ಮುಖ್ಯ ವಿಷಯಕ್ಕೆ ತೆರಳಿ
Peepal Media
ತಾಜಾ ಸುದ್ದಿ
ಈಸಕ್ಕಿ ಆಸೆಯನ್ನೂ ಮೀರಿದ ಆಯ್ದಕ್ಕಿ ಲಕ್ಕಮ್ಮಗಾಜಾ ಸ್ಮಶಾನದ ಮೇಲೆ ಮತ್ತೆ ಅರಳುತ್ತಾ ನೆತನ್ಯಾಹು ಕುರ್ಚಿ?ಅರುಣಾಚಲದಲ್ಲಿ ಚೀನಾ ಸೈನಿಕರೊಂದಿಗೆ ಮುಖಾಮುಖಿ: ಕೇಂದ್ರದ ಮೌನವನ್ನು ಪ್ರಶ್ನಿಸಿದ ಕಾಂಗ್ರೆಸ್‌ನ ಜೈರಾಮ್ ರಮೇಶ್ಕಡತಗಳ ವಿಲೇವಾರಿ ಪ್ರಕ್ರಿಯೆ ಬದಲಾವಣೆ: ಚುನಾವಣಾ ಆಯುಕ್ತರಿಂದ ಕ್ಯಾಬಿನೆಟ್‌ ಕಾರ್ಯದರ್ಶಿಗೆ ಆಕ್ಷೇಪಣಾ ಪತ್ರಮೋದಿ–ಅದಾನಿ ಕುರಿತ ಸಾಕ್ಷ್ಯಚಿತ್ರ ಹಂಚಿಕೊಂಡ ರಾಜ್‌ ಠಾಕ್ರೆ; ತೆಗೆದುಹಾಕುವಂತೆ ಸೂಚನೆಗಳ ನಡುವೆ ಮುಂದುವರೆದ ಚರ್ಚೆಮಂಡ್ಯದಲ್ಲಿ ARAI ಪರೀಕ್ಷಾ ಕೇಂದ್ರಗಳಿಗೆ ಭೂಮಿ ಹಂಚಿಕೆ ವಿಳಂಬ: ರಾಜ್ಯ ಸರ್ಕಾರಕ್ಕೆ ಎಚ್‌.ಡಿ. ಕುಮಾರಸ್ವಾಮಿ ಪತ್ರರಾಷ್ಟ್ರೀಯತೆಯ ಪಾಠ ನನಗೆ ಬೇಕಿಲ್ಲ; ನಮ್ಮ ಗುರಿ ಆಡಳಿತ, ಸಾಮಾಜಿಕ ಜಾಲತಾಣದ ಪ್ರಚಾರವಲ್ಲ: ಕೆ. ಅಣ್ಣಾಮಲೈಕೇವಲ ಮದುವೆಗಾಗಿ ಧರ್ಮಾಂತರವಾಗುವುದನ್ನು ಒಪ್ಪಲು ಸಾಧ್ಯವಿಲ್ಲ: ಬಾಂಬೆ ಹೈಕೋರ್ಟ್‌ಇನ್ನು ನೋಂದಾಯಿತ ಸಿಮ್‌ ಇದ್ದರೆ ಮಾತ್ರ ವಾಟ್ಸ್‌ಆ್ಯಪ್‌ ಬಳಕೆ ಸಾಧ್ಯ: ಜನವರಿ 1, 2027ರಿಂದ ಹೊಸ ನಿಯಮ ಜಾರಿಈ-ಮುದ್ರ ಡಿಜಿಟಲ್‌ ಪ್ರಮಾಣಪತ್ರಗಳಲ್ಲಿ ಭದ್ರತಾ ಲೋಪ: ಜಾಗತಿಕ ತಂತ್ರಜ್ಞಾನ ವಲಯದಲ್ಲಿ ಆತಂಕಹಾಸನ ಕಾಳಸಂತೆಗೆ ಪಡಿತರ ಅಕ್ಕಿ ಮಾರಾಟ ಯತ್ನ – ಕ್ವಿಂಟಲ್‌ ಗಟ್ಟಲೆ ಅಕ್ಕಿ, ರಾಗಿ ವಶಸದ್ಯದಲ್ಲೆ ಕಬ್ಬು ಬೆಳೆಗಾರರ ಸಭೆ ಕರೆದಿದ್ದೇನೆ – ಸಿಎಂ ಡಿ.ಕೆ ಶಿವಕುಮಾರ್ರಾಜ್ಯದಲ್ಲಿ ಐದು ದಿನಗಳಲ್ಲಿ ಮಳೆ ಸಾಧ್ಯತೆ – ಹವಾಮಾನ ಇಲಾಖೆ ಮುನ್ಸೂಚನೆಸಿದ್ದರಾಮಯ್ಯ ಅವರನ್ನು ಅಧಿಕಾರದಿಂದ ಇಳಿಸಲು ವ್ಯವಸ್ಥಿತ ಸಂಚು ರೂಪಿಸಿ ಯಶಸ್ವಿಗೊಂಡಿದ್ದಾರೆ – ಸಿಎಂ ಯಡಿಯೂರಪ್ಪಚುನಾವಣಾ ಆಯುಕ್ತರಿಗೆ ರಕ್ಷಣೆ ನೀಡುವ ಕಾನೂನು ರದ್ದುಗೊಳಿಸಿ – ಮಲ್ಲಿಕಾರ್ಜುನ ಖರ್ಗೆ ಆಗ್ರಹದಸರಾ ವೇಳೆ ಪೊಲೀಸರ ಲಾಠಿ ಏಟಿಗೆ 4 ವರ್ಷದ ಬಾಲಕ ಗಂಭೀರ – ICUನಲ್ಲಿ ಅಂತಿಮ ಹೋರಾಟಸೌದಿ ವಿಮಾನ ನಿಲ್ದಾಣದ ಮೇಲೆ ಭೀಕರ ದಾಳಿ – 8 ಮಂದಿಗೆ ಗಾಯ, ಇಬ್ಬರ ಅಂತ್ಯನಂದಿಧ್ವಜ ಪೂಜೆಗೆ ಸಚಿವರಿಗೆ ಅವಕಾಶ ನಿರಾಕರಿಸಿದ ಅಧಿಕಾರಿಗಳ ವಿರುದ್ಧ ತನಿಖೆಗೆ ಆದೇಶ: ಮುಖ್ಯಮಂತ್ರಿ ಡಿ ಕೆ ಶಿವಕುಮಾರ್‌300 ವರ್ಷಗಳಷ್ಟು ಹಳೆಯ ಐತಿಹಾಸಿಕ ರೇಸ್‌ಕೋರ್ಸ್ ಮಸೀದಿಯ ವಿದ್ಯುತ್ ಹಾಗೂ ನೀರು ಸಂಪರ್ಕ ಕಡಿತ: ತುರ್ತು ರಕ್ಷಣೆ ಕೋರಿದ ದೆಹಲಿ ವಕ್ಫ್ ಮಂಡಳಿತಿಹಾರ್ ಜೈಲಿನಿಂದ ಬಿಡುಗಡೆಯಾದ ಬೆನ್ನಲ್ಲೇ ಸೌರವ್ ದಾಸ್ ಹಾಗೂ ಅಶೋತ್ ರಾಂಕಾಗೆ ದೆಹಲಿ ಅಪರಾಧ ವಿಭಾಗದಿಂದ ಸಮನ್ಸ್

ಸಂವಿಧಾನ ಬದಲಾವಣೆಯ ಮಾತನಾಡಿರುವ ಅನಂತ ಕುಮಾರ ಹೆಗಡೆಯನ್ನು ಚುನಾವಣಾ ಸ್ಪರ್ಧೆಯಿಂದ ಶಾಶ್ವತವಾಗಿ ಅನರ್ಹಗೊಳಿಸಬೇಕು: ಸಿದ್ಧರಾಮಯ್ಯ ಆಗ್ರಹ

PPeepal Media Desk

Peepal Media Desk ರಾಜಕೀಯ

• 1 ನಿಮಿಷದ ಓದು

ಸಂವಿಧಾನ ಬದಲಾವಣೆಯ ಮಾತನಾಡಿರುವ ಅನಂತ ಕುಮಾರ ಹೆಗಡೆಯನ್ನು ಚುನಾವಣಾ ಸ್ಪರ್ಧೆಯಿಂದ ಶಾಶ್ವತವಾಗಿ ಅನರ್ಹಗೊಳಿಸಬೇಕು: ಸಿದ್ಧರಾಮಯ್ಯ ಆಗ್ರಹ

” ಹಿಂದೂ ಧರ್ಮವನ್ನು ರಕ್ಷಿಸಬೇಕಾದರೆ ಸಂವಿಧಾನವನ್ನು ಬದಲಾಯಿಸಬೇಕು. ಅದಕ್ಕಾಗಿ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿಗೆ 400 ಸ್ಥಾನಗಳನ್ನು ಗೆಲ್ಲಿಸಿಕೊಡಬೇಕು” ಎಂದು ಸಂಸದ ಅನಂತ್‌ಕುಮಾರ್ ಹೆಗಡೆ ಕರೆ ನೀಡಿರುವುದು ಅವರ ವೈಯಕ್ತಿಕ ಹೇಳಿಕೆ ಅಲ್ಲ ಅದು ಭಾರತೀಯ ಜನತಾ ಪಕ್ಷದ ಗುಪ್ತ ಅಜೆಂಡಾದ ಭಾಗವೇ ಆಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.

“ನಮ್ಮ ಸಂವಿಧಾನ ಸರ್ವಧರ್ಮಗಳನ್ನೂ ಸಮಭಾವದಿಂದ ನೋಡುತ್ತದೆ. ಪ್ರತಿಯೊಬ್ಬ ಪ್ರಜೆಗೂ ತನ್ನ ನಂಬಿಕೆಯ ಧರ್ಮವನ್ನು ಪಾಲಿಸಿಕೊಂಡು ಬರುವ ಸ್ವಾತಂತ್ರ್ಯವನ್ನು ನೀಡಿದೆ. ಹೀಗಿರುವಾಗ ಸಂವಿಧಾನವನ್ನೇ ಬದಲಾಯಿಸಿ ಅನಂತ್ ಕುಮಾರ್ ಹೆಗಡೆ ಅವರು ಯಾವ ಹಿಂದೂಧರ್ಮವನ್ನು ರಕ್ಷಿಸಲು ಹೊರಟಿದ್ದಾರೆ? ಹೆಗಡೆಯವರ ಹೇಳಿಕೆಯನ್ನು ಗಮನಿಸಿದರೆ ಬಾಬಾಸಾಹೇಬ್ ಅಂಬೇಡ್ಕರ್ ರಚಿಸಿ ಕೊಟ್ಟ ಸಂವಿಧಾನಕ್ಕಿಂತ ಮೊದಲು ಇದ್ದ ಮನು ಪ್ರಣೀತ ಸಂವಿಧಾನವನ್ನು ಜಾರಿಗೊಳಿಸುವ ದುಷ್ಠ ಆಲೋಚನೆ ಹೆಗಡೆ ಮತ್ತು ಅವರ ಪಕ್ಷಕ್ಕೆ ಇದೆ ಎನ್ನುವುದು ಸ್ಪಷ್ಟ” ಎಂದು ಅವರು ತಿಳಿಸಿದ್ದಾರೆ.

“ಸಂವಿಧಾನದ ವಿರುದ್ಧ ಅನಂತಕುಮಾರ ಹೆಗಡೆಯವರು ಮಾತನಾಡಿರುವುದು ಇದೇ ಮೊದಲ ಬಾರಿ ಅಲ್ಲ. “ಸಂವಿಧಾನವನ್ನು ಬದಲಾಯಿಸಬೇಕು, ಬದಲಾಯಿಸುವುದೇ ನಮ್ಮ ಉದ್ದೇಶ” ಎಂದೆಲ್ಲಾ ಆಗಾಗ ಅವರು ವಿಷಕಾರುತ್ತಲೇ ಇದ್ದಾರೆ. ಇಲ್ಲಿಯ ವರೆಗೆ ಬಿಜೆಪಿ ವರಿಷ್ಠರು ಅವರಿಗೆ ಕನಿಷ್ಠ ಎಚ್ಚರಿಕೆಯನ್ನೂ ನೀಡದೆ ಪರೋಕ್ಷವಾಗಿ ಅವರನ್ನು ಬೆಂಬಲಿಸುತ್ತಾ ಬಂದಿರುವುದನ್ನು ನೋಡಿದರೆ ಪಕ್ಷ ಮತ್ತು ಪ್ರಧಾನಿ ನರೇಂದ್ರ ಮೋದಿ ಅವರ ಬೆಂಬಲ ಅವರಿಗೆ ಇದೆ ಎನ್ನುವುದು ಸ್ಪಷ್ಟ.

ಹೆಗಡೆ ಅಭಿಪ್ರಾಯವನ್ನು ಮೋದಿಯವರು ಒಪ್ಪದೆ ಇದ್ದರೆ ಅವರನ್ನು ಮೊದಲು ಪಕ್ಷದಿಂದ ಕಿತ್ತುಹಾಕಬೇಕು. ಅವರ ವಿರುದ್ಧ ಕ್ರಮಕೈಗೊಳ್ಳದೆ ಇದ್ದರೆ ಹೆಗಡೆ ಅಭಿಪ್ರಾಯಕ್ಕೆ ಪ್ರಧಾನಿಯವರ ಸಹಮತ ಇದೆ ಎಂದರ್ಥ. ಸಾರ್ವಜನಿಕ ಭಾಷಣಗಳಲ್ಲಿ ಸಂವಿಧಾನದ ಮೇಲೆ ಬದ್ಧತೆಯನ್ನು ಸಾರುವ ಮೋದಿ ಅವರ ಮಾತುಗಳು ಬರೀ ಓಳು ಎಂದು ತಿಳಿದುಕೊಳ್ಳಬೇಕಾಗುತ್ತದೆ.

ಪಕ್ಷದ ವರಿಷ್ಠರ ಬೆಂಬಲ ಇಲ್ಲದೆ ಅನಂತಕುಮಾರ ಹೆಗಡೆಯಂತಹ ಸಂಸದನೊಬ್ಬ ಈ ರೀತಿ ನಿರ್ಭೀತಿಯಿಂದ ಸಂವಿಧಾನ ವಿರೋಧಿ ಹೇಳಿಕೆಗಳನ್ನು ನೀಡಲು ಸಾಧ್ಯ ಇಲ್ಲ. ಸಂವಿಧಾನಕ್ಕೆ ಬದ್ಧನಾಗಿ ಕಾರ್ಯನಿರ್ವಹಿಸುತ್ತೇನೆ ಎಂದು ಪ್ರಮಾಣ ವಚನ ಸ್ವೀಕರಿಸಿರುವ ಅನಂತ್ ಕುಮಾರ್ ಹೆಗಡೆ, ಅದೇ ಸಂವಿಧಾನದ ವಿರುದ್ಧ ಹೇಳಿಕೆ ನೀಡಿರುವುದು ಖಂಡಿತ ಶಿಕ್ಷಾರ್ಹ ಅಪರಾಧ. ಇದನ್ನು ಲೋಕಸಭಾಧ್ಯಕ್ಷರು ಗಮನಕ್ಕೆ ತೆಗೆದುಕೊಂಡು ಹೆಗಡೆ ವಿರುದ್ಧ ಕಠಿಣ ಕ್ರಮಕೈಗೊಳ್ಳಬೇಕು. ಅವರನ್ನು ಚುನಾವಣಾ ಸ್ಪರ್ಧೆಯಿಂದ ಶಾಶ್ವತವಾಗಿ ಅನರ್ಹಗೊಳಿಸಬೇಕು” ಎಂದು ಮಖ್ಯಮಂತ್ರಿ ಆಗ್ರಹಿಸಿದ್ದಾರೆ.

PPeepal Media Desk

Peepal Media Desk

Peepal Media · ರಾಜಕೀಯ ವಿಭಾಗ

ಸಂಬಂಧಿತ ಸುದ್ದಿಗಳು