ಮುಖ್ಯ ವಿಷಯಕ್ಕೆ ತೆರಳಿ
Peepal Media
ತಾಜಾ ಸುದ್ದಿ
ಜಿಲ್ಲಾಧಿಕಾರಿ ವಿರುದ್ಧದ ಆರೋಪ – ಪೊಲೀಸ್ ನೋಟಿಸ್‌ಗೆ ಡೋಂಟ್‌ ಕೇರ್ ಎಂದ ಕುಮಾರಸ್ವಾಮಿಬಾಂಗ್ಲಾದೇಶಕ್ಕೆ ಶೇಖ್ ಹಸೀನಾ: ಭಾರತದಿಂದ ವಾಪಸ್; ರಾಷ್ಟ್ರೀಯ ವಿಮಾನವೇ ಬೇಕೆಂಬ ಬೇಡಿಕೆ; ಬಂಧನಕ್ಕೆ ಸಿದ್ಧವಾಗಿರುವ ಸರ್ಕಾರ!ರಾಜಧಾನಿಯಲ್ಲಿ ಕುಡಿದು ವಾಹನ ಚಾಲನೆ – ಒಂದೇ ವಾರದಲ್ಲಿ 744 ಕೇಸ್‌28 ಎಸೆತಗಳಲ್ಲಿ ಶತಕ, 15ನೇ ವಯಸ್ಸಿನಲ್ಲೇ ವಿಶ್ವದಾಖಲೆ: ವೈಭವ್ ಸೂರ್ಯವಂಶಿ ಎಂಬ ಕ್ರಿಕೆಟ್ ವಿಸ್ಮಯ!ಆಶಾ ಕಾರ್ಯಕರ್ತೆಯರ ಬೇಡಿಕೆ ಇಡೇರಿಸಿ ಇಲ್ಲವಾದರೆ ಕರ್ನಾಟಕ ಬಂದ್​​​ – ವಾಟಾಳ್‌ ನಾಗರಾಜ್‌ನ.26ರಂದು ಸಂಯುಕ್ತ ಕಿಸಾನ್ ಮೋರ್ಚಾದಿಂದ ದೇಶವ್ಯಾಪಿ ಪ್ರತಿಭಟನೆ; ಮುಕ್ತ ವ್ಯಾಪಾರ ಒಪ್ಪಂದ ರದ್ದತಿಗೆ ಆಗ್ರಹಇಸ್ರೇಲ್ ದೇಶದಿಂದ ಶಸ್ತ್ರಾಸ್ತ್ರ ಖರೀದಿಗೆ ರಾಹುಲ್ ಗಾಂಧಿ ಬೆಂಬಲ: ಎಡಪಕ್ಷಗಳ ನಾಯಕರಿಂದ ಟೀಕೆಅಪ್ಪನನ್ನು ಕೊಲ್ಲಲೆಂದೇ ಸೆಕ್ಯುರಿಟಿ ತೆಗೆದುಹಾಕಲಾಗಿತ್ತು: ಅಂದಿನ ಕೇಂದ್ರ ಸರ್ಕಾರದ ವಿರುದ್ಧ ರಾಹುಲ್ ಗಾಂಧಿ ಆರೋಪಪಾಲಕ್ಕಾಡ್ ಶಾಲೆಯಲ್ಲಿ ಸಹಪಾಠಿಯಿಂದ ಗುಂಡಿನ ದಾಳಿ: 9ನೇ ತರಗತಿ ವಿದ್ಯಾರ್ಥಿಗೆ ಗಾಯ; ವಿದ್ಯಾರ್ಥಿ ವಶಕ್ಕೆಎರಡು ಮಕ್ಕಳಿರುವ ಹೆಂಗಸನ್ನು ಮದುವೆಯಾಗುವುದಾಗಿ ಹಟ ಹಿಡಿದ ಮಗನನ್ನು ಕೊಂದು ಮುಗಿಸಿದ ತಾಯಿಬೆಂಗಳೂರಿನ ಇತಿಹಾಸ, ಕಲೆ, ಸಾಹಿತ್ಯಕ್ಕೆ ಹೊಸ ವೇದಿಕೆ: ಡಿಸೆಂಬರ್ 4ರಿಂದ 10 ದಿನಗಳ ಬೆಂಗಳೂರು ಜಾತ್ರೆಕೆಪಿಎಸ್‌ಸಿ ನೇಮಕಾತಿ ಹಗರಣ: 384 ಕೆಎಎಸ್ ಅಧಿಕಾರಿಗಳ ಆಯ್ಕೆಯ ಮೇಲೂ ಅನುಮಾನದ ನೆರಳು; ತನಿಖೆಗೆ ಹೈಕೋರ್ಟ್ ಆದೇಶಆಶಾ ಕಾರ್ಯಕರ್ತೆಯರ ಬೇಡಿಕೆ ಈಡೇರಿಕೆಗೆ ಸರ್ಕಾರ ಬದ್ಧ: ಡಿ.ಕೆ. ಶಿವಕುಮಾರ್ ಭರವಸೆಹಿಜಾಬ್ ನಿಯಮಕ್ಕೆ ಸೆಡ್ಡು ಹೊಡೆದ ಗಾಯಕಿಗೆ 74 ಚಡಿಯೇಟು; ಇರಾನ್‌ನಲ್ಲಿ ಕಠಿಣ ಶಿಕ್ಷೆಲಾಭ ಹೆಚ್ಚುತ್ತಿದೆ, ಉದ್ಯೋಗ ಮತ್ತು ವೇತನ ಏಕೆ ಹೆಚ್ಚುತ್ತಿಲ್ಲ? ಉದ್ಯಮ ವಲಯಕ್ಕೆ ಪ್ರಧಾನಿ ಮೋದಿ ನೇರ ಪ್ರಶ್ನೆಸಮತಾವಾದಿ ಬಸವ ಸಿದ್ದಾಂತದ ಮೇಲೆ ಸನಾತನಿಗಳ ದಾಳಿಯೆಮನ್‌ನಲ್ಲಿ ಸೌದಿ ಅರೇಬಿಯಾದ ವೈಮಾನಿಕ ದಾಳಿ: 25 ಮಂದಿ ಸಾವು ಅಥವಾ ನಾಪತ್ತೆ; ಆರು ಜನರಿಗೆ ಗಾಯಕರ್ನಾಟಕದ ಹಲವೆಡೆ ಮೋಡ ಕವಿದ ವಾತಾವರಣ, ಬೆಂಗಳೂರಿನಲ್ಲಿ ಗುಡುಗು ಸಹಿತ ಮಳೆ ಸಾಧ್ಯತೆ; ಮುಂದಿನ 4 ದಿನಗಳ ಹವಾಮಾನ ಹೇಗಿರಲಿದೆ?ಪುಣೆಯ ಟೆಕ್ಕಿಯಿಂದ ಲಿವ್‌-ಇನ್‌ ಸಂಗಾತಿಯ ಹತ್ಯೆ; ಇಡೀ ರಾತ್ರಿ ಮೃತದೇಹದ ಪಕ್ಕದಲ್ಲೇ ಕುಳಿತಿದ್ದ ಆರೋಪಿ, ಬೆಳಗ್ಗೆ ಪೊಲೀಸರಿಗೆ ಕರೆಆನೆಗಳನ್ನು ಸ್ಥಳಾಂತರಿಸುವುದರಿಂದ ಸಮಸ್ಯೆ ಬಗೆಹರಿಯದು; ಅವು ನಡೆದಾಡುವ ದಾರಿಗಳ ಒತ್ತುವರಿ ತೆರವುಗೊಳಿಸಿ: ರಮ್ಯಾ ದಿವ್ಯ ಸ್ಪಂದನ

ಜಿಲ್ಲಾಧಿಕಾರಿ ವಿರುದ್ಧದ ಆರೋಪ – ಪೊಲೀಸ್ ನೋಟಿಸ್‌ಗೆ ಡೋಂಟ್‌ ಕೇರ್ ಎಂದ ಕುಮಾರಸ್ವಾಮಿ

ರರಮೇಶ್‌ ಹಾಸನ್‌

ರಮೇಶ್‌ ಹಾಸನ್‌ ಮೀಡಿಯಾ, ರಾಜಕೀಯ, ರಾಜ್ಯ

• 1 ನಿಮಿಷದ ಓದು

ಜಿಲ್ಲಾಧಿಕಾರಿ ವಿರುದ್ಧದ ಆರೋಪ – ಪೊಲೀಸ್ ನೋಟಿಸ್‌ಗೆ ಡೋಂಟ್‌ ಕೇರ್ ಎಂದ ಕುಮಾರಸ್ವಾಮಿ

ಬೆಂಗಳೂರು: ಹಾಸನ ಜಿಲ್ಲಾಧಿಕಾರಿ ಕೆ.ಎಸ್. ಲತಾಕುಮಾರಿ ವಿರುದ್ಧ ಭ್ರಷ್ಟಾಚಾರದ ಗಂಭೀರ ಆರೋಪ ಮಾಡಿದ್ದ ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಅವರಿಗೆ ಹಾಸನ ಸೈಬರ್ ಕ್ರೈಂ ಪೊಲೀಸರು ನೋಟಿಸ್ ನೀಡಲು ಮುಂದಾಗಿದ್ದು, ಈ ಬೆಳವಣಿಗೆ ಪ್ರಕರಣಕ್ಕೆ ಹೊಸ ತಿರುವು ನೀಡಿದೆ.

ಜಿಲ್ಲಾಧಿಕಾರಿ ಲತಾಕುಮಾರಿ ನೀಡಿದ ದೂರಿನ ಹಿನ್ನೆಲೆಯಲ್ಲಿ ಪ್ರಕರಣಕ್ಕೆ ಸಂಬಂಧಿಸಿದಂತೆ ಸ್ಪಷ್ಟನೆ ನೀಡುವಂತೆ ಸೂಚಿಸಿ ಸೈಬರ್ ಕಮಾಂಡ್ ಸೆಂಟರ್‌ನಿಂದ ನೋಟಿಸ್ ಸಿದ್ಧಪಡಿಸಲಾಗಿತ್ತು. ಈ ನೋಟಿಸ್ ತಲುಪಿಸಲು ಹಾಸನ ಸೈಬರ್ ಕ್ರೈಂ ಪೊಲೀಸರು ಕುಮಾರಸ್ವಾಮಿ ಅವರ ನಿವಾಸಕ್ಕೆ ತೆರಳಿದ್ದರು. ಆದರೆ, ನೋಟಿಸ್ ಸ್ವೀಕರಿಸಲು ನಿರಾಕರಿಸಿದ ಅವರು ಪೊಲೀಸರನ್ನು ವಾಪಸ್ ಕಳುಹಿಸಿದ್ದಾರೆ.

ಈ ಸಂದರ್ಭದಲ್ಲಿ ಪೊಲೀಸರ ವಿರುದ್ಧ ತೀವ್ರ ಅಸಮಾಧಾನ ವ್ಯಕ್ತಪಡಿಸಿದ ಕುಮಾರಸ್ವಾಮಿ, ವಿರೋಧ ಪಕ್ಷದ ನಾಯಕನಾಗಿ ಸಾರ್ವಜನಿಕವಾಗಿ ಮಾಡಿರುವ ಆರೋಪಗಳಿಗೆ ಸಂಬಂಧಿಸಿದಂತೆ ದೂರು ದಾಖಲಾದ ತಕ್ಷಣ ಕ್ರಮ ಕೈಗೊಳ್ಳುವ ಪೊಲೀಸರು, ಇತರರು ಮಾಡಿರುವ ಆರೋಪಗಳ ವಿಚಾರದಲ್ಲೂ ಇದೇ ರೀತಿಯ ಕ್ರಮ ಕೈಗೊಂಡಿದ್ದಾರೆಯೇ ಎಂದು ಪ್ರಶ್ನಿಸಿದ್ದಾರೆ. ಘಟನೆ ಬೆನ್ನಲ್ಲೇ ರಾಜ್ಯ ಪೊಲೀಸ್ ಮಹಾನಿರ್ದೇಶಕ ಸಲೀಂ ಅವರಿಗೂ ದೂರವಾಣಿ ಕರೆ ಮಾಡಿ ಮಾತನಾಡಿದ್ದಾರೆ ಎನ್ನಲಾಗಿದೆ.

ನೋಟಿಸ್ ಸ್ವೀಕರಿಸಲು ನಿರಾಕರಿಸಿದ ವಿಚಾರವಾಗಿ ಕುಮಾರಸ್ವಾಮಿ ಯಾವುದೇ ಅಧಿಕೃತ ಪ್ರತಿಕ್ರಿಯೆ ನೀಡಿಲ್ಲ. ಕೇಂದ್ರ ಸಚಿವ ಸಂಪುಟ ಸಭೆಯಲ್ಲಿ ಪಾಲ್ಗೊಳ್ಳಲು ಅವರು ದೆಹಲಿಗೆ ತೆರಳಿದ್ದು, ಅಲ್ಲಿ ಈ ಕುರಿತು ಪ್ರತಿಕ್ರಿಯಿಸುವ ಸಾಧ್ಯತೆಯಿದೆ.

ಇದನ್ನು ಓದಿ

ಏನಿದು ಭ್ರಷ್ಟಾಚಾರದ ಆರೋಪ?

ಇತ್ತೀಚೆಗೆ ಹಾಸನ ಜಿಲ್ಲಾಧಿಕಾರಿ ಕೆ.ಎಸ್. ಲತಾಕುಮಾರಿ ವಿರುದ್ಧ ಕೇಂದ್ರ ಸಚಿವ ಕುಮಾರಸ್ವಾಮಿ ಲಂಚ ಮತ್ತು ಭ್ರಷ್ಟಾಚಾರದ ಗಂಭೀರ ಆರೋಪಗಳನ್ನು ಮಾಡಿದ್ದರು. ಈ ಸಂಬಂಧ ಕೆಲವು ವಾಟ್ಸ್‌ಆ್ಯಪ್ ಸಂಭಾಷಣೆಗಳ ಸ್ಕ್ರೀನ್‌ಶಾಟ್‌ಗಳನ್ನು ಬಿಡುಗಡೆ ಮಾಡಿದ್ದರು.

ಮೂರು ಕಲ್ಲಿನ ಕ್ರಷರ್‌ಗಳ ಪರವಾನಗಿ ಹಾಗೂ ಸಕಲೇಶಪುರ ಭಾಗದ ಭೂ ಪರಿವರ್ತನೆ ಕಡತಗಳ ವಿಲೇವಾರಿಗೆ ಸಂಬಂಧಿಸಿದಂತೆ 60 ಲಕ್ಷ ರೂ. ಲಂಚಕ್ಕೆ ಬೇಡಿಕೆ ಇಡಲಾಗಿದೆ ಎಂದು ಆರೋಪಿಸಿದ್ದರು. ಜಿಲ್ಲಾಧಿಕಾರಿಗಳ ಆಪ್ತ ಸಹಾಯಕ ಶಶಿಕಿರಣ್ ಅವರ ವಾಟ್ಸ್‌ಆ್ಯಪ್ ಸಂಭಾಷಣೆಗಳನ್ನು ಉಲ್ಲೇಖಿಸಿ ದಾಖಲೆಗಳನ್ನು ಬಹಿರಂಗಪಡಿಸಿದ್ದರು.

ಅಲ್ಲದೆ, ಹಾಸನ ಜಿಲ್ಲಾಧಿಕಾರಿಯಾಗಿ ಮುಂದುವರಿಯಲು ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಂ. ಶಿವಲಿಂಗೇಗೌಡ ಅವರಿಗೆ 75 ಲಕ್ಷ ರೂ. ಲಂಚ ನೀಡಲಾಗಿದೆ ಎಂಬ ಮತ್ತೊಂದು ಗಂಭೀರ ಆರೋಪವನ್ನೂ ಮಾಡಿದ್ದರು.

ಈ ಆರೋಪಗಳನ್ನು ಗಂಭೀರವಾಗಿ ಪರಿಗಣಿಸಿದ್ದ ಜಿಲ್ಲಾಧಿಕಾರಿ ಲತಾಕುಮಾರಿ ಅವರು ಹಾಸನ ಸೈಬರ್ ಕ್ರೈಂ ಪೊಲೀಸರಿಗೆ ದೂರು ನೀಡಿದ್ದರು. ಇದೀಗ ದೂರಿನ ಆಧಾರದ ಮೇಲೆ ಕೇಂದ್ರ ಸಚಿವರಿಗೆ ನೋಟಿಸ್ ನೀಡಲು ಪೊಲೀಸರು ಮುಂದಾಗಿರುವುದು ರಾಜಕೀಯ ವಲಯದಲ್ಲಿ ಕುತೂಹಲ ಮೂಡಿಸಿದೆ.

ಇದನ್ನು ಓದಿ

ರರಮೇಶ್‌ ಹಾಸನ್‌

ರಮೇಶ್‌ ಹಾಸನ್‌

Peepal Media · ಮೀಡಿಯಾ ವಿಭಾಗ

ಸಂಬಂಧಿತ ಸುದ್ದಿಗಳು