ಮುಖ್ಯ ವಿಷಯಕ್ಕೆ ತೆರಳಿ
Peepal Media
ತಾಜಾ ಸುದ್ದಿ
ಅಪ್ರಾಪ್ತ ಬಾಲಕಿಯ ವಿರುದ್ಧ ಇಸ್ಲಾಂ ವಿರೋಧಿ ಮತ್ತು ಲೈಂಗಿಕ ನಿಂದನಾತ್ಮಕ ಕಾಮೆಂಟ್‌: ಆರ್‌ಎಸ್‌ಎಸ್ ಕಾರ್ಯಕರ್ತನ ಬಂಧನಕರ್ನಾಟಕ ವಿಧಾನ ಪರಿಷತ್ ಚುನಾವಣೆ: ನಾಲ್ಕೂ ಕ್ಷೇತ್ರಗಳಲ್ಲಿ ಎನ್‌ಡಿಎ ಗೆಲುವು, ಕಾಂಗ್ರೆಸ್‌ಗೆ ಹಿನ್ನಡೆಈಸಕ್ಕಿ ಆಸೆಯನ್ನೂ ಮೀರಿದ ಆಯ್ದಕ್ಕಿ ಲಕ್ಕಮ್ಮಗಾಜಾ ಸ್ಮಶಾನದ ಮೇಲೆ ಮತ್ತೆ ಅರಳುತ್ತಾ ನೆತನ್ಯಾಹು ಕುರ್ಚಿ?ಅರುಣಾಚಲದಲ್ಲಿ ಚೀನಾ ಸೈನಿಕರೊಂದಿಗೆ ಮುಖಾಮುಖಿ: ಕೇಂದ್ರದ ಮೌನವನ್ನು ಪ್ರಶ್ನಿಸಿದ ಕಾಂಗ್ರೆಸ್‌ನ ಜೈರಾಮ್ ರಮೇಶ್ಕಡತಗಳ ವಿಲೇವಾರಿ ಪ್ರಕ್ರಿಯೆ ಬದಲಾವಣೆ: ಚುನಾವಣಾ ಆಯುಕ್ತರಿಂದ ಕ್ಯಾಬಿನೆಟ್‌ ಕಾರ್ಯದರ್ಶಿಗೆ ಆಕ್ಷೇಪಣಾ ಪತ್ರಮೋದಿ–ಅದಾನಿ ಕುರಿತ ಸಾಕ್ಷ್ಯಚಿತ್ರ ಹಂಚಿಕೊಂಡ ರಾಜ್‌ ಠಾಕ್ರೆ; ತೆಗೆದುಹಾಕುವಂತೆ ಸೂಚನೆಗಳ ನಡುವೆ ಮುಂದುವರೆದ ಚರ್ಚೆಮಂಡ್ಯದಲ್ಲಿ ARAI ಪರೀಕ್ಷಾ ಕೇಂದ್ರಗಳಿಗೆ ಭೂಮಿ ಹಂಚಿಕೆ ವಿಳಂಬ: ರಾಜ್ಯ ಸರ್ಕಾರಕ್ಕೆ ಎಚ್‌.ಡಿ. ಕುಮಾರಸ್ವಾಮಿ ಪತ್ರರಾಷ್ಟ್ರೀಯತೆಯ ಪಾಠ ನನಗೆ ಬೇಕಿಲ್ಲ; ನಮ್ಮ ಗುರಿ ಆಡಳಿತ, ಸಾಮಾಜಿಕ ಜಾಲತಾಣದ ಪ್ರಚಾರವಲ್ಲ: ಕೆ. ಅಣ್ಣಾಮಲೈಕೇವಲ ಮದುವೆಗಾಗಿ ಧರ್ಮಾಂತರವಾಗುವುದನ್ನು ಒಪ್ಪಲು ಸಾಧ್ಯವಿಲ್ಲ: ಬಾಂಬೆ ಹೈಕೋರ್ಟ್‌ಇನ್ನು ನೋಂದಾಯಿತ ಸಿಮ್‌ ಇದ್ದರೆ ಮಾತ್ರ ವಾಟ್ಸ್‌ಆ್ಯಪ್‌ ಬಳಕೆ ಸಾಧ್ಯ: ಜನವರಿ 1, 2027ರಿಂದ ಹೊಸ ನಿಯಮ ಜಾರಿಈ-ಮುದ್ರ ಡಿಜಿಟಲ್‌ ಪ್ರಮಾಣಪತ್ರಗಳಲ್ಲಿ ಭದ್ರತಾ ಲೋಪ: ಜಾಗತಿಕ ತಂತ್ರಜ್ಞಾನ ವಲಯದಲ್ಲಿ ಆತಂಕಹಾಸನ ಕಾಳಸಂತೆಗೆ ಪಡಿತರ ಅಕ್ಕಿ ಮಾರಾಟ ಯತ್ನ – ಕ್ವಿಂಟಲ್‌ ಗಟ್ಟಲೆ ಅಕ್ಕಿ, ರಾಗಿ ವಶಸದ್ಯದಲ್ಲೆ ಕಬ್ಬು ಬೆಳೆಗಾರರ ಸಭೆ ಕರೆದಿದ್ದೇನೆ – ಸಿಎಂ ಡಿ.ಕೆ ಶಿವಕುಮಾರ್ರಾಜ್ಯದಲ್ಲಿ ಐದು ದಿನಗಳಲ್ಲಿ ಮಳೆ ಸಾಧ್ಯತೆ – ಹವಾಮಾನ ಇಲಾಖೆ ಮುನ್ಸೂಚನೆಸಿದ್ದರಾಮಯ್ಯ ಅವರನ್ನು ಅಧಿಕಾರದಿಂದ ಇಳಿಸಲು ವ್ಯವಸ್ಥಿತ ಸಂಚು ರೂಪಿಸಿ ಯಶಸ್ವಿಗೊಂಡಿದ್ದಾರೆ – ಸಿಎಂ ಯಡಿಯೂರಪ್ಪಚುನಾವಣಾ ಆಯುಕ್ತರಿಗೆ ರಕ್ಷಣೆ ನೀಡುವ ಕಾನೂನು ರದ್ದುಗೊಳಿಸಿ – ಮಲ್ಲಿಕಾರ್ಜುನ ಖರ್ಗೆ ಆಗ್ರಹದಸರಾ ವೇಳೆ ಪೊಲೀಸರ ಲಾಠಿ ಏಟಿಗೆ 4 ವರ್ಷದ ಬಾಲಕ ಗಂಭೀರ – ICUನಲ್ಲಿ ಅಂತಿಮ ಹೋರಾಟಸೌದಿ ವಿಮಾನ ನಿಲ್ದಾಣದ ಮೇಲೆ ಭೀಕರ ದಾಳಿ – 8 ಮಂದಿಗೆ ಗಾಯ, ಇಬ್ಬರ ಅಂತ್ಯನಂದಿಧ್ವಜ ಪೂಜೆಗೆ ಸಚಿವರಿಗೆ ಅವಕಾಶ ನಿರಾಕರಿಸಿದ ಅಧಿಕಾರಿಗಳ ವಿರುದ್ಧ ತನಿಖೆಗೆ ಆದೇಶ: ಮುಖ್ಯಮಂತ್ರಿ ಡಿ ಕೆ ಶಿವಕುಮಾರ್‌

ಅಸ್ಸಾಂ ಸರ್ಕಾರದಿಂದ “ಯಾತ್ರೆ” ತಡೆಯಲು ಇನ್ನಿಲ್ಲದ ಪ್ರಯತ್ನ : ಕೆಸಿ ವೇಣುಗೋಪಾಲ್ ಆರೋಪ

PPeepal Media Desk

Peepal Media Desk ರಾಜಕೀಯ

• 1 ನಿಮಿಷದ ಓದು

ಅಸ್ಸಾಂ ಸರ್ಕಾರದಿಂದ “ಯಾತ್ರೆ” ತಡೆಯಲು ಇನ್ನಿಲ್ಲದ ಪ್ರಯತ್ನ : ಕೆಸಿ ವೇಣುಗೋಪಾಲ್ ಆರೋಪ

ಭಾರತ್ ಜೋಡೋ ಯಾತ್ರೆ ಅಸ್ಸಾಂ ರಾಜ್ಯವನ್ನು ಪ್ರವೇಶಿಸಿದ ದಿನದಿಂದ ಒಂದು ದಿನವೂ ಬಿಡದೇ ನಮಗೆ ಸರ್ಕಾರದಿಂದ ತೊಂದರೆಯಾಗುತ್ತಿದೆ. ಇದು ಭಾರತ್ ಜೋಡೋ ನ್ಯಾಯ ಯಾತ್ರೆ ಬಗ್ಗೆ ಅಸ್ಸಾಂ ಸರ್ಕಾರಕ್ಕೆ ಇರುವ ಭಯವನ್ನು ಸೂಚಿಸುತ್ತಿದೆ ಎಂದು ಕೆ.ಸಿ.ವೇಣುಗೋಪಾಲ್ ಅವರು ಅಸ್ಸಾಂ ಸರ್ಕಾರದ ಮೇಲೆ ಗಂಭೀರ ಆರೋಪ ಮಾಡಿದ್ದಾರೆ.

ಅಸ್ಸಾಂ ಪ್ರವೇಶಿಸಿದ ದಿನದಿಂದ (#BharaJodoNyayYatra) ಯಾತ್ರೆಯ ಮೇಲೆ ಬಿಜೆಪಿ ಮುಖ್ಯಮಂತ್ರಿ ಹಿಮಂತ ಬಿಸ್ವ ಶರ್ಮಾ ಅವರ ಕಡೆಯಿಂದಲೇ ಅತ್ಯಂತ ಕೆಟ್ಟ ರೀತಿಯಲ್ಲಿ ದಾಳಿ ಮಾಡುತ್ತಿದ್ದಾರೆ. ಪೊಲೀಸರು ಎಲ್ಲೆಡೆ ನಮ್ಮ ಯಾತ್ರೆಗೆ ಅಡ್ಡಿಪಡಿಸಲು ಯತ್ನಿಸುತ್ತಿದ್ದಾರೆ ಎಂದು ಕಾಂಗ್ರೆಸ್ ಕಡೆಯಿಂದ ಗಂಭೀರ ಆರೋಪ ಕೇಳಿ ಬಂದಿದೆ.

ಅಸ್ಸಾಂನಲ್ಲಿ ಇಂದು ಭಾರತ್ ಜೋಡೋ ನ್ಯಾಯ ಯಾತ್ರೆಯ ವಾಹನಗಳ ಮೇಲೆ ಅಂಟಿಸಲಾಗಿದ್ದ ಫ್ಲೆಕ್ಸ್ ಮತ್ತು ಸ್ಟಿಕ್ಕರ್ ಗಳನ್ನು ತೆಗೆಯುವಂತೆ ಸ್ಥಳೀಯ ಪೊಲೀಸರು ತಾಕೀತು ಮಾಡಿದ್ದಾರೆ. ಈ ಬಗ್ಗೆ ಪೊಲೀಸರು ಮತ್ತು ಕಾರ್ಯಕರ್ತರ ನಡುವೆ ವಾಗ್ವಾದ ನಡೆದಿದೆ. ಪೊಲೀಸರೂ ಪಟ್ಟು ಬಿಡದಿದ್ದಾಗ, ನೇರವಾಗಿ ಕಾಂಗ್ರೆಸ್ ರಾಷ್ಟ್ರೀಯ ನಾಯಕರು ಪೊಲೀಸರ ವರ್ತನೆಯ ವಿರುದ್ಧ ತಿರುಗಿ ಬಿದ್ದಿದ್ದಾರೆ.

ಈ ಬಗ್ಗೆ ಮಾತನಾಡಿದ ಕಾಂಗ್ರೆಸ್ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಕೆ.ಸಿ.ವೇಣುಗೋಪಾಲ್, “ಇಂದು ಅವರು ನಮ್ಮ ವಾಹನಗಳು ಮತ್ತು ಫ್ಲೆಕ್ಸ್‌ಬೋರ್ಡ್‌ಗಳ ಮೇಲೆ ದಾಳಿ ಮಾಡಿದ್ದಾರೆ, ಅಸ್ಸಾಂನಲ್ಲಿ ಅವರು ಮಾಡುತ್ತಿರುವ ರೀತಿ ಖಂಡನೀಯ, ನಾವು ಅವರಿಗೆ ಒಂದೇ ಒಂದು ವಿಷಯವನ್ನು ನೆನಪಿಸುತ್ತೇವೆ – ನಾವು ಇದಕ್ಕೆಲ್ಲ ಶರಣಾಗಲು ಹೋಗುವುದಿಲ್ಲ, ನಾವು ನಮ್ಮ ಯಾತ್ರೆಯನ್ನು ಮುಂದುವರಿಸುತ್ತೇವೆ. ಬಹಳ ಹುರುಪಿನಿಂದ ಅಸ್ಸಾಂನ ಜನರು ನಮ್ಮೊಂದಿಗಿದ್ದಾರೆ.” ಎಂದು ಹೇಳಿದ್ದಾರೆ.

ಅಷ್ಟೆ ಅಲ್ಲದೆ “ಅಸ್ಸಾಂನಾದ್ಯಂತ ಭಾರತ್ ಜೋಡೋ ಯಾತ್ರೆಯು ತನ್ನ ವೇಗವನ್ನು ಹೆಚ್ಚಿಸಿಕೊಂಡಿದೆ. ಯಾರಿಂದಲೂ ನಮ್ಮನ್ನು ತಡೆಯಲು ಸಾಧ್ಯವಿಲ್ಲ. ನಾವು ನಮ್ಮ ಯಾತ್ರೆಯನ್ನು ಮುಂದುವರೆಸುತ್ತೇವೆ. ನಮ್ಮ ಯಾತ್ರೆಗೆ ಹೆದರಿದ ಸರ್ಕಾರ ಇಂತಹ ಕೃತ್ಯಕ್ಕೆ ಇಳಿದಿವೆ. ನಾವು ಯಾರಿಗೂ ಜಗ್ಗುವುದಿಲ್ಲ” ಎಂದು ಕೆಸಿ ವೇಣುಗೋಪಾಲ್ ಹೇಳಿದ್ದಾರೆ‌.

PPeepal Media Desk

Peepal Media Desk

Peepal Media · ರಾಜಕೀಯ ವಿಭಾಗ

ಸಂಬಂಧಿತ ಸುದ್ದಿಗಳು