ಮುಖ್ಯ ವಿಷಯಕ್ಕೆ ತೆರಳಿ
Peepal Media
ತಾಜಾ ಸುದ್ದಿ
ಈಸಕ್ಕಿ ಆಸೆಯನ್ನೂ ಮೀರಿದ ಆಯ್ದಕ್ಕಿ ಲಕ್ಕಮ್ಮಗಾಜಾ ಸ್ಮಶಾನದ ಮೇಲೆ ಮತ್ತೆ ಅರಳುತ್ತಾ ನೆತನ್ಯಾಹು ಕುರ್ಚಿ?ಅರುಣಾಚಲದಲ್ಲಿ ಚೀನಾ ಸೈನಿಕರೊಂದಿಗೆ ಮುಖಾಮುಖಿ: ಕೇಂದ್ರದ ಮೌನವನ್ನು ಪ್ರಶ್ನಿಸಿದ ಕಾಂಗ್ರೆಸ್‌ನ ಜೈರಾಮ್ ರಮೇಶ್ಕಡತಗಳ ವಿಲೇವಾರಿ ಪ್ರಕ್ರಿಯೆ ಬದಲಾವಣೆ: ಚುನಾವಣಾ ಆಯುಕ್ತರಿಂದ ಕ್ಯಾಬಿನೆಟ್‌ ಕಾರ್ಯದರ್ಶಿಗೆ ಆಕ್ಷೇಪಣಾ ಪತ್ರಮೋದಿ–ಅದಾನಿ ಕುರಿತ ಸಾಕ್ಷ್ಯಚಿತ್ರ ಹಂಚಿಕೊಂಡ ರಾಜ್‌ ಠಾಕ್ರೆ; ತೆಗೆದುಹಾಕುವಂತೆ ಸೂಚನೆಗಳ ನಡುವೆ ಮುಂದುವರೆದ ಚರ್ಚೆಮಂಡ್ಯದಲ್ಲಿ ARAI ಪರೀಕ್ಷಾ ಕೇಂದ್ರಗಳಿಗೆ ಭೂಮಿ ಹಂಚಿಕೆ ವಿಳಂಬ: ರಾಜ್ಯ ಸರ್ಕಾರಕ್ಕೆ ಎಚ್‌.ಡಿ. ಕುಮಾರಸ್ವಾಮಿ ಪತ್ರರಾಷ್ಟ್ರೀಯತೆಯ ಪಾಠ ನನಗೆ ಬೇಕಿಲ್ಲ; ನಮ್ಮ ಗುರಿ ಆಡಳಿತ, ಸಾಮಾಜಿಕ ಜಾಲತಾಣದ ಪ್ರಚಾರವಲ್ಲ: ಕೆ. ಅಣ್ಣಾಮಲೈಕೇವಲ ಮದುವೆಗಾಗಿ ಧರ್ಮಾಂತರವಾಗುವುದನ್ನು ಒಪ್ಪಲು ಸಾಧ್ಯವಿಲ್ಲ: ಬಾಂಬೆ ಹೈಕೋರ್ಟ್‌ಇನ್ನು ನೋಂದಾಯಿತ ಸಿಮ್‌ ಇದ್ದರೆ ಮಾತ್ರ ವಾಟ್ಸ್‌ಆ್ಯಪ್‌ ಬಳಕೆ ಸಾಧ್ಯ: ಜನವರಿ 1, 2027ರಿಂದ ಹೊಸ ನಿಯಮ ಜಾರಿಈ-ಮುದ್ರ ಡಿಜಿಟಲ್‌ ಪ್ರಮಾಣಪತ್ರಗಳಲ್ಲಿ ಭದ್ರತಾ ಲೋಪ: ಜಾಗತಿಕ ತಂತ್ರಜ್ಞಾನ ವಲಯದಲ್ಲಿ ಆತಂಕಹಾಸನ ಕಾಳಸಂತೆಗೆ ಪಡಿತರ ಅಕ್ಕಿ ಮಾರಾಟ ಯತ್ನ – ಕ್ವಿಂಟಲ್‌ ಗಟ್ಟಲೆ ಅಕ್ಕಿ, ರಾಗಿ ವಶಸದ್ಯದಲ್ಲೆ ಕಬ್ಬು ಬೆಳೆಗಾರರ ಸಭೆ ಕರೆದಿದ್ದೇನೆ – ಸಿಎಂ ಡಿ.ಕೆ ಶಿವಕುಮಾರ್ರಾಜ್ಯದಲ್ಲಿ ಐದು ದಿನಗಳಲ್ಲಿ ಮಳೆ ಸಾಧ್ಯತೆ – ಹವಾಮಾನ ಇಲಾಖೆ ಮುನ್ಸೂಚನೆಸಿದ್ದರಾಮಯ್ಯ ಅವರನ್ನು ಅಧಿಕಾರದಿಂದ ಇಳಿಸಲು ವ್ಯವಸ್ಥಿತ ಸಂಚು ರೂಪಿಸಿ ಯಶಸ್ವಿಗೊಂಡಿದ್ದಾರೆ – ಸಿಎಂ ಯಡಿಯೂರಪ್ಪಚುನಾವಣಾ ಆಯುಕ್ತರಿಗೆ ರಕ್ಷಣೆ ನೀಡುವ ಕಾನೂನು ರದ್ದುಗೊಳಿಸಿ – ಮಲ್ಲಿಕಾರ್ಜುನ ಖರ್ಗೆ ಆಗ್ರಹದಸರಾ ವೇಳೆ ಪೊಲೀಸರ ಲಾಠಿ ಏಟಿಗೆ 4 ವರ್ಷದ ಬಾಲಕ ಗಂಭೀರ – ICUನಲ್ಲಿ ಅಂತಿಮ ಹೋರಾಟಸೌದಿ ವಿಮಾನ ನಿಲ್ದಾಣದ ಮೇಲೆ ಭೀಕರ ದಾಳಿ – 8 ಮಂದಿಗೆ ಗಾಯ, ಇಬ್ಬರ ಅಂತ್ಯನಂದಿಧ್ವಜ ಪೂಜೆಗೆ ಸಚಿವರಿಗೆ ಅವಕಾಶ ನಿರಾಕರಿಸಿದ ಅಧಿಕಾರಿಗಳ ವಿರುದ್ಧ ತನಿಖೆಗೆ ಆದೇಶ: ಮುಖ್ಯಮಂತ್ರಿ ಡಿ ಕೆ ಶಿವಕುಮಾರ್‌300 ವರ್ಷಗಳಷ್ಟು ಹಳೆಯ ಐತಿಹಾಸಿಕ ರೇಸ್‌ಕೋರ್ಸ್ ಮಸೀದಿಯ ವಿದ್ಯುತ್ ಹಾಗೂ ನೀರು ಸಂಪರ್ಕ ಕಡಿತ: ತುರ್ತು ರಕ್ಷಣೆ ಕೋರಿದ ದೆಹಲಿ ವಕ್ಫ್ ಮಂಡಳಿತಿಹಾರ್ ಜೈಲಿನಿಂದ ಬಿಡುಗಡೆಯಾದ ಬೆನ್ನಲ್ಲೇ ಸೌರವ್ ದಾಸ್ ಹಾಗೂ ಅಶೋತ್ ರಾಂಕಾಗೆ ದೆಹಲಿ ಅಪರಾಧ ವಿಭಾಗದಿಂದ ಸಮನ್ಸ್

ಉದ್ಧವ್‌ ಠಾಕ್ರೆಗೆ ತಾಕತ್‌ ಇದ್ದರೆ ರಾಹುಲ್‌ ಗಾಂಧಿ ಬಳಿ ಬಾಳಾ ಠಾಕ್ರೆ, ಸಾವರ್ಕರ್ ಕುರಿತು ಒಂದೆರಡು ಒಳ್ಳೆಯ ಮಾತುಗಳನ್ನಾಡಿಸಲಿ: ಅಮಿತ್‌ ಶಾ ಸವಾಲು

PPeepal Media

Peepal Media ರಾಜಕೀಯ

• 1 ನಿಮಿಷದ ಓದು

ಉದ್ಧವ್‌ ಠಾಕ್ರೆಗೆ ತಾಕತ್‌ ಇದ್ದರೆ ರಾಹುಲ್‌ ಗಾಂಧಿ ಬಳಿ ಬಾಳಾ ಠಾಕ್ರೆ, ಸಾವರ್ಕರ್ ಕುರಿತು ಒಂದೆರಡು ಒಳ್ಳೆಯ ಮಾತುಗಳನ್ನಾಡಿಸಲಿ: ಅಮಿತ್‌ ಶಾ ಸವಾಲು

ಮಹಾರಾಷ್ಟ್ರ ಚುನಾವಣೆ ಕಣ ದಿನದಿಂದ ದಿನಕ್ಕೆ ಕಾವೇರುತ್ತಾ ಸಾಗಿದೆ. ಇಂದು ಮಹಾರಾಷ್ಟ್ರದಲ್ಲಿ ಕರ್ನಾಟದಿಂದ ಹೋಗಿದ್ದ ಮುಖ್ಯಮಂತ್ರಿ ಸಿದ್ಧರಾಮಯ್ಯ ಹಾಗೂ ಉಪ ಮುಖ್ಯಮಂತ್ರಿ ಡಿ ಕೆ ಶಿವಕುಮಾರ ಮಹಾರಾಷ್ಟ್ರದ ಒಂದೆಡೆ ಧೂಳೆಬ್ಬಿಸುತ್ತಿದ್ದರೆ ಇನ್ನೊಂದೆಡೆ ಕೇಂದ್ರ ಗೃಹ ಸಚಿವ ತಮ್ಮ ಪಕ್ಷದ ಪರ ತಮ್ಮ ಬತ್ತಳಿಕೆಯಿಂದ ಅಸ್ತ್ರಗಳನ್ನು ಚಲಾಯಿಸುತ್ತಿದ್ದಾರೆ.

ಅವರು ತಮ್ಮ ಇಂದಿನ ಭಾಷಣದಲ್ಲಿ ವಿರೋಧ ಪಕ್ಷದ ನಾಯಕ ರಾಹುಲ್‌ ಗಾಂಧಿ ಹಾಗೂ ಶಿವಸೇನೆ ನಾಯಕ ಉದ್ಧವ್‌ ಠಾಕ್ರೆಯವರಿಗೆ ನೇರ ಸವಾಲನ್ನು ಎಸೆದಿದ್ದಾರೆ.

ಮಹಾರಾಷ್ಟ್ರದ ಹಿಂಗೋಲಿಯಲ್ಲಿ ಸಾರ್ವಜನಿಕ ಸಭೆಯನ್ನುದ್ದೇಶಿಸಿ ಮಾತನಾಡಿದ ಅವರು “ಮಹಾರಾಷ್ಟ್ರದ ಮುಂದಿನ ಐದು ವರ್ಷಗಳ ಕಾಲ ಶಿವಾಜಿ ಮಹಾರಾಜರ ಪರಂಪರೆಯನ್ನು ಅನುಸರಿಸುತ್ತದೆಯೇ ಅಥವಾ ಔರಂಗಜೇಬ್ ಅವರ ಮಾರ್ಗವನ್ನು ಅನುಸರಿಸುತ್ತದೆಯೇ ಎನ್ನುವುದನ್ನು ಈ ಬಾರಿ ವಿಧಾನಸಭಾ ಚುನಾವಣೆ ನಿರ್ಧರಿಸುತ್ತದೆ” ಎಂದು ಹೇಳಿದರು.

ಮುಂದುವರೆದು ಮಾತನಾಡಿದ ಅವರು “ರಾಹುಲ್ ಬಾಬಾ ನಿಮ್ಮ ಸ್ನೇಹಿತ ಉದ್ಧವ್ ಠಾಕ್ರೆ ಅವರ ತಂದೆ ಬಾಳಸಾಹೇಬ್ ಠಾಕ್ರೆ ಅವರನ್ನು 2 ನಿಮಿಷಗಳ ಕಾಲ ಹೊಗಳಿ ಮಾತನಾಡಿ, ಉದ್ಧವ್ ಠಾಕ್ರೆ ಅವರಿಗೆ ಧೈರ್ಯವಿದ್ದರೆ, ರಾಹುಲ್ ಗಾಂಧಿ ಅವರಿಂದ ವೀರ್ ಸಾವರ್ಕರ್ ಹಾಗೂ ಬಾಳಾಸಾಹೇಬ್ ಠಾಕ್ರೆ ಅವರ ಬಗ್ಗೆ ಒಂದೆರಡು ಒಳ್ಳೆಯ ಮಾತುಗಳನ್ನಾಡಿಸಲಿ” ಎಂದು ಕುಟುಕಿದರು.

ನಮ್ಮ ಮಹಾಯುತಿ ಮೈತ್ರಿಕೂಟ ಯಾವುದೇ ಹಿಂಜರಿಕೆ ಇಲ್ಲದೇ, ಛತ್ರಪತಿ ಶಿವಾಜಿ ಮಹಾರಾಜ್ ಹಾಗೂ ವೀರ್ ಸಾವರ್ಕರ್ ಅವರ ಪರಂಪರೆಯನ್ನು ಯಾವುದೇ ಹಿಂಜರಿಕೆಯಿಲ್ಲದೆ ಆಯ್ಕೆ ಮಾಡಿದೆ, ಆದರೆ ಅಘಾಡಿ ಒಕ್ಕೂಟವು ಔರಂಗಜೇಬ್ ಅಭಿಮಾನಿಗಳ ಸಂಘವಾಗಿದೆ ಎಂದು ಅವರು ಹೇಳಿದರು.

ರಾಹುಲ್ ಗಾಂಧಿ ಅವರನ್ನು ಪದೇ ಪದೇ ಅಪಘಾತಕ್ಕೀಡಾದ ವಿಮಾನಕ್ಕೆ ಹೋಲಿಸಿದ ಅಮಿತ್ ಶಾ, ಸೋನಿಯಾ ಗಾಂಧಿ ರಾಹುಲ್ ಬಾಬಾ ಹೆಸರಿನ ವಿಮಾನ 20 ಬಾರಿ ಇಳಿಸಲು ಪ್ರಯತ್ನಿಸಿದ್ದಾರೆ, ಮತ್ತು 20 ಬಾರಿ ಕ್ರ್ಯಾಶ್ ಆಗಿದೆ. ಈ ಬಾರಿಯೂ ಆ ವಿಮಾನ ಮತ್ತೆ ಕ್ರ್ಯಾಶ್‌ ಆಗುವುದು ಖಂಡಿತಾ ಎಂದು ಅಮಿತ್‌ ಶಾ ಹೇಳಿದ್ದಾರೆ

PPeepal Media

Peepal Media

Peepal Media · ರಾಜಕೀಯ ವಿಭಾಗ

ಸಂಬಂಧಿತ ಸುದ್ದಿಗಳು