ಮುಖ್ಯ ವಿಷಯಕ್ಕೆ ತೆರಳಿ
Peepal Media
ತಾಜಾ ಸುದ್ದಿ
ಈಸಕ್ಕಿ ಆಸೆಯನ್ನೂ ಮೀರಿದ ಆಯ್ದಕ್ಕಿ ಲಕ್ಕಮ್ಮಗಾಜಾ ಸ್ಮಶಾನದ ಮೇಲೆ ಮತ್ತೆ ಅರಳುತ್ತಾ ನೆತನ್ಯಾಹು ಕುರ್ಚಿ?ಅರುಣಾಚಲದಲ್ಲಿ ಚೀನಾ ಸೈನಿಕರೊಂದಿಗೆ ಮುಖಾಮುಖಿ: ಕೇಂದ್ರದ ಮೌನವನ್ನು ಪ್ರಶ್ನಿಸಿದ ಕಾಂಗ್ರೆಸ್‌ನ ಜೈರಾಮ್ ರಮೇಶ್ಕಡತಗಳ ವಿಲೇವಾರಿ ಪ್ರಕ್ರಿಯೆ ಬದಲಾವಣೆ: ಚುನಾವಣಾ ಆಯುಕ್ತರಿಂದ ಕ್ಯಾಬಿನೆಟ್‌ ಕಾರ್ಯದರ್ಶಿಗೆ ಆಕ್ಷೇಪಣಾ ಪತ್ರಮೋದಿ–ಅದಾನಿ ಕುರಿತ ಸಾಕ್ಷ್ಯಚಿತ್ರ ಹಂಚಿಕೊಂಡ ರಾಜ್‌ ಠಾಕ್ರೆ; ತೆಗೆದುಹಾಕುವಂತೆ ಸೂಚನೆಗಳ ನಡುವೆ ಮುಂದುವರೆದ ಚರ್ಚೆಮಂಡ್ಯದಲ್ಲಿ ARAI ಪರೀಕ್ಷಾ ಕೇಂದ್ರಗಳಿಗೆ ಭೂಮಿ ಹಂಚಿಕೆ ವಿಳಂಬ: ರಾಜ್ಯ ಸರ್ಕಾರಕ್ಕೆ ಎಚ್‌.ಡಿ. ಕುಮಾರಸ್ವಾಮಿ ಪತ್ರರಾಷ್ಟ್ರೀಯತೆಯ ಪಾಠ ನನಗೆ ಬೇಕಿಲ್ಲ; ನಮ್ಮ ಗುರಿ ಆಡಳಿತ, ಸಾಮಾಜಿಕ ಜಾಲತಾಣದ ಪ್ರಚಾರವಲ್ಲ: ಕೆ. ಅಣ್ಣಾಮಲೈಕೇವಲ ಮದುವೆಗಾಗಿ ಧರ್ಮಾಂತರವಾಗುವುದನ್ನು ಒಪ್ಪಲು ಸಾಧ್ಯವಿಲ್ಲ: ಬಾಂಬೆ ಹೈಕೋರ್ಟ್‌ಇನ್ನು ನೋಂದಾಯಿತ ಸಿಮ್‌ ಇದ್ದರೆ ಮಾತ್ರ ವಾಟ್ಸ್‌ಆ್ಯಪ್‌ ಬಳಕೆ ಸಾಧ್ಯ: ಜನವರಿ 1, 2027ರಿಂದ ಹೊಸ ನಿಯಮ ಜಾರಿಈ-ಮುದ್ರ ಡಿಜಿಟಲ್‌ ಪ್ರಮಾಣಪತ್ರಗಳಲ್ಲಿ ಭದ್ರತಾ ಲೋಪ: ಜಾಗತಿಕ ತಂತ್ರಜ್ಞಾನ ವಲಯದಲ್ಲಿ ಆತಂಕಹಾಸನ ಕಾಳಸಂತೆಗೆ ಪಡಿತರ ಅಕ್ಕಿ ಮಾರಾಟ ಯತ್ನ – ಕ್ವಿಂಟಲ್‌ ಗಟ್ಟಲೆ ಅಕ್ಕಿ, ರಾಗಿ ವಶಸದ್ಯದಲ್ಲೆ ಕಬ್ಬು ಬೆಳೆಗಾರರ ಸಭೆ ಕರೆದಿದ್ದೇನೆ – ಸಿಎಂ ಡಿ.ಕೆ ಶಿವಕುಮಾರ್ರಾಜ್ಯದಲ್ಲಿ ಐದು ದಿನಗಳಲ್ಲಿ ಮಳೆ ಸಾಧ್ಯತೆ – ಹವಾಮಾನ ಇಲಾಖೆ ಮುನ್ಸೂಚನೆಸಿದ್ದರಾಮಯ್ಯ ಅವರನ್ನು ಅಧಿಕಾರದಿಂದ ಇಳಿಸಲು ವ್ಯವಸ್ಥಿತ ಸಂಚು ರೂಪಿಸಿ ಯಶಸ್ವಿಗೊಂಡಿದ್ದಾರೆ – ಸಿಎಂ ಯಡಿಯೂರಪ್ಪಚುನಾವಣಾ ಆಯುಕ್ತರಿಗೆ ರಕ್ಷಣೆ ನೀಡುವ ಕಾನೂನು ರದ್ದುಗೊಳಿಸಿ – ಮಲ್ಲಿಕಾರ್ಜುನ ಖರ್ಗೆ ಆಗ್ರಹದಸರಾ ವೇಳೆ ಪೊಲೀಸರ ಲಾಠಿ ಏಟಿಗೆ 4 ವರ್ಷದ ಬಾಲಕ ಗಂಭೀರ – ICUನಲ್ಲಿ ಅಂತಿಮ ಹೋರಾಟಸೌದಿ ವಿಮಾನ ನಿಲ್ದಾಣದ ಮೇಲೆ ಭೀಕರ ದಾಳಿ – 8 ಮಂದಿಗೆ ಗಾಯ, ಇಬ್ಬರ ಅಂತ್ಯನಂದಿಧ್ವಜ ಪೂಜೆಗೆ ಸಚಿವರಿಗೆ ಅವಕಾಶ ನಿರಾಕರಿಸಿದ ಅಧಿಕಾರಿಗಳ ವಿರುದ್ಧ ತನಿಖೆಗೆ ಆದೇಶ: ಮುಖ್ಯಮಂತ್ರಿ ಡಿ ಕೆ ಶಿವಕುಮಾರ್‌300 ವರ್ಷಗಳಷ್ಟು ಹಳೆಯ ಐತಿಹಾಸಿಕ ರೇಸ್‌ಕೋರ್ಸ್ ಮಸೀದಿಯ ವಿದ್ಯುತ್ ಹಾಗೂ ನೀರು ಸಂಪರ್ಕ ಕಡಿತ: ತುರ್ತು ರಕ್ಷಣೆ ಕೋರಿದ ದೆಹಲಿ ವಕ್ಫ್ ಮಂಡಳಿತಿಹಾರ್ ಜೈಲಿನಿಂದ ಬಿಡುಗಡೆಯಾದ ಬೆನ್ನಲ್ಲೇ ಸೌರವ್ ದಾಸ್ ಹಾಗೂ ಅಶೋತ್ ರಾಂಕಾಗೆ ದೆಹಲಿ ಅಪರಾಧ ವಿಭಾಗದಿಂದ ಸಮನ್ಸ್

ಅದಾನಿ ಅಕ್ರಮಗಳು-ಸುಪ್ರೀಂ ಮಧ್ಯಸ್ಥಿಕೆ ವಹಿಸಬೇಕು: ಸಿಪಿಎಂ

PPeepal Media Desk

Peepal Media Desk ರಾಜಕೀಯ

• 1 ನಿಮಿಷದ ಓದು

ಅದಾನಿ ಅಕ್ರಮಗಳು-ಸುಪ್ರೀಂ ಮಧ್ಯಸ್ಥಿಕೆ ವಹಿಸಬೇಕು: ಸಿಪಿಎಂ

ಅದಾನಿ ಸಮೂಹವು ತನ್ನ ಕಂಪನಿಗಳ ಷೇರುಗಳ ಬೆಲೆಗಳನ್ನು ತಾರುಮಾರು ಮಾಡಿದೆ ಮತ್ತು ಆಸ್ತಿಗಳ ಮೌಲ್ಯವನ್ನು ಹೆಚ್ಚಿಸುವ ಅಕ್ರಮಗಳಲ್ಲಿ ತೊಡಗಿದೆ ಎಂಬುದಕ್ಕೆ ತಾಜಾ ಪುರಾವೆಗಳು ಹೊರಹೊಮ್ಮಿದ ನಂತರ ಈ ವಿಷಯದಲ್ಲಿ ಸಿಪಿಎಂ ಪಾಲಿಟ್‌ಬ್ಯುರೊ ಸುಪ್ರೀಂ ಕೋರ್ಟ್‌ನ ಮಧ್ಯಸ್ಥಿಕೆಯನ್ನು ಕೋರಿದೆ.

ಪಕ್ಷದ ಪೊಲಿಟ್‌ಬ್ಯುರೊ ಗುರುವಾರ ಇಲ್ಲಿ ಈ ಕುರಿತು ಪ್ರಕಟಣೆ ಹೊರಡಿಸಿದೆ. ಅದಾನಿ ಸಮೂಹದ ಅಕ್ರಮಗಳ ಕುರಿತು ಸಂಘಟಿತ ಅಪರಾಧ ಮತ್ತು ಭ್ರಷ್ಟಾಚಾರ ವರದಿ ಯೋಜನೆ ಒದಗಿಸಿದ ಮಾಹಿತಿ (ಇನ್‌ಪುಟ್) ಆಧರಿಸಿ, ‘ದಿ ಫೈನಾನ್ಷಿಯಲ್ ಟೈಮ್ಸ್’ ಮತ್ತು ‘ದಿ ಗಾರ್ಡಿಯನ್’ ಸುದ್ದಿ ಲೇಖನಗಳನ್ನು ಪ್ರಕಟಿಸಿವೆ. ವಿನೋದ್ ಅದಾನಿಯವರ ಇಬ್ಬರು ನಿಕಟ ಸಹವರ್ತಿಗಳು ಬರ್ಮುಡಾದಲ್ಲಿ ಹೂಡಿಕೆ ನಿಧಿಯನ್ನು ಹೇಗೆ ಬಳಸಿದರು ಮತ್ತು ಅದಾನಿ ಕಂಪನಿಗಳಲ್ಲಿ ಶತಕೋಟಿ ಡಾಲರ್ ಮೌಲ್ಯದ ಷೇರುಗಳನ್ನು ಖರೀದಿಸಲು ಶೆಲ್ ಕಂಪನಿಗಳನ್ನು ಸ್ಥಾಪಿಸಿದರು ಎಂಬುದನ್ನು ಈ ಸುದ್ದಿಗಳು ಸ್ಪಷ್ಟವಾಗಿ ಬಹಿರಂಗಪಡಿಸಿವೆ ಎಂದು ಪೊಲಿಟ್‌ಬ್ಯುರೊ ಬಹಿರಂಗಪಡಿಸಿದೆ.

2014ರಲ್ಲಿ ಅದಾನಿ ಸಮೂಹದ ಕಂಪನಿಗಳ ವಿದೇಶಿ ನಿಧಿಯನ್ನು ಸೆಬಿ ಪರಿಶೀಲಿಸಿತ್ತು, ಆದರೆ ನಂತರ ತನಿಖೆಯನ್ನು ಮುಚ್ಚಿಹಾಕಿದೆ ಎಂದು ಪೊಲಿಟ್‌ಬ್ಯುರೊ ಹೇಳಿದೆ. ಪ್ರಧಾನಿ ಮೋದಿಯವರ ಬೆಂಬಲದಿಂದಾಗಿ ಷೇರುಪೇಟೆಯಲ್ಲಿ ನಡೆದಿರುವ ದೊಡ್ಡ ಪ್ರಮಾಣದ ವಂಚನೆಗಳು ಮತ್ತು ಬೃಹತ್ ಅಕ್ರಮಗಳ ವಿರುದ್ಧ ಯಾವುದೇ ನಿಯಂತ್ರಣ ಪ್ರಾಧಿಕಾರ ಯಾವುದೇ ಕ್ರಮ ಕೈಗೊಂಡಿಲ್ಲ ಎಂಬುದನ್ನು ಈ ಲೇಖನಗಳು ದೃಢಪಡಿಸಿವೆ ಎಂದು ಪೊಲಿಟ್‌ಬ್ಯುರೊ ಹೇಳಿದೆ. ಅದಾನಿ ಬಗ್ಗೆ ಬೆಳಕಿಗೆ ಬಂದಿರುವ ಸಾಕ್ಷ್ಯಾಧಾರಗಳ ಆಧಾರದ ಮೇಲೆ ಸಮಗ್ರ ತನಿಖೆಯ ಅಗತ್ಯವಿದೆ. ಇದರಲ್ಲಿ ಪಾರದರ್ಶಕತೆ ಉಳಿಸಿಕೊಳ್ಳಲು ಸುಪ್ರೀಂ ಕೋರ್ಟ್ ಮಧ್ಯಪ್ರವೇಶಿಸುವಂತೆ ಪೊಲಿಟ್ ಬ್ಯುರೊ ಕೋರಿದೆ.

ವಿಷಯಗಳು: #news #peepal #peepalmedia #politics
PPeepal Media Desk

Peepal Media Desk

Peepal Media · ರಾಜಕೀಯ ವಿಭಾಗ

ಸಂಬಂಧಿತ ಸುದ್ದಿಗಳು