ಮುಖ್ಯ ವಿಷಯಕ್ಕೆ ತೆರಳಿ
Peepal Media
ತಾಜಾ ಸುದ್ದಿ
●ಈಸಕ್ಕಿ ಆಸೆಯನ್ನೂ ಮೀರಿದ ಆಯ್ದಕ್ಕಿ ಲಕ್ಕಮ್ಮ●ಗಾಜಾ ಸ್ಮಶಾನದ ಮೇಲೆ ಮತ್ತೆ ಅರಳುತ್ತಾ ನೆತನ್ಯಾಹು ಕುರ್ಚಿ?●ಅರುಣಾಚಲದಲ್ಲಿ ಚೀನಾ ಸೈನಿಕರೊಂದಿಗೆ ಮುಖಾಮುಖಿ: ಕೇಂದ್ರದ ಮೌನವನ್ನು ಪ್ರಶ್ನಿಸಿದ ಕಾಂಗ್ರೆಸ್‌ನ ಜೈರಾಮ್ ರಮೇಶ್●ಕಡತಗಳ ವಿಲೇವಾರಿ ಪ್ರಕ್ರಿಯೆ ಬದಲಾವಣೆ: ಚುನಾವಣಾ ಆಯುಕ್ತರಿಂದ ಕ್ಯಾಬಿನೆಟ್‌ ಕಾರ್ಯದರ್ಶಿಗೆ ಆಕ್ಷೇಪಣಾ ಪತ್ರ●ಮೋದಿ–ಅದಾನಿ ಕುರಿತ ಸಾಕ್ಷ್ಯಚಿತ್ರ ಹಂಚಿಕೊಂಡ ರಾಜ್‌ ಠಾಕ್ರೆ; ತೆಗೆದುಹಾಕುವಂತೆ ಸೂಚನೆಗಳ ನಡುವೆ ಮುಂದುವರೆದ ಚರ್ಚೆ●ಮಂಡ್ಯದಲ್ಲಿ ARAI ಪರೀಕ್ಷಾ ಕೇಂದ್ರಗಳಿಗೆ ಭೂಮಿ ಹಂಚಿಕೆ ವಿಳಂಬ: ರಾಜ್ಯ ಸರ್ಕಾರಕ್ಕೆ ಎಚ್‌.ಡಿ. ಕುಮಾರಸ್ವಾಮಿ ಪತ್ರ●ರಾಷ್ಟ್ರೀಯತೆಯ ಪಾಠ ನನಗೆ ಬೇಕಿಲ್ಲ; ನಮ್ಮ ಗುರಿ ಆಡಳಿತ, ಸಾಮಾಜಿಕ ಜಾಲತಾಣದ ಪ್ರಚಾರವಲ್ಲ: ಕೆ. ಅಣ್ಣಾಮಲೈ●ಕೇವಲ ಮದುವೆಗಾಗಿ ಧರ್ಮಾಂತರವಾಗುವುದನ್ನು ಒಪ್ಪಲು ಸಾಧ್ಯವಿಲ್ಲ: ಬಾಂಬೆ ಹೈಕೋರ್ಟ್‌●ಇನ್ನು ನೋಂದಾಯಿತ ಸಿಮ್‌ ಇದ್ದರೆ ಮಾತ್ರ ವಾಟ್ಸ್‌ಆ್ಯಪ್‌ ಬಳಕೆ ಸಾಧ್ಯ: ಜನವರಿ 1, 2027ರಿಂದ ಹೊಸ ನಿಯಮ ಜಾರಿ●ಈ-ಮುದ್ರ ಡಿಜಿಟಲ್‌ ಪ್ರಮಾಣಪತ್ರಗಳಲ್ಲಿ ಭದ್ರತಾ ಲೋಪ: ಜಾಗತಿಕ ತಂತ್ರಜ್ಞಾನ ವಲಯದಲ್ಲಿ ಆತಂಕ●ಹಾಸನ ಕಾಳಸಂತೆಗೆ ಪಡಿತರ ಅಕ್ಕಿ ಮಾರಾಟ ಯತ್ನ – ಕ್ವಿಂಟಲ್‌ ಗಟ್ಟಲೆ ಅಕ್ಕಿ, ರಾಗಿ ವಶ●ಸದ್ಯದಲ್ಲೆ ಕಬ್ಬು ಬೆಳೆಗಾರರ ಸಭೆ ಕರೆದಿದ್ದೇನೆ – ಸಿಎಂ ಡಿ.ಕೆ ಶಿವಕುಮಾರ್●ರಾಜ್ಯದಲ್ಲಿ ಐದು ದಿನಗಳಲ್ಲಿ ಮಳೆ ಸಾಧ್ಯತೆ – ಹವಾಮಾನ ಇಲಾಖೆ ಮುನ್ಸೂಚನೆ●ಸಿದ್ದರಾಮಯ್ಯ ಅವರನ್ನು ಅಧಿಕಾರದಿಂದ ಇಳಿಸಲು ವ್ಯವಸ್ಥಿತ ಸಂಚು ರೂಪಿಸಿ ಯಶಸ್ವಿಗೊಂಡಿದ್ದಾರೆ – ಸಿಎಂ ಯಡಿಯೂರಪ್ಪ●ಚುನಾವಣಾ ಆಯುಕ್ತರಿಗೆ ರಕ್ಷಣೆ ನೀಡುವ ಕಾನೂನು ರದ್ದುಗೊಳಿಸಿ – ಮಲ್ಲಿಕಾರ್ಜುನ ಖರ್ಗೆ ಆಗ್ರಹ●ದಸರಾ ವೇಳೆ ಪೊಲೀಸರ ಲಾಠಿ ಏಟಿಗೆ 4 ವರ್ಷದ ಬಾಲಕ ಗಂಭೀರ – ICUನಲ್ಲಿ ಅಂತಿಮ ಹೋರಾಟ●ಸೌದಿ ವಿಮಾನ ನಿಲ್ದಾಣದ ಮೇಲೆ ಭೀಕರ ದಾಳಿ – 8 ಮಂದಿಗೆ ಗಾಯ, ಇಬ್ಬರ ಅಂತ್ಯ●ನಂದಿಧ್ವಜ ಪೂಜೆಗೆ ಸಚಿವರಿಗೆ ಅವಕಾಶ ನಿರಾಕರಿಸಿದ ಅಧಿಕಾರಿಗಳ ವಿರುದ್ಧ ತನಿಖೆಗೆ ಆದೇಶ: ಮುಖ್ಯಮಂತ್ರಿ ಡಿ ಕೆ ಶಿವಕುಮಾರ್‌●300 ವರ್ಷಗಳಷ್ಟು ಹಳೆಯ ಐತಿಹಾಸಿಕ ರೇಸ್‌ಕೋರ್ಸ್ ಮಸೀದಿಯ ವಿದ್ಯುತ್ ಹಾಗೂ ನೀರು ಸಂಪರ್ಕ ಕಡಿತ: ತುರ್ತು ರಕ್ಷಣೆ ಕೋರಿದ ದೆಹಲಿ ವಕ್ಫ್ ಮಂಡಳಿ●ತಿಹಾರ್ ಜೈಲಿನಿಂದ ಬಿಡುಗಡೆಯಾದ ಬೆನ್ನಲ್ಲೇ ಸೌರವ್ ದಾಸ್ ಹಾಗೂ ಅಶೋತ್ ರಾಂಕಾಗೆ ದೆಹಲಿ ಅಪರಾಧ ವಿಭಾಗದಿಂದ ಸಮನ್ಸ್

ಎಎಪಿ ಮುಖಂಡರನ್ನು ಜೈಲಿನಲ್ಲಿಡಲು ಕೇಂದ್ರ ಸಂಚು ಮಾಡಿದೆ: ಮೋಹನ್ ದಾಸರಿ

PPeepal Media Desk

Peepal Media Desk • ರಾಜಕೀಯ, ವಿಶೇಷ

• 1 ನಿಮಿಷದ ಓದು

ಎಎಪಿ ಮುಖಂಡರನ್ನು ಜೈಲಿನಲ್ಲಿಡಲು ಕೇಂದ್ರ ಸಂಚು ಮಾಡಿದೆ: ಮೋಹನ್ ದಾಸರಿ

ಬೆಂಗಳೂರು: ಕೇಂದ್ರ ಸರ್ಕಾರ ಆಮ್ ಆದ್ಮಿ ಪಾರ್ಟಿಯ ನಾಯಕರ ಮೇಲೆ ಸುಳ್ಳು ಕೇಸುಗಳನ್ನು ಹಾಕಿ ಜೈಲಿಗೆ ಕಳುಹಿಸಿದೆ. ಅಧಿಕಾರ ದುರುಪಯೋಗಪಡಿಸಿಕೊಂಡು ಎದುರಾಳಿಗಳನ್ನು ಮುಗಿಸಲು ಸಂಚು ಮಾಡಿದೆ ಎಂದು ಆಮ್ ಆದ್ಮಿ ಪಾರ್ಟಿ ರಾಜ್ಯ ಸಂಘಟನಾ ಕಾರ್ಯದರ್ಶಿ ಮೋಹನ್ ದಾಸರಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಕೇಂದ್ರ ಸರ್ಕಾರವು ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಅವರ ಮೇಲೆ ಇಡಿ, ಸಿಬಿಐ ತನಿಖಾ ಸಂಸ್ಥೆಗಳನ್ನು ದುರುಪಯೋಗಪಡಿಸಿಕೊಂಡು ನಡೆಸುತ್ತಿರುವ ನಿರಂತರ ದೌರ್ಜನ್ಯ, ದಬ್ಬಾಳಿಕೆಯ ವಿರುದ್ಧ ಆಮ್ ಆದ್ಮಿ ಪಕ್ಷ ನಗರದ ಸ್ವಾತಂತ್ರ್ಯ ಉದ್ಯಾನವನದಲ್ಲಿ ಬೃಹತ್ ಪ್ರತಿಭಟನೆ ನಡೆಸಿತು.

ಪ್ರತಿಭಟನೆಯಲ್ಲಿ ಭಾಗವಹಿಸಿ ಮಾತನಾಡಿದ ಮೋಹನ್ ದಾಸರಿ, ಆಮ್ ಆದ್ಮಿ ಪಾರ್ಟಿಯ ನಾಯಕರನ್ನು ಜೈಲಿನಲ್ಲಿಡಲು ಇಡಿ ಮತ್ತು ಸಿಬಿಐ ಕೆಲಸ ಮಾಡುತ್ತಿದೆ ಎಂದು ಕೋರ್ಟ್ ಜಡ್ಜ್ ಕೂಡ ಹೇಳಿದ್ದಾರೆ. ಕೇಂದ್ರ ಸರ್ಕಾರ ತನಿಖಾ ಸಂಸ್ಥೆಗಳನ್ನು ದುರ್ಬಳಕೆ ಮಾಡಿಕೊಳ್ಳುತ್ತಿದೆ ಎನ್ನುವುದಕ್ಕೆ ಇದಕ್ಕಿಂತ ಸಾಕ್ಷಿ ಬೇಕಾ ಎಂದು ಪ್ರಶ್ನೆ ಮಾಡಿದರು.

ಅರವಿಂದ್ ಕೇಜ್ರಿವಾಲ್ ತನಿಖೆಗೆ ಎಲ್ಲಾ ಸಹಕಾರ ಕೊಟ್ಟಿದ್ದರೂ, 2 ವರ್ಷದ ಬಳಿಕ ಅವರನ್ನು ಏಕಾಏಕಿ ಬಂಧಿಸಲಾಯಿತು. ತನಿಖಾ ಸಂಸ್ಥೆಗಳು ಈ ರೀತಿ ಸರ್ಕಾರದ ಕೈಗೊಂಬೆಗಳಾಗಿ ಕೆಲಸ ಮಾಡಿದರೆ, ನೀಟ್‌ ರೀತಿಯ ಹಗರಣಗಳಿಗೆ ನ್ಯಾಯ ಸಿಗುತ್ತದೆಯೇ? ಎಂದು ಪ್ರಶ್ನಿಸಿದರು.

ಈ ಸಂದರ್ಭ ಪಕ್ಷದ ರಾಜ್ಯ ಸಾಮಾಜಿಕ ಮಾಧ್ಯಮ ಉಸ್ತುವಾರಿ ದರ್ಶನ್ ಜೈನ್, ಉಪಾಧ್ಯಕ್ಷ ಸುರೇಶ್ ರಾಥೋಡ್, ರಾಜ್ಯ ಮಾಧ್ಯಮ ಸಂಚಾಲಕ ಜಗದೀಶ್ ವಿ. ಸದಂ, ಬೆಂಗಳೂರು ನಗರಾಧ್ಯಕ್ಷ ಡಾ. ಸತೀಶ್ ಕುಮಾರ್, ಅಲ್ಪ ಸಂಖ್ಯಾತರ ಘಟಕದ ಅಧ್ಯಕ್ಷ ಫರೀದ್, ಬಸವರಾಜ ಮುದೀಗೌಡರ್, ರವಿ ಕುಮಾರ್, ಉಷಾ ಮೋಹನ್, ಅಶೋಕ್ ಮೃತ್ಯುಂಜಯ, ಜಗದೀಶ್ ಬಾಬು, ಶಾಷಾ ವಲಿ, ಅಂಜನಾ ಗೌಡ, ಮಹಾಲಕ್ಷಿ ಮತ್ತಿತರ ಮುಖಂಡರು ಹಾಗೂ ಅಪಾರ ಸಂಖ್ಯೆಯ ಕಾರ್ಯಕರ್ತರು ಭಾಗವಹಿಸಿದ್ದರು.

PPeepal Media Desk

Peepal Media Desk

Peepal Media · ರಾಜಕೀಯ ವಿಭಾಗ

ಸಂಬಂಧಿತ ಸುದ್ದಿಗಳು