ಮುಖ್ಯ ವಿಷಯಕ್ಕೆ ತೆರಳಿ
Peepal Media
ತಾಜಾ ಸುದ್ದಿ
●ಈಸಕ್ಕಿ ಆಸೆಯನ್ನೂ ಮೀರಿದ ಆಯ್ದಕ್ಕಿ ಲಕ್ಕಮ್ಮ●ಗಾಜಾ ಸ್ಮಶಾನದ ಮೇಲೆ ಮತ್ತೆ ಅರಳುತ್ತಾ ನೆತನ್ಯಾಹು ಕುರ್ಚಿ?●ಅರುಣಾಚಲದಲ್ಲಿ ಚೀನಾ ಸೈನಿಕರೊಂದಿಗೆ ಮುಖಾಮುಖಿ: ಕೇಂದ್ರದ ಮೌನವನ್ನು ಪ್ರಶ್ನಿಸಿದ ಕಾಂಗ್ರೆಸ್‌ನ ಜೈರಾಮ್ ರಮೇಶ್●ಕಡತಗಳ ವಿಲೇವಾರಿ ಪ್ರಕ್ರಿಯೆ ಬದಲಾವಣೆ: ಚುನಾವಣಾ ಆಯುಕ್ತರಿಂದ ಕ್ಯಾಬಿನೆಟ್‌ ಕಾರ್ಯದರ್ಶಿಗೆ ಆಕ್ಷೇಪಣಾ ಪತ್ರ●ಮೋದಿ–ಅದಾನಿ ಕುರಿತ ಸಾಕ್ಷ್ಯಚಿತ್ರ ಹಂಚಿಕೊಂಡ ರಾಜ್‌ ಠಾಕ್ರೆ; ತೆಗೆದುಹಾಕುವಂತೆ ಸೂಚನೆಗಳ ನಡುವೆ ಮುಂದುವರೆದ ಚರ್ಚೆ●ಮಂಡ್ಯದಲ್ಲಿ ARAI ಪರೀಕ್ಷಾ ಕೇಂದ್ರಗಳಿಗೆ ಭೂಮಿ ಹಂಚಿಕೆ ವಿಳಂಬ: ರಾಜ್ಯ ಸರ್ಕಾರಕ್ಕೆ ಎಚ್‌.ಡಿ. ಕುಮಾರಸ್ವಾಮಿ ಪತ್ರ●ರಾಷ್ಟ್ರೀಯತೆಯ ಪಾಠ ನನಗೆ ಬೇಕಿಲ್ಲ; ನಮ್ಮ ಗುರಿ ಆಡಳಿತ, ಸಾಮಾಜಿಕ ಜಾಲತಾಣದ ಪ್ರಚಾರವಲ್ಲ: ಕೆ. ಅಣ್ಣಾಮಲೈ●ಕೇವಲ ಮದುವೆಗಾಗಿ ಧರ್ಮಾಂತರವಾಗುವುದನ್ನು ಒಪ್ಪಲು ಸಾಧ್ಯವಿಲ್ಲ: ಬಾಂಬೆ ಹೈಕೋರ್ಟ್‌●ಇನ್ನು ನೋಂದಾಯಿತ ಸಿಮ್‌ ಇದ್ದರೆ ಮಾತ್ರ ವಾಟ್ಸ್‌ಆ್ಯಪ್‌ ಬಳಕೆ ಸಾಧ್ಯ: ಜನವರಿ 1, 2027ರಿಂದ ಹೊಸ ನಿಯಮ ಜಾರಿ●ಈ-ಮುದ್ರ ಡಿಜಿಟಲ್‌ ಪ್ರಮಾಣಪತ್ರಗಳಲ್ಲಿ ಭದ್ರತಾ ಲೋಪ: ಜಾಗತಿಕ ತಂತ್ರಜ್ಞಾನ ವಲಯದಲ್ಲಿ ಆತಂಕ●ಹಾಸನ ಕಾಳಸಂತೆಗೆ ಪಡಿತರ ಅಕ್ಕಿ ಮಾರಾಟ ಯತ್ನ – ಕ್ವಿಂಟಲ್‌ ಗಟ್ಟಲೆ ಅಕ್ಕಿ, ರಾಗಿ ವಶ●ಸದ್ಯದಲ್ಲೆ ಕಬ್ಬು ಬೆಳೆಗಾರರ ಸಭೆ ಕರೆದಿದ್ದೇನೆ – ಸಿಎಂ ಡಿ.ಕೆ ಶಿವಕುಮಾರ್●ರಾಜ್ಯದಲ್ಲಿ ಐದು ದಿನಗಳಲ್ಲಿ ಮಳೆ ಸಾಧ್ಯತೆ – ಹವಾಮಾನ ಇಲಾಖೆ ಮುನ್ಸೂಚನೆ●ಸಿದ್ದರಾಮಯ್ಯ ಅವರನ್ನು ಅಧಿಕಾರದಿಂದ ಇಳಿಸಲು ವ್ಯವಸ್ಥಿತ ಸಂಚು ರೂಪಿಸಿ ಯಶಸ್ವಿಗೊಂಡಿದ್ದಾರೆ – ಸಿಎಂ ಯಡಿಯೂರಪ್ಪ●ಚುನಾವಣಾ ಆಯುಕ್ತರಿಗೆ ರಕ್ಷಣೆ ನೀಡುವ ಕಾನೂನು ರದ್ದುಗೊಳಿಸಿ – ಮಲ್ಲಿಕಾರ್ಜುನ ಖರ್ಗೆ ಆಗ್ರಹ●ದಸರಾ ವೇಳೆ ಪೊಲೀಸರ ಲಾಠಿ ಏಟಿಗೆ 4 ವರ್ಷದ ಬಾಲಕ ಗಂಭೀರ – ICUನಲ್ಲಿ ಅಂತಿಮ ಹೋರಾಟ●ಸೌದಿ ವಿಮಾನ ನಿಲ್ದಾಣದ ಮೇಲೆ ಭೀಕರ ದಾಳಿ – 8 ಮಂದಿಗೆ ಗಾಯ, ಇಬ್ಬರ ಅಂತ್ಯ●ನಂದಿಧ್ವಜ ಪೂಜೆಗೆ ಸಚಿವರಿಗೆ ಅವಕಾಶ ನಿರಾಕರಿಸಿದ ಅಧಿಕಾರಿಗಳ ವಿರುದ್ಧ ತನಿಖೆಗೆ ಆದೇಶ: ಮುಖ್ಯಮಂತ್ರಿ ಡಿ ಕೆ ಶಿವಕುಮಾರ್‌●300 ವರ್ಷಗಳಷ್ಟು ಹಳೆಯ ಐತಿಹಾಸಿಕ ರೇಸ್‌ಕೋರ್ಸ್ ಮಸೀದಿಯ ವಿದ್ಯುತ್ ಹಾಗೂ ನೀರು ಸಂಪರ್ಕ ಕಡಿತ: ತುರ್ತು ರಕ್ಷಣೆ ಕೋರಿದ ದೆಹಲಿ ವಕ್ಫ್ ಮಂಡಳಿ●ತಿಹಾರ್ ಜೈಲಿನಿಂದ ಬಿಡುಗಡೆಯಾದ ಬೆನ್ನಲ್ಲೇ ಸೌರವ್ ದಾಸ್ ಹಾಗೂ ಅಶೋತ್ ರಾಂಕಾಗೆ ದೆಹಲಿ ಅಪರಾಧ ವಿಭಾಗದಿಂದ ಸಮನ್ಸ್

NEET ಗೊಂದಲ ಬಗೆಹರಿಸಲು ಕೇಂದ್ರ ವಿಫಲ ; ಹಳೆಯ ಮಾದರಿ ಜಾರಿಗೆ ಬಿಎಸ್‌ಪಿ ನಾಯಕಿ ಮಾಯಾವತಿ ಒತ್ತಾಯ

PPeepal Media Desk

Peepal Media Desk • ರಾಜಕೀಯ

• 1 ನಿಮಿಷದ ಓದು

NEET ಗೊಂದಲ ಬಗೆಹರಿಸಲು ಕೇಂದ್ರ ವಿಫಲ ; ಹಳೆಯ ಮಾದರಿ ಜಾರಿಗೆ ಬಿಎಸ್‌ಪಿ ನಾಯಕಿ ಮಾಯಾವತಿ ಒತ್ತಾಯ

ರಾಷ್ಟ್ರೀಯ ಪರೀಕ್ಷಾ ಮಂಡಳಿ ನಡೆಸುವ NEET (ರಾಷ್ಟ್ರೀಯ ಅರ್ಹತಾ ಮತ್ತು ಪ್ರವೇಶ ಪರೀಕ್ಷೆ) ಪರೀಕ್ಷೆಯ ಬಗ್ಗೆ ದೇಶದ ಬಹುತೇಕ ರಾಜಕೀಯ ಪಕ್ಷಗಳು ವಿರೋಧ ವ್ಯಕ್ತಪಡಿಸಿದ್ದು, ಪರೀಕ್ಷೆಯನ್ನು ರದ್ದುಪಡಿಸಬೇಕೆಂದು ಒತ್ತಾಯಿಸಿದ್ದಾರೆ. ಇಂದು ಬಿಎಸ್‌ಪಿ ನಾಯಕಿ ಮಾಯಾವತಿಯವರು ಕೂಡ ರದ್ದುಗೊಳಿಸಬೇಕು ಮತ್ತು ವೈದ್ಯಕೀಯ ಪ್ರವೇಶದ ಹಳೆಯ ಪದ್ಧತಿಯನ್ನು ಮರುಸ್ಥಾಪಿಸಬೇಕು ಎಂದು ಆಗ್ರಹಿಸಿದ್ದಾರೆ.

ತಮ್ಮ ಸಾಮಾಜಿಕ ಜಾಲತಾಣ ‘X’ ಖಾತೆಯ ಮೂಲಕ ಪೋಸ್ಟ್ ಮಾಡಿರುವ ಅವರು, ‘ನೀಟ್-ಯುಜಿ ವೈದ್ಯಕೀಯ ಪರೀಕ್ಷೆಯಲ್ಲಿನ ಅಕ್ರಮಗಳು ಗಂಭೀರ ವಿಷಯವಾದಂತವು. ಇದರ ಬಗೆಗಿನ ಚರ್ಚೆ ಸಂಸತ್ ಮತ್ತು ಸುಪ್ರೀಂ ಕೋರ್ಟ್‌ವರೆಗೂ ತಲುಪಿದೆ. ಸುಪ್ರೀಂಕೋರ್ಟ್‌ ನ ತೀರ್ಪು ಏನೇ ಇರಲಿ, ಇದರಿಂದ ಲಕ್ಷಾಂತರ ಅಭ್ಯರ್ಥಿಗಳು ಮತ್ತು ಅವರ ಕುಟುಂಬಗಳಿಗೆ ಉಂಟಾದ ನೋವು ಹಾಗೂ ಮಾನಸಿಕ ಸಂಕಟ ಅವರನ್ನು ಯಾವಾಗಲೂ ಕಾಡುತ್ತದೆ’ ಎಂದು ತಮ್ಮ ಅಭಿಪ್ರಾಯ ತಿಳಿಸಿದ್ದಾರೆ.

ಮುಂದುವರೆದು ‘ಇಂತಹ ಮಹತ್ವದ ಪರೀಕ್ಷೆಯನ್ನು ಸರಿಯಾದ ಕ್ರಮದಲ್ಲಿ ನಡೆಸುವುದಾಗಿ ಜನರಿಗೆ ಭರವಸೆ ನೀಡುವಲ್ಲಿ ಕೇಂದ್ರ ವಿಫಲವಾಗಿದೆ. ಹಾಗೂ ಸರ್ಕಾರವೇ ಸಮಸ್ಯೆಯನ್ನು ಇನ್ನಷ್ಟು ಗಂಭೀರಗೊಳಿಸಿದೆ. ಆದ್ದರಿಂದ NEET – UG – PG ಪರೀಕ್ಷೆಯನ್ನು ರದ್ದುಗೊಳಿಸಿ, ಹಳೆಯ ವ್ಯವಸ್ಥೆಯನ್ನು ಮರುಸ್ಥಾಪಿಸಬೇಕು’ ಎಂಬುದು ಹಲವು ರಾಜ್ಯ ಸರ್ಕಾರಗಳ ಬೇಡಿಕೆಯಾಗಿದೆ ಎಂದು ಮಾಯಾವತಿ ಹೇಳಿದ್ದಾರೆ.

PPeepal Media Desk

Peepal Media Desk

Peepal Media · ರಾಜಕೀಯ ವಿಭಾಗ

ಸಂಬಂಧಿತ ಸುದ್ದಿಗಳು