ಮುಖ್ಯ ವಿಷಯಕ್ಕೆ ತೆರಳಿ
Peepal Media
ತಾಜಾ ಸುದ್ದಿ
ಈಸಕ್ಕಿ ಆಸೆಯನ್ನೂ ಮೀರಿದ ಆಯ್ದಕ್ಕಿ ಲಕ್ಕಮ್ಮಗಾಜಾ ಸ್ಮಶಾನದ ಮೇಲೆ ಮತ್ತೆ ಅರಳುತ್ತಾ ನೆತನ್ಯಾಹು ಕುರ್ಚಿ?ಅರುಣಾಚಲದಲ್ಲಿ ಚೀನಾ ಸೈನಿಕರೊಂದಿಗೆ ಮುಖಾಮುಖಿ: ಕೇಂದ್ರದ ಮೌನವನ್ನು ಪ್ರಶ್ನಿಸಿದ ಕಾಂಗ್ರೆಸ್‌ನ ಜೈರಾಮ್ ರಮೇಶ್ಕಡತಗಳ ವಿಲೇವಾರಿ ಪ್ರಕ್ರಿಯೆ ಬದಲಾವಣೆ: ಚುನಾವಣಾ ಆಯುಕ್ತರಿಂದ ಕ್ಯಾಬಿನೆಟ್‌ ಕಾರ್ಯದರ್ಶಿಗೆ ಆಕ್ಷೇಪಣಾ ಪತ್ರಮೋದಿ–ಅದಾನಿ ಕುರಿತ ಸಾಕ್ಷ್ಯಚಿತ್ರ ಹಂಚಿಕೊಂಡ ರಾಜ್‌ ಠಾಕ್ರೆ; ತೆಗೆದುಹಾಕುವಂತೆ ಸೂಚನೆಗಳ ನಡುವೆ ಮುಂದುವರೆದ ಚರ್ಚೆಮಂಡ್ಯದಲ್ಲಿ ARAI ಪರೀಕ್ಷಾ ಕೇಂದ್ರಗಳಿಗೆ ಭೂಮಿ ಹಂಚಿಕೆ ವಿಳಂಬ: ರಾಜ್ಯ ಸರ್ಕಾರಕ್ಕೆ ಎಚ್‌.ಡಿ. ಕುಮಾರಸ್ವಾಮಿ ಪತ್ರರಾಷ್ಟ್ರೀಯತೆಯ ಪಾಠ ನನಗೆ ಬೇಕಿಲ್ಲ; ನಮ್ಮ ಗುರಿ ಆಡಳಿತ, ಸಾಮಾಜಿಕ ಜಾಲತಾಣದ ಪ್ರಚಾರವಲ್ಲ: ಕೆ. ಅಣ್ಣಾಮಲೈಕೇವಲ ಮದುವೆಗಾಗಿ ಧರ್ಮಾಂತರವಾಗುವುದನ್ನು ಒಪ್ಪಲು ಸಾಧ್ಯವಿಲ್ಲ: ಬಾಂಬೆ ಹೈಕೋರ್ಟ್‌ಇನ್ನು ನೋಂದಾಯಿತ ಸಿಮ್‌ ಇದ್ದರೆ ಮಾತ್ರ ವಾಟ್ಸ್‌ಆ್ಯಪ್‌ ಬಳಕೆ ಸಾಧ್ಯ: ಜನವರಿ 1, 2027ರಿಂದ ಹೊಸ ನಿಯಮ ಜಾರಿಈ-ಮುದ್ರ ಡಿಜಿಟಲ್‌ ಪ್ರಮಾಣಪತ್ರಗಳಲ್ಲಿ ಭದ್ರತಾ ಲೋಪ: ಜಾಗತಿಕ ತಂತ್ರಜ್ಞಾನ ವಲಯದಲ್ಲಿ ಆತಂಕಹಾಸನ ಕಾಳಸಂತೆಗೆ ಪಡಿತರ ಅಕ್ಕಿ ಮಾರಾಟ ಯತ್ನ – ಕ್ವಿಂಟಲ್‌ ಗಟ್ಟಲೆ ಅಕ್ಕಿ, ರಾಗಿ ವಶಸದ್ಯದಲ್ಲೆ ಕಬ್ಬು ಬೆಳೆಗಾರರ ಸಭೆ ಕರೆದಿದ್ದೇನೆ – ಸಿಎಂ ಡಿ.ಕೆ ಶಿವಕುಮಾರ್ರಾಜ್ಯದಲ್ಲಿ ಐದು ದಿನಗಳಲ್ಲಿ ಮಳೆ ಸಾಧ್ಯತೆ – ಹವಾಮಾನ ಇಲಾಖೆ ಮುನ್ಸೂಚನೆಸಿದ್ದರಾಮಯ್ಯ ಅವರನ್ನು ಅಧಿಕಾರದಿಂದ ಇಳಿಸಲು ವ್ಯವಸ್ಥಿತ ಸಂಚು ರೂಪಿಸಿ ಯಶಸ್ವಿಗೊಂಡಿದ್ದಾರೆ – ಸಿಎಂ ಯಡಿಯೂರಪ್ಪಚುನಾವಣಾ ಆಯುಕ್ತರಿಗೆ ರಕ್ಷಣೆ ನೀಡುವ ಕಾನೂನು ರದ್ದುಗೊಳಿಸಿ – ಮಲ್ಲಿಕಾರ್ಜುನ ಖರ್ಗೆ ಆಗ್ರಹದಸರಾ ವೇಳೆ ಪೊಲೀಸರ ಲಾಠಿ ಏಟಿಗೆ 4 ವರ್ಷದ ಬಾಲಕ ಗಂಭೀರ – ICUನಲ್ಲಿ ಅಂತಿಮ ಹೋರಾಟಸೌದಿ ವಿಮಾನ ನಿಲ್ದಾಣದ ಮೇಲೆ ಭೀಕರ ದಾಳಿ – 8 ಮಂದಿಗೆ ಗಾಯ, ಇಬ್ಬರ ಅಂತ್ಯನಂದಿಧ್ವಜ ಪೂಜೆಗೆ ಸಚಿವರಿಗೆ ಅವಕಾಶ ನಿರಾಕರಿಸಿದ ಅಧಿಕಾರಿಗಳ ವಿರುದ್ಧ ತನಿಖೆಗೆ ಆದೇಶ: ಮುಖ್ಯಮಂತ್ರಿ ಡಿ ಕೆ ಶಿವಕುಮಾರ್‌300 ವರ್ಷಗಳಷ್ಟು ಹಳೆಯ ಐತಿಹಾಸಿಕ ರೇಸ್‌ಕೋರ್ಸ್ ಮಸೀದಿಯ ವಿದ್ಯುತ್ ಹಾಗೂ ನೀರು ಸಂಪರ್ಕ ಕಡಿತ: ತುರ್ತು ರಕ್ಷಣೆ ಕೋರಿದ ದೆಹಲಿ ವಕ್ಫ್ ಮಂಡಳಿತಿಹಾರ್ ಜೈಲಿನಿಂದ ಬಿಡುಗಡೆಯಾದ ಬೆನ್ನಲ್ಲೇ ಸೌರವ್ ದಾಸ್ ಹಾಗೂ ಅಶೋತ್ ರಾಂಕಾಗೆ ದೆಹಲಿ ಅಪರಾಧ ವಿಭಾಗದಿಂದ ಸಮನ್ಸ್

ಬಿಜೆಪಿಯ ಈ ಕೆಲಸ ಪ್ರಜಾಪ್ರಭುತ್ವಕ್ಕೆ ಅಪಾಯಕಾರಿ: ಕೇಜ್ರಿವಾಲ್

PPeepal Media

Peepal Media ರಾಜಕೀಯ

• 1 ನಿಮಿಷದ ಓದು

ಬಿಜೆಪಿಯ ಈ ಕೆಲಸ ಪ್ರಜಾಪ್ರಭುತ್ವಕ್ಕೆ ಅಪಾಯಕಾರಿ: ಕೇಜ್ರಿವಾಲ್

ದೆಹಲಿ: ದೆಹಲಿ ಮತದಾರರ ಪಟ್ಟಿಯಿಂದ ಹೆಚ್ಚಿನ ಸಂಖ್ಯೆಯ ಮತದಾರರ ಹೆಸರನ್ನು ಅಳಿಸಿ ಹಾಕಿರುವುದು ಪ್ರಜಾಪ್ರಭುತ್ವಕ್ಕೆ ಅಪಾಯಕಾರಿ ಎಂದು ಎಎಪಿ ಸಂಚಾಲಕ ಮತ್ತು ದೆಹಲಿಯ ಮಾಜಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಹೇಳಿದ್ದಾರೆ.

ಜನರ ಮತಗಳನ್ನು ಕಸಿದುಕೊಂಡು, ಮತದಾನದ ಮೂಲಕ ಸರ್ಕಾರವನ್ನು ಆಯ್ಕೆ ಮಾಡುವ ಮೂಲಭೂತ ಹಕ್ಕನ್ನು ಕಸಿದುಕೊಳ್ಳುವುದು ಪ್ರಜಾಪ್ರಭುತ್ವಕ್ಕೆ ಅಪಾಯಕಾರಿ ಎಂದು ಹೇಳಿದರು.

ಪ್ರಸ್ತುತ ಎನ್‌ಡಿಎ ಸರ್ಕಾರ ಮತ್ತು ಚುನಾವಣಾ ಆಯೋಗವು ಜನರ ಹಕ್ಕುಗಳನ್ನು ಕಸಿದುಕೊಳ್ಳುತ್ತಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು. ಶಹದಾರ ಕ್ಷೇತ್ರದಿಂದ 11,018 ಮತದಾರರ ಹೆಸರನ್ನು ತೆಗೆದುಹಾಕಲು ಬಿಜೆಪಿ ಅರ್ಜಿ ಸಲ್ಲಿಸಿದ್ದು, ಈ ಪೈಕಿ 500 ಹೆಸರುಗಳನ್ನು ಕ್ರಾಸ್ ಚೆಕ್ ಮಾಡಲಾಗಿದೆ ಮತ್ತು ಅವರಲ್ಲಿ 75ರಷ್ಟು ಜನರು ಈ ಪ್ರದೇಶದಲ್ಲಿ ವಾಸಿಸುತ್ತಿದ್ದಾರೆ ಎಂದು ಹೇಳಿದರು. 2020ರ ಚುನಾವಣೆಯಲ್ಲಿ ಎಎಪಿ ನಾಯಕ ರಾಮ್ ನಿವಾಸ್ ಗೋಯಲ್ ಅವರು ಬಿಜೆಪಿ ನಾಯಕ ಸಂಜಯ್ ಗೋಯಲ್ ವಿರುದ್ಧ ಶಹದಾರ ವಿಧಾನಸಭಾ ಕ್ಷೇತ್ರದಿಂದ ಸುಮಾರು 5,000 ಮತಗಳಿಂದ ಗೆದ್ದಿದ್ದಾರೆ ಎಂದು ಕೇಜ್ರಿವಾಲ್ ನೆನಪಿಸಿದರು.

ಸದ್ಯ ಆ ಕ್ಷೇತ್ರದಿಂದ 11,000 ಮತದಾರರನ್ನು ತೆಗೆದುಹಾಕಲಾಗಿದ್ದು, ಅವರಲ್ಲಿ ಹೆಚ್ಚಿನವರು ಎಎಪಿ ಬೆಂಬಲಿಗರಾಗಿದ್ದಾರೆ. ಒಂದು ಕ್ಷೇತ್ರದಲ್ಲಿ ಶೇ.6ರಷ್ಟು ಮತ ಕಡಿಮೆಯಾದರೆ ಚುನಾವಣೆ ನಡೆಸಿ ಏನು ಪ್ರಯೋಜನ ಎಂದು ಪ್ರಶ್ನಿಸಿದರು. 2025ರಲ್ಲಿ ದೆಹಲಿ ವಿಧಾನಸಭೆ ಚುನಾವಣೆ ನಡೆಯುವ ಸಾಧ್ಯತೆ ಇದೆ. 2020 ರ ವಿಧಾನಸಭಾ ಚುನಾವಣೆಯಲ್ಲಿ, ಎಎಪಿ 70 ಸ್ಥಾನಗಳಲ್ಲಿ 62 ಸ್ಥಾನಗಳನ್ನು ಗೆದ್ದರೆ, ಬಿಜೆಪಿ ಎಂಟು ಸ್ಥಾನಗಳಿಗೆ ಸೀಮಿತವಾಯಿತು.

PPeepal Media

Peepal Media

Peepal Media · ರಾಜಕೀಯ ವಿಭಾಗ

ಸಂಬಂಧಿತ ಸುದ್ದಿಗಳು