ಮುಖ್ಯ ವಿಷಯಕ್ಕೆ ತೆರಳಿ
Peepal Media
ತಾಜಾ ಸುದ್ದಿ
ಈಸಕ್ಕಿ ಆಸೆಯನ್ನೂ ಮೀರಿದ ಆಯ್ದಕ್ಕಿ ಲಕ್ಕಮ್ಮಗಾಜಾ ಸ್ಮಶಾನದ ಮೇಲೆ ಮತ್ತೆ ಅರಳುತ್ತಾ ನೆತನ್ಯಾಹು ಕುರ್ಚಿ?ಅರುಣಾಚಲದಲ್ಲಿ ಚೀನಾ ಸೈನಿಕರೊಂದಿಗೆ ಮುಖಾಮುಖಿ: ಕೇಂದ್ರದ ಮೌನವನ್ನು ಪ್ರಶ್ನಿಸಿದ ಕಾಂಗ್ರೆಸ್‌ನ ಜೈರಾಮ್ ರಮೇಶ್ಕಡತಗಳ ವಿಲೇವಾರಿ ಪ್ರಕ್ರಿಯೆ ಬದಲಾವಣೆ: ಚುನಾವಣಾ ಆಯುಕ್ತರಿಂದ ಕ್ಯಾಬಿನೆಟ್‌ ಕಾರ್ಯದರ್ಶಿಗೆ ಆಕ್ಷೇಪಣಾ ಪತ್ರಮೋದಿ–ಅದಾನಿ ಕುರಿತ ಸಾಕ್ಷ್ಯಚಿತ್ರ ಹಂಚಿಕೊಂಡ ರಾಜ್‌ ಠಾಕ್ರೆ; ತೆಗೆದುಹಾಕುವಂತೆ ಸೂಚನೆಗಳ ನಡುವೆ ಮುಂದುವರೆದ ಚರ್ಚೆಮಂಡ್ಯದಲ್ಲಿ ARAI ಪರೀಕ್ಷಾ ಕೇಂದ್ರಗಳಿಗೆ ಭೂಮಿ ಹಂಚಿಕೆ ವಿಳಂಬ: ರಾಜ್ಯ ಸರ್ಕಾರಕ್ಕೆ ಎಚ್‌.ಡಿ. ಕುಮಾರಸ್ವಾಮಿ ಪತ್ರರಾಷ್ಟ್ರೀಯತೆಯ ಪಾಠ ನನಗೆ ಬೇಕಿಲ್ಲ; ನಮ್ಮ ಗುರಿ ಆಡಳಿತ, ಸಾಮಾಜಿಕ ಜಾಲತಾಣದ ಪ್ರಚಾರವಲ್ಲ: ಕೆ. ಅಣ್ಣಾಮಲೈಕೇವಲ ಮದುವೆಗಾಗಿ ಧರ್ಮಾಂತರವಾಗುವುದನ್ನು ಒಪ್ಪಲು ಸಾಧ್ಯವಿಲ್ಲ: ಬಾಂಬೆ ಹೈಕೋರ್ಟ್‌ಇನ್ನು ನೋಂದಾಯಿತ ಸಿಮ್‌ ಇದ್ದರೆ ಮಾತ್ರ ವಾಟ್ಸ್‌ಆ್ಯಪ್‌ ಬಳಕೆ ಸಾಧ್ಯ: ಜನವರಿ 1, 2027ರಿಂದ ಹೊಸ ನಿಯಮ ಜಾರಿಈ-ಮುದ್ರ ಡಿಜಿಟಲ್‌ ಪ್ರಮಾಣಪತ್ರಗಳಲ್ಲಿ ಭದ್ರತಾ ಲೋಪ: ಜಾಗತಿಕ ತಂತ್ರಜ್ಞಾನ ವಲಯದಲ್ಲಿ ಆತಂಕಹಾಸನ ಕಾಳಸಂತೆಗೆ ಪಡಿತರ ಅಕ್ಕಿ ಮಾರಾಟ ಯತ್ನ – ಕ್ವಿಂಟಲ್‌ ಗಟ್ಟಲೆ ಅಕ್ಕಿ, ರಾಗಿ ವಶಸದ್ಯದಲ್ಲೆ ಕಬ್ಬು ಬೆಳೆಗಾರರ ಸಭೆ ಕರೆದಿದ್ದೇನೆ – ಸಿಎಂ ಡಿ.ಕೆ ಶಿವಕುಮಾರ್ರಾಜ್ಯದಲ್ಲಿ ಐದು ದಿನಗಳಲ್ಲಿ ಮಳೆ ಸಾಧ್ಯತೆ – ಹವಾಮಾನ ಇಲಾಖೆ ಮುನ್ಸೂಚನೆಸಿದ್ದರಾಮಯ್ಯ ಅವರನ್ನು ಅಧಿಕಾರದಿಂದ ಇಳಿಸಲು ವ್ಯವಸ್ಥಿತ ಸಂಚು ರೂಪಿಸಿ ಯಶಸ್ವಿಗೊಂಡಿದ್ದಾರೆ – ಸಿಎಂ ಯಡಿಯೂರಪ್ಪಚುನಾವಣಾ ಆಯುಕ್ತರಿಗೆ ರಕ್ಷಣೆ ನೀಡುವ ಕಾನೂನು ರದ್ದುಗೊಳಿಸಿ – ಮಲ್ಲಿಕಾರ್ಜುನ ಖರ್ಗೆ ಆಗ್ರಹದಸರಾ ವೇಳೆ ಪೊಲೀಸರ ಲಾಠಿ ಏಟಿಗೆ 4 ವರ್ಷದ ಬಾಲಕ ಗಂಭೀರ – ICUನಲ್ಲಿ ಅಂತಿಮ ಹೋರಾಟಸೌದಿ ವಿಮಾನ ನಿಲ್ದಾಣದ ಮೇಲೆ ಭೀಕರ ದಾಳಿ – 8 ಮಂದಿಗೆ ಗಾಯ, ಇಬ್ಬರ ಅಂತ್ಯನಂದಿಧ್ವಜ ಪೂಜೆಗೆ ಸಚಿವರಿಗೆ ಅವಕಾಶ ನಿರಾಕರಿಸಿದ ಅಧಿಕಾರಿಗಳ ವಿರುದ್ಧ ತನಿಖೆಗೆ ಆದೇಶ: ಮುಖ್ಯಮಂತ್ರಿ ಡಿ ಕೆ ಶಿವಕುಮಾರ್‌300 ವರ್ಷಗಳಷ್ಟು ಹಳೆಯ ಐತಿಹಾಸಿಕ ರೇಸ್‌ಕೋರ್ಸ್ ಮಸೀದಿಯ ವಿದ್ಯುತ್ ಹಾಗೂ ನೀರು ಸಂಪರ್ಕ ಕಡಿತ: ತುರ್ತು ರಕ್ಷಣೆ ಕೋರಿದ ದೆಹಲಿ ವಕ್ಫ್ ಮಂಡಳಿತಿಹಾರ್ ಜೈಲಿನಿಂದ ಬಿಡುಗಡೆಯಾದ ಬೆನ್ನಲ್ಲೇ ಸೌರವ್ ದಾಸ್ ಹಾಗೂ ಅಶೋತ್ ರಾಂಕಾಗೆ ದೆಹಲಿ ಅಪರಾಧ ವಿಭಾಗದಿಂದ ಸಮನ್ಸ್

ಶಿವಸೇನಾ ಮುಖಂಡನ ಮೇಲೆ ಪೊಲೀಸ್‌ ಠಾಣೆಯಲ್ಲಿಯೇ ಗುಂಡು ಹಾರಿಸಿದ ಬಿಜೆಪಿ ಶಾಸಕ

PPeepal Media Desk

Peepal Media Desk ರಾಜಕೀಯ

• 1 ನಿಮಿಷದ ಓದು

ಶಿವಸೇನಾ ಮುಖಂಡನ ಮೇಲೆ ಪೊಲೀಸ್‌ ಠಾಣೆಯಲ್ಲಿಯೇ ಗುಂಡು ಹಾರಿಸಿದ ಬಿಜೆಪಿ ಶಾಸಕ


ಥಾಣೆ: ಮುಖ್ಯಮಂತ್ರಿ ಏಕನಾಥ ಶಿಂದೆ ಅವರ ಶಿವಸೇನಾ ಬಣದ ಮುಖಂಡನ ಮೇಲೆ ಮಹಾರಾಷ್ಟ್ರದ ಥಾಣೆ ಜಿಲ್ಲೆಯಲ್ಲಿ ಭೂ ವಿವಾದಕ್ಕೆ ಸಂಬಂಧಿಸಿದಂತೆ ಬಿಜೆಪಿ ಶಾಸಕ ಶುಕ್ರವಾರ ರಾತ್ರಿ ಗುಂಡಿನ ದಾಳಿ ನಡೆಸಿದ್ದಾರೆ, ಶಾಸಕನನ್ನು ಬಂಧಿಸಲಾಗಿದೆ ಎಂದು ಪೊಲೀಸ್ ಅಧಿಕಾರಿಗಳು ಶನಿವಾರ ತಿಳಿಸಿದ್ದಾರೆ.


ಉಲ್ಲಾಸನಗರ ಪ್ರದೇಶದ ಹಿಲ್‌ಲೈನ್ ಪೊಲೀಸ್ ಠಾಣೆಯಲ್ಲಿ ಈ ಘಟನೆ ನಡೆದಿದೆ. ಇನ್‌ಸ್ಪೆಕ್ಟರ್‌ನ ಕೊಠಡಿಯೊಳಗೆ ಶಿವಸೇನಾ ನಾಯಕ ಮಹೇಶ್ ಗಾಯಕ್ವಾಡ್ ಅವರ ಮೇಲೆ ಕಲ್ಯಾಣ್‌ನ ಬಿಜೆಪಿಯ ಶಾಸಕ ಗಣಪತ್ ಗಾಯಕ್ವಾಡ್ ಗುಂಡಿನ ದಾಳಿ ನಡೆಸಿ ಗಾಯಗೊಳಿಸಿದ್ದಾರೆ ಎಂದು ಹೆಚ್ಚುವರಿ ಪೊಲೀಸ್ ಆಯುಕ್ತ ದತ್ತಾತ್ರೇಯ ಶಿಂದೆ ಮಾಧ್ಯಮಗಳಿಗೆ ತಿಳಿಸಿದರು.


ರಾಜ್ಯದಲ್ಲಿ ಗೂಂಡಾಗಳ ಸಾಮ್ರಾಜ್ಯ ಸ್ಥಾಪಿಸಲು ಸಿಎಂ ಏಕನಾಥ ಶಿಂದೆ ಯತ್ನಿಸುತ್ತಾರೆ. ‘ಪುತ್ರನಿಗೆ ಥಳಿಸಿದ್ದರಿಂದ ಬಂದೂಕು ಬಳಸಿದ್ದೇನೆ. ಹೌದು, ನಾನೇ ಗುಂಡು ಹಾರಿಸಿದ್ದೇನೆ. ಯಾವುದೇ ವಿಷಾದವಿಲ್ಲ. ಠಾಣೆಯಲ್ಲಿ ಪೊಲೀಸರ ಮುಂದೆ ನನ್ನ ಮಗನನ್ನು ಥಳಿಸಿದರೆ ನಾನೇನು ಮಾಡಲಿ?’ ಎಂದು ಬಂಧನಕ್ಕೂ ಮುನ್ನ ಗಣಪತ್ ಗಾಯಕ್ವಾಡ್ ಆಕ್ರೋಶ ವ್ಯಕ್ತಪಡಿಸಿದರು.


ಮಹೇಶ್ ಅವರನ್ನು ಥಾಣೆಯ ಖಾಸಗಿ ವೈದ್ಯಕೀಯ ಆಸ್ಪತ್ರೆಗೆ ದಾಖಲಿಸಿ ಶಸ್ತ್ರಚಿಕಿತ್ಸೆ ಯಶಸ್ವಿಯಾಗಿ ನೇರವೇರಿಸಲಾಗಿದೆ ಎಂದು ಶಿವಸೇನಾ ಶಿಂದೆ ಬಣದ ನಾಯಕ ಗೋಪಾಲ್ ಲಂಡ್ಗೆ ಮಾಧ್ಯಮಗಳಿಗೆ ತಿಳಿಸಿದರು.


ಭೂ ವಿವಾದಕ್ಕೆ ಸಂಬಂಧಿಸಿದಂತೆ ದೂರು ನೀಡಲು ಗಣಪತ್ ಗಾಯಕ್ವಾಡ್ ಅವರು ತಮ್ಮ ಪುತ್ರನೊಂದಿಗೆ ಆಗಮಿಸಿದ್ದರು. ಮಹೇಶ್ ಗಾಯಕ್ವಾಡ್ ಸಹ ತನ್ನ ಬೆಂಬಲಿಗರೊಂದಿಗೆ ಬಂದಿದ್ದರು. ಈ ವೇಳೆ ನಡೆದ ವಾಗ್ವಾದದಲ್ಲಿ ಇನ್‌ಸ್ಪೆಕ್ಟರ್ ಕೊಠಡಿಯೊಳಗೆ ಮಹೇಶ್ ಮೇಲೆ ಗಣಪತ್ ಗುಂಡು ಹಾರಿಸಿದರು ಎಂದು ಪೊಲೀಸ್ ಅಧಿಕಾರಿ ಮಾಹಿತಿ ನೀಡಿದರು.

PPeepal Media Desk

Peepal Media Desk

Peepal Media · ರಾಜಕೀಯ ವಿಭಾಗ

ಸಂಬಂಧಿತ ಸುದ್ದಿಗಳು