ಮುಖ್ಯ ವಿಷಯಕ್ಕೆ ತೆರಳಿ
Peepal Media
ತಾಜಾ ಸುದ್ದಿ
●ಈಸಕ್ಕಿ ಆಸೆಯನ್ನೂ ಮೀರಿದ ಆಯ್ದಕ್ಕಿ ಲಕ್ಕಮ್ಮ●ಗಾಜಾ ಸ್ಮಶಾನದ ಮೇಲೆ ಮತ್ತೆ ಅರಳುತ್ತಾ ನೆತನ್ಯಾಹು ಕುರ್ಚಿ?●ಅರುಣಾಚಲದಲ್ಲಿ ಚೀನಾ ಸೈನಿಕರೊಂದಿಗೆ ಮುಖಾಮುಖಿ: ಕೇಂದ್ರದ ಮೌನವನ್ನು ಪ್ರಶ್ನಿಸಿದ ಕಾಂಗ್ರೆಸ್‌ನ ಜೈರಾಮ್ ರಮೇಶ್●ಕಡತಗಳ ವಿಲೇವಾರಿ ಪ್ರಕ್ರಿಯೆ ಬದಲಾವಣೆ: ಚುನಾವಣಾ ಆಯುಕ್ತರಿಂದ ಕ್ಯಾಬಿನೆಟ್‌ ಕಾರ್ಯದರ್ಶಿಗೆ ಆಕ್ಷೇಪಣಾ ಪತ್ರ●ಮೋದಿ–ಅದಾನಿ ಕುರಿತ ಸಾಕ್ಷ್ಯಚಿತ್ರ ಹಂಚಿಕೊಂಡ ರಾಜ್‌ ಠಾಕ್ರೆ; ತೆಗೆದುಹಾಕುವಂತೆ ಸೂಚನೆಗಳ ನಡುವೆ ಮುಂದುವರೆದ ಚರ್ಚೆ●ಮಂಡ್ಯದಲ್ಲಿ ARAI ಪರೀಕ್ಷಾ ಕೇಂದ್ರಗಳಿಗೆ ಭೂಮಿ ಹಂಚಿಕೆ ವಿಳಂಬ: ರಾಜ್ಯ ಸರ್ಕಾರಕ್ಕೆ ಎಚ್‌.ಡಿ. ಕುಮಾರಸ್ವಾಮಿ ಪತ್ರ●ರಾಷ್ಟ್ರೀಯತೆಯ ಪಾಠ ನನಗೆ ಬೇಕಿಲ್ಲ; ನಮ್ಮ ಗುರಿ ಆಡಳಿತ, ಸಾಮಾಜಿಕ ಜಾಲತಾಣದ ಪ್ರಚಾರವಲ್ಲ: ಕೆ. ಅಣ್ಣಾಮಲೈ●ಕೇವಲ ಮದುವೆಗಾಗಿ ಧರ್ಮಾಂತರವಾಗುವುದನ್ನು ಒಪ್ಪಲು ಸಾಧ್ಯವಿಲ್ಲ: ಬಾಂಬೆ ಹೈಕೋರ್ಟ್‌●ಇನ್ನು ನೋಂದಾಯಿತ ಸಿಮ್‌ ಇದ್ದರೆ ಮಾತ್ರ ವಾಟ್ಸ್‌ಆ್ಯಪ್‌ ಬಳಕೆ ಸಾಧ್ಯ: ಜನವರಿ 1, 2027ರಿಂದ ಹೊಸ ನಿಯಮ ಜಾರಿ●ಈ-ಮುದ್ರ ಡಿಜಿಟಲ್‌ ಪ್ರಮಾಣಪತ್ರಗಳಲ್ಲಿ ಭದ್ರತಾ ಲೋಪ: ಜಾಗತಿಕ ತಂತ್ರಜ್ಞಾನ ವಲಯದಲ್ಲಿ ಆತಂಕ●ಹಾಸನ ಕಾಳಸಂತೆಗೆ ಪಡಿತರ ಅಕ್ಕಿ ಮಾರಾಟ ಯತ್ನ – ಕ್ವಿಂಟಲ್‌ ಗಟ್ಟಲೆ ಅಕ್ಕಿ, ರಾಗಿ ವಶ●ಸದ್ಯದಲ್ಲೆ ಕಬ್ಬು ಬೆಳೆಗಾರರ ಸಭೆ ಕರೆದಿದ್ದೇನೆ – ಸಿಎಂ ಡಿ.ಕೆ ಶಿವಕುಮಾರ್●ರಾಜ್ಯದಲ್ಲಿ ಐದು ದಿನಗಳಲ್ಲಿ ಮಳೆ ಸಾಧ್ಯತೆ – ಹವಾಮಾನ ಇಲಾಖೆ ಮುನ್ಸೂಚನೆ●ಸಿದ್ದರಾಮಯ್ಯ ಅವರನ್ನು ಅಧಿಕಾರದಿಂದ ಇಳಿಸಲು ವ್ಯವಸ್ಥಿತ ಸಂಚು ರೂಪಿಸಿ ಯಶಸ್ವಿಗೊಂಡಿದ್ದಾರೆ – ಸಿಎಂ ಯಡಿಯೂರಪ್ಪ●ಚುನಾವಣಾ ಆಯುಕ್ತರಿಗೆ ರಕ್ಷಣೆ ನೀಡುವ ಕಾನೂನು ರದ್ದುಗೊಳಿಸಿ – ಮಲ್ಲಿಕಾರ್ಜುನ ಖರ್ಗೆ ಆಗ್ರಹ●ದಸರಾ ವೇಳೆ ಪೊಲೀಸರ ಲಾಠಿ ಏಟಿಗೆ 4 ವರ್ಷದ ಬಾಲಕ ಗಂಭೀರ – ICUನಲ್ಲಿ ಅಂತಿಮ ಹೋರಾಟ●ಸೌದಿ ವಿಮಾನ ನಿಲ್ದಾಣದ ಮೇಲೆ ಭೀಕರ ದಾಳಿ – 8 ಮಂದಿಗೆ ಗಾಯ, ಇಬ್ಬರ ಅಂತ್ಯ●ನಂದಿಧ್ವಜ ಪೂಜೆಗೆ ಸಚಿವರಿಗೆ ಅವಕಾಶ ನಿರಾಕರಿಸಿದ ಅಧಿಕಾರಿಗಳ ವಿರುದ್ಧ ತನಿಖೆಗೆ ಆದೇಶ: ಮುಖ್ಯಮಂತ್ರಿ ಡಿ ಕೆ ಶಿವಕುಮಾರ್‌●300 ವರ್ಷಗಳಷ್ಟು ಹಳೆಯ ಐತಿಹಾಸಿಕ ರೇಸ್‌ಕೋರ್ಸ್ ಮಸೀದಿಯ ವಿದ್ಯುತ್ ಹಾಗೂ ನೀರು ಸಂಪರ್ಕ ಕಡಿತ: ತುರ್ತು ರಕ್ಷಣೆ ಕೋರಿದ ದೆಹಲಿ ವಕ್ಫ್ ಮಂಡಳಿ●ತಿಹಾರ್ ಜೈಲಿನಿಂದ ಬಿಡುಗಡೆಯಾದ ಬೆನ್ನಲ್ಲೇ ಸೌರವ್ ದಾಸ್ ಹಾಗೂ ಅಶೋತ್ ರಾಂಕಾಗೆ ದೆಹಲಿ ಅಪರಾಧ ವಿಭಾಗದಿಂದ ಸಮನ್ಸ್

ಚುನಾವಣೆ ಘೋಷಣೆಗೂ ಮುನ್ನವೇ ಮುರಿದು ಬೀಳುತ್ತಾ ಎಐಎಡಿಎಂಕೆ ಮತ್ತು ಬಿಜೆಪಿ ಮೈತ್ರಿ?

PPeepal Media Desk

Peepal Media Desk • ರಾಜಕೀಯ

• 1 ನಿಮಿಷದ ಓದು

ಚುನಾವಣೆ ಘೋಷಣೆಗೂ ಮುನ್ನವೇ ಮುರಿದು ಬೀಳುತ್ತಾ ಎಐಎಡಿಎಂಕೆ ಮತ್ತು ಬಿಜೆಪಿ ಮೈತ್ರಿ?

ತಮಿಳುನಾಡು ಎಐಎಡಿಎಂಕೆ ಮತ್ತು ಬಿಜೆಪಿ ಜೊತೆಗಿನ ಮೈತ್ರಿ ಚುನಾವಣೆ ಘೋಷಣೆಗೂ ಮುನ್ನವೇ ಮುರಿದು ಬೀಳುವ ಲಕ್ಷಣಗಳು ಕಂಡುಬಂದಿವೆ. ಅದರಂತೆ ಎಐಎಡಿಎಂಕೆ ನಾಯಕ, ಪಕ್ಷದ ಪ್ರಧಾನ ಕಾರ್ಯದರ್ಶಿ ಎಡಪ್ಪಾಡಿ ಎಂ ಪಳನಿಸ್ವಾಮಿ ಬಿಜೆಪಿ ಜೊತೆಗಿನ ಮೈತ್ರಿ ಚುನಾವಣೆ ವರೆಗೂ ಮಾತ್ರ ಎಂದು ಹೇಳಿದ್ದಾರೆ. ಇದು ಬಿಜೆಪಿ ನಾಯಕರಿಗೆ ಇರಿಸುವುದು ತಂದಿದೆ.

ಎಐಎಡಿಎಂಕೆ ನಾಯಕರ ಒತ್ತಾಯಕ್ಕೆ ಮಣಿದೇ ಬಿಜೆಪಿ ತನ್ನ ರಾಜ್ಯಾಧ್ಯಕ್ಷನನ್ನು ಬದಲಿಸಿದ್ದು ಎನ್ನುವ ಹಂತದಲ್ಲೇ ಈಗ ಎಐಎಡಿಎಂಕೆ ನಾಯಕ ಎಡಪ್ಪಾಡಿ ಎಂ ಪಳನಿಸ್ವಾಮಿ ಈಗ ಬಿಜೆಪಿ ಸರ್ಕಾರ ರಚನೆಯ ಭಾಗವಾಗಿ ಇರುವುದಿಲ್ಲ ಎಂದು ಹೇಳಿದ್ದಾರೆ. ‘ತಮಿಳುನಾಡಿನಲ್ಲಿ ಬಿಜೆಪಿ ಜತೆಗೆ ತಮ್ಮ ಪಕ್ಷದ ಮೈತ್ರಿ ಚುನಾವಣೆಗೆ ಮಾತ್ರ. ಗೆಲುವು ಸಾಧಿಸಿದರೆ ಸಮ್ಮಿಶ್ರ ಸರ್ಕಾರ ರಚಿಸುವುದಿಲ್ಲ’ ಎಂದು ಹೇಳಿರುವುದು ಬಿಜೆಪಿ ಪಾಳಯದಲ್ಲಿ ಅಸಮಾಧಾನ ಶುರುವಾಗಿದೆ.

ಇತ್ತ ಕೇಂದ್ರ ಸಚಿವ ಅಮಿತ್ ಷಾ ಮೈತ್ರಿ ಘೋಷಣೆ ಸಂದರ್ಭದಲ್ಲಿ ‘ನಾವು ಎಡಪ್ಪಾಡಿ ಕೆ. ಪಳನಿಸ್ವಾಮಿ ನೇತೃತ್ವದಲ್ಲಿ 2026ರ ವಿಧಾನಸಭಾ ಚುನಾವಣೆಯಲ್ಲಿ ಒಟ್ಟಾಗಿ ಸ್ಪರ್ಧಿಸುತ್ತೇವೆ ಮತ್ತು ಒಟ್ಟಾಗಿ ಸರ್ಕಾರ ರಚಿಸುತ್ತೇವೆ. ಚುನಾವಣೆಯ ನಂತರ ಸಮ್ಮಿಶ್ರ ಸರ್ಕಾರದ ರೂಪುರೇಷೆಗಳನ್ನು ಅಂತಿಮಗೊಳಿಸಲಾಗುವುದು’ ಎಂದು ಹೇಳಿದ್ದರು. ಆದರೆ ಪಳನಿಸ್ವಾಮಿ ಅವರು ಇದಕ್ಕೆ ತದ್ವಿರುದ್ಧವಾಗಿ ಹೇಳಿಕೆ ನೀಡಿದ್ದಾರೆ.

ಬುಧವಾರ ಸುದ್ದಿಗಾರರೊಂದಿಗೆ ಮಾತನಾಡಿದ ಪಳನಿಸ್ವಾಮಿ, ‘ಎರಡೂ ಪಕ್ಷಗಳು ಒಟ್ಟಾಗಿ ಹೋರಾಡುತ್ತವೆ ಮತ್ತು ಚುನಾವಣೆಯ ನಂತರ ಸರ್ಕಾರ ರಚಿಸುತ್ತವೆ ಎಂದು ಶಾ ಹೇಳಿದ್ದಾರೆ. ಆದರೆ ಅವರು ಸಮ್ಮಿಶ್ರ ಸರ್ಕಾರವೆಂದು ಹೇಳಿಲ್ಲ. ನೀವೇ ಅವರ ಹೇಳಿಕೆಯನ್ನು ತಪ್ಪಾಗಿ ಅರ್ಥೈಸಿಕೊಂಡಿದ್ದೀರಿ ಮತ್ತು ಅದನ್ನು ದೊಡ್ಡ ವಿವಾದ ಮಾಡಿದ್ದೀರಿ. ಸರ್ಕಾರದಲ್ಲಿ ಬಿಜೆಪಿ ಪಾಲು ಇರುವುದಾಗಿ ಅವರು ಎಂದಿಗೂ ಹೇಳಿಲ್ಲ’ ಎಂದು ಹೇಳಿದ್ದಾರೆ. ಬಿಜೆಪಿ ಜೊತೆ ಸರ್ಕಾರ ರಚನೆಯ ಉದ್ದೇಶ ಏಕೆ ಎಂಬ ಸುದ್ದಿಗಾರರ ಪ್ರಶ್ನೆಗೆ ಈ ರೀತಿಯಾಗಿ ಉತ್ತರಿಸಿದ್ದಾರೆ.

‘ಎನ್‌ಡಿಎಯನ್ನು ರಾಷ್ಟ್ರಮಟ್ಟದಲ್ಲಿ ಪ್ರಧಾನಿ ನರೇಂದ್ರ ಮೋದಿ ಮತ್ತು ತಮಿಳುನಾಡಿನಲ್ಲಿ ಎಐಎಡಿಎಂಕೆ ಮುಖ್ಯಸ್ಥರು ಮುನ್ನಡೆಸಲಿದ್ದಾರೆ ಎಂದು ಶಾ ಸ್ಪಷ್ಟವಾಗಿ ಹೇಳಿದ್ದಾರೆ. ಈ ಬಗ್ಗೆ ಅವರಲ್ಲಿ ತುಂಬಾ ಸ್ಪಷ್ಟತೆ ಇದೆ’ ಎಂದು ಪಳನಿಸ್ವಾಮಿ ಹೇಳಿದ್ದಾರೆ.

ಈ ಎಲ್ಲಾ ಬೆಳವಣಿಗೆ ನೋಡಿದರೆ ತಮಿಳುನಾಡು ರಾಜಕಾರಣದ ಹೊಸ ಮೈತ್ರಿಯಲ್ಲಿ ಎಲ್ಲವೂ ಸರಿಯಿಲ್ಲ ಎಂಬುದು ಸ್ಪಷ್ಟವಾಗಿ ಗೋಚರಿಸುತ್ತದೆ. ಹಾಗೂ ಪಳನಿಸ್ವಾಮಿಯವರ ಹೇಳಿಕೆ ಚುನಾವಣೆಗೂ ಮುನ್ನ ಸಮ್ಮಿಶ್ರ ಸರ್ಕಾರದ ವಿಚಾರದಲ್ಲಿ ಎರಡೂ ಪಕ್ಷಗಳ ನಡುವೆ ವಿವಾದದ ವಿಷಯವಾಗಬಹುದು.

PPeepal Media Desk

Peepal Media Desk

Peepal Media · ರಾಜಕೀಯ ವಿಭಾಗ

ಸಂಬಂಧಿತ ಸುದ್ದಿಗಳು