ಮುಖ್ಯ ವಿಷಯಕ್ಕೆ ತೆರಳಿ
Peepal Media
ತಾಜಾ ಸುದ್ದಿ
●ಈಸಕ್ಕಿ ಆಸೆಯನ್ನೂ ಮೀರಿದ ಆಯ್ದಕ್ಕಿ ಲಕ್ಕಮ್ಮ●ಗಾಜಾ ಸ್ಮಶಾನದ ಮೇಲೆ ಮತ್ತೆ ಅರಳುತ್ತಾ ನೆತನ್ಯಾಹು ಕುರ್ಚಿ?●ಅರುಣಾಚಲದಲ್ಲಿ ಚೀನಾ ಸೈನಿಕರೊಂದಿಗೆ ಮುಖಾಮುಖಿ: ಕೇಂದ್ರದ ಮೌನವನ್ನು ಪ್ರಶ್ನಿಸಿದ ಕಾಂಗ್ರೆಸ್‌ನ ಜೈರಾಮ್ ರಮೇಶ್●ಕಡತಗಳ ವಿಲೇವಾರಿ ಪ್ರಕ್ರಿಯೆ ಬದಲಾವಣೆ: ಚುನಾವಣಾ ಆಯುಕ್ತರಿಂದ ಕ್ಯಾಬಿನೆಟ್‌ ಕಾರ್ಯದರ್ಶಿಗೆ ಆಕ್ಷೇಪಣಾ ಪತ್ರ●ಮೋದಿ–ಅದಾನಿ ಕುರಿತ ಸಾಕ್ಷ್ಯಚಿತ್ರ ಹಂಚಿಕೊಂಡ ರಾಜ್‌ ಠಾಕ್ರೆ; ತೆಗೆದುಹಾಕುವಂತೆ ಸೂಚನೆಗಳ ನಡುವೆ ಮುಂದುವರೆದ ಚರ್ಚೆ●ಮಂಡ್ಯದಲ್ಲಿ ARAI ಪರೀಕ್ಷಾ ಕೇಂದ್ರಗಳಿಗೆ ಭೂಮಿ ಹಂಚಿಕೆ ವಿಳಂಬ: ರಾಜ್ಯ ಸರ್ಕಾರಕ್ಕೆ ಎಚ್‌.ಡಿ. ಕುಮಾರಸ್ವಾಮಿ ಪತ್ರ●ರಾಷ್ಟ್ರೀಯತೆಯ ಪಾಠ ನನಗೆ ಬೇಕಿಲ್ಲ; ನಮ್ಮ ಗುರಿ ಆಡಳಿತ, ಸಾಮಾಜಿಕ ಜಾಲತಾಣದ ಪ್ರಚಾರವಲ್ಲ: ಕೆ. ಅಣ್ಣಾಮಲೈ●ಕೇವಲ ಮದುವೆಗಾಗಿ ಧರ್ಮಾಂತರವಾಗುವುದನ್ನು ಒಪ್ಪಲು ಸಾಧ್ಯವಿಲ್ಲ: ಬಾಂಬೆ ಹೈಕೋರ್ಟ್‌●ಇನ್ನು ನೋಂದಾಯಿತ ಸಿಮ್‌ ಇದ್ದರೆ ಮಾತ್ರ ವಾಟ್ಸ್‌ಆ್ಯಪ್‌ ಬಳಕೆ ಸಾಧ್ಯ: ಜನವರಿ 1, 2027ರಿಂದ ಹೊಸ ನಿಯಮ ಜಾರಿ●ಈ-ಮುದ್ರ ಡಿಜಿಟಲ್‌ ಪ್ರಮಾಣಪತ್ರಗಳಲ್ಲಿ ಭದ್ರತಾ ಲೋಪ: ಜಾಗತಿಕ ತಂತ್ರಜ್ಞಾನ ವಲಯದಲ್ಲಿ ಆತಂಕ●ಹಾಸನ ಕಾಳಸಂತೆಗೆ ಪಡಿತರ ಅಕ್ಕಿ ಮಾರಾಟ ಯತ್ನ – ಕ್ವಿಂಟಲ್‌ ಗಟ್ಟಲೆ ಅಕ್ಕಿ, ರಾಗಿ ವಶ●ಸದ್ಯದಲ್ಲೆ ಕಬ್ಬು ಬೆಳೆಗಾರರ ಸಭೆ ಕರೆದಿದ್ದೇನೆ – ಸಿಎಂ ಡಿ.ಕೆ ಶಿವಕುಮಾರ್●ರಾಜ್ಯದಲ್ಲಿ ಐದು ದಿನಗಳಲ್ಲಿ ಮಳೆ ಸಾಧ್ಯತೆ – ಹವಾಮಾನ ಇಲಾಖೆ ಮುನ್ಸೂಚನೆ●ಸಿದ್ದರಾಮಯ್ಯ ಅವರನ್ನು ಅಧಿಕಾರದಿಂದ ಇಳಿಸಲು ವ್ಯವಸ್ಥಿತ ಸಂಚು ರೂಪಿಸಿ ಯಶಸ್ವಿಗೊಂಡಿದ್ದಾರೆ – ಸಿಎಂ ಯಡಿಯೂರಪ್ಪ●ಚುನಾವಣಾ ಆಯುಕ್ತರಿಗೆ ರಕ್ಷಣೆ ನೀಡುವ ಕಾನೂನು ರದ್ದುಗೊಳಿಸಿ – ಮಲ್ಲಿಕಾರ್ಜುನ ಖರ್ಗೆ ಆಗ್ರಹ●ದಸರಾ ವೇಳೆ ಪೊಲೀಸರ ಲಾಠಿ ಏಟಿಗೆ 4 ವರ್ಷದ ಬಾಲಕ ಗಂಭೀರ – ICUನಲ್ಲಿ ಅಂತಿಮ ಹೋರಾಟ●ಸೌದಿ ವಿಮಾನ ನಿಲ್ದಾಣದ ಮೇಲೆ ಭೀಕರ ದಾಳಿ – 8 ಮಂದಿಗೆ ಗಾಯ, ಇಬ್ಬರ ಅಂತ್ಯ●ನಂದಿಧ್ವಜ ಪೂಜೆಗೆ ಸಚಿವರಿಗೆ ಅವಕಾಶ ನಿರಾಕರಿಸಿದ ಅಧಿಕಾರಿಗಳ ವಿರುದ್ಧ ತನಿಖೆಗೆ ಆದೇಶ: ಮುಖ್ಯಮಂತ್ರಿ ಡಿ ಕೆ ಶಿವಕುಮಾರ್‌●300 ವರ್ಷಗಳಷ್ಟು ಹಳೆಯ ಐತಿಹಾಸಿಕ ರೇಸ್‌ಕೋರ್ಸ್ ಮಸೀದಿಯ ವಿದ್ಯುತ್ ಹಾಗೂ ನೀರು ಸಂಪರ್ಕ ಕಡಿತ: ತುರ್ತು ರಕ್ಷಣೆ ಕೋರಿದ ದೆಹಲಿ ವಕ್ಫ್ ಮಂಡಳಿ●ತಿಹಾರ್ ಜೈಲಿನಿಂದ ಬಿಡುಗಡೆಯಾದ ಬೆನ್ನಲ್ಲೇ ಸೌರವ್ ದಾಸ್ ಹಾಗೂ ಅಶೋತ್ ರಾಂಕಾಗೆ ದೆಹಲಿ ಅಪರಾಧ ವಿಭಾಗದಿಂದ ಸಮನ್ಸ್

ಕನ್ನಡದಲ್ಲಿದ್ದ ದಾಖಲೆ ವಾಪಸ್‌ ಕಳಿಸಿದ ರಾಜ್ಯಪಾಲರ ಕನ್ನಡ ವಿರೋಧಿ ನಡೆಗೆ ಎಎಪಿ ಖಂಡನೆ

P

Peepal Media Desk • ರಾಜಕೀಯ

• 1 ನಿಮಿಷದ ಓದು

ಕನ್ನಡದಲ್ಲಿದ್ದ ದಾಖಲೆ ವಾಪಸ್‌ ಕಳಿಸಿದ ರಾಜ್ಯಪಾಲರ ಕನ್ನಡ ವಿರೋಧಿ ನಡೆಗೆ ಎಎಪಿ ಖಂಡನೆ

ಬೆಂಗಳೂರು: ಹೆಚ್‌.ಡಿ. ಕುಮಾರಸ್ವಾಮಿ ಮತ್ತು ಗಾಲಿ ಜನಾರ್ಧನ ರೆಡ್ಡಿ ವಿರುದ್ಧ ಪ್ರಾಸಿಕ್ಯೂಷನ್‌ಗೆ ಅನುಮತಿ ಕೊಡುವಂತೆ ರಾಜ್ಯ ಸರ್ಕಾರ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರಿಗೆ ಕಡತಗಳನ್ನು ಕಳುಹಿಸಿತ್ತು, ಆದರೆ ರಾಜ್ಯಪಾಲರು ಆಗಸ್ಟ್ 28 ರಂದು ಎರಡೂ ಕಡತಗಳನ್ನು ವಾಪಸ್ ಕಳಿಸಿದ್ದಾರೆ. ದಾಖಲೆಗಳು ಕನ್ನಡದಲ್ಲಿದೆ, ಇಂಗ್ಲೀಷ್‌ಗೆ ಅನುವಾದ ಮಾಡಿ ಕಳಿಸಿ ಎಂದು ಕಾರಣ ಕೊಟ್ಟು ವಾಪಸ್ ಕಳಿಸುವ ಮೂಲಕ ಕನ್ನಡ ವಿರೋಧಿ ಧೋರಣೆ ತೋರಿಸಿದ್ದಾರೆ ಎಂದು ರಾಜ್ಯ ಆಮ್ ಆದ್ಮಿ ಪಾರ್ಟಿ ಉಪಾಧ್ಯಕ್ಷ ಡಾ. ರಮೇಶ್ ಬೆಳ್ಳಂಕೊಂಡ ಹೇಳಿದ್ದಾರೆ.

ನಗರದಲ್ಲಿಂದು ಪಕ್ಷದ ಮುಖ್ಯ ಕಚೇರಿಯಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಡಾ. ರಮೇಶ್ ಬೆಳ್ಳಂಕೊಂಡ, 2023ರ ನವೆಂಬರ್ ತಿಂಗಳಿನಲ್ಲಿ ಹೆಚ್‌.ಡಿ. ಕುಮಾರಸ್ವಾಮಿ ಅವರ ವಿರುದ್ಧ ದಾಖಲೆಗಳನ್ನು ನೀಡಿ, ಪ್ರಾಸಿಕ್ಯೂಷನ್‌ಗೆ ಅನುಮತಿ ನೀಡಲಾಗಿತ್ತು. ಆದರೆ 9 ತಿಂಗಳು ಸುಮ್ಮನೆ ಇದ್ದ ರಾಜ್ಯಪಾಲರು ಆಗಸ್ಟ್ 28 ರಂದು ಇಂಗ್ಲಿಷ್‌ಗೆ ಅನುವಾದ ಮಾಡಿ ಕಳಿಸಿ ಎಂದು ವಾಪಸ್ ಕಳಿಸಿದ್ದಾರೆ. ಕನ್ನಡ ಅರ್ಥವಾಗದೇ ಇದ್ದರೆ ಇಂಗ್ಲಿಷ್‌ಗೆ ಅನುವಾದ ಮಾಡಿ ಕೊಡಿ ಎಂದು ಕೇಳಲು 9 ತಿಂಗಳು ಕಾಯಬೇಕಿತ್ತಾ ಎಂದು ಪ್ರಶ್ನೆ ಮಾಡಿದರು.

ಗಾಲಿ ಜನಾರ್ಧನ ರೆಡ್ಡಿ ವಿರುದ್ಧ ಕೂಡ ಪ್ರಾಸಿಕ್ಯೂಷನ್‌ಗೆ ಅನುಮತಿ ಕೊಡಲು 2024ರ ಮೇ ತಿಂಗಳಿನಲ್ಲಿ ರಾಜ್ಯ ಸರ್ಕಾರ ದಾಖಲೆಗಳನ್ನು ನೀಡಿದ್ದರೂ, ಇಷ್ಟು ದಿನ ಸುಮ್ಮನಿದ್ದು, ಈಗ ವಾಪಸ್ ಕಳಿಸಿದ್ದಾರೆ. ಗೆಹ್ಲೋಟ್ ಕಳೆದ ಮೂರು ವರ್ಷದಿಂದ ಕರ್ನಾಟಕದ ರಾಜ್ಯಪಾಲರಾಗಿದ್ದಾರೆ, ಅವರಿಗೆ ಕನ್ನಡ ಬರದೇ ಇದ್ದರೆ, ಒಬ್ಬರು ತರ್ಜುಮೆ ಮಾಡಲು ಕೂಡ ಅವರ ಕಚೇರಿಯಲ್ಲಿ ಸಿಬ್ಬಂದಿಯನ್ನು ಇಟ್ಟುಕೊಂಡಿಲ್ಲವಾ, ಕರ್ನಾಟಕದಲ್ಲಿದ್ದರೂ ಕನ್ನಡದ ಬಗ್ಗೆ ಇಷ್ಟೊಂದು ನಿರ್ಲಕ್ಷ್ಯ ಎಂದರು.

ಬೇರೆ ರಾಜ್ಯದವರು ಕರ್ನಾಟಕದ ರಾಜ್ಯಪಾಲರಾದಾಗ ಕನ್ನಡ-ಇಂಗ್ಲೀಷ್ ತರ್ಜುಮೆ ಮಾಡುವ ಸಿಬ್ಬಂದಿ ಇರಬೇಕಲ್ಲವಾ, ಕನ್ನಡಿಗರು ಏನಾದರೂ ರಾಜ್ಯಪಾಲರಿಗೆ ದೂರು ಕೊಡಬೇಕೆಂದರೆ, ಇಂಗ್ಲಿಷ್‌ನಲ್ಲೇ ಕೊಡಬೇಕಾ, ಕನ್ನಡದಲ್ಲಿ ಕೊಟ್ಟರೆ ಅದನ್ನು ರಾಜ್ಯಪಾಲರು ಅರ್ಥ ಮಾಡಿಕೊಳ್ಳಲು ಯಾಕೆ ವ್ಯವಸ್ಥೆ ಮಾಡಿಕೊಂಡಿಲ್ಲ ಎಂದು ಕೇಳಿದರು.

ಆಮ್ ಆದ್ಮಿ ಪಾರ್ಟಿ ಹಿರಿಯ ನಾಯಕ ಗುರುಮೂರ್ತಿಯವರು ಮಾತನಾಡಿ, ರಾಜ್ಯಪಾಲರ ವರ್ತನೆಯನ್ನು ನೋಡಿದರೆ ಅವರು ಈಗ ಒಂದು ಪಕ್ಷದ ಪರ ಇದ್ದಾರೆ ಎನ್ನುವ ಅನುಮಾನ ಮೂಡುತ್ತಿದೆ. ಗಂಭೀರ ಭ್ರಷ್ಟಾಚಾರ ಆರೋಪಗಳಿದ್ದರೂ, ಪ್ರಾಸಿಕ್ಯೂಷನ್‌ಗೆ ಅನುಮತಿ ಕೇಳಿದಾಗ ಹಲವು ತಿಂಗಳು ಕಾಯಿಸುವುದು ಸರಿಯಾದ ನಡೆಯಾ ಎಂದರು, ರಾಜ್ಯಪಾಲರು ಈ ಪ್ರಶ್ನೆಗಳಿಗೆ ಉತ್ತರ ಕೊಡಬೇಕು, ಕನ್ನಡಿಗರಿಗೆ ಅವರು ಇದಕ್ಕೆ ಉತ್ತರ ಕೊಡಬೇಕು ಎಂದರು.

P

Peepal Media Desk

Peepal Media · ರಾಜಕೀಯ ವಿಭಾಗ

ಸಂಬಂಧಿತ ಸುದ್ದಿಗಳು

Exit mobile version