲಿಕಾರ್ಜುನ ಖರ್ಗೆ ಆಗ್ರಹ●ದಸರಾ ವೇಳೆ ಪೊಲೀಸರ ಲಾಠಿ ಏಟಿಗೆ 4 ವರ್ಷದ ಬಾಲಕ ಗಂಭೀರ – ICUನಲ್ಲಿ ಅಂತಿಮ ಹೋರಾಟ●ಸೌದಿ ವಿಮಾನ ನಿಲ್ದಾಣದ ಮೇಲೆ ಭೀಕರ ದಾಳಿ – 8 ಮಂದಿಗೆ ಗಾಯ, ಇಬ್ಬರ ಅಂತ್ಯ●ನಂದಿಧ್ವಜ ಪೂಜೆಗೆ ಸಚಿವರಿಗೆ ಅವಕಾಶ ನಿರಾಕರಿಸಿದ ಅಧಿಕಾರಿಗಳ ವಿರುದ್ಧ ತನಿಖೆಗೆ ಆದೇಶ: ಮುಖ್ಯಮಂತ್ರಿ ಡಿ ಕೆ ಶಿವಕುಮಾರ್‌●300 ವರ್ಷಗಳಷ್ಟು ಹಳೆಯ ಐತಿಹಾಸಿಕ ರೇಸ್‌ಕೋರ್ಸ್ ಮಸೀದಿಯ ವಿದ್ಯುತ್ ಹಾಗೂ ನೀರು ಸಂಪರ್ಕ ಕಡಿತ: ತುರ್ತು ರಕ್ಷಣೆ ಕೋರಿದ ದೆಹಲಿ ವಕ್ಫ್ ಮಂಡಳಿ●ತಿಹಾರ್ ಜೈಲಿನಿಂದ ಬಿಡುಗಡೆಯಾದ ಬೆನ್ನಲ್ಲೇ ಸೌರವ್ ದಾಸ್ ಹಾಗೂ ಅಶೋತ್ ರಾಂಕಾಗೆ ದೆಹಲಿ ಅಪರಾಧ ವಿಭಾಗದಿಂದ ಸಮನ್ಸ್

ಚುನಾವಣಾ ಬಾಂಡ್ ಅಕ್ರಮ: ಬಿಜೆಪಿ ನಾಯಕರಿಂದ 8,000 ಕೋಟಿ ಸುಲಿಗೆ ಆರೋಪದಡಿ ಎಫ್ಐಆರ್ ದಾಖಲು

P

Peepal Media Desk • ರಾಜಕೀಯ

• 1 ನಿಮಿಷದ ಓದು

ಚುನಾವಣಾ ಬಾಂಡ್ ಅಕ್ರಮ: ಬಿಜೆಪಿ ನಾಯಕರಿಂದ 8,000 ಕೋಟಿ ಸುಲಿಗೆ ಆರೋಪದಡಿ ಎಫ್ಐಆರ್ ದಾಖಲು

ಚುನಾವಣಾ ಬಾಂಡ್‌ಗಳ ಮೂಲಕ‌ ಹಣ ಸುಲಿಗೆ ಅರೋಪದ ಹಿನ್ನೆಲೆ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್, ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ ಸೇರಿದಂತೆ ಬಿಜೆಪಿ ಪಕ್ಷದ ಘಟಾನುಘಟಿ ನಾಯಕರುಗಳ ಮೇಲೆ ಬೆಂಗಳೂರಿನ ತಿಲಕ್ ನಗರ ಪೊಲೀಸ್‌ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ.

ದೂರುದಾರರಾದ ಜನಾಧಿಕಾರ ಸಂಘರ್ಷ ಪರಿಷತ್ (ಜೆಎಸ್‌ಪಿ)ನ ಆದರ್ಶ ಆರ್. ಅಯ್ಯರ್ ಅವರು ತಿಲಕ್ ನಗರ ಠಾಣೆಯಲ್ಲಿ ದೂರು ನೀಡಲು ಅಲ್ಲಿನ ಪೊಲೀಸರು ನಿರಾಕರಿಸಿದ ಹಿನ್ನೆಲೆಯಲ್ಲಿ ಡಿಜಿಪಿ ಮೊರೆ ಹೋಗಿದ್ದರು. ಅಲ್ಲೂ ಸಹ ಸೂಕ್ತ ಸ್ಪಂದನೆ ಸಿಗದ ಹಿನ್ನೆಲೆಯಲ್ಲಿ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದ ಮೊರೆ ಹೋದ ನಂತರ, ನ್ಯಾಯಾಲಯ ದೂರನ್ನು ಸ್ವೀಕರಿಸಲು ಇದು ಸೂಕ್ತ ಪ್ರಕರಣ ಆಗಿರುವ ಹಿನ್ನೆಲೆಯಲ್ಲಿ ತಿಲಕ್ ನಗರ ಪೊಲೀಸರು ನೇರವಾಗಿ ಎಫ್ಐಆರ್ ದಾಖಲಿಸಬೇಕು ಎಂದು ಆದೇಶಿಸಿದ ಹಿನ್ನೆಲೆಯಲ್ಲಿ ಎಫ್‌ಐಆರ್ ದಾಖಲಿಸಲಾಗಿದೆ.

ಆರೋಪ ಸಂಬಂಧ ನಿರ್ಮಲಾ ಸೀತಾರಾಮನ್ ವಿರುದ್ಧ ಅಪರಾಧಿಕ ಒಳಸಂಚು, ಸುಲಿಗೆಯಡಿ ಎಫ್ಐಆರ್ ದಾಖಲಾಗಿದೆ. ಅಲ್ಲದೇ, ಹಿಂದಿನ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್, ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಹಾಗೂ ಜಾರಿ ನಿರ್ದೇಶನಾಲಯ (ಇ.ಡಿ) ಅಧಿಕಾರಿಗಳು ಸೇರಿದಂತೆ ಇತರರ ವಿರುದ್ಧ ಪ್ರಕರಣ ದಾಖಲಾಗಿದೆ.

ರಾಜ್ಯದಲ್ಲಿ ನಳಿನ್ ಕುಮಾರ್ ಕಟೀಲ್ ರಹಸ್ಯ ಮಾರ್ಗವಾಗಿ ಹಣ ವರ್ಗಾವಣೆಗೆ ಸಹಕಾರಿಯಾಗಿದ್ದಾರೆ. ರಾಜಕೀಯ ಲಾಭಕ್ಕಾಗಿ ಜಾರಿ ನಿರ್ದೇಶನಾಲಯದ ಸಂಸ್ಥೆ ಬಳಸಿಕೊಂಡು ವಿವಿಧ ಕಾರ್ಪೊರೇಟ್ ಕಂಪನಿಗಳ ಮೇಲೆ ದಾಳಿ ಮಾಡಿ, ಸಿಇಒ ಹಾಗೂ ಎಂ.ಡಿಯನ್ನು ಬ್ಲಾಕ್ಮೇಲ್ ಮಾಡಲಾಗಿದೆ. ಬಂಧನಕ್ಕೆ ಹೆದರಿದ ಕಂಪನಿ ಮಾಲೀಕರಿಗೆ ಚುನಾವಣಾ ಬಾಂಡ್ ಖರೀದಿಗೆ ಒತ್ತಾಯಿಸಿದ್ದಾರೆ ಎಂದು ದೂರಿನಲ್ಲಿ ಆದರ್ಶ ಆರ್. ಅಯ್ಯರ್ ವಿವರಿಸಿದ್ದಾರೆ.

ಕಾರ್ಪೋರೇಟ್ ಅಲ್ಯೂಮಿನಿಯಂ ಮತ್ತು ಕಾಫರ್ ಜೈಂಟ್, ಎಂ.ಎಸ್.ಸ್ಕೇರ್ ಲೈಟ್, ವೇದಾಂತ ಕಂಪನಿಗಳಿಂದ 2019ನೇ ಸಾಲಿನ ಏಪ್ರಿಲ್​ನಿಂದ 2022ರ ಅಗಸ್ಟ್​​ವರೆಗೆ ಮತ್ತು 2023ರ ನವೆಂಬರ್​​ವರೆಗೆ ಒಟ್ಟು 230.15 ಕೋಟಿ ರೂ. ಪಡೆದುಕೊಂಡಿದ್ದಾರೆ.  ಅರವಿಂದ ಫಾರ್ಮಾ ಕಂಪನಿಯಿಂದ 2022 ಹಾಗೂ 2023ರವರೆಗೆ 49.5 ಕೋಟಿ ರೂ. ಸೇರಿ ರಹಸ್ಯವಾಗಿ ಸುಮಾರು 8 ಸಾವಿರ ಕೋಟಿ ರೂ.ಗಳನ್ನು ಎಲ್ಲ ಆರೋಪಿಗಳು ಚುನಾವಣಾ ಬಾಂಡ್​​ಗೆ ಪರಿವರ್ತಿಸಿದ್ದಾರೆ. ಈ ಸಂಬಂಧ ಆರೋಪಿಗಳ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ದೂರಿನಲ್ಲಿ ಉಲ್ಲೇಖೀಸಿದ್ದಾರೆ.

ಸಧ್ಯ ಮುಡಾ ಪ್ರಕರಣದ ಮೂಲಕ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ತಿರುಗಿ ಬಿದ್ದಿದ್ದ ಬಿಜೆಪಿಗೆ ಈಗ ಚುನಾವಣಾ ಬಾಂಡ್ ಹಗರಣದ ಎಫ್ಐಆರ್ ದೊಡ್ಡ ತಲೆನೋವಾಗಿ ಪರಿಣಮಿಸಿದೆ. ಒಂದು ಕಡೆ ಸ್ವಪಕ್ಷೀಯರಿಂದಲೇ ಆರೋಪ ಬರುತ್ತಿರುವಾಗ ಈಗ ರಾಜ್ಯಾಧ್ಯಕ್ಷ ವಿಜಯೇಂದ್ರಗೆ ಚುನಾವಣಾ ಬಾಂಡ್ ಅಕ್ರಮದ ವಿಚಾರಣೆ ಎದುರಿಸುವ ಅನಿವಾರ್ಯತೆ ಎದುರಾಗಿದೆ.

P

Peepal Media Desk

Peepal Media · ರಾಜಕೀಯ ವಿಭಾಗ

ಸಂಬಂಧಿತ ಸುದ್ದಿಗಳು

Exit mobile version