ಮುಖ್ಯ ವಿಷಯಕ್ಕೆ ತೆರಳಿ
Peepal Media
ತಾಜಾ ಸುದ್ದಿ
ಅಪ್ರಾಪ್ತ ಬಾಲಕಿಯ ವಿರುದ್ಧ ಇಸ್ಲಾಂ ವಿರೋಧಿ ಮತ್ತು ಲೈಂಗಿಕ ನಿಂದನಾತ್ಮಕ ಕಾಮೆಂಟ್‌: ಆರ್‌ಎಸ್‌ಎಸ್ ಕಾರ್ಯಕರ್ತನ ಬಂಧನಕರ್ನಾಟಕ ವಿಧಾನ ಪರಿಷತ್ ಚುನಾವಣೆ: ನಾಲ್ಕೂ ಕ್ಷೇತ್ರಗಳಲ್ಲಿ ಎನ್‌ಡಿಎ ಗೆಲುವು, ಕಾಂಗ್ರೆಸ್‌ಗೆ ಹಿನ್ನಡೆಈಸಕ್ಕಿ ಆಸೆಯನ್ನೂ ಮೀರಿದ ಆಯ್ದಕ್ಕಿ ಲಕ್ಕಮ್ಮಗಾಜಾ ಸ್ಮಶಾನದ ಮೇಲೆ ಮತ್ತೆ ಅರಳುತ್ತಾ ನೆತನ್ಯಾಹು ಕುರ್ಚಿ?ಅರುಣಾಚಲದಲ್ಲಿ ಚೀನಾ ಸೈನಿಕರೊಂದಿಗೆ ಮುಖಾಮುಖಿ: ಕೇಂದ್ರದ ಮೌನವನ್ನು ಪ್ರಶ್ನಿಸಿದ ಕಾಂಗ್ರೆಸ್‌ನ ಜೈರಾಮ್ ರಮೇಶ್ಕಡತಗಳ ವಿಲೇವಾರಿ ಪ್ರಕ್ರಿಯೆ ಬದಲಾವಣೆ: ಚುನಾವಣಾ ಆಯುಕ್ತರಿಂದ ಕ್ಯಾಬಿನೆಟ್‌ ಕಾರ್ಯದರ್ಶಿಗೆ ಆಕ್ಷೇಪಣಾ ಪತ್ರಮೋದಿ–ಅದಾನಿ ಕುರಿತ ಸಾಕ್ಷ್ಯಚಿತ್ರ ಹಂಚಿಕೊಂಡ ರಾಜ್‌ ಠಾಕ್ರೆ; ತೆಗೆದುಹಾಕುವಂತೆ ಸೂಚನೆಗಳ ನಡುವೆ ಮುಂದುವರೆದ ಚರ್ಚೆಮಂಡ್ಯದಲ್ಲಿ ARAI ಪರೀಕ್ಷಾ ಕೇಂದ್ರಗಳಿಗೆ ಭೂಮಿ ಹಂಚಿಕೆ ವಿಳಂಬ: ರಾಜ್ಯ ಸರ್ಕಾರಕ್ಕೆ ಎಚ್‌.ಡಿ. ಕುಮಾರಸ್ವಾಮಿ ಪತ್ರರಾಷ್ಟ್ರೀಯತೆಯ ಪಾಠ ನನಗೆ ಬೇಕಿಲ್ಲ; ನಮ್ಮ ಗುರಿ ಆಡಳಿತ, ಸಾಮಾಜಿಕ ಜಾಲತಾಣದ ಪ್ರಚಾರವಲ್ಲ: ಕೆ. ಅಣ್ಣಾಮಲೈಕೇವಲ ಮದುವೆಗಾಗಿ ಧರ್ಮಾಂತರವಾಗುವುದನ್ನು ಒಪ್ಪಲು ಸಾಧ್ಯವಿಲ್ಲ: ಬಾಂಬೆ ಹೈಕೋರ್ಟ್‌ಇನ್ನು ನೋಂದಾಯಿತ ಸಿಮ್‌ ಇದ್ದರೆ ಮಾತ್ರ ವಾಟ್ಸ್‌ಆ್ಯಪ್‌ ಬಳಕೆ ಸಾಧ್ಯ: ಜನವರಿ 1, 2027ರಿಂದ ಹೊಸ ನಿಯಮ ಜಾರಿಈ-ಮುದ್ರ ಡಿಜಿಟಲ್‌ ಪ್ರಮಾಣಪತ್ರಗಳಲ್ಲಿ ಭದ್ರತಾ ಲೋಪ: ಜಾಗತಿಕ ತಂತ್ರಜ್ಞಾನ ವಲಯದಲ್ಲಿ ಆತಂಕಹಾಸನ ಕಾಳಸಂತೆಗೆ ಪಡಿತರ ಅಕ್ಕಿ ಮಾರಾಟ ಯತ್ನ – ಕ್ವಿಂಟಲ್‌ ಗಟ್ಟಲೆ ಅಕ್ಕಿ, ರಾಗಿ ವಶಸದ್ಯದಲ್ಲೆ ಕಬ್ಬು ಬೆಳೆಗಾರರ ಸಭೆ ಕರೆದಿದ್ದೇನೆ – ಸಿಎಂ ಡಿ.ಕೆ ಶಿವಕುಮಾರ್ರಾಜ್ಯದಲ್ಲಿ ಐದು ದಿನಗಳಲ್ಲಿ ಮಳೆ ಸಾಧ್ಯತೆ – ಹವಾಮಾನ ಇಲಾಖೆ ಮುನ್ಸೂಚನೆಸಿದ್ದರಾಮಯ್ಯ ಅವರನ್ನು ಅಧಿಕಾರದಿಂದ ಇಳಿಸಲು ವ್ಯವಸ್ಥಿತ ಸಂಚು ರೂಪಿಸಿ ಯಶಸ್ವಿಗೊಂಡಿದ್ದಾರೆ – ಸಿಎಂ ಯಡಿಯೂರಪ್ಪಚುನಾವಣಾ ಆಯುಕ್ತರಿಗೆ ರಕ್ಷಣೆ ನೀಡುವ ಕಾನೂನು ರದ್ದುಗೊಳಿಸಿ – ಮಲ್ಲಿಕಾರ್ಜುನ ಖರ್ಗೆ ಆಗ್ರಹದಸರಾ ವೇಳೆ ಪೊಲೀಸರ ಲಾಠಿ ಏಟಿಗೆ 4 ವರ್ಷದ ಬಾಲಕ ಗಂಭೀರ – ICUನಲ್ಲಿ ಅಂತಿಮ ಹೋರಾಟಸೌದಿ ವಿಮಾನ ನಿಲ್ದಾಣದ ಮೇಲೆ ಭೀಕರ ದಾಳಿ – 8 ಮಂದಿಗೆ ಗಾಯ, ಇಬ್ಬರ ಅಂತ್ಯನಂದಿಧ್ವಜ ಪೂಜೆಗೆ ಸಚಿವರಿಗೆ ಅವಕಾಶ ನಿರಾಕರಿಸಿದ ಅಧಿಕಾರಿಗಳ ವಿರುದ್ಧ ತನಿಖೆಗೆ ಆದೇಶ: ಮುಖ್ಯಮಂತ್ರಿ ಡಿ ಕೆ ಶಿವಕುಮಾರ್‌

ರಾಜ್ಯದಲ್ಲಿ ರೋಹಿತ್ ವೇಮುಲ ಕಾಯ್ದೆಗೆ ಸಚಿವ ಸಂಪುಟ ಅಸ್ತು; ಬಜೆಟ್ ಅಧಿವೇಶನದಲ್ಲೇ ಮಸೂದೆ ಮಂಡನೆ ಸಾಧ್ಯತೆ

PPeepal Media Desk

Peepal Media Desk ರಾಜಕೀಯ, ರಾಜ್ಯ

• 1 ನಿಮಿಷದ ಓದು

ರಾಜ್ಯದಲ್ಲಿ ರೋಹಿತ್ ವೇಮುಲ ಕಾಯ್ದೆಗೆ ಸಚಿವ ಸಂಪುಟ ಅಸ್ತು; ಬಜೆಟ್ ಅಧಿವೇಶನದಲ್ಲೇ ಮಸೂದೆ ಮಂಡನೆ ಸಾಧ್ಯತೆ

ಬೆಂಗಳೂರು: ರಾಜ್ಯದಲ್ಲಿ ರೋಹಿತ್ ವೇಮುಲ ಕಾಯ್ದೆ ಜಾರಿಗೆ ಸಂಬಂಧಿಸಿದಂತೆ ಮಹತ್ವದ ನಿರ್ಧಾರ ಕೈಗೊಳ್ಳಲಾಗಿದ್ದು, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ಮಸೂದೆಗೆ ತಾತ್ವಿಕ ಒಪ್ಪಿಗೆ ನೀಡಲಾಗಿದೆ.

“ಕರ್ನಾಟಕ ರೋಹಿತ್ ವೇಮುಲ (ಬಹಿಷ್ಕಾರ ಅಥವಾ ಅನ್ಯಾಯ ತಡೆಗಟ್ಟುವಿಕೆ) (ಶಿಕ್ಷಣ ಮತ್ತು ಗೌರವದ ಹಕ್ಕು) ಮಸೂದೆ, 2025” ಎಂಬ ಹೆಸರಿನಲ್ಲಿ ಈ ಕಾನೂನು ಪ್ರಸ್ತಾಪವಾಗಿದ್ದು, ಇದೇ ಬಜೆಟ್ ಅಧಿವೇಶನದಲ್ಲಿ ವಿಧಾನಮಂಡಲದಲ್ಲಿ ಮಂಡಿಸಲು ಸರ್ಕಾರ ತೀರ್ಮಾನಿಸಿದೆ. ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ಆಧಾರಿತ ತಾರತಮ್ಯ, ಕಿರುಕುಳ ಹಾಗೂ ಸಾಂಸ್ಥಿಕ ದೌರ್ಜನ್ಯವನ್ನು ತಡೆಗಟ್ಟುವುದು ಈ ಕಾಯ್ದೆಯ ಉದ್ದೇಶವಾಗಿದೆ.

ಈ ಕುರಿತಂತೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು ಕಾಂಗ್ರೆಸ್ ಆಡಳಿತವಿರುವ ರಾಜ್ಯಗಳ ಮುಖ್ಯಮಂತ್ರಿಗಳಿಗೆ ಪತ್ರ ಬರೆದು ಇಂತಹ ಕಾನೂನು ಜಾರಿಗೊಳಿಸಲು ಮನವಿ ಮಾಡಿದ್ದರು. ಅದಕ್ಕೆ ಸ್ಪಂದಿಸಿದ್ದ ಸಿದ್ದರಾಮಯ್ಯ ಸರ್ಕಾರ ಇದೀಗ ಅಧಿಕೃತವಾಗಿ ಮುಂದಡಿ ಇಟ್ಟಿದೆ.

ರೋಹಿತ್ ವೇಮುಲ ಹಿನ್ನೆಲೆ
ರೋಹಿತ್ ವೇಮುಲ ಹೈದರಾಬಾದ್ ಕೇಂದ್ರೀಯ ವಿಶ್ವವಿದ್ಯಾಲಯದ ದಲಿತ ಪಿಎಚ್‌ಡಿ ವಿದ್ಯಾರ್ಥಿಯಾಗಿದ್ದರು. 2016ರ ಜನವರಿ 17ರಂದು ಜಾತಿ ಆಧಾರಿತ ಕಿರುಕುಳ ಮತ್ತು ಸಾಂಸ್ಥಿಕ ಅನ್ಯಾಯ ಆರೋಪಗಳ ನಡುವೆ ಅವರು ಆತ್ಮಹತ್ಯೆ ಮಾಡಿಕೊಂಡ ಘಟನೆ ದೇಶಾದ್ಯಂತ ತೀವ್ರ ಚರ್ಚೆಗೆ ಕಾರಣವಾಗಿತ್ತು. ಬಳಿಕ ಉನ್ನತ ಶಿಕ್ಷಣ ಕ್ಷೇತ್ರದಲ್ಲಿ ಜಾತಿ ತಾರತಮ್ಯ ವಿರೋಧಿ ಹೋರಾಟಗಳು ಬಿರುಸುಗೊಂಡವು.

ಕಾಯ್ದೆಯ ಪ್ರಮುಖ ಅಂಶಗಳು
ಮಸೂದೆಯ ಪ್ರಕಾರ SC/ST, OBC ಹಾಗೂ ಧಾರ್ಮಿಕ ಅಲ್ಪಸಂಖ್ಯಾತ ವಿದ್ಯಾರ್ಥಿಗಳಿಗೆ ವಿಶೇಷ ರಕ್ಷಣೆಯ ವ್ಯವಸ್ಥೆ ಕಲ್ಪಿಸಲಾಗುತ್ತದೆ. ಜಾತಿ ಅಥವಾ ಧರ್ಮ ಆಧಾರಿತ ತಾರತಮ್ಯ, ಕಿರುಕುಳ, ಬಹಿಷ್ಕಾರ, ಹಿಂಸೆ ಮತ್ತು ಶೈಕ್ಷಣಿಕ ಅಡ್ಡಿಪಡಿಸುವಿಕೆಗಳನ್ನು ಅಪರಾಧಗಳಾಗಿ ಪರಿಗಣಿಸಲಾಗುತ್ತದೆ.

ಕಾಯ್ದೆಯಡಿ ದಾಖಲಾಗುವ ಅಪರಾಧಗಳನ್ನು ಸಂಜ್ಞೇಯ (Cognizable) ಹಾಗೂ ಜಾಮೀನು ರಹಿತ (Non-bailable) ಎಂದು ಗುರುತಿಸುವ ಪ್ರಸ್ತಾಪವಿದೆ. ಮೊದಲ ಬಾರಿ ಅಪರಾಧ ಸಾಬೀತಾದರೆ 1 ವರ್ಷದವರೆಗೆ ಜೈಲು ಶಿಕ್ಷೆ ಹಾಗೂ ₹10,000 ದಂಡ ವಿಧಿಸುವ ವ್ಯವಸ್ಥೆ ಇರಲಿದೆ. ಮರುಕಳಿಸಿದರೆ ಕನಿಷ್ಠ 3 ವರ್ಷ ಜೈಲು ಮತ್ತು ₹1 ಲಕ್ಷದವರೆಗೆ ದಂಡ ವಿಧಿಸುವ ಅವಕಾಶ ಕಲ್ಪಿಸಲಾಗಿದೆ.

ಪ್ರತಿ ಉನ್ನತ ಶಿಕ್ಷಣ ಸಂಸ್ಥೆಯಲ್ಲೂ ಜಾತಿ ತಾರತಮ್ಯ ವಿರೋಧಿ ಸ್ವತಂತ್ರ ಘಟಕಗಳನ್ನು ಸ್ಥಾಪಿಸುವುದು ಕಡ್ಡಾಯವಾಗಲಿದೆ. ದೂರು ಸ್ವೀಕಾರ, ತನಿಖೆ ಮತ್ತು ಕ್ರಮ ಜರುಗಿಸುವ ವ್ಯವಸ್ಥೆ ರೂಪಿಸಲಾಗುತ್ತದೆ. ತಾರತಮ್ಯ ಸಾಬೀತಾದಲ್ಲಿ ಸಂಸ್ಥೆಗಳ ಮೇಲೂ ಹೊಣೆಗಾರಿಕೆ ನಿಗದಿಪಡಿಸುವ ಸಾಧ್ಯತೆ ಇದೆ.

ಸರ್ಕಾರದ ಮೂಲಗಳ ಪ್ರಕಾರ, ಈ ಕಾಯ್ದೆ Scheduled Castes and Scheduled Tribes (Prevention of Atrocities) Act ಮಾದರಿಯ ಕಠಿಣ ಕ್ರಿಮಿನಲ್ ಕಾಯ್ದೆಯಾಗಿರದೇ, ನಾಗರಿಕ ಹಾಗೂ ಸುಧಾರಣಾತ್ಮಕ ಚೌಕಟ್ಟಿಗೆ ಹೆಚ್ಚು ಒತ್ತು ನೀಡುತ್ತದೆ.

ಸಚಿವ ಸಂಪುಟದ ಅನುಮೋದನೆ ಬಳಿಕ ಮಸೂದೆಗೆ ಕಾನೂನು ರೂಪ ಸಿಗುವತ್ತ ಸರ್ಕಾರ ವೇಗವಾಗಿ ಕ್ರಮ ಕೈಗೊಳ್ಳುವ ನಿರೀಕ್ಷೆ ಇದೆ. ರಾಜ್ಯದ ಉನ್ನತ ಶಿಕ್ಷಣ ಕ್ಷೇತ್ರದಲ್ಲಿ ಸಮಾನತೆ ಮತ್ತು ಗೌರವದ ವಾತಾವರಣ ನಿರ್ಮಿಸಲು ಈ ಕಾಯ್ದೆ ಮಹತ್ವದ ಹೆಜ್ಜೆಯಾಗಲಿದೆ ಎಂದು ವೀಕ್ಷಕರು ಅಭಿಪ್ರಾಯಪಟ್ಟಿದ್ದಾರೆ.

PPeepal Media Desk

Peepal Media Desk

Peepal Media · ರಾಜಕೀಯ ವಿಭಾಗ

ಸಂಬಂಧಿತ ಸುದ್ದಿಗಳು