ಮುಖ್ಯ ವಿಷಯಕ್ಕೆ ತೆರಳಿ
Peepal Media
ತಾಜಾ ಸುದ್ದಿ
ಈಸಕ್ಕಿ ಆಸೆಯನ್ನೂ ಮೀರಿದ ಆಯ್ದಕ್ಕಿ ಲಕ್ಕಮ್ಮಗಾಜಾ ಸ್ಮಶಾನದ ಮೇಲೆ ಮತ್ತೆ ಅರಳುತ್ತಾ ನೆತನ್ಯಾಹು ಕುರ್ಚಿ?ಅರುಣಾಚಲದಲ್ಲಿ ಚೀನಾ ಸೈನಿಕರೊಂದಿಗೆ ಮುಖಾಮುಖಿ: ಕೇಂದ್ರದ ಮೌನವನ್ನು ಪ್ರಶ್ನಿಸಿದ ಕಾಂಗ್ರೆಸ್‌ನ ಜೈರಾಮ್ ರಮೇಶ್ಕಡತಗಳ ವಿಲೇವಾರಿ ಪ್ರಕ್ರಿಯೆ ಬದಲಾವಣೆ: ಚುನಾವಣಾ ಆಯುಕ್ತರಿಂದ ಕ್ಯಾಬಿನೆಟ್‌ ಕಾರ್ಯದರ್ಶಿಗೆ ಆಕ್ಷೇಪಣಾ ಪತ್ರಮೋದಿ–ಅದಾನಿ ಕುರಿತ ಸಾಕ್ಷ್ಯಚಿತ್ರ ಹಂಚಿಕೊಂಡ ರಾಜ್‌ ಠಾಕ್ರೆ; ತೆಗೆದುಹಾಕುವಂತೆ ಸೂಚನೆಗಳ ನಡುವೆ ಮುಂದುವರೆದ ಚರ್ಚೆಮಂಡ್ಯದಲ್ಲಿ ARAI ಪರೀಕ್ಷಾ ಕೇಂದ್ರಗಳಿಗೆ ಭೂಮಿ ಹಂಚಿಕೆ ವಿಳಂಬ: ರಾಜ್ಯ ಸರ್ಕಾರಕ್ಕೆ ಎಚ್‌.ಡಿ. ಕುಮಾರಸ್ವಾಮಿ ಪತ್ರರಾಷ್ಟ್ರೀಯತೆಯ ಪಾಠ ನನಗೆ ಬೇಕಿಲ್ಲ; ನಮ್ಮ ಗುರಿ ಆಡಳಿತ, ಸಾಮಾಜಿಕ ಜಾಲತಾಣದ ಪ್ರಚಾರವಲ್ಲ: ಕೆ. ಅಣ್ಣಾಮಲೈಕೇವಲ ಮದುವೆಗಾಗಿ ಧರ್ಮಾಂತರವಾಗುವುದನ್ನು ಒಪ್ಪಲು ಸಾಧ್ಯವಿಲ್ಲ: ಬಾಂಬೆ ಹೈಕೋರ್ಟ್‌ಇನ್ನು ನೋಂದಾಯಿತ ಸಿಮ್‌ ಇದ್ದರೆ ಮಾತ್ರ ವಾಟ್ಸ್‌ಆ್ಯಪ್‌ ಬಳಕೆ ಸಾಧ್ಯ: ಜನವರಿ 1, 2027ರಿಂದ ಹೊಸ ನಿಯಮ ಜಾರಿಈ-ಮುದ್ರ ಡಿಜಿಟಲ್‌ ಪ್ರಮಾಣಪತ್ರಗಳಲ್ಲಿ ಭದ್ರತಾ ಲೋಪ: ಜಾಗತಿಕ ತಂತ್ರಜ್ಞಾನ ವಲಯದಲ್ಲಿ ಆತಂಕಹಾಸನ ಕಾಳಸಂತೆಗೆ ಪಡಿತರ ಅಕ್ಕಿ ಮಾರಾಟ ಯತ್ನ – ಕ್ವಿಂಟಲ್‌ ಗಟ್ಟಲೆ ಅಕ್ಕಿ, ರಾಗಿ ವಶಸದ್ಯದಲ್ಲೆ ಕಬ್ಬು ಬೆಳೆಗಾರರ ಸಭೆ ಕರೆದಿದ್ದೇನೆ – ಸಿಎಂ ಡಿ.ಕೆ ಶಿವಕುಮಾರ್ರಾಜ್ಯದಲ್ಲಿ ಐದು ದಿನಗಳಲ್ಲಿ ಮಳೆ ಸಾಧ್ಯತೆ – ಹವಾಮಾನ ಇಲಾಖೆ ಮುನ್ಸೂಚನೆಸಿದ್ದರಾಮಯ್ಯ ಅವರನ್ನು ಅಧಿಕಾರದಿಂದ ಇಳಿಸಲು ವ್ಯವಸ್ಥಿತ ಸಂಚು ರೂಪಿಸಿ ಯಶಸ್ವಿಗೊಂಡಿದ್ದಾರೆ – ಸಿಎಂ ಯಡಿಯೂರಪ್ಪಚುನಾವಣಾ ಆಯುಕ್ತರಿಗೆ ರಕ್ಷಣೆ ನೀಡುವ ಕಾನೂನು ರದ್ದುಗೊಳಿಸಿ – ಮಲ್ಲಿಕಾರ್ಜುನ ಖರ್ಗೆ ಆಗ್ರಹದಸರಾ ವೇಳೆ ಪೊಲೀಸರ ಲಾಠಿ ಏಟಿಗೆ 4 ವರ್ಷದ ಬಾಲಕ ಗಂಭೀರ – ICUನಲ್ಲಿ ಅಂತಿಮ ಹೋರಾಟಸೌದಿ ವಿಮಾನ ನಿಲ್ದಾಣದ ಮೇಲೆ ಭೀಕರ ದಾಳಿ – 8 ಮಂದಿಗೆ ಗಾಯ, ಇಬ್ಬರ ಅಂತ್ಯನಂದಿಧ್ವಜ ಪೂಜೆಗೆ ಸಚಿವರಿಗೆ ಅವಕಾಶ ನಿರಾಕರಿಸಿದ ಅಧಿಕಾರಿಗಳ ವಿರುದ್ಧ ತನಿಖೆಗೆ ಆದೇಶ: ಮುಖ್ಯಮಂತ್ರಿ ಡಿ ಕೆ ಶಿವಕುಮಾರ್‌300 ವರ್ಷಗಳಷ್ಟು ಹಳೆಯ ಐತಿಹಾಸಿಕ ರೇಸ್‌ಕೋರ್ಸ್ ಮಸೀದಿಯ ವಿದ್ಯುತ್ ಹಾಗೂ ನೀರು ಸಂಪರ್ಕ ಕಡಿತ: ತುರ್ತು ರಕ್ಷಣೆ ಕೋರಿದ ದೆಹಲಿ ವಕ್ಫ್ ಮಂಡಳಿತಿಹಾರ್ ಜೈಲಿನಿಂದ ಬಿಡುಗಡೆಯಾದ ಬೆನ್ನಲ್ಲೇ ಸೌರವ್ ದಾಸ್ ಹಾಗೂ ಅಶೋತ್ ರಾಂಕಾಗೆ ದೆಹಲಿ ಅಪರಾಧ ವಿಭಾಗದಿಂದ ಸಮನ್ಸ್

ವಿಧಾನ ಸಭಾಧ್ಯಕ್ಷರಿಗೆ ಆರ್ ಅಶೋಕ್ ಪತ್ರ ; ಬಿಜೆಪಿಯಲ್ಲಿ ಅಸಮಾಧಾನದ ಹೊಗೆ

PPeepal Media Desk

Peepal Media Desk ರಾಜಕೀಯ

• 2 ನಿಮಿಷದ ಓದು

ವಿಧಾನ ಸಭಾಧ್ಯಕ್ಷರಿಗೆ ಆರ್ ಅಶೋಕ್ ಪತ್ರ ; ಬಿಜೆಪಿಯಲ್ಲಿ ಅಸಮಾಧಾನದ ಹೊಗೆ

ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರದ ವಿರುದ್ಧ ಬೆಲೆ ಏರಿಕೆ ಖಂಡಿಸಿ ಬಿಜೆಪಿ ಪ್ರತಿಭಟನೆಗೆ ಮುಂದಾಗಿರುವ ಈ ಹಂತದಲ್ಲೇ ಬಿಜೆಪಿ ಒಳಗೇ ಅಸಮಾಧಾನದ ಬೆಂಕಿಯ ಹೊಗೆಯಾಡಲು ಶುರುವಾಗಿದೆ. ಪ್ರತಿಪಕ್ಷ ನಾಯಕ ಆರ್ ಅಶೋಕ್ ವಿಧಾನಸಭಾಧ್ಯಕ್ಷ ಯುಟಿ ಖಾದರ್ ಅವರಿಗೆ ಬರೆದ ಪತ್ರವೇ ಬಿಜೆಪಿ ಒಳಗಿನ ಅಸಮಾಧಾನಕ್ಕೆ ಕಾರಣವಾಗಿದೆ.

ವಿಧಾನಸಭೆ ಅಧಿವೇಶನದ ವೇಳೆ ಸಭಾಧ್ಯಕ್ಷರ ಪೀಠದ ಬಳಿ ಗದ್ದಲ ಮಾಡಿದ್ದ ಪಕ್ಷದ 18 ಶಾಸಕರ ಅಮಾನತು ಕ್ರಮವನ್ನು ಕೈಬಿಡಬೇಕು ಮತ್ತು ಅವರನ್ನು ಮತ್ತೆ ಶಾಸಕರಾಗಿ ಕೆಲಸ ನಿರ್ವಹಿಸಲು ಅವಕಾಶ ಕಲ್ಪಿಸಬೇಕು ಎಂದು ಪ್ರತಿಪಕ್ಷ ನಾಯಕ ಆರ್ ಅಶೋಕ್ ವಿಧಾನ ಸಭಾಧ್ಯಕ್ಷ ಯುಟಿ ಖಾದರ್ ಅವರಿಗೆ ಪತ್ರದ ಮೂಲಕ ಮನವಿ ಮಾಡಿದ್ದಾರೆ. ಅಶೋಕ್ ಈ ರೀತಿಯಾಗಿ ಬರೆದ ಪತ್ರದ ವಿರುದ್ಧ ಬಿಜೆಪಿ ಒಳಗೇ ಅಶೋಕ್ ವಿರುದ್ಧ ತಿರುಗಿಬೀಳುವಂತಾಗಿದೆ.

ಸಧ್ಯ ಬಿಜೆಪಿ ಪಕ್ಷ ರಾಜ್ಯಾದ್ಯಂತ ಕಾಂಗ್ರೆಸ್ ಆಡಳಿತ ಹಾಗೂ ಬೆಲೆಯೇರಿಕೆ ಖಂಡಿಸಿ ಪ್ರತಿಭಟನೆಗೆ ರೂಪುರೇಷೆ ಸಿದ್ಧಗೊಳಿಸುತ್ತಿರುವಾಗಲೇ ಈ ಪತ್ರ ಪಕ್ಷದ ತೀರ್ಮಾನಕ್ಕೆ ವ್ಯತಿರಿಕ್ತವಾಗಿದೆ. ಹೋರಾಟದ ಸ್ಫೂರ್ತಿಗೆ ಹಿನ್ನಡೆ ಉಂಟು ಮಾಡಲಿದ್ದು; ಇದರಿಂದ ಪಕ್ಷ ಇಕ್ಕಟ್ಟಿಗೆ ಸಿಲುಕುವಂತಾಗಿದೆ ಎಂದು ವಿಜಯೇಂದ್ರ ಬಣದ ಅನೇಕರು ಆರ್ ಅಶೋಕ್ ನಿರ್ಧಾರವನ್ನು ಖಂಡಿಸಿದ್ದಾರೆ. ವಿಶೇಷವಾಗಿ ಪ್ರತಿಭಟನೆಯ ಹಿಂದಿನ ದಿನವೇ ಈ ನಡೆ ಎಷ್ಟು ಸರಿ ಎಂಬಂತೆ ಪ್ರಶ್ನಿಸಲಾರಂಭಿಸಿದೆ.

ಅಷ್ಟಕ್ಕೂ ಅಶೋಕ್ ಅವರಿಗೆ ಶಾಸಕರ ಅಮಾನತು ಆದೇಶ ವಾಪಸ್ ಪಡೆಯುವಂತೆ ಕೋರಿ ಸ್ಪೀಕರ್‌ಗೆ ಪತ್ರ ಬರೆಯುವ ಉದ್ದೇಶವೇ ಇರಲಿಲ್ಲ. ಮಂಗಳವಾರ ಬೆಳಗ್ಗೆ ಬಿಜೆಪಿಯ ಉಚ್ಚಾಟಿತ ಶಾಸಕ ಬಸನಗೌಡ ಪಾಟೀಲ್‌ ಯತ್ನಾಳ್ ಅವರು ಸ್ಪೀಕರ್‌ ಯು.ಟಿ.ಖಾದರ್ ಅವರಿಗೆ ಪತ್ರ ಬರೆದು 18 ಶಾಸಕರ ಉಚ್ಚಾಟನೆ ಆದೇಶ ವಾಪಸ್ ಪಡೆಯುವಂತೆ ಮನವಿ ಮಾಡಿದರು. ಆ ಪತ್ರ ಮಾಧ್ಯಮಗಳಲ್ಲಿ ಪ್ರಸಾರವಾಗುತ್ತಿದ್ದಂತೆ ಎಚ್ಚೆತ್ತುಕೊಂಡ ಅಶೋಕ್ ಅವರೂ ಸ್ಪೀಕರ್‌ಗೆ ಪತ್ರ ಬರೆದು, ಅಮಾನತು ಆದೇಶವನ್ನು ಮರುಪರಿಶೀಲಿಸಬೇಕು ಮತ್ತು ಅಮಾನತು ಆದೇಶವನ್ನು ವಾಪಸ್‌ ಪಡೆಯಬೇಕು ಎಂದು ಕೋರಿದರು.

ಸಭಾಧ್ಯಕ್ಷರಿಗೆ ಬರೆದ ಪತ್ರದ ಸಾರಾಂಶ ‌
‘ಮಾರ್ಚ್‌ 23 ರಂದು ನಡೆದ ಘಟನೆ ಉದ್ದೇಶ ಪೂರ್ವಕವಲ್ಲ. ನಿಮ್ಮ ಪೀಠಕ್ಕೆ ಅಗೌರವ ತರುವ ಉದ್ದೇಶವೂ ಯಾವುದೇ ಶಾಸಕರಿಗೆ ಇರಲಿಲ್ಲ. ಸದನದ ಘನತೆ ಮತ್ತು ಗೌರವವನ್ನು ಉಳಿಸಬೇಕಾಗಿದೆ ಎಂಬ ತತ್ವದಲ್ಲಿ ನಂಬಿಕೆ ಇರಿಸಿ 18 ಶಾಸಕರ ಅಮಾನತು ಆದೇಶ ಹಿಂದಕ್ಕೆ ಪಡೆಯಬೇಕು’ ಎಂದು ಆರ್‌.ಅಶೋಕ ಅವರು ಸಭಾಧ್ಯಕ್ಷ ಯು.ಟಿ.ಖಾದರ್ ಅವರಿಗೆ ಬರೆದ ಪತ್ರದಲ್ಲಿ ಮನವಿ ಮಾಡಿದ್ದಾರೆ. ‘ಕಳೆದ ಎರಡು ವರ್ಷಗಳಲ್ಲಿ ತಾವು ಸದನದ ಕಲಾಪ ನಿರ್ವಹಿಸುವುದನ್ನು ನಾವು ಅತ್ಯಂತ ಹತ್ತಿರದಿಂದ ನೋಡಿದ್ದೇವೆ. ಸಂಸದೀಯ ಚರ್ಚೆಯ ಗುಣಮಟ್ಟ ಭಾಷೆಯ ಬಳಕೆ ಕಲಾಪಗಳಲ್ಲಿನ ನಿಯಮಗಳ ಪಾಲನೆ ಇತ್ಯಾದಿಗಳೆಲ್ಲವೂ ದಿನದಿಂದ ದಿನಕ್ಕೆ ಕುಸಿಯುತ್ತಿರುವ ಈ ದಿನಗಳಲ್ಲಿ ಯಾರಿಗೇ ಆಗಲಿ ಇದು ಅತ್ಯಂತ ಕಷ್ಟದ ಕೆಲಸ ಎಂಬುದು ಅರ್ಥವಾಗುತ್ತದೆ. ಅದಕ್ಕಾಗಿಯೇ ನಿಮ್ಮ ಬಗ್ಗೆ ನಮಗೆ ಅಪಾರ ಗೌರವವಿದೆ’ ಎಂದು ಹೇಳಿದ್ದಾರೆ. ‘ಒಂದು ವೇಳೆ ಆ ದಿನ ತಾವು ನಮ್ಮ ಎಲ್ಲ ಶಾಸಕರನ್ನು ತಮ್ಮ ಕೊಠಡಿಗೆ ಕರೆದು ವಿವರಣೆ ಕೇಳಿದ್ದರೆ ನಾವು ಈ ಘಟನೆಯ ಬಗ್ಗೆ ಸ್ಪಷ್ಟೀಕರಣ ಕೊಡುತ್ತಿದ್ದೆವು. ಅದಕ್ಕೆ ಅವಕಾಶ ಸಿಗಲಿಲ್ಲ. ಅಮಾನತಿನಿಂದಾಗಿ 18 ಶಾಸಕರು ಜನಪ್ರತಿನಿಧಿಯಾಗಿ ಕೆಲಸ ಮಾಡಲು ಹಲವು ನಿರ್ಬಂಧ ವಿಧಿಸಿದಂತಾಗಿದೆ. ಒಬ್ಬ ಜನಪ್ರತಿನಿಧಿಯಾಗಿ ಕೆಲಸ ಮಾಡಲು ಅವರಿಗೆ ಅವಕಾಶ ಕೊಡುವುದಕ್ಕಾಗಿ ಅಮಾನತು ಆದೇಶ ಹಿಂದಕ್ಕೆ ಪಡೆಯಬೇಕು’ ಎಂದು ಆರ್ ಅಶೋಕ್ ಮನವಿ ಮಾಡಿದ್ದಾರೆ.

PPeepal Media Desk

Peepal Media Desk

Peepal Media · ರಾಜಕೀಯ ವಿಭಾಗ

ಸಂಬಂಧಿತ ಸುದ್ದಿಗಳು