ಮುಖ್ಯ ವಿಷಯಕ್ಕೆ ತೆರಳಿ
Peepal Media
ತಾಜಾ ಸುದ್ದಿ
●ಈಸಕ್ಕಿ ಆಸೆಯನ್ನೂ ಮೀರಿದ ಆಯ್ದಕ್ಕಿ ಲಕ್ಕಮ್ಮ●ಗಾಜಾ ಸ್ಮಶಾನದ ಮೇಲೆ ಮತ್ತೆ ಅರಳುತ್ತಾ ನೆತನ್ಯಾಹು ಕುರ್ಚಿ?●ಅರುಣಾಚಲದಲ್ಲಿ ಚೀನಾ ಸೈನಿಕರೊಂದಿಗೆ ಮುಖಾಮುಖಿ: ಕೇಂದ್ರದ ಮೌನವನ್ನು ಪ್ರಶ್ನಿಸಿದ ಕಾಂಗ್ರೆಸ್‌ನ ಜೈರಾಮ್ ರಮೇಶ್●ಕಡತಗಳ ವಿಲೇವಾರಿ ಪ್ರಕ್ರಿಯೆ ಬದಲಾವಣೆ: ಚುನಾವಣಾ ಆಯುಕ್ತರಿಂದ ಕ್ಯಾಬಿನೆಟ್‌ ಕಾರ್ಯದರ್ಶಿಗೆ ಆಕ್ಷೇಪಣಾ ಪತ್ರ●ಮೋದಿ–ಅದಾನಿ ಕುರಿತ ಸಾಕ್ಷ್ಯಚಿತ್ರ ಹಂಚಿಕೊಂಡ ರಾಜ್‌ ಠಾಕ್ರೆ; ತೆಗೆದುಹಾಕುವಂತೆ ಸೂಚನೆಗಳ ನಡುವೆ ಮುಂದುವರೆದ ಚರ್ಚೆ●ಮಂಡ್ಯದಲ್ಲಿ ARAI ಪರೀಕ್ಷಾ ಕೇಂದ್ರಗಳಿಗೆ ಭೂಮಿ ಹಂಚಿಕೆ ವಿಳಂಬ: ರಾಜ್ಯ ಸರ್ಕಾರಕ್ಕೆ ಎಚ್‌.ಡಿ. ಕುಮಾರಸ್ವಾಮಿ ಪತ್ರ●ರಾಷ್ಟ್ರೀಯತೆಯ ಪಾಠ ನನಗೆ ಬೇಕಿಲ್ಲ; ನಮ್ಮ ಗುರಿ ಆಡಳಿತ, ಸಾಮಾಜಿಕ ಜಾಲತಾಣದ ಪ್ರಚಾರವಲ್ಲ: ಕೆ. ಅಣ್ಣಾಮಲೈ●ಕೇವಲ ಮದುವೆಗಾಗಿ ಧರ್ಮಾಂತರವಾಗುವುದನ್ನು ಒಪ್ಪಲು ಸಾಧ್ಯವಿಲ್ಲ: ಬಾಂಬೆ ಹೈಕೋರ್ಟ್‌●ಇನ್ನು ನೋಂದಾಯಿತ ಸಿಮ್‌ ಇದ್ದರೆ ಮಾತ್ರ ವಾಟ್ಸ್‌ಆ್ಯಪ್‌ ಬಳಕೆ ಸಾಧ್ಯ: ಜನವರಿ 1, 2027ರಿಂದ ಹೊಸ ನಿಯಮ ಜಾರಿ●ಈ-ಮುದ್ರ ಡಿಜಿಟಲ್‌ ಪ್ರಮಾಣಪತ್ರಗಳಲ್ಲಿ ಭದ್ರತಾ ಲೋಪ: ಜಾಗತಿಕ ತಂತ್ರಜ್ಞಾನ ವಲಯದಲ್ಲಿ ಆತಂಕ●ಹಾಸನ ಕಾಳಸಂತೆಗೆ ಪಡಿತರ ಅಕ್ಕಿ ಮಾರಾಟ ಯತ್ನ – ಕ್ವಿಂಟಲ್‌ ಗಟ್ಟಲೆ ಅಕ್ಕಿ, ರಾಗಿ ವಶ●ಸದ್ಯದಲ್ಲೆ ಕಬ್ಬು ಬೆಳೆಗಾರರ ಸಭೆ ಕರೆದಿದ್ದೇನೆ – ಸಿಎಂ ಡಿ.ಕೆ ಶಿವಕುಮಾರ್●ರಾಜ್ಯದಲ್ಲಿ ಐದು ದಿನಗಳಲ್ಲಿ ಮಳೆ ಸಾಧ್ಯತೆ – ಹವಾಮಾನ ಇಲಾಖೆ ಮುನ್ಸೂಚನೆ●ಸಿದ್ದರಾಮಯ್ಯ ಅವರನ್ನು ಅಧಿಕಾರದಿಂದ ಇಳಿಸಲು ವ್ಯವಸ್ಥಿತ ಸಂಚು ರೂಪಿಸಿ ಯಶಸ್ವಿಗೊಂಡಿದ್ದಾರೆ – ಸಿಎಂ ಯಡಿಯೂರಪ್ಪ●ಚುನಾವಣಾ ಆಯುಕ್ತರಿಗೆ ರಕ್ಷಣೆ ನೀಡುವ ಕಾನೂನು ರದ್ದುಗೊಳಿಸಿ – ಮಲ್ಲಿಕಾರ್ಜುನ ಖರ್ಗೆ ಆಗ್ರಹ●ದಸರಾ ವೇಳೆ ಪೊಲೀಸರ ಲಾಠಿ ಏಟಿಗೆ 4 ವರ್ಷದ ಬಾಲಕ ಗಂಭೀರ – ICUನಲ್ಲಿ ಅಂತಿಮ ಹೋರಾಟ●ಸೌದಿ ವಿಮಾನ ನಿಲ್ದಾಣದ ಮೇಲೆ ಭೀಕರ ದಾಳಿ – 8 ಮಂದಿಗೆ ಗಾಯ, ಇಬ್ಬರ ಅಂತ್ಯ●ನಂದಿಧ್ವಜ ಪೂಜೆಗೆ ಸಚಿವರಿಗೆ ಅವಕಾಶ ನಿರಾಕರಿಸಿದ ಅಧಿಕಾರಿಗಳ ವಿರುದ್ಧ ತನಿಖೆಗೆ ಆದೇಶ: ಮುಖ್ಯಮಂತ್ರಿ ಡಿ ಕೆ ಶಿವಕುಮಾರ್‌●300 ವರ್ಷಗಳಷ್ಟು ಹಳೆಯ ಐತಿಹಾಸಿಕ ರೇಸ್‌ಕೋರ್ಸ್ ಮಸೀದಿಯ ವಿದ್ಯುತ್ ಹಾಗೂ ನೀರು ಸಂಪರ್ಕ ಕಡಿತ: ತುರ್ತು ರಕ್ಷಣೆ ಕೋರಿದ ದೆಹಲಿ ವಕ್ಫ್ ಮಂಡಳಿ●ತಿಹಾರ್ ಜೈಲಿನಿಂದ ಬಿಡುಗಡೆಯಾದ ಬೆನ್ನಲ್ಲೇ ಸೌರವ್ ದಾಸ್ ಹಾಗೂ ಅಶೋತ್ ರಾಂಕಾಗೆ ದೆಹಲಿ ಅಪರಾಧ ವಿಭಾಗದಿಂದ ಸಮನ್ಸ್

ನನ್ನ ಅನಾರೋಗ್ಯ ಪೀಡಿತ ಪತ್ನಿಯನ್ನು ಭೇಟಿಯಾಗಲು ಅವಕಾಶ ನೀಡಿ: ಕೋರ್ಟಿಗೆ ಅರ್ಜಿ ಸಲ್ಲಿಸಿದ ಮನೀಶ್ ಸಿಸೋಡಿಯಾ

PPeepal Media Desk

Peepal Media Desk • ದೇಶ, ರಾಜಕೀಯ

• 1 ನಿಮಿಷದ ಓದು

ನನ್ನ ಅನಾರೋಗ್ಯ ಪೀಡಿತ ಪತ್ನಿಯನ್ನು ಭೇಟಿಯಾಗಲು ಅವಕಾಶ ನೀಡಿ: ಕೋರ್ಟಿಗೆ ಅರ್ಜಿ ಸಲ್ಲಿಸಿದ ಮನೀಶ್ ಸಿಸೋಡಿಯಾ

ದೆಹಲಿ: ದೆಹಲಿಯ ಮಾಜಿ ಉಪಮುಖ್ಯಮಂತ್ರಿ ಮನೀಶ್ ಸಿಸೋಡಿಯಾ (Manish Sisodia) ಅವರು ಗುರುವಾರ ರೂಸ್ ಅವೆನ್ಯೂ ನ್ಯಾಯಾಲಯದಲ್ಲಿ ತಮ್ಮ ಅನಾರೋಗ್ಯದಿಂದ ಬಳಲುತ್ತಿರುವ ಪತ್ನಿಯನ್ನು ಭೇಟಿಯಾಗಲು ಅನುಮತಿ ನೀಡುವವಂತೆ ಒತ್ತಾಯಿಸಿ ಅರ್ಜಿ ಸಲ್ಲಿಸಿದ್ದಾರೆ.

ಅರ್ಜಿಯಲ್ಲಿ ಸಿಸೋಡಿಯಾ ತನ್ನ ಅನಾರೋಗ್ಯ ಪೀಡಿತ ಪತ್ನಿಯನ್ನು ಐದು ದಿನಗಳ ಕಾಲ ಪೊಲೀಸ್ ಕಸ್ಟಡಿಯಲ್ಲಿ ಭೇಟಿಯಾಗಲು ಅವಕಾಶ ನೀಡುವಂತೆ ಕೋರಿದ್ದರು. ಇದಕ್ಕೂ ಮೊದಲು ಜೂನ್‌ನಲ್ಲಿ, ದೆಹಲಿ ಹೈಕೋರ್ಟ್ ಸಿಸೋಡಿಯಾ ಅವರ ಪತ್ನಿಯನ್ನು ಮಥುರಾ ರಸ್ತೆಯಲ್ಲಿರುವ ಅವರ ಅಧಿಕೃತ ನಿವಾಸದಲ್ಲಿ ಒಂದು ದಿನದ ಮಟ್ಟಿಗೆ ಬೆಳಿಗ್ಗೆ 10ರಿಂದ ಸಂಜೆ 5ರವರೆಗೆ ಭೇಟಿ ಮಾಡಲು ಅನುಮತಿ ನೀಡಿತ್ತು. ಅಂದಿನಿಂದ ಸಿಸೋಡಿಯಾ ತನ್ನ ಪತ್ನಿಯನ್ನು ಭೇಟಿ ಮಾಡಿಲ್ಲ.

ಅಬಕಾರಿ ಹಗರಣಕ್ಕೆ ಸಂಬಂಧಿಸಿದ ಸಿಬಿಐ ಪ್ರಕರಣದಲ್ಲಿ ಮನೀಶ್ ಸಿಸೋಡಿಯಾ ಅವರನ್ನು ಅಕ್ಟೋಬರ್‌ನಲ್ಲಿ ರೂಸ್ ಅವೆನ್ಯೂ ನ್ಯಾಯಾಲಯಕ್ಕೆ ಹಾಜರುಪಡಿಸಲಾಯಿತು. ವಿಚಾರಣೆಯ ನಂತರ ನ್ಯಾಯಾಲಯವು ಸಿಸೋಡಿಯಾ ಅವರ ನ್ಯಾಯಾಂಗ ಬಂಧನವನ್ನು ನವೆಂಬರ್ 22ರವರೆಗೆ ವಿಸ್ತರಿಸಿದೆ. ರೂಸ್ ಅವೆನ್ಯೂ ಕೋರ್ಟ್ ಮತ್ತು ದೆಹಲಿ ಹೈಕೋರ್ಟ್ ಜಾಮೀನು ಅರ್ಜಿಯನ್ನು ತಿರಸ್ಕರಿಸಿದ ನಂತರ ಮನೀಶ್ ಸಿಸೋಡಿಯಾ ಕೂಡ ಸುಪ್ರೀಂ ಕೋರ್ಟ್‌ನಲ್ಲಿ ಜಾಮೀನು ಅರ್ಜಿ ಸಲ್ಲಿಸಿದ್ದಾರೆ ಎಂಬುದು ಗಮನಾರ್ಹ. ಈ ಅರ್ಜಿಯ ಕುರಿತು ಕಳೆದ ಎರಡು ತಿಂಗಳಿಂದ ತನಿಖೆ ನಡೆಯುತ್ತಿದೆ. ಈ ನಡುವೆ, ಇಡಿ ಮತ್ತು ಸಿಬಿಐ ಸಿಸೋಡಿಯಾ ಅವರ ಜಾಮೀನು ಅರ್ಜಿಯನ್ನು ಸುಪ್ರೀಂ ಕೋರ್ಟ್‌ನಲ್ಲಿ ಹಲವಾರು ವಾದಗಳೊಂದಿಗೆ ವಿರೋಧಿಸಿದವು.

ಫೆಬ್ರವರಿ 26ರಂದು ಮನೀಶ್ ಸಿಸೋಡಿಯಾ ಅವರನ್ನು ಸಿಬಿಐ ಬಂಧಿಸಿತ್ತು ಮತ್ತು ನಂತರ ಮಾರ್ಚ್ 9ರಂದು ಇಡಿ ಅವರನ್ನು ತಿಹಾರ್ ಜೈಲಿನಿಂದ ಮತ್ತೆ ಬಂಧಿಸಿತು. ಅಂದಿನಿಂದ ಮನೀಶ್ ಸಿಸೋಡಿಯಾ ಎರಡು ಪ್ರಕರಣಗಳಲ್ಲಿ ತಿಹಾರ್ ಜೈಲಿನಲ್ಲಿದ್ದಾರೆ. ಈ ವೇಳೆ ಅವರ ಜಾಮೀನಿಗೆ ಅರ್ಜಿ ಸಲ್ಲಿಸುವ ಪ್ರಕ್ರಿಯೆ ಕೆಳ ನ್ಯಾಯಾಲಯದಿಂದ ಮೇಲಿನ ನ್ಯಾಯಾಲಯದವರೆಗೆ ನಡೆಯುತ್ತಿದೆ. ಇದುವರೆಗೆ ಅಬಕಾರಿ ಹಗರಣ ಪ್ರಕರಣದಲ್ಲಿ ಹೆಚ್ಚಿನ ಆರೋಪಿಗಳಿಗೆ ಜಾಮೀನು ಸಿಕ್ಕಿದೆ. ಆದರೆ ಮನೀಶ್ ಸಿಸೋಡಿಯಾಗೆ ಇನ್ನೂ ಜಾಮೀನು ಸಿಕ್ಕಿಲ್ಲ.

PPeepal Media Desk

Peepal Media Desk

Peepal Media · ದೇಶ ವಿಭಾಗ

ಸಂಬಂಧಿತ ಸುದ್ದಿಗಳು