ಮುಖ್ಯ ವಿಷಯಕ್ಕೆ ತೆರಳಿ
Peepal Media
ತಾಜಾ ಸುದ್ದಿ
ಈಸಕ್ಕಿ ಆಸೆಯನ್ನೂ ಮೀರಿದ ಆಯ್ದಕ್ಕಿ ಲಕ್ಕಮ್ಮಗಾಜಾ ಸ್ಮಶಾನದ ಮೇಲೆ ಮತ್ತೆ ಅರಳುತ್ತಾ ನೆತನ್ಯಾಹು ಕುರ್ಚಿ?ಅರುಣಾಚಲದಲ್ಲಿ ಚೀನಾ ಸೈನಿಕರೊಂದಿಗೆ ಮುಖಾಮುಖಿ: ಕೇಂದ್ರದ ಮೌನವನ್ನು ಪ್ರಶ್ನಿಸಿದ ಕಾಂಗ್ರೆಸ್‌ನ ಜೈರಾಮ್ ರಮೇಶ್ಕಡತಗಳ ವಿಲೇವಾರಿ ಪ್ರಕ್ರಿಯೆ ಬದಲಾವಣೆ: ಚುನಾವಣಾ ಆಯುಕ್ತರಿಂದ ಕ್ಯಾಬಿನೆಟ್‌ ಕಾರ್ಯದರ್ಶಿಗೆ ಆಕ್ಷೇಪಣಾ ಪತ್ರಮೋದಿ–ಅದಾನಿ ಕುರಿತ ಸಾಕ್ಷ್ಯಚಿತ್ರ ಹಂಚಿಕೊಂಡ ರಾಜ್‌ ಠಾಕ್ರೆ; ತೆಗೆದುಹಾಕುವಂತೆ ಸೂಚನೆಗಳ ನಡುವೆ ಮುಂದುವರೆದ ಚರ್ಚೆಮಂಡ್ಯದಲ್ಲಿ ARAI ಪರೀಕ್ಷಾ ಕೇಂದ್ರಗಳಿಗೆ ಭೂಮಿ ಹಂಚಿಕೆ ವಿಳಂಬ: ರಾಜ್ಯ ಸರ್ಕಾರಕ್ಕೆ ಎಚ್‌.ಡಿ. ಕುಮಾರಸ್ವಾಮಿ ಪತ್ರರಾಷ್ಟ್ರೀಯತೆಯ ಪಾಠ ನನಗೆ ಬೇಕಿಲ್ಲ; ನಮ್ಮ ಗುರಿ ಆಡಳಿತ, ಸಾಮಾಜಿಕ ಜಾಲತಾಣದ ಪ್ರಚಾರವಲ್ಲ: ಕೆ. ಅಣ್ಣಾಮಲೈಕೇವಲ ಮದುವೆಗಾಗಿ ಧರ್ಮಾಂತರವಾಗುವುದನ್ನು ಒಪ್ಪಲು ಸಾಧ್ಯವಿಲ್ಲ: ಬಾಂಬೆ ಹೈಕೋರ್ಟ್‌ಇನ್ನು ನೋಂದಾಯಿತ ಸಿಮ್‌ ಇದ್ದರೆ ಮಾತ್ರ ವಾಟ್ಸ್‌ಆ್ಯಪ್‌ ಬಳಕೆ ಸಾಧ್ಯ: ಜನವರಿ 1, 2027ರಿಂದ ಹೊಸ ನಿಯಮ ಜಾರಿಈ-ಮುದ್ರ ಡಿಜಿಟಲ್‌ ಪ್ರಮಾಣಪತ್ರಗಳಲ್ಲಿ ಭದ್ರತಾ ಲೋಪ: ಜಾಗತಿಕ ತಂತ್ರಜ್ಞಾನ ವಲಯದಲ್ಲಿ ಆತಂಕಹಾಸನ ಕಾಳಸಂತೆಗೆ ಪಡಿತರ ಅಕ್ಕಿ ಮಾರಾಟ ಯತ್ನ – ಕ್ವಿಂಟಲ್‌ ಗಟ್ಟಲೆ ಅಕ್ಕಿ, ರಾಗಿ ವಶಸದ್ಯದಲ್ಲೆ ಕಬ್ಬು ಬೆಳೆಗಾರರ ಸಭೆ ಕರೆದಿದ್ದೇನೆ – ಸಿಎಂ ಡಿ.ಕೆ ಶಿವಕುಮಾರ್ರಾಜ್ಯದಲ್ಲಿ ಐದು ದಿನಗಳಲ್ಲಿ ಮಳೆ ಸಾಧ್ಯತೆ – ಹವಾಮಾನ ಇಲಾಖೆ ಮುನ್ಸೂಚನೆಸಿದ್ದರಾಮಯ್ಯ ಅವರನ್ನು ಅಧಿಕಾರದಿಂದ ಇಳಿಸಲು ವ್ಯವಸ್ಥಿತ ಸಂಚು ರೂಪಿಸಿ ಯಶಸ್ವಿಗೊಂಡಿದ್ದಾರೆ – ಸಿಎಂ ಯಡಿಯೂರಪ್ಪಚುನಾವಣಾ ಆಯುಕ್ತರಿಗೆ ರಕ್ಷಣೆ ನೀಡುವ ಕಾನೂನು ರದ್ದುಗೊಳಿಸಿ – ಮಲ್ಲಿಕಾರ್ಜುನ ಖರ್ಗೆ ಆಗ್ರಹದಸರಾ ವೇಳೆ ಪೊಲೀಸರ ಲಾಠಿ ಏಟಿಗೆ 4 ವರ್ಷದ ಬಾಲಕ ಗಂಭೀರ – ICUನಲ್ಲಿ ಅಂತಿಮ ಹೋರಾಟಸೌದಿ ವಿಮಾನ ನಿಲ್ದಾಣದ ಮೇಲೆ ಭೀಕರ ದಾಳಿ – 8 ಮಂದಿಗೆ ಗಾಯ, ಇಬ್ಬರ ಅಂತ್ಯನಂದಿಧ್ವಜ ಪೂಜೆಗೆ ಸಚಿವರಿಗೆ ಅವಕಾಶ ನಿರಾಕರಿಸಿದ ಅಧಿಕಾರಿಗಳ ವಿರುದ್ಧ ತನಿಖೆಗೆ ಆದೇಶ: ಮುಖ್ಯಮಂತ್ರಿ ಡಿ ಕೆ ಶಿವಕುಮಾರ್‌300 ವರ್ಷಗಳಷ್ಟು ಹಳೆಯ ಐತಿಹಾಸಿಕ ರೇಸ್‌ಕೋರ್ಸ್ ಮಸೀದಿಯ ವಿದ್ಯುತ್ ಹಾಗೂ ನೀರು ಸಂಪರ್ಕ ಕಡಿತ: ತುರ್ತು ರಕ್ಷಣೆ ಕೋರಿದ ದೆಹಲಿ ವಕ್ಫ್ ಮಂಡಳಿತಿಹಾರ್ ಜೈಲಿನಿಂದ ಬಿಡುಗಡೆಯಾದ ಬೆನ್ನಲ್ಲೇ ಸೌರವ್ ದಾಸ್ ಹಾಗೂ ಅಶೋತ್ ರಾಂಕಾಗೆ ದೆಹಲಿ ಅಪರಾಧ ವಿಭಾಗದಿಂದ ಸಮನ್ಸ್

ಬಿಜೆಪಿಗರೇ ಪ್ರತಿಮೆ ರಾಜಕೀಯ ಬಿಡಿ, ಪ್ರಗತಿ ಎಲ್ಲಿದೆ ತೋರಿಸಿ?: ಡಿಕೆಶಿ

PPeepal Media Desk

Peepal Media Desk ರಾಜಕೀಯ

• 1 ನಿಮಿಷದ ಓದು

ಬಿಜೆಪಿಗರೇ ಪ್ರತಿಮೆ ರಾಜಕೀಯ ಬಿಡಿ, ಪ್ರಗತಿ ಎಲ್ಲಿದೆ ತೋರಿಸಿ?: ಡಿಕೆಶಿ

ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿಯವರು ನಾಡಪ್ರಭು ಕೆಂಪೇಗೌಡರ ಪ್ರತಿಮೆಯನ್ನು ಅನಾವರಣಗೊಳಿಸಲು ಶುಕ್ರವಾರದಂದು ಬೆಂಗಳೂರಿಗೆ ಬಂದಿದ್ದು, ಈ ಹಿನ್ನೆಲೆಯಲ್ಲಿ ಟ್ವೀಟ್‌ ಮಾಡಿರುವ ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್‌ ‌ಬಿಜೆಪಿಗರೇ ಪ್ರತಿಮೆ ರಾಜಕೀಯ ಬಿಡಿ. ಪ್ರಗತಿ ಎಲ್ಲಿದೆ ತೋರಿಸಿ? ಎಂದು ಬಿಜೆಪಿ ವಿರುದ್ದ ಕಿಡಿಕಾರಿದ್ದಾರೆ.

ನವೆಂಬರ್‌ 11 ರಂದು ಪ್ರಧಾನಿ ನರೇಂದ್ರ ಮೋದಿ ಬೆಂಗಳೂರಿಗೆ ಭೇಟಿ ನೀಡಿದ್ದು, ಕೆಎಸ್‌ಆರ್‌ ರೈಲು ನಿಲ್ಧಾಣದಲ್ಲಿ ಭಾರತ್‌ ಎಕ್ಸ್‌ಪ್ರೆಸ್‌ ಮತ್ತು ಭಾರತ್‌ ಗೌರವ್‌ ಕಾಶಿ ದರ್ಶನ್‌ ರೈಲಿಗೆ ನೀಡಿದ್ದಲ್ಲದೆ, ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದ ಟರ್ಮಿನಲ್‌-2 ಉದ್ಘಾಟಿಸಿ, ನಾಡಪ್ರಭು ಕೆಂಪೇಗೌಡರ 108 ಮೀ ಎತ್ತರದ ಕಂಚಿನ ಪ್ರತಿಮೆಯನ್ನು ಲೋಕಾರ್ಪಣೆಗೊಳಿಸಿ  ಹೋಗಿದ್ದಾರೆ. ಈ ಕುರಿತು ಬಿಜೆಪಿ ಸರ್ಕಾರದ ವಿರುದ್ಧ ಡಿಕೆಶಿ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಪ್ರಧಾನಿ ಬೆಂಗಳೂರಿಗೆ ಬಂದಿರುವುದರ ಬಗ್ಗೆ ಟ್ವೀಟ್‌ ಮಾಡಿರುವ ಡಿಕೆಶಿ, ʼಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರೇ ಪ್ರಧಾನಿ ನರೇಂದ್ರ ಮೋದಿಯವರಿಂದ ಕೆಂಪೇಗೌಡರ ಪ್ರತಿಮೆ ಅನಾವರಣ, ಸಂತ ಕನಕದಾಸರು, ವಾಲ್ಮೀಕಿ ಮಹರ್ಷಿಗಳ ಪ್ರತಿಮೆಗಳಿಗೆ ಮಾಲೆ ಹಾಕಿಸಿದ್ದರಿಂದ ಈ ಮಹನೀಯರ ಸಮುದಾಯದವರ ಹೊಟ್ಟೆ ತುಂಬುವುದಿಲ್ಲ, ಅವರ ಸಮಸ್ಯೆ ಬಗೆಹರಿಯುವುದಿಲ್ಲ, ಕಣ್ಣೀರು ಕೊನೆಯಾಗುವುದಿಲ್ಲ ಹೇಳಿದ್ದಾರೆ.

ಚುನಾವಣೆ ಸಮಯದಲ್ಲಿ ಟ್ರಬಲ್ ಇಂಜಿನ್‌ ಬಿಜೆಪಿ ಸರ್ಕಾರ ತನ್ನ ಭ್ರಷ್ಟಾಚಾರ, ಹಗರಣ, ಕರ್ತವ್ಯಲೋಪಗಳನ್ನು ಮುಚ್ಚಿಕೊಳ್ಳಲು ಮಹನೀಯರ ಪ್ರತಿಮೆಯ ವಿಚಾರ ಮುಂದಿಟ್ಟುಕೊಂಡು ರಾಜಕೀಯ ಮಾಡುತ್ತಿದೆ. ಆದರೆ ಬಿಜೆಪಿಯ ಭ್ರಷ್ಟಾಚಾರ ಸಾಧನೆ ಹಾಗೂ ಅಸಲಿಯತ್ತು ಈಗಾಗಲೇ ರಾಜ್ಯದ ಜನರ ಮುಂದೆ ಬಯಲಾಗಿದೆ ಎಂದು ಆಕ್ರೋಶ ವ್ಯಕ್ತ ಪಡಿಸಿದ್ದಾರೆ.

ಪ್ರಧಾನಿ ನರೇಂದ್ರ ಮೋದಿ ಅವರು ಹೇಳಿದಂತೆ ರೈತರ ಆದಾಯ ಡಬಲ್ ಆಗಲಿಲ್ಲ. ಬದಲಿಗೆ ವೆಚ್ಚ ತ್ರಿಬಲ್ ಆಗಿದೆ. ಕೋವಿಡ್ ಸಂತ್ರಸ್ತರಿಗೆ ನೀಡಿದ ಪರಿಹಾರದ ಭರವಸೆ ಇನ್ನೂ ಈಡೇರಿಲ್ಲ. ಅಚ್ಚೇ ದಿನ್‌ಗಾಗಿ ಎದುರು ನೋಡುತ್ತಿದ್ದ ಬಡವರ ಕಷ್ಟ ಇನ್ನೂ ನೀಗಿಲ್ಲ. ಬಿಜೆಪಿಗರೇ ಪ್ರತಿಮೆ ರಾಜಕೀಯ ಬಿಡಿ. ಪ್ರಗತಿ ಎಲ್ಲಿದೆ ತೋರಿಸಿ? ಎಂದು ಬಿಜೆಪಿಗೆ ಪ್ರಶ್ನೆ ಮಾಡಿದ್ದಾರೆ.

PPeepal Media Desk

Peepal Media Desk

Peepal Media · ರಾಜಕೀಯ ವಿಭಾಗ

ಸಂಬಂಧಿತ ಸುದ್ದಿಗಳು