ಮುಖ್ಯ ವಿಷಯಕ್ಕೆ ತೆರಳಿ
Peepal Media
ತಾಜಾ ಸುದ್ದಿ
●ಈಸಕ್ಕಿ ಆಸೆಯನ್ನೂ ಮೀರಿದ ಆಯ್ದಕ್ಕಿ ಲಕ್ಕಮ್ಮ●ಗಾಜಾ ಸ್ಮಶಾನದ ಮೇಲೆ ಮತ್ತೆ ಅರಳುತ್ತಾ ನೆತನ್ಯಾಹು ಕುರ್ಚಿ?●ಅರುಣಾಚಲದಲ್ಲಿ ಚೀನಾ ಸೈನಿಕರೊಂದಿಗೆ ಮುಖಾಮುಖಿ: ಕೇಂದ್ರದ ಮೌನವನ್ನು ಪ್ರಶ್ನಿಸಿದ ಕಾಂಗ್ರೆಸ್‌ನ ಜೈರಾಮ್ ರಮೇಶ್●ಕಡತಗಳ ವಿಲೇವಾರಿ ಪ್ರಕ್ರಿಯೆ ಬದಲಾವಣೆ: ಚುನಾವಣಾ ಆಯುಕ್ತರಿಂದ ಕ್ಯಾಬಿನೆಟ್‌ ಕಾರ್ಯದರ್ಶಿಗೆ ಆಕ್ಷೇಪಣಾ ಪತ್ರ●ಮೋದಿ–ಅದಾನಿ ಕುರಿತ ಸಾಕ್ಷ್ಯಚಿತ್ರ ಹಂಚಿಕೊಂಡ ರಾಜ್‌ ಠಾಕ್ರೆ; ತೆಗೆದುಹಾಕುವಂತೆ ಸೂಚನೆಗಳ ನಡುವೆ ಮುಂದುವರೆದ ಚರ್ಚೆ●ಮಂಡ್ಯದಲ್ಲಿ ARAI ಪರೀಕ್ಷಾ ಕೇಂದ್ರಗಳಿಗೆ ಭೂಮಿ ಹಂಚಿಕೆ ವಿಳಂಬ: ರಾಜ್ಯ ಸರ್ಕಾರಕ್ಕೆ ಎಚ್‌.ಡಿ. ಕುಮಾರಸ್ವಾಮಿ ಪತ್ರ●ರಾಷ್ಟ್ರೀಯತೆಯ ಪಾಠ ನನಗೆ ಬೇಕಿಲ್ಲ; ನಮ್ಮ ಗುರಿ ಆಡಳಿತ, ಸಾಮಾಜಿಕ ಜಾಲತಾಣದ ಪ್ರಚಾರವಲ್ಲ: ಕೆ. ಅಣ್ಣಾಮಲೈ●ಕೇವಲ ಮದುವೆಗಾಗಿ ಧರ್ಮಾಂತರವಾಗುವುದನ್ನು ಒಪ್ಪಲು ಸಾಧ್ಯವಿಲ್ಲ: ಬಾಂಬೆ ಹೈಕೋರ್ಟ್‌●ಇನ್ನು ನೋಂದಾಯಿತ ಸಿಮ್‌ ಇದ್ದರೆ ಮಾತ್ರ ವಾಟ್ಸ್‌ಆ್ಯಪ್‌ ಬಳಕೆ ಸಾಧ್ಯ: ಜನವರಿ 1, 2027ರಿಂದ ಹೊಸ ನಿಯಮ ಜಾರಿ●ಈ-ಮುದ್ರ ಡಿಜಿಟಲ್‌ ಪ್ರಮಾಣಪತ್ರಗಳಲ್ಲಿ ಭದ್ರತಾ ಲೋಪ: ಜಾಗತಿಕ ತಂತ್ರಜ್ಞಾನ ವಲಯದಲ್ಲಿ ಆತಂಕ●ಹಾಸನ ಕಾಳಸಂತೆಗೆ ಪಡಿತರ ಅಕ್ಕಿ ಮಾರಾಟ ಯತ್ನ – ಕ್ವಿಂಟಲ್‌ ಗಟ್ಟಲೆ ಅಕ್ಕಿ, ರಾಗಿ ವಶ●ಸದ್ಯದಲ್ಲೆ ಕಬ್ಬು ಬೆಳೆಗಾರರ ಸಭೆ ಕರೆದಿದ್ದೇನೆ – ಸಿಎಂ ಡಿ.ಕೆ ಶಿವಕುಮಾರ್●ರಾಜ್ಯದಲ್ಲಿ ಐದು ದಿನಗಳಲ್ಲಿ ಮಳೆ ಸಾಧ್ಯತೆ – ಹವಾಮಾನ ಇಲಾಖೆ ಮುನ್ಸೂಚನೆ●ಸಿದ್ದರಾಮಯ್ಯ ಅವರನ್ನು ಅಧಿಕಾರದಿಂದ ಇಳಿಸಲು ವ್ಯವಸ್ಥಿತ ಸಂಚು ರೂಪಿಸಿ ಯಶಸ್ವಿಗೊಂಡಿದ್ದಾರೆ – ಸಿಎಂ ಯಡಿಯೂರಪ್ಪ●ಚುನಾವಣಾ ಆಯುಕ್ತರಿಗೆ ರಕ್ಷಣೆ ನೀಡುವ ಕಾನೂನು ರದ್ದುಗೊಳಿಸಿ – ಮಲ್ಲಿಕಾರ್ಜುನ ಖರ್ಗೆ ಆಗ್ರಹ●ದಸರಾ ವೇಳೆ ಪೊಲೀಸರ ಲಾಠಿ ಏಟಿಗೆ 4 ವರ್ಷದ ಬಾಲಕ ಗಂಭೀರ – ICUನಲ್ಲಿ ಅಂತಿಮ ಹೋರಾಟ●ಸೌದಿ ವಿಮಾನ ನಿಲ್ದಾಣದ ಮೇಲೆ ಭೀಕರ ದಾಳಿ – 8 ಮಂದಿಗೆ ಗಾಯ, ಇಬ್ಬರ ಅಂತ್ಯ●ನಂದಿಧ್ವಜ ಪೂಜೆಗೆ ಸಚಿವರಿಗೆ ಅವಕಾಶ ನಿರಾಕರಿಸಿದ ಅಧಿಕಾರಿಗಳ ವಿರುದ್ಧ ತನಿಖೆಗೆ ಆದೇಶ: ಮುಖ್ಯಮಂತ್ರಿ ಡಿ ಕೆ ಶಿವಕುಮಾರ್‌●300 ವರ್ಷಗಳಷ್ಟು ಹಳೆಯ ಐತಿಹಾಸಿಕ ರೇಸ್‌ಕೋರ್ಸ್ ಮಸೀದಿಯ ವಿದ್ಯುತ್ ಹಾಗೂ ನೀರು ಸಂಪರ್ಕ ಕಡಿತ: ತುರ್ತು ರಕ್ಷಣೆ ಕೋರಿದ ದೆಹಲಿ ವಕ್ಫ್ ಮಂಡಳಿ●ತಿಹಾರ್ ಜೈಲಿನಿಂದ ಬಿಡುಗಡೆಯಾದ ಬೆನ್ನಲ್ಲೇ ಸೌರವ್ ದಾಸ್ ಹಾಗೂ ಅಶೋತ್ ರಾಂಕಾಗೆ ದೆಹಲಿ ಅಪರಾಧ ವಿಭಾಗದಿಂದ ಸಮನ್ಸ್

‘ಬಿರಿಯಾನಿ ತಿನ್ನಲು ಹುಟ್ಟಿದವರು ಪ್ರಾಣಿಗಳು’; ರಕಿಬುಲ್ ಹುಸೇನ್ ವಿರುದ್ಧ ಹಿಮಂತ ಬಿಸ್ವ ಶರ್ಮಾ ವಾಗ್ದಾಳಿ

P

Peepal Media Desk • ದೇಶ, ರಾಜಕೀಯ

• 1 ನಿಮಿಷದ ಓದು

‘ಬಿರಿಯಾನಿ ತಿನ್ನಲು ಹುಟ್ಟಿದವರು ಪ್ರಾಣಿಗಳು’; ರಕಿಬುಲ್ ಹುಸೇನ್ ವಿರುದ್ಧ ಹಿಮಂತ ಬಿಸ್ವ ಶರ್ಮಾ ವಾಗ್ದಾಳಿ

ನೌಗಾಂವ್: ಅಕ್ಟೋಬರ್ 6ರಂದು ನಡೆಯಲಿರುವ ನೌಗಾಂವ್ ಲೋಕಸಭಾ ಕ್ಷೇತ್ರದ ಉಪಚುನಾವಣೆಯ ಪ್ರಚಾರ ಕಣ ದಿನದಿಂದ ದಿನಕ್ಕೆ ಕಾವೇರುತ್ತಿದ್ದು, ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವ ಶರ್ಮಾ ಹಾಗೂ ಕಾಂಗ್ರೆಸ್ ಸಂಸದ ರಕಿಬುಲ್ ಹುಸೇನ್ ನಡುವಿನ ವಾಕ್ಸಮರ ಮತ್ತಷ್ಟು ತೀವ್ರಗೊಂಡಿದೆ.

ನೌಗಾಂವ್ ಕ್ಷೇತ್ರದ ಜುರಿಯಾದಲ್ಲಿ ಬಿಜೆಪಿ ಅಭ್ಯರ್ಥಿ ದೇವಾಶಿಶ್ ಶರ್ಮಾ ಪರ ನಡೆದ ಚುನಾವಣಾ ರ‍್ಯಾಲಿಯಲ್ಲಿ ಮಾತನಾಡಿದ ಹಿಮಂತ ಬಿಸ್ವ ಶರ್ಮಾ, ರಕಿಬುಲ್ ಹುಸೇನ್ ಅವರ ‘ಬಿರಿಯಾನಿ’ ಹೇಳಿಕೆಗೆ ತೀಕ್ಷ್ಣವಾಗಿ ಪ್ರತಿಕ್ರಿಯಿಸಿದ್ದಾರೆ. “ತಾಯಿಯ ಹಾಲು ಕುಡಿಯಲು ಹುಟ್ಟಿದವರು ಮನುಷ್ಯರು, ಬಿರಿಯಾನಿ ತಿನ್ನಲು ಹುಟ್ಟಿದವರು ಪ್ರಾಣಿಗಳು” ಎಂದು ಹೇಳುವ ಮೂಲಕ ಕಾಂಗ್ರೆಸ್ ನಾಯಕರ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

ಈ ಹೇಳಿಕೆಗೂ ಮುನ್ನವೇ ಇಬ್ಬರು ನಾಯಕರ ನಡುವೆ ‘ಬಕಾಸುರ’ ಮತ್ತು ‘ಬಿರಿಯಾನಿ’ ವಿಚಾರವಾಗಿ ಮಾತಿನ ಸಮರ ನಡೆಯುತ್ತಿತ್ತು. ಹಿಮಂತ ಬಿಸ್ವ ಶರ್ಮಾ ಅವರು ರಕಿಬುಲ್ ಹುಸೇನ್ ಅವರನ್ನು ‘ಬಕಾಸುರ’ನಿಗೆ ಹೋಲಿಸಿ, ಸರ್ಕಾರಿ ಯೋಜನೆಗಳ ಹಣವನ್ನು ದುರುಪಯೋಗಪಡಿಸಿಕೊಂಡಿದ್ದಾರೆ ಎಂದು ಆರೋಪಿಸಿದ್ದರು. ಇದಕ್ಕೆ ಪ್ರತಿಕ್ರಿಯಿಸಿದ್ದ ಹುಸೇನ್, ದೇವರು ತಮ್ಮನ್ನು ಜಗತ್ತಿಗೆ ಬಿರಿಯಾನಿ ಸವಿಯಲೆಂದೇ ಕಳುಹಿಸಿದ್ದಾನೆ ಎಂಬ ವ್ಯಂಗ್ಯಾತ್ಮಕ ಹೇಳಿಕೆ ನೀಡಿದ್ದರು. ಇದೀಗ ಅದಕ್ಕೆ ಮುಖ್ಯಮಂತ್ರಿ ಮತ್ತಷ್ಟು ಕಟುವಾಗಿ ಪ್ರತಿಕ್ರಿಯಿಸಿದ್ದಾರೆ.

ನುರುಲ್ ಹುಡಾ ವಿರುದ್ಧವೂ ಆರೋಪ
ಜುರಿಯಾ ರ‍್ಯಾಲಿಯಲ್ಲಿ ರೂಪೋಹಿಹಾಟ್ ಕ್ಷೇತ್ರದ ಕಾಂಗ್ರೆಸ್ ಶಾಸಕ ನುರುಲ್ ಹುಡಾ ಅವರ ಕಾರ್ಯವೈಖರಿಯನ್ನೂ ಮುಖ್ಯಮಂತ್ರಿ ಶರ್ಮಾ ಪ್ರಶ್ನಿಸಿದ್ದಾರೆ.

ಶಾಲೆ, ಕಾಲೇಜು, ರಸ್ತೆ ಸೇರಿದಂತೆ ಕ್ಷೇತ್ರದ ಅಭಿವೃದ್ಧಿ ಹಾಗೂ ಮಹಿಳೆಯರಿಗೆ ಸರ್ಕಾರಿ ಯೋಜನೆಗಳ ಪ್ರಯೋಜನ ತಲುಪಿಸುವಲ್ಲಿ ಶಾಸಕ ಹುಡಾ ವಿಫಲರಾಗಿದ್ದಾರೆ ಎಂದು ಅವರು ಆರೋಪಿಸಿದ್ದಾರೆ. ಪ್ರತಿಯೊಂದು ಮನೆಗೂ ನೀರಿನ ನಲ್ಲಿ ಒದಗಿಸುವ ಭರವಸೆ ನೀಡಲಾಗಿದ್ದರೂ ನೀರು ಮಾತ್ರ ಬಂದಿಲ್ಲ; ಸ್ಥಳೀಯರಿಗೆ ಉಳಿದಿರುವುದು ಪೈಪ್‌ಗಳು ಮತ್ತು ಭರವಸೆಗಳು ಮಾತ್ರ ಎಂದು ಶರ್ಮಾ ಲೇವಡಿ ಮಾಡಿದ್ದಾರೆ.

ಕಾಂಗ್ರೆಸ್-ಎಐಯುಡಿಎಫ್ ವಿರುದ್ಧವೂ ಟೀಕೆ
ನೌಗಾಂವ್ ಕ್ಷೇತ್ರದಲ್ಲಿ ಬಿಜೆಪಿ ಪರ ವಾತಾವರಣ ನಿರ್ಮಾಣವಾಗುತ್ತಿದೆ ಎಂದು ಪ್ರತಿಪಾದಿಸಿದ ಮುಖ್ಯಮಂತ್ರಿ, ಹಿಂದೆ ಕಾಂಗ್ರೆಸ್‌ಗೆ ಮತ ಹಾಕುತ್ತಿದ್ದವರಲ್ಲಿ ಕೆಲವರು ಇದೀಗ ಬಿಜೆಪಿಯ ಆಡಳಿತವನ್ನು ಬೆಂಬಲಿಸುತ್ತಿದ್ದಾರೆ ಎಂದು ಹೇಳಿದ್ದಾರೆ.

ಇದೇ ವೇಳೆ ಎಐಯುಡಿಎಫ್ ಮುಖ್ಯಸ್ಥ ಬದ್ರುದ್ದೀನ್ ಅಜ್ಮಲ್ ಅವರಿಗೆ ಸಕ್ರಿಯ ರಾಜಕಾರಣದಿಂದ ಹಿಂದೆ ಸರಿಯುವಂತೆ ಸಲಹೆ ನೀಡಿದ ಅವರು, ಕಾಂಗ್ರೆಸ್ ಮತ್ತು ಎಐಯುಡಿಎಫ್ ಬಿಜೆಪಿಯನ್ನು ಎದುರಿಸಲು ನೇರವಾಗಿ ಅಥವಾ ಪರೋಕ್ಷವಾಗಿ ಒಂದಾಗಿವೆ ಎಂದು ಆರೋಪಿಸಿದ್ದಾರೆ.

ನೌಗಾಂವ್ ಲೋಕಸಭಾ ಕ್ಷೇತ್ರದ ಉಪಚುನಾವಣೆಗೆ ಅಕ್ಟೋಬರ್ 6ರಂದು ಮತದಾನ ನಡೆಯಲಿದ್ದು, ಅಕ್ಟೋಬರ್ 9ರಂದು ಮತ ಎಣಿಕೆ ನಡೆಯಲಿದೆ. ಮಾಜಿ ಕಾಂಗ್ರೆಸ್ ಸಂಸದ ಪ್ರದ್ಯುತ್ ಬೊರ್ಡೊಲೊಯಿ ಬಿಜೆಪಿ ಸೇರ್ಪಡೆಗೊಂಡು ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧಿಸಿದ ಹಿನ್ನೆಲೆಯಲ್ಲಿ ನೌಗಾಂವ್ ಲೋಕಸಭಾ ಸ್ಥಾನ ತೆರವಾಗಿತ್ತು.

P

Peepal Media Desk

Peepal Media · ದೇಶ ವಿಭಾಗ

ಸಂಬಂಧಿತ ಸುದ್ದಿಗಳು

Exit mobile version