ಮುಖ್ಯ ವಿಷಯಕ್ಕೆ ತೆರಳಿ
Peepal Media
ತಾಜಾ ಸುದ್ದಿ
ಈಸಕ್ಕಿ ಆಸೆಯನ್ನೂ ಮೀರಿದ ಆಯ್ದಕ್ಕಿ ಲಕ್ಕಮ್ಮಗಾಜಾ ಸ್ಮಶಾನದ ಮೇಲೆ ಮತ್ತೆ ಅರಳುತ್ತಾ ನೆತನ್ಯಾಹು ಕುರ್ಚಿ?ಅರುಣಾಚಲದಲ್ಲಿ ಚೀನಾ ಸೈನಿಕರೊಂದಿಗೆ ಮುಖಾಮುಖಿ: ಕೇಂದ್ರದ ಮೌನವನ್ನು ಪ್ರಶ್ನಿಸಿದ ಕಾಂಗ್ರೆಸ್‌ನ ಜೈರಾಮ್ ರಮೇಶ್ಕಡತಗಳ ವಿಲೇವಾರಿ ಪ್ರಕ್ರಿಯೆ ಬದಲಾವಣೆ: ಚುನಾವಣಾ ಆಯುಕ್ತರಿಂದ ಕ್ಯಾಬಿನೆಟ್‌ ಕಾರ್ಯದರ್ಶಿಗೆ ಆಕ್ಷೇಪಣಾ ಪತ್ರಮೋದಿ–ಅದಾನಿ ಕುರಿತ ಸಾಕ್ಷ್ಯಚಿತ್ರ ಹಂಚಿಕೊಂಡ ರಾಜ್‌ ಠಾಕ್ರೆ; ತೆಗೆದುಹಾಕುವಂತೆ ಸೂಚನೆಗಳ ನಡುವೆ ಮುಂದುವರೆದ ಚರ್ಚೆಮಂಡ್ಯದಲ್ಲಿ ARAI ಪರೀಕ್ಷಾ ಕೇಂದ್ರಗಳಿಗೆ ಭೂಮಿ ಹಂಚಿಕೆ ವಿಳಂಬ: ರಾಜ್ಯ ಸರ್ಕಾರಕ್ಕೆ ಎಚ್‌.ಡಿ. ಕುಮಾರಸ್ವಾಮಿ ಪತ್ರರಾಷ್ಟ್ರೀಯತೆಯ ಪಾಠ ನನಗೆ ಬೇಕಿಲ್ಲ; ನಮ್ಮ ಗುರಿ ಆಡಳಿತ, ಸಾಮಾಜಿಕ ಜಾಲತಾಣದ ಪ್ರಚಾರವಲ್ಲ: ಕೆ. ಅಣ್ಣಾಮಲೈಕೇವಲ ಮದುವೆಗಾಗಿ ಧರ್ಮಾಂತರವಾಗುವುದನ್ನು ಒಪ್ಪಲು ಸಾಧ್ಯವಿಲ್ಲ: ಬಾಂಬೆ ಹೈಕೋರ್ಟ್‌ಇನ್ನು ನೋಂದಾಯಿತ ಸಿಮ್‌ ಇದ್ದರೆ ಮಾತ್ರ ವಾಟ್ಸ್‌ಆ್ಯಪ್‌ ಬಳಕೆ ಸಾಧ್ಯ: ಜನವರಿ 1, 2027ರಿಂದ ಹೊಸ ನಿಯಮ ಜಾರಿಈ-ಮುದ್ರ ಡಿಜಿಟಲ್‌ ಪ್ರಮಾಣಪತ್ರಗಳಲ್ಲಿ ಭದ್ರತಾ ಲೋಪ: ಜಾಗತಿಕ ತಂತ್ರಜ್ಞಾನ ವಲಯದಲ್ಲಿ ಆತಂಕಹಾಸನ ಕಾಳಸಂತೆಗೆ ಪಡಿತರ ಅಕ್ಕಿ ಮಾರಾಟ ಯತ್ನ – ಕ್ವಿಂಟಲ್‌ ಗಟ್ಟಲೆ ಅಕ್ಕಿ, ರಾಗಿ ವಶಸದ್ಯದಲ್ಲೆ ಕಬ್ಬು ಬೆಳೆಗಾರರ ಸಭೆ ಕರೆದಿದ್ದೇನೆ – ಸಿಎಂ ಡಿ.ಕೆ ಶಿವಕುಮಾರ್ರಾಜ್ಯದಲ್ಲಿ ಐದು ದಿನಗಳಲ್ಲಿ ಮಳೆ ಸಾಧ್ಯತೆ – ಹವಾಮಾನ ಇಲಾಖೆ ಮುನ್ಸೂಚನೆಸಿದ್ದರಾಮಯ್ಯ ಅವರನ್ನು ಅಧಿಕಾರದಿಂದ ಇಳಿಸಲು ವ್ಯವಸ್ಥಿತ ಸಂಚು ರೂಪಿಸಿ ಯಶಸ್ವಿಗೊಂಡಿದ್ದಾರೆ – ಸಿಎಂ ಯಡಿಯೂರಪ್ಪಚುನಾವಣಾ ಆಯುಕ್ತರಿಗೆ ರಕ್ಷಣೆ ನೀಡುವ ಕಾನೂನು ರದ್ದುಗೊಳಿಸಿ – ಮಲ್ಲಿಕಾರ್ಜುನ ಖರ್ಗೆ ಆಗ್ರಹದಸರಾ ವೇಳೆ ಪೊಲೀಸರ ಲಾಠಿ ಏಟಿಗೆ 4 ವರ್ಷದ ಬಾಲಕ ಗಂಭೀರ – ICUನಲ್ಲಿ ಅಂತಿಮ ಹೋರಾಟಸೌದಿ ವಿಮಾನ ನಿಲ್ದಾಣದ ಮೇಲೆ ಭೀಕರ ದಾಳಿ – 8 ಮಂದಿಗೆ ಗಾಯ, ಇಬ್ಬರ ಅಂತ್ಯನಂದಿಧ್ವಜ ಪೂಜೆಗೆ ಸಚಿವರಿಗೆ ಅವಕಾಶ ನಿರಾಕರಿಸಿದ ಅಧಿಕಾರಿಗಳ ವಿರುದ್ಧ ತನಿಖೆಗೆ ಆದೇಶ: ಮುಖ್ಯಮಂತ್ರಿ ಡಿ ಕೆ ಶಿವಕುಮಾರ್‌300 ವರ್ಷಗಳಷ್ಟು ಹಳೆಯ ಐತಿಹಾಸಿಕ ರೇಸ್‌ಕೋರ್ಸ್ ಮಸೀದಿಯ ವಿದ್ಯುತ್ ಹಾಗೂ ನೀರು ಸಂಪರ್ಕ ಕಡಿತ: ತುರ್ತು ರಕ್ಷಣೆ ಕೋರಿದ ದೆಹಲಿ ವಕ್ಫ್ ಮಂಡಳಿತಿಹಾರ್ ಜೈಲಿನಿಂದ ಬಿಡುಗಡೆಯಾದ ಬೆನ್ನಲ್ಲೇ ಸೌರವ್ ದಾಸ್ ಹಾಗೂ ಅಶೋತ್ ರಾಂಕಾಗೆ ದೆಹಲಿ ಅಪರಾಧ ವಿಭಾಗದಿಂದ ಸಮನ್ಸ್

ಜಾತಿ ಗಣತಿ ಸಾರ್ವಜನಿಕ ಹಿತಾಸಕ್ತಿ ವಿರುದ್ಧವೇ ಇದ್ದರೆ ನಾನದನ್ನು ವಿರೋಧಿಸುತ್ತೇನೆ : ಸಚಿವ ಸತೀಶ್ ಜಾರಕಿಹೊಳಿ

PPeepal Media Desk

Peepal Media Desk ರಾಜಕೀಯ, ರಾಜ್ಯ

• 1 ನಿಮಿಷದ ಓದು

ಜಾತಿ ಗಣತಿ ಸಾರ್ವಜನಿಕ ಹಿತಾಸಕ್ತಿ ವಿರುದ್ಧವೇ ಇದ್ದರೆ ನಾನದನ್ನು ವಿರೋಧಿಸುತ್ತೇನೆ : ಸಚಿವ ಸತೀಶ್ ಜಾರಕಿಹೊಳಿ

ಸರ್ಕಾರ ತೆಗೆದುಕೊಳ್ಳುವ ಪ್ರತಿಯೊಂದು ನಿರ್ಧಾರವನ್ನು ಬೆಂಬಲಿಸಲು ನಾನು ಬದ್ಧನಾಗಿಲ್ಲ. ಒಂದು ನಿರ್ಧಾರ ಸರಿಯಾಗಿಲ್ಲದಿದ್ದರೆ ಅದನ್ನು ವಿರೋಧಿಸುವ ಹಕ್ಕು ನನಗಿದೆ. ಅದೇ ರೀತಿ ಜಾತಿ ಗಣತಿ ವರದಿಯಲ್ಲಿ ಇರುವ ಲೋಪಗಳ ಬಗ್ಗೆ ಸಾರ್ವಜನಿಕ ಹಿತಾಸಕ್ತಿ ವಿರುದ್ಧವೇ ಆಗಿದ್ದರೆ ನಾನದನ್ನು ವಿರೋಧಿಸುತ್ತೇನೆ ಎಂದು ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಹೇಳಿದ್ದಾರೆ.

“ಜಾತಿ ಗಣತಿ ಬಗ್ಗೆ ಭಿನ್ನಾಭಿಪ್ರಾಯ ಹೊಂದಿರುವವರು ತಮ್ಮ ಅಭಿಪ್ರಾಯಗಳನ್ನು ಲಿಖಿತವಾಗಿ ಸಲ್ಲಿಸುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸೂಚಿಸಿದ್ದಾರೆ. ಇದೇ ನಿಜವಾದ ಪ್ರಜಾಪ್ರಭುತ್ವ. ಒಂದೇ ಸರ್ಕಾರದ ಭಾಗವಾಗಿದ್ದರೂ ಸರ್ವರ ಅಭಿಪ್ರಾಯಗಳನ್ನು ಸ್ವೀಕರಿಸಬೇಕು. ಸರ್ಕಾರ ನಮ್ಮ ಅಭಿಪ್ರಾಯಗಳನ್ನು ಪರಿಗಣಿಸುತ್ತದೆ ಎಂದು ವಿಶ್ವಾಸವಿದೆ” ಎಂದು ಸಚಿವ ಸತೀಶ್ ಜಾರಕಿಹೊಳಿ ಹೇಳಿದರು.

ಸಾಮಾನ್ಯ ಜನಗಣತಿಯ ಜೊತೆಗೆ ಜಾತಿ ಗಣತಿ ನಡೆಸುವ ಕೇಂದ್ರ ಸರ್ಕಾರದ ನಿರ್ಧಾರದ ಕುರಿತ ಪ್ರಶ್ನೆಗೆ ಪ್ರತಿಕ್ರಿಯಿಸಿ, ಜಾತಿ ಗಣತಿ ವಿಚಾರದಲ್ಲಿ ಬಿಜೆಪಿ ಯೂಟರ್ನ್ ಹೊಡೆದಿದೆ. ಜಾತಿ ಗಣತಿ ಬಗ್ಗೆ ಅವರಿಗೆ ಏಕಾಏಕಿ ಪ್ರೀತಿ ಬಂದಿದೆ ಎಂದು ವ್ಯಂಗ್ಯವಾಡಿದರು.

ನಾವು ಜಾತಿ ಗಣತಿ ಮಾಡಿದಾಗ ಬಿಜೆಪಿಯವರು ವಿರೋಧ ಮಾಡಿದರು. ಈಗ ಕೇಂದ್ರ ಸರಕಾರ ಜಾತಿ ಗಣತಿ ಮಾಡುವ ತೀರ್ಮಾನ ಕೈಗೊಂಡಿರುವುದಕ್ಕೆ, ಪ್ರಧಾನಿಗೆ ದೂರದೃಷ್ಟಿಯಿದೆ ಎಂದು ಹೇಳಿಕೆಗಳನ್ನು ನೀಡುತ್ತಿದ್ದಾರೆ ಎಂದು ಟೀಕಿಸಿದರು.

PPeepal Media Desk

Peepal Media Desk

Peepal Media · ರಾಜಕೀಯ ವಿಭಾಗ

ಸಂಬಂಧಿತ ಸುದ್ದಿಗಳು