ಮುಖ್ಯ ವಿಷಯಕ್ಕೆ ತೆರಳಿ
Peepal Media
ತಾಜಾ ಸುದ್ದಿ
ಈಸಕ್ಕಿ ಆಸೆಯನ್ನೂ ಮೀರಿದ ಆಯ್ದಕ್ಕಿ ಲಕ್ಕಮ್ಮಗಾಜಾ ಸ್ಮಶಾನದ ಮೇಲೆ ಮತ್ತೆ ಅರಳುತ್ತಾ ನೆತನ್ಯಾಹು ಕುರ್ಚಿ?ಅರುಣಾಚಲದಲ್ಲಿ ಚೀನಾ ಸೈನಿಕರೊಂದಿಗೆ ಮುಖಾಮುಖಿ: ಕೇಂದ್ರದ ಮೌನವನ್ನು ಪ್ರಶ್ನಿಸಿದ ಕಾಂಗ್ರೆಸ್‌ನ ಜೈರಾಮ್ ರಮೇಶ್ಕಡತಗಳ ವಿಲೇವಾರಿ ಪ್ರಕ್ರಿಯೆ ಬದಲಾವಣೆ: ಚುನಾವಣಾ ಆಯುಕ್ತರಿಂದ ಕ್ಯಾಬಿನೆಟ್‌ ಕಾರ್ಯದರ್ಶಿಗೆ ಆಕ್ಷೇಪಣಾ ಪತ್ರಮೋದಿ–ಅದಾನಿ ಕುರಿತ ಸಾಕ್ಷ್ಯಚಿತ್ರ ಹಂಚಿಕೊಂಡ ರಾಜ್‌ ಠಾಕ್ರೆ; ತೆಗೆದುಹಾಕುವಂತೆ ಸೂಚನೆಗಳ ನಡುವೆ ಮುಂದುವರೆದ ಚರ್ಚೆಮಂಡ್ಯದಲ್ಲಿ ARAI ಪರೀಕ್ಷಾ ಕೇಂದ್ರಗಳಿಗೆ ಭೂಮಿ ಹಂಚಿಕೆ ವಿಳಂಬ: ರಾಜ್ಯ ಸರ್ಕಾರಕ್ಕೆ ಎಚ್‌.ಡಿ. ಕುಮಾರಸ್ವಾಮಿ ಪತ್ರರಾಷ್ಟ್ರೀಯತೆಯ ಪಾಠ ನನಗೆ ಬೇಕಿಲ್ಲ; ನಮ್ಮ ಗುರಿ ಆಡಳಿತ, ಸಾಮಾಜಿಕ ಜಾಲತಾಣದ ಪ್ರಚಾರವಲ್ಲ: ಕೆ. ಅಣ್ಣಾಮಲೈಕೇವಲ ಮದುವೆಗಾಗಿ ಧರ್ಮಾಂತರವಾಗುವುದನ್ನು ಒಪ್ಪಲು ಸಾಧ್ಯವಿಲ್ಲ: ಬಾಂಬೆ ಹೈಕೋರ್ಟ್‌ಇನ್ನು ನೋಂದಾಯಿತ ಸಿಮ್‌ ಇದ್ದರೆ ಮಾತ್ರ ವಾಟ್ಸ್‌ಆ್ಯಪ್‌ ಬಳಕೆ ಸಾಧ್ಯ: ಜನವರಿ 1, 2027ರಿಂದ ಹೊಸ ನಿಯಮ ಜಾರಿಈ-ಮುದ್ರ ಡಿಜಿಟಲ್‌ ಪ್ರಮಾಣಪತ್ರಗಳಲ್ಲಿ ಭದ್ರತಾ ಲೋಪ: ಜಾಗತಿಕ ತಂತ್ರಜ್ಞಾನ ವಲಯದಲ್ಲಿ ಆತಂಕಹಾಸನ ಕಾಳಸಂತೆಗೆ ಪಡಿತರ ಅಕ್ಕಿ ಮಾರಾಟ ಯತ್ನ – ಕ್ವಿಂಟಲ್‌ ಗಟ್ಟಲೆ ಅಕ್ಕಿ, ರಾಗಿ ವಶಸದ್ಯದಲ್ಲೆ ಕಬ್ಬು ಬೆಳೆಗಾರರ ಸಭೆ ಕರೆದಿದ್ದೇನೆ – ಸಿಎಂ ಡಿ.ಕೆ ಶಿವಕುಮಾರ್ರಾಜ್ಯದಲ್ಲಿ ಐದು ದಿನಗಳಲ್ಲಿ ಮಳೆ ಸಾಧ್ಯತೆ – ಹವಾಮಾನ ಇಲಾಖೆ ಮುನ್ಸೂಚನೆಸಿದ್ದರಾಮಯ್ಯ ಅವರನ್ನು ಅಧಿಕಾರದಿಂದ ಇಳಿಸಲು ವ್ಯವಸ್ಥಿತ ಸಂಚು ರೂಪಿಸಿ ಯಶಸ್ವಿಗೊಂಡಿದ್ದಾರೆ – ಸಿಎಂ ಯಡಿಯೂರಪ್ಪಚುನಾವಣಾ ಆಯುಕ್ತರಿಗೆ ರಕ್ಷಣೆ ನೀಡುವ ಕಾನೂನು ರದ್ದುಗೊಳಿಸಿ – ಮಲ್ಲಿಕಾರ್ಜುನ ಖರ್ಗೆ ಆಗ್ರಹದಸರಾ ವೇಳೆ ಪೊಲೀಸರ ಲಾಠಿ ಏಟಿಗೆ 4 ವರ್ಷದ ಬಾಲಕ ಗಂಭೀರ – ICUನಲ್ಲಿ ಅಂತಿಮ ಹೋರಾಟಸೌದಿ ವಿಮಾನ ನಿಲ್ದಾಣದ ಮೇಲೆ ಭೀಕರ ದಾಳಿ – 8 ಮಂದಿಗೆ ಗಾಯ, ಇಬ್ಬರ ಅಂತ್ಯನಂದಿಧ್ವಜ ಪೂಜೆಗೆ ಸಚಿವರಿಗೆ ಅವಕಾಶ ನಿರಾಕರಿಸಿದ ಅಧಿಕಾರಿಗಳ ವಿರುದ್ಧ ತನಿಖೆಗೆ ಆದೇಶ: ಮುಖ್ಯಮಂತ್ರಿ ಡಿ ಕೆ ಶಿವಕುಮಾರ್‌300 ವರ್ಷಗಳಷ್ಟು ಹಳೆಯ ಐತಿಹಾಸಿಕ ರೇಸ್‌ಕೋರ್ಸ್ ಮಸೀದಿಯ ವಿದ್ಯುತ್ ಹಾಗೂ ನೀರು ಸಂಪರ್ಕ ಕಡಿತ: ತುರ್ತು ರಕ್ಷಣೆ ಕೋರಿದ ದೆಹಲಿ ವಕ್ಫ್ ಮಂಡಳಿತಿಹಾರ್ ಜೈಲಿನಿಂದ ಬಿಡುಗಡೆಯಾದ ಬೆನ್ನಲ್ಲೇ ಸೌರವ್ ದಾಸ್ ಹಾಗೂ ಅಶೋತ್ ರಾಂಕಾಗೆ ದೆಹಲಿ ಅಪರಾಧ ವಿಭಾಗದಿಂದ ಸಮನ್ಸ್

“ಪ್ರವಾಹದ ವಿಕೋಪಗಳನ್ನು ಎದುರಿಸಲು ಸಿದ್ದರಾಗಿ” : ಜಿಲ್ಲಾಧಿಕಾರಿಗಳಿಗೆ ಸಿಎಂ ಸೂಚನೆ

PPeepal Media Desk

Peepal Media Desk ದೇಶ, ರಾಜಕೀಯ

• 1 ನಿಮಿಷದ ಓದು

“ಪ್ರವಾಹದ ವಿಕೋಪಗಳನ್ನು ಎದುರಿಸಲು ಸಿದ್ದರಾಗಿ” : ಜಿಲ್ಲಾಧಿಕಾರಿಗಳಿಗೆ ಸಿಎಂ ಸೂಚನೆ

ರಾಜ್ಯದೆಲ್ಲೆಡೆ ಭಾರಿ ಮಳೆಯಾಗುತ್ತಿದ್ದು ಪ್ರವಾಹ ಮತ್ತು ಭೂಕುಸಿತದಂತಹ ಪ್ರಾಕೃತಿಕ ವಿಕೋಪಗಳನ್ನು ಎದುರಿಸಲು ಸಿದ್ಧರಿರುವಂತೆ ಎಲ್ಲಾ ಜಿಲ್ಲೆಗಳ ಜಿಲ್ಲಾಧಿಕಾರಿಗಳಿಗೆ ಸೂಚಿಸಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.

ಕೇರಳದ ವಯನಾಡಿನ ಭೂಕುಸಿತದ ದುರ್ಘಟನೆ ಬಗ್ಗೆ ಪ್ರಸ್ತಾಪಿಸಿ ಮಾತನಾಡಿದ ಮುಖ್ಯಮಂತ್ರಿ ಸಿದ್ದರಾಮಯ್ಯನವರು, ರಾಜ್ಯದ ಒಳಗೆ ಮತ್ತು ನೆರೆಯ ರಾಜ್ಯಗಳಲ್ಲಿಯೂ ಅತಿಯಾದ ಮಳೆ ಸುರಿಯುತ್ತಿದ್ದು, ರಾಜ್ಯದ ಯಾವುದೇ ಮೂಲೆಯಲ್ಲಿ ಸಮಸ್ಯೆ ತಲೆದೋರಿದರೂ ಅದನ್ನು ಎದುರಿಸಲು ಸಕಲ ತಯಾರಿಗಳನ್ನು ಕೈಗೊಳ್ಳಲಾಗುತ್ತಿದೆ. ಈ ಸಂಬಂಧ ಅಧಿಕಾರಿಗಳಿಗೆ ಕೆಲವು ಸೂಚನೆಗಳನ್ನು ನೀಡಲಾಗಿದೆ ಎಂದು ತಿಳಿಸಿದ್ದಾರೆ.

ಕರಾವಳಿ ಹಾಗೂ ಮಲೆನಾಡು ಭಾಗದಲ್ಲಿ ಅಲ್ಲಲ್ಲಿ ಭೂಕುಸಿತದ ಪ್ರಕರಣಗಳು ವರದಿಯಾಗುತ್ತಿದ್ದು ಈ ಬಗ್ಗೆ ಜಿಲ್ಲಾಧಿಕಾರಿಗಳು ಎಚ್ಚರವಹಿಸಬೇಕು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರು ಸಹ ಪ್ರವಾಹ ಪರಿಸ್ಥಿತಿಯ ನಿರ್ವಹಣೆಯ ಮೇಲ್ವಿಚಾರಣೆ ನಡೆಸುವಂತೆ ನಿರ್ದೇಶನ ನೀಡಿದ್ದಾರೆ.

ಈಗಾಗಲೇ ರಾಜ್ಯದ ಎಲ್ಲಾ ಜಲಾಶಯಗಳೂ ಸಂಪೂರ್ಣ ಭರ್ತಿಯಾಗಿದ್ದು, ಜಲಾಶಯಗಳ ನೀರಿನ ಮಟ್ಟದ ಕುರಿತು ನಿರಂತರ ಪರಿಶೀಲನೆ ನಡೆಸಲಾಗಿದೆ. ಹಾಗೇ ನೀರು ಹೊರಬಿಟ್ಟಾಗ ಆಗುವ ಅನಾಹುತದ ಬಗ್ಗೆಯೂ ಪ್ರವಾಹ ನಿಯಂತ್ರಣಕ್ಕೆ ಅಗತ್ಯ ಕ್ರಮ ಕೈಗೊಳ್ಳುವಂತೆ ಸಂಬಂಧಿಸಿದ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ ಎಂದು ಸಿದ್ದರಾಮಯ್ಯ ತಿಳಿಸಿದ್ದಾರೆ.

ಅಧಿಕಾರಿಗಳು ಪ್ರವಾಹ ಪರಿಸ್ಥಿತಿಯನ್ನು ಸಮರೋಪಾದಿಯಲ್ಲಿ ನಿರ್ವಹಿಸುವಂತೆ, ರಕ್ಷಣೆ ಹಾಗೂ ಪರಿಹಾರ ಕಾರ್ಯಚರಣೆಗಳನ್ನು ಕೈಗೊಳ್ಳುವಂತೆ ಹಾಗೂ ಪ್ರವಾಹ ಪೀಡಿತರಿಗೆ ಅಗತ್ಯಕ್ಕನುಸಾರವಾಗಿ ಕಾಳಜಿ ಕೇಂದ್ರಗಳನ್ನು ತೆರೆದು ಎಲ್ಲ ಸೌಲಭ್ಯಗಳನ್ನು ಕಲ್ಪಿಸುವಂತೆ ಸೂಚಿಸಲಾಗಿದೆ.

ಎಲ್ಲಾ ಜಿಲ್ಲೆಗಳಲ್ಲಿ ನಿಯಂತ್ರಣ ಕೊಠಡಿ ತೆರೆದು ದಿನದ 24 ಗಂಟೆಯೂ ಕಾರ್ಯ ನಿರ್ವಹಿಸಲು ವ್ಯವಸ್ಥೆ ಮಾಡುವಂತೆ ಸೂಚಿಸಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.

PPeepal Media Desk

Peepal Media Desk

Peepal Media · ದೇಶ ವಿಭಾಗ

ಸಂಬಂಧಿತ ಸುದ್ದಿಗಳು