ಮುಖ್ಯ ವಿಷಯಕ್ಕೆ ತೆರಳಿ
Peepal Media
ತಾಜಾ ಸುದ್ದಿ
●ಈಸಕ್ಕಿ ಆಸೆಯನ್ನೂ ಮೀರಿದ ಆಯ್ದಕ್ಕಿ ಲಕ್ಕಮ್ಮ●ಗಾಜಾ ಸ್ಮಶಾನದ ಮೇಲೆ ಮತ್ತೆ ಅರಳುತ್ತಾ ನೆತನ್ಯಾಹು ಕುರ್ಚಿ?●ಅರುಣಾಚಲದಲ್ಲಿ ಚೀನಾ ಸೈನಿಕರೊಂದಿಗೆ ಮುಖಾಮುಖಿ: ಕೇಂದ್ರದ ಮೌನವನ್ನು ಪ್ರಶ್ನಿಸಿದ ಕಾಂಗ್ರೆಸ್‌ನ ಜೈರಾಮ್ ರಮೇಶ್●ಕಡತಗಳ ವಿಲೇವಾರಿ ಪ್ರಕ್ರಿಯೆ ಬದಲಾವಣೆ: ಚುನಾವಣಾ ಆಯುಕ್ತರಿಂದ ಕ್ಯಾಬಿನೆಟ್‌ ಕಾರ್ಯದರ್ಶಿಗೆ ಆಕ್ಷೇಪಣಾ ಪತ್ರ●ಮೋದಿ–ಅದಾನಿ ಕುರಿತ ಸಾಕ್ಷ್ಯಚಿತ್ರ ಹಂಚಿಕೊಂಡ ರಾಜ್‌ ಠಾಕ್ರೆ; ತೆಗೆದುಹಾಕುವಂತೆ ಸೂಚನೆಗಳ ನಡುವೆ ಮುಂದುವರೆದ ಚರ್ಚೆ●ಮಂಡ್ಯದಲ್ಲಿ ARAI ಪರೀಕ್ಷಾ ಕೇಂದ್ರಗಳಿಗೆ ಭೂಮಿ ಹಂಚಿಕೆ ವಿಳಂಬ: ರಾಜ್ಯ ಸರ್ಕಾರಕ್ಕೆ ಎಚ್‌.ಡಿ. ಕುಮಾರಸ್ವಾಮಿ ಪತ್ರ●ರಾಷ್ಟ್ರೀಯತೆಯ ಪಾಠ ನನಗೆ ಬೇಕಿಲ್ಲ; ನಮ್ಮ ಗುರಿ ಆಡಳಿತ, ಸಾಮಾಜಿಕ ಜಾಲತಾಣದ ಪ್ರಚಾರವಲ್ಲ: ಕೆ. ಅಣ್ಣಾಮಲೈ●ಕೇವಲ ಮದುವೆಗಾಗಿ ಧರ್ಮಾಂತರವಾಗುವುದನ್ನು ಒಪ್ಪಲು ಸಾಧ್ಯವಿಲ್ಲ: ಬಾಂಬೆ ಹೈಕೋರ್ಟ್‌●ಇನ್ನು ನೋಂದಾಯಿತ ಸಿಮ್‌ ಇದ್ದರೆ ಮಾತ್ರ ವಾಟ್ಸ್‌ಆ್ಯಪ್‌ ಬಳಕೆ ಸಾಧ್ಯ: ಜನವರಿ 1, 2027ರಿಂದ ಹೊಸ ನಿಯಮ ಜಾರಿ●ಈ-ಮುದ್ರ ಡಿಜಿಟಲ್‌ ಪ್ರಮಾಣಪತ್ರಗಳಲ್ಲಿ ಭದ್ರತಾ ಲೋಪ: ಜಾಗತಿಕ ತಂತ್ರಜ್ಞಾನ ವಲಯದಲ್ಲಿ ಆತಂಕ●ಹಾಸನ ಕಾಳಸಂತೆಗೆ ಪಡಿತರ ಅಕ್ಕಿ ಮಾರಾಟ ಯತ್ನ – ಕ್ವಿಂಟಲ್‌ ಗಟ್ಟಲೆ ಅಕ್ಕಿ, ರಾಗಿ ವಶ●ಸದ್ಯದಲ್ಲೆ ಕಬ್ಬು ಬೆಳೆಗಾರರ ಸಭೆ ಕರೆದಿದ್ದೇನೆ – ಸಿಎಂ ಡಿ.ಕೆ ಶಿವಕುಮಾರ್●ರಾಜ್ಯದಲ್ಲಿ ಐದು ದಿನಗಳಲ್ಲಿ ಮಳೆ ಸಾಧ್ಯತೆ – ಹವಾಮಾನ ಇಲಾಖೆ ಮುನ್ಸೂಚನೆ●ಸಿದ್ದರಾಮಯ್ಯ ಅವರನ್ನು ಅಧಿಕಾರದಿಂದ ಇಳಿಸಲು ವ್ಯವಸ್ಥಿತ ಸಂಚು ರೂಪಿಸಿ ಯಶಸ್ವಿಗೊಂಡಿದ್ದಾರೆ – ಸಿಎಂ ಯಡಿಯೂರಪ್ಪ●ಚುನಾವಣಾ ಆಯುಕ್ತರಿಗೆ ರಕ್ಷಣೆ ನೀಡುವ ಕಾನೂನು ರದ್ದುಗೊಳಿಸಿ – ಮಲ್ಲಿಕಾರ್ಜುನ ಖರ್ಗೆ ಆಗ್ರಹ●ದಸರಾ ವೇಳೆ ಪೊಲೀಸರ ಲಾಠಿ ಏಟಿಗೆ 4 ವರ್ಷದ ಬಾಲಕ ಗಂಭೀರ – ICUನಲ್ಲಿ ಅಂತಿಮ ಹೋರಾಟ●ಸೌದಿ ವಿಮಾನ ನಿಲ್ದಾಣದ ಮೇಲೆ ಭೀಕರ ದಾಳಿ – 8 ಮಂದಿಗೆ ಗಾಯ, ಇಬ್ಬರ ಅಂತ್ಯ●ನಂದಿಧ್ವಜ ಪೂಜೆಗೆ ಸಚಿವರಿಗೆ ಅವಕಾಶ ನಿರಾಕರಿಸಿದ ಅಧಿಕಾರಿಗಳ ವಿರುದ್ಧ ತನಿಖೆಗೆ ಆದೇಶ: ಮುಖ್ಯಮಂತ್ರಿ ಡಿ ಕೆ ಶಿವಕುಮಾರ್‌●300 ವರ್ಷಗಳಷ್ಟು ಹಳೆಯ ಐತಿಹಾಸಿಕ ರೇಸ್‌ಕೋರ್ಸ್ ಮಸೀದಿಯ ವಿದ್ಯುತ್ ಹಾಗೂ ನೀರು ಸಂಪರ್ಕ ಕಡಿತ: ತುರ್ತು ರಕ್ಷಣೆ ಕೋರಿದ ದೆಹಲಿ ವಕ್ಫ್ ಮಂಡಳಿ●ತಿಹಾರ್ ಜೈಲಿನಿಂದ ಬಿಡುಗಡೆಯಾದ ಬೆನ್ನಲ್ಲೇ ಸೌರವ್ ದಾಸ್ ಹಾಗೂ ಅಶೋತ್ ರಾಂಕಾಗೆ ದೆಹಲಿ ಅಪರಾಧ ವಿಭಾಗದಿಂದ ಸಮನ್ಸ್

ಬಿಜೆಪಿ ತಳಮಳ | ವಿರೋಧ ಪಕ್ಷದ ನಾಯಕನ ಆಯ್ಕೆ: ಬಿಎಸ್‌ವೈ ಮೊರೆ ಹೋದ ಶಾಸಕರು

P

Peepal Media Desk • ರಾಜಕೀಯ

• 1 ನಿಮಿಷದ ಓದು

ಬಿಜೆಪಿ ತಳಮಳ | ವಿರೋಧ ಪಕ್ಷದ ನಾಯಕನ ಆಯ್ಕೆ: ಬಿಎಸ್‌ವೈ ಮೊರೆ ಹೋದ ಶಾಸಕರು

ಬೆಂಗಳೂರು: ಹೊಸ ಸರ್ಕಾರ ರಚನೆಯಾಗಿ ಸುಮಾರು ಆರು ತಿಂಗಳು ಕಳೆದರೂ ಪ್ರತಿಪಕ್ಷ ಬಿಜೆಪಿ ತನ್ನ ಶಾಸಕಾಂಗ ಪಕ್ಷದ ನಾಯಕನ ಹೆಸರನ್ನು ಘೋಷಿಸುವ ಯಾವುದೇ ಲಕ್ಷಣಗಳು ಕಾಣುತ್ತಿಲ್ಲ. ಮುಂಬರುವ ಡಿಸೆಂಬರ್‌ ತಿಂಗಳಿನಲ್ಲಿ ನಡೆಯಲಿರುವ ಬೆಳಗಾವಿ ವಿಧಾನಸಭೆ ಅಧಿವೇಶನದಲ್ಲಿ ಪ್ರತಿಪಕ್ಷ ನಾಯಕರಿಲ್ಲದೆ ಕಾಂಗ್ರೆಸ್‌ ಪಕ್ಷವನ್ನು ಎದುರಿಸಬೇಕಾಗುತ್ತದೆ ಎಂಬ ಭಯದಲ್ಲಿರುವ ಪಕ್ಷದ ಶಾಸಕರಿಗೆ ಇದು ಮುಜುಗರವನ್ನುಂಟು ಮಾಡಿದೆ ಎಂದು ವರದಿಯಾಗಿದೆ. ವಿರೋಧ ಪಕ್ಷದ ನಾಯಕನನ್ನು ಆಯ್ಕೆ ಮಾಡುವಂತೆ ಹೈಕಮಾಂಡ್ ಮೇಲೆ ಒತ್ತಡ ಹೇರಬೇಕು ಎಂದು ಬಿಜೆಪಿ ಶಾಸಕರು ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರನ್ನು ಒತ್ತಾಯಿಸಿದ್ದಾರೆ. ಇದರೊಂದಿಗೆ ರಾಜ್ಯ ಬಿಜೆಪಿ ಪೂರ್ತಿಯಾಗಿ ಯಡಿಯೂರಪ್ಪ ನಿಯಂತ್ರಣಕ್ಕೆ ಬಂದಂತೆ ತೋರುತ್ತಿದೆ.

ಬಿಜೆಪಿ ಶಾಸಕರ ಗುಂಪಿನ ಒತ್ತಾಯದ ಮೇರೆಗೆ ಯಡಿಯೂರಪ್ಪ ಅವರು ಪಕ್ಷದ ಕೆಲವು ಮುಖಂಡರೊಂದಿಗೆ ಸಭೆ ನಡೆಸಿ ಪಕ್ಷದ ವಿವಿಧ ಕಾರ್ಯತಂತ್ರಗಳನ್ನು ಪರಿಶೀಲಿಸಿದರು. ನಂತರ ಪತ್ರಕರ್ತರೊಂದಿಗೆ ಮಾತನಾಡಿದ ಅವರು ರಾಜ್ಯ ಸರ್ಕಾರವನ್ನು ಟೀಕಿಸಿದರು.

ಸಭೆಯಲ್ಲಿ, ಬಿಜೆಪಿ ಶಾಸಕರು ಡಿಸೆಂಬರ್‌ನಲ್ಲಿ ಬೆಳಗಾವಿಯಲ್ಲಿ ನಡೆಯಲಿರುವ ಎರಡನೇ ವಿಧಾನಸಭೆ ಅಧಿವೇಶನಕ್ಕೆ ಮುನ್ನ ವಿರೋಧ ಪಕ್ಷದ ನಾಯಕನನ್ನು ನೇಮಿಸುವಂತೆ ಹೈಕಮಾಂಡ್ ಮೇಲೆ ಒತ್ತಡ ಹೇರುವಂತೆ ಯಡಿಯೂರಪ್ಪ ಅವರನ್ನು ಕೋರಿದರು ಎನ್ನಲಾಗಿದೆ. ವರದಿಗಳ ಪ್ರಕಾರ, ಉಭಯ ಸದನಗಳಲ್ಲಿ ವಿರೋಧ ಪಕ್ಷದ ನಾಯಕರ ಹೆಸರನ್ನು ಹೇಳದೆ ಕಾಂಗ್ರೆಸ್ ನಾಯಕರ ಮುಜುಗರ ಮತ್ತು ಲೇವಡಿಗಳನ್ನು ಎದುರಿಸಲು ಸಾಧ್ಯವಾಗುತ್ತಿಲ್ಲ ಎಂದು ಶಾಸಕರು ಯಡಿಯೂರಪ್ಪ ಅವರಿಗೆ ಹೇಳಿದ್ದಾರೆ.

ಈ ಕುರಿತು ಕೇಂದ್ರದ ನಾಯಕರೊಂದಿಗೆ ಮಾತನಾಡುವುದಾಗಿ ಯಡಿಯೂರಪ್ಪ ಶಾಸಕರಿಗೆ ಮಾತು ನೀಡಿರುವುದಾಗಿ ಹೇಳಲಾಗುತ್ತಿದೆಯಾದರೂ, ಹೈಕಮಾಂಡ್‌ ರಾಜ್ಯದ ಬಿಜೆಪಿ ನಾಯಕರಿಗೆ ಸೊಪ್ಪು ಹಾಕುವುದನ್ನೇ ನಿಲ್ಲಿಸಿದೆ ಎನ್ನಲಾಗುತ್ತಿದೆ. ರಾಜ್ಯದಲ್ಲಿನ ವಿಧಾನಸಭಾ ಚುನಾವಣೆಯಲ್ಲಿ ತೀವ್ರ ಮುಖಭಂಗ ಎದುರಿಸಿದ ಮೋದಿ ತಂಡವು ನಾಯಕರ ಮೇಲೆ ಭಯಂಕರ ಸಿಟ್ಟಿನಲ್ಲಿದೆ ಎನ್ನಲಾಗುತ್ತಿದೆ. ಇತ್ತೀಚಿಗಿನ ಜೆಡಿಎಸ್‌ ಮೈತ್ರಿ ಮಾತುಕತಗೂ ರಾಜ್ಯದ ನಾಯಕರನ್ನು ಬಿಟ್ಟು ಗೋವಾ ಮುಖ್ಯಮಂತ್ರಿಯನ್ನು ಅವಲಂಬಿಸಿತ್ತು. ಆದರೆ ಇದರಿಂದ ಬೇಸತ್ತಿರುವ ಬಿಜೆಪಿ ನಾಯಕರು ಯಾವುದೇ ಕ್ಷಣದಲ್ಲಿ ಸಿಡಿದೇಳುವ ಸಾಧ್ಯತೆಯಿದೆ ಎಂದು ಪಕ್ಷದ ಮೂಲಗಳು ಹೇಳಿವೆ.

ವಿರೋಧ ಪಕ್ಷದ ನಾಯಕನ ಸ್ಥಾನಕ್ಕೆ ಮಾಜಿ ಮುಖ್ಯಮಂತ್ರಿ ಬೊಮ್ಮಾಯಿಯವರ ಹೆಸರು ಮುಂಚೂಣಿಯಲ್ಲಿದೆ. ಆದರೆ ಅವರು ಪ್ರಸ್ತುತ ಶಸ್ತ್ರಚಿಕಿತ್ಸೆ ಮಾಡಿಸಿಕೊಂಡು ಮನೆಯಲ್ಲೇ ವಿಶ್ರಾಂತಿ ಪಡೆಯುತ್ತಿದ್ದಾರೆ.

ಉಳಿದಂತೆ ಸುನಿಲ್‌ ಕುಮಾರ್‌ ಮತ್ತು ಯತ್ನಾಳ್‌ ಹೆಸರುಗಳು ಕೇಳಿಬರುತ್ತಿದ್ದು ಇವೆರಡೂ ಆಯ್ಕೆಗಳನ್ನು ಯಡಿಯೂರಪ್ಪ ಒಪ್ಪುವ ಸಾಧ್ಯತೆಗಳು ಕಡಿಮೆ ಎನ್ನಲಾಗುತ್ತಿದೆ.

P

Peepal Media Desk

Peepal Media · ರಾಜಕೀಯ ವಿಭಾಗ

ಸಂಬಂಧಿತ ಸುದ್ದಿಗಳು

Exit mobile version