ಮುಖ್ಯ ವಿಷಯಕ್ಕೆ ತೆರಳಿ
Peepal Media
ತಾಜಾ ಸುದ್ದಿ
●ಈಸಕ್ಕಿ ಆಸೆಯನ್ನೂ ಮೀರಿದ ಆಯ್ದಕ್ಕಿ ಲಕ್ಕಮ್ಮ●ಗಾಜಾ ಸ್ಮಶಾನದ ಮೇಲೆ ಮತ್ತೆ ಅರಳುತ್ತಾ ನೆತನ್ಯಾಹು ಕುರ್ಚಿ?●ಅರುಣಾಚಲದಲ್ಲಿ ಚೀನಾ ಸೈನಿಕರೊಂದಿಗೆ ಮುಖಾಮುಖಿ: ಕೇಂದ್ರದ ಮೌನವನ್ನು ಪ್ರಶ್ನಿಸಿದ ಕಾಂಗ್ರೆಸ್‌ನ ಜೈರಾಮ್ ರಮೇಶ್●ಕಡತಗಳ ವಿಲೇವಾರಿ ಪ್ರಕ್ರಿಯೆ ಬದಲಾವಣೆ: ಚುನಾವಣಾ ಆಯುಕ್ತರಿಂದ ಕ್ಯಾಬಿನೆಟ್‌ ಕಾರ್ಯದರ್ಶಿಗೆ ಆಕ್ಷೇಪಣಾ ಪತ್ರ●ಮೋದಿ–ಅದಾನಿ ಕುರಿತ ಸಾಕ್ಷ್ಯಚಿತ್ರ ಹಂಚಿಕೊಂಡ ರಾಜ್‌ ಠಾಕ್ರೆ; ತೆಗೆದುಹಾಕುವಂತೆ ಸೂಚನೆಗಳ ನಡುವೆ ಮುಂದುವರೆದ ಚರ್ಚೆ●ಮಂಡ್ಯದಲ್ಲಿ ARAI ಪರೀಕ್ಷಾ ಕೇಂದ್ರಗಳಿಗೆ ಭೂಮಿ ಹಂಚಿಕೆ ವಿಳಂಬ: ರಾಜ್ಯ ಸರ್ಕಾರಕ್ಕೆ ಎಚ್‌.ಡಿ. ಕುಮಾರಸ್ವಾಮಿ ಪತ್ರ●ರಾಷ್ಟ್ರೀಯತೆಯ ಪಾಠ ನನಗೆ ಬೇಕಿಲ್ಲ; ನಮ್ಮ ಗುರಿ ಆಡಳಿತ, ಸಾಮಾಜಿಕ ಜಾಲತಾಣದ ಪ್ರಚಾರವಲ್ಲ: ಕೆ. ಅಣ್ಣಾಮಲೈ●ಕೇವಲ ಮದುವೆಗಾಗಿ ಧರ್ಮಾಂತರವಾಗುವುದನ್ನು ಒಪ್ಪಲು ಸಾಧ್ಯವಿಲ್ಲ: ಬಾಂಬೆ ಹೈಕೋರ್ಟ್‌●ಇನ್ನು ನೋಂದಾಯಿತ ಸಿಮ್‌ ಇದ್ದರೆ ಮಾತ್ರ ವಾಟ್ಸ್‌ಆ್ಯಪ್‌ ಬಳಕೆ ಸಾಧ್ಯ: ಜನವರಿ 1, 2027ರಿಂದ ಹೊಸ ನಿಯಮ ಜಾರಿ●ಈ-ಮುದ್ರ ಡಿಜಿಟಲ್‌ ಪ್ರಮಾಣಪತ್ರಗಳಲ್ಲಿ ಭದ್ರತಾ ಲೋಪ: ಜಾಗತಿಕ ತಂತ್ರಜ್ಞಾನ ವಲಯದಲ್ಲಿ ಆತಂಕ●ಹಾಸನ ಕಾಳಸಂತೆಗೆ ಪಡಿತರ ಅಕ್ಕಿ ಮಾರಾಟ ಯತ್ನ – ಕ್ವಿಂಟಲ್‌ ಗಟ್ಟಲೆ ಅಕ್ಕಿ, ರಾಗಿ ವಶ●ಸದ್ಯದಲ್ಲೆ ಕಬ್ಬು ಬೆಳೆಗಾರರ ಸಭೆ ಕರೆದಿದ್ದೇನೆ – ಸಿಎಂ ಡಿ.ಕೆ ಶಿವಕುಮಾರ್●ರಾಜ್ಯದಲ್ಲಿ ಐದು ದಿನಗಳಲ್ಲಿ ಮಳೆ ಸಾಧ್ಯತೆ – ಹವಾಮಾನ ಇಲಾಖೆ ಮುನ್ಸೂಚನೆ●ಸಿದ್ದರಾಮಯ್ಯ ಅವರನ್ನು ಅಧಿಕಾರದಿಂದ ಇಳಿಸಲು ವ್ಯವಸ್ಥಿತ ಸಂಚು ರೂಪಿಸಿ ಯಶಸ್ವಿಗೊಂಡಿದ್ದಾರೆ – ಸಿಎಂ ಯಡಿಯೂರಪ್ಪ●ಚುನಾವಣಾ ಆಯುಕ್ತರಿಗೆ ರಕ್ಷಣೆ ನೀಡುವ ಕಾನೂನು ರದ್ದುಗೊಳಿಸಿ – ಮಲ್ಲಿಕಾರ್ಜುನ ಖರ್ಗೆ ಆಗ್ರಹ●ದಸರಾ ವೇಳೆ ಪೊಲೀಸರ ಲಾಠಿ ಏಟಿಗೆ 4 ವರ್ಷದ ಬಾಲಕ ಗಂಭೀರ – ICUನಲ್ಲಿ ಅಂತಿಮ ಹೋರಾಟ●ಸೌದಿ ವಿಮಾನ ನಿಲ್ದಾಣದ ಮೇಲೆ ಭೀಕರ ದಾಳಿ – 8 ಮಂದಿಗೆ ಗಾಯ, ಇಬ್ಬರ ಅಂತ್ಯ●ನಂದಿಧ್ವಜ ಪೂಜೆಗೆ ಸಚಿವರಿಗೆ ಅವಕಾಶ ನಿರಾಕರಿಸಿದ ಅಧಿಕಾರಿಗಳ ವಿರುದ್ಧ ತನಿಖೆಗೆ ಆದೇಶ: ಮುಖ್ಯಮಂತ್ರಿ ಡಿ ಕೆ ಶಿವಕುಮಾರ್‌●300 ವರ್ಷಗಳಷ್ಟು ಹಳೆಯ ಐತಿಹಾಸಿಕ ರೇಸ್‌ಕೋರ್ಸ್ ಮಸೀದಿಯ ವಿದ್ಯುತ್ ಹಾಗೂ ನೀರು ಸಂಪರ್ಕ ಕಡಿತ: ತುರ್ತು ರಕ್ಷಣೆ ಕೋರಿದ ದೆಹಲಿ ವಕ್ಫ್ ಮಂಡಳಿ●ತಿಹಾರ್ ಜೈಲಿನಿಂದ ಬಿಡುಗಡೆಯಾದ ಬೆನ್ನಲ್ಲೇ ಸೌರವ್ ದಾಸ್ ಹಾಗೂ ಅಶೋತ್ ರಾಂಕಾಗೆ ದೆಹಲಿ ಅಪರಾಧ ವಿಭಾಗದಿಂದ ಸಮನ್ಸ್

ಭ್ರಷ್ಟ ಆಡಳಿತದ ಕುರಿತು ಡಿ.ಕೆ ಶಿವಕುಮಾರ್ ವ್ಯಂಗ್ಯ

PPeepal Media Desk

Peepal Media Desk • ರಾಜಕೀಯ, ರಾಜ್ಯ

• 1 ನಿಮಿಷದ ಓದು

ಭ್ರಷ್ಟ ಆಡಳಿತದ ಕುರಿತು ಡಿ.ಕೆ ಶಿವಕುಮಾರ್ ವ್ಯಂಗ್ಯ

ಬೆಂಗಳೂರು: ಭ್ರಷ್ಟ ಆಡಳಿತದ ಕುರಿತು ಪ್ರಧಾನಿ ನರೇಂದ್ರ ಮೋದಿಯವರಿಗೆ ದಯಾಮರಣಕ್ಕೆ ಕೋರಿ ಅರ್ಜಿ ಸಲ್ಲಿಸಿರುವ ಕುರಿತು ಮಾಧ್ಯಮಗಳೊಂದಿಗೆ ಮಾತನಾಡಿದ ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್‌ ವ್ಯಂಗ್ಯವಾಡಿದ್ದಾರೆ.

ಈ ಕುರಿತು ಶುಕ್ರವಾರವಾರದಂದು ಮಾಧ್ಯಮಳೊಂದಿಗೆ ಮಾತನಾಡಿದ ಡಿಕೆಶಿ, ʼಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ವಿರೋಧ ಪಕ್ಷದವರು ಬರೆದ ಪತ್ರಕ್ಕೆ ಪ್ರಧಾನಿ ನರೇಂದ್ರ ಮೋದಿ ಅವರು ಉತ್ತರ ನೀಡುತ್ತಾರೆ ಎಂಬ ವಿಶ್ವಾಸವಿದೆ. ಈ ಮಧ್ಯೆ ಮತ್ತೊಬ್ಬರು ಲಂಚದ ಕಿರುಕುಳ ತಾಳಲಾರದೆ ದಯಾಮರಣಕ್ಕೆ ಅರ್ಜಿ ಹಾಕಿರುವ ವಿಚಾರ ತಿಳಿದಿದೆ. ಭ್ರಷ್ಟ ಆಡಳಿತವನ್ನು ಸ್ವಚ್ಛ ಮಾಡಬೇಕಿದೆ. ಪ್ರಧಾನಿಗಳು ಬಂದಾಗ ರಸ್ತೆ ಗುಂಡಿಗಳನ್ನು ಹೇಗೆ ಮುಚ್ಚಲಾಗಿದೆಯೋ, ಅದೇ ರೀತಿ ಈ ಭ್ರಷ್ಟಾಚಾರವನ್ನು ಮುಚ್ಚಿಹಾಕಲು ಪ್ರಧಾನಿಗಳು ಅವರ ನಾಯಕರಿಗೆ ಸಂದೇಶ ನೀಡಬೇಕು ಎಂದು ಕೇಳುತ್ತೇನೆʼ ಎಂದು ಹೇಳಿದ್ದಾರೆ.

ಪ್ರಧಾನಿಗಳು ಉತ್ತರ ನೀಡದಿದ್ದರೆ, ‘ಮುಂದಿನ ಹೋರಾಟದ ಬಗ್ಗೆ ಮುಂದೆ ತಿಳಿಸುತ್ತೇನೆ. ಕೇಳಿದ ತಕ್ಷಣ ನಾವು ಹೋರಾಟ ಯೋಜನೆ ರೂಪಿಸಲು ಆಗುವುದಿಲ್ಲ. 5 ನಿಮಿಷದಲ್ಲಿ ಹೇಗೆ ಊಟ ಸಿದ್ಧಮಾಡಲು ಆಗುವುದಿಲ್ಲವೋ ಹಾಗೆ ಇದಕ್ಕೂ ಸಮಯ ಬೇಕಾಗುತ್ತದೆʼ ಎಂದರು.

ಶಿವಕುಮಾರ್ ಅವರು ಮುಂಚಿತವಾಗಿ ಸಲಹೆ ನೀಡಿದ್ದರೆ ವಿಮಾನ ನಿಲ್ದಾಣ ಪ್ರಾಧಿಕಾರದಿಂದ ಪ್ರತಿಮೆ ಸ್ಥಾಪಿಸಬಹುದಿತ್ತು ಎಂಬ ಸಚಿವರ ಹೇಳಿಕೆ ಬಗ್ಗೆ ಮಾತನಾಡಿದ ಡಿಕೆಶಿ, ‘ನಾನು ಅಲ್ಲಿಗೆ ಹೋದ ದಿನವೇ ಈ ಪ್ರತಿಮೆಯನ್ನು ಸರ್ಕಾರ ನಿರ್ಮಾಣ ಮಾಡುವ ಅಗತ್ಯವಿಲ್ಲ. ವಿಮಾನ ನಿಲ್ದಾಣ ಆಡಳಿತ ಮಂಡಳಿಯವರೇ ಮಾಡಬಹುದು. ಅವರಿಗೆ 50-60 ಕೋಟಿ ವೆಚ್ಚ ಮಾಡುವುದು ದೊಡ್ಡ ವಿಚಾರವಲ್ಲ ಎಂದು ಹೇಳಿದ್ದೆ. ಇವರು ಅವರದೇ ಆದ ಲೆಕ್ಕಾಚಾರ ಹಾಕಿಕೊಂಡು ಮಾಡುತ್ತಿದ್ದಾರೆ. ಸರ್ಕಾರದ ಹಣ ಹೇಗೆ ಉಳಿಸಬೇಕು, ಕಾಮಗಾರಿ ಹೇಗೆ ಮಾಡಿಸಬೇಕು ಎಂಬ ಬಗ್ಗೆ ಸಾಮಾನ್ಯ ಪರಿಜ್ಞಾನ ಇರಬೇಕು. ಇವರು ತಾವು ಹೆಸರು ಮಾಡಿಕೊಳ್ಳಲು ಈ ರೀತಿ ಮಾಡಿಕೊಳ್ಳುತ್ತಿದ್ದಾರೆ’ ಎಂದು ತಿಳಿಸಿದರು.

ಇವತ್ತಿನ ಕಾರ್ಯಕ್ರಮಕ್ಕಾಗಿ 48 ಕೋಟಿ ರೂ. ವೆಚ್ಚ ಮಾಡುತ್ತಿರುವ ಬಗ್ಗೆ ಮಾತನಾಡಿ, ‘ತಮ್ಮ ಹಾಗೂ ಪಕ್ಷದ ವೈಭವೀಕರಣಕ್ಕೆ ಯಾವ ರೀತಿ ಹಣ ಖರ್ಚು ಮಾಡಲಾಗುತ್ತಿದೆ ಎಂಬುದರ ಬಗ್ಗೆ ಎಲ್ಲರಿಗೂ ಮಾಹಿತಿ ಇದೆ. ಅವರು ಯಾವ ರೀತಿಯಾದರೂ ಜನರನ್ನು ಕರೆದುಕೊಂಡು ಹೋಗಲಿ, ಆದರೆ ಇವರನ್ನು ಕಿತ್ತೊಗೆಯಲು ಜನ ಸಂಕಲ್ಪ ಮಾಡಿದ್ದು, ಅದು ಆಗಲಿದೆʼ ಎಂದು ಹೇಳಿದರು.

ರಸ್ತೆಗಳಿಗೆ ಡಾಂಬಾರ್ ಹಾಕಿರುವ ವಿಚಾರವಾಗಿ ಕೇಳಿದ ಪ್ರಶ್ನೆಗೆ, ‘ಅವರು ತಮ್ಮ ನಾಯಕರ ಪ್ರಯಾಣಕ್ಕೆ ರಸ್ತೆ ಮಾಡಿದ್ದಾರೆಯೇ ಹೊರತು ಜನರ ಅನುಕೂಲಕ್ಕೆ ಮಾಡಿಲ್ಲ’ಎಂದು ತಿಳಿಸಿದರು.

PPeepal Media Desk

Peepal Media Desk

Peepal Media · ರಾಜಕೀಯ ವಿಭಾಗ

ಸಂಬಂಧಿತ ಸುದ್ದಿಗಳು