ಮುಖ್ಯ ವಿಷಯಕ್ಕೆ ತೆರಳಿ
Peepal Media
ತಾಜಾ ಸುದ್ದಿ
ಈಸಕ್ಕಿ ಆಸೆಯನ್ನೂ ಮೀರಿದ ಆಯ್ದಕ್ಕಿ ಲಕ್ಕಮ್ಮಗಾಜಾ ಸ್ಮಶಾನದ ಮೇಲೆ ಮತ್ತೆ ಅರಳುತ್ತಾ ನೆತನ್ಯಾಹು ಕುರ್ಚಿ?ಅರುಣಾಚಲದಲ್ಲಿ ಚೀನಾ ಸೈನಿಕರೊಂದಿಗೆ ಮುಖಾಮುಖಿ: ಕೇಂದ್ರದ ಮೌನವನ್ನು ಪ್ರಶ್ನಿಸಿದ ಕಾಂಗ್ರೆಸ್‌ನ ಜೈರಾಮ್ ರಮೇಶ್ಕಡತಗಳ ವಿಲೇವಾರಿ ಪ್ರಕ್ರಿಯೆ ಬದಲಾವಣೆ: ಚುನಾವಣಾ ಆಯುಕ್ತರಿಂದ ಕ್ಯಾಬಿನೆಟ್‌ ಕಾರ್ಯದರ್ಶಿಗೆ ಆಕ್ಷೇಪಣಾ ಪತ್ರಮೋದಿ–ಅದಾನಿ ಕುರಿತ ಸಾಕ್ಷ್ಯಚಿತ್ರ ಹಂಚಿಕೊಂಡ ರಾಜ್‌ ಠಾಕ್ರೆ; ತೆಗೆದುಹಾಕುವಂತೆ ಸೂಚನೆಗಳ ನಡುವೆ ಮುಂದುವರೆದ ಚರ್ಚೆಮಂಡ್ಯದಲ್ಲಿ ARAI ಪರೀಕ್ಷಾ ಕೇಂದ್ರಗಳಿಗೆ ಭೂಮಿ ಹಂಚಿಕೆ ವಿಳಂಬ: ರಾಜ್ಯ ಸರ್ಕಾರಕ್ಕೆ ಎಚ್‌.ಡಿ. ಕುಮಾರಸ್ವಾಮಿ ಪತ್ರರಾಷ್ಟ್ರೀಯತೆಯ ಪಾಠ ನನಗೆ ಬೇಕಿಲ್ಲ; ನಮ್ಮ ಗುರಿ ಆಡಳಿತ, ಸಾಮಾಜಿಕ ಜಾಲತಾಣದ ಪ್ರಚಾರವಲ್ಲ: ಕೆ. ಅಣ್ಣಾಮಲೈಕೇವಲ ಮದುವೆಗಾಗಿ ಧರ್ಮಾಂತರವಾಗುವುದನ್ನು ಒಪ್ಪಲು ಸಾಧ್ಯವಿಲ್ಲ: ಬಾಂಬೆ ಹೈಕೋರ್ಟ್‌ಇನ್ನು ನೋಂದಾಯಿತ ಸಿಮ್‌ ಇದ್ದರೆ ಮಾತ್ರ ವಾಟ್ಸ್‌ಆ್ಯಪ್‌ ಬಳಕೆ ಸಾಧ್ಯ: ಜನವರಿ 1, 2027ರಿಂದ ಹೊಸ ನಿಯಮ ಜಾರಿಈ-ಮುದ್ರ ಡಿಜಿಟಲ್‌ ಪ್ರಮಾಣಪತ್ರಗಳಲ್ಲಿ ಭದ್ರತಾ ಲೋಪ: ಜಾಗತಿಕ ತಂತ್ರಜ್ಞಾನ ವಲಯದಲ್ಲಿ ಆತಂಕಹಾಸನ ಕಾಳಸಂತೆಗೆ ಪಡಿತರ ಅಕ್ಕಿ ಮಾರಾಟ ಯತ್ನ – ಕ್ವಿಂಟಲ್‌ ಗಟ್ಟಲೆ ಅಕ್ಕಿ, ರಾಗಿ ವಶಸದ್ಯದಲ್ಲೆ ಕಬ್ಬು ಬೆಳೆಗಾರರ ಸಭೆ ಕರೆದಿದ್ದೇನೆ – ಸಿಎಂ ಡಿ.ಕೆ ಶಿವಕುಮಾರ್ರಾಜ್ಯದಲ್ಲಿ ಐದು ದಿನಗಳಲ್ಲಿ ಮಳೆ ಸಾಧ್ಯತೆ – ಹವಾಮಾನ ಇಲಾಖೆ ಮುನ್ಸೂಚನೆಸಿದ್ದರಾಮಯ್ಯ ಅವರನ್ನು ಅಧಿಕಾರದಿಂದ ಇಳಿಸಲು ವ್ಯವಸ್ಥಿತ ಸಂಚು ರೂಪಿಸಿ ಯಶಸ್ವಿಗೊಂಡಿದ್ದಾರೆ – ಸಿಎಂ ಯಡಿಯೂರಪ್ಪಚುನಾವಣಾ ಆಯುಕ್ತರಿಗೆ ರಕ್ಷಣೆ ನೀಡುವ ಕಾನೂನು ರದ್ದುಗೊಳಿಸಿ – ಮಲ್ಲಿಕಾರ್ಜುನ ಖರ್ಗೆ ಆಗ್ರಹದಸರಾ ವೇಳೆ ಪೊಲೀಸರ ಲಾಠಿ ಏಟಿಗೆ 4 ವರ್ಷದ ಬಾಲಕ ಗಂಭೀರ – ICUನಲ್ಲಿ ಅಂತಿಮ ಹೋರಾಟಸೌದಿ ವಿಮಾನ ನಿಲ್ದಾಣದ ಮೇಲೆ ಭೀಕರ ದಾಳಿ – 8 ಮಂದಿಗೆ ಗಾಯ, ಇಬ್ಬರ ಅಂತ್ಯನಂದಿಧ್ವಜ ಪೂಜೆಗೆ ಸಚಿವರಿಗೆ ಅವಕಾಶ ನಿರಾಕರಿಸಿದ ಅಧಿಕಾರಿಗಳ ವಿರುದ್ಧ ತನಿಖೆಗೆ ಆದೇಶ: ಮುಖ್ಯಮಂತ್ರಿ ಡಿ ಕೆ ಶಿವಕುಮಾರ್‌300 ವರ್ಷಗಳಷ್ಟು ಹಳೆಯ ಐತಿಹಾಸಿಕ ರೇಸ್‌ಕೋರ್ಸ್ ಮಸೀದಿಯ ವಿದ್ಯುತ್ ಹಾಗೂ ನೀರು ಸಂಪರ್ಕ ಕಡಿತ: ತುರ್ತು ರಕ್ಷಣೆ ಕೋರಿದ ದೆಹಲಿ ವಕ್ಫ್ ಮಂಡಳಿತಿಹಾರ್ ಜೈಲಿನಿಂದ ಬಿಡುಗಡೆಯಾದ ಬೆನ್ನಲ್ಲೇ ಸೌರವ್ ದಾಸ್ ಹಾಗೂ ಅಶೋತ್ ರಾಂಕಾಗೆ ದೆಹಲಿ ಅಪರಾಧ ವಿಭಾಗದಿಂದ ಸಮನ್ಸ್

ಚನ್ನಪಟ್ಟಣ ಉಪ ಚುನಾವಣೆ: ತಾವು ಅಥವಾ ಡಿಕೆಸು ಸ್ಪರ್ಧಿಸುವ ಸುಳಿವು ನೀಡಿದ ಡಿಸಿಎಂ

PPeepal Media

Peepal Media ರಾಜಕೀಯ

• 1 ನಿಮಿಷದ ಓದು

ಚನ್ನಪಟ್ಟಣ ಉಪ ಚುನಾವಣೆ: ತಾವು ಅಥವಾ ಡಿಕೆಸು ಸ್ಪರ್ಧಿಸುವ ಸುಳಿವು ನೀಡಿದ ಡಿಸಿಎಂ

ಮಂಗಳೂರು: ಚನ್ನಪಟ್ಟಣ ಉಪ ಚುನಾವಣೆಯಲ್ಲಿ ಕಾಂಗ್ರೆಸ್‌ ಹೈಕಮಾಂಡ್‌ ನನ್ನ ಅಥವಾ ಸಹೋದರ ಡಿ.ಕೆ.ಸುರೇಶ್‌ ಹೆಸರು ಸೂಚಿಸಿದರೆ ಸ್ಪರ್ಧಿಸಬೇಕಾಗುತ್ತದೆ. ಹೈಕಮಾಂಡ್‌ ಆದೇಶವನ್ನು ತೆಗೆದುಹಾಕಲಾಗದು ಎಂದು ಡಿಸಿಎಂ ಡಿ.ಕೆ.ಶಿವಕುಮಾರ್‌ ಹೇಳಿದ್ದಾರೆ.

ಕುಕ್ಕೆ ಸುಬ್ರಹ್ಮಣ್ಯ ಕ್ಷೇತ್ರಕ್ಕೆ ಭೇಟಿ ನೀಡುವ ಸಲುವಾಗಿ ಮಂಗಳವಾದ ಮಂಗಳೂರಿನ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಬಂದಿಳಿದ ಅವರು, ಸುದ್ದಿಗಾರರೊಂದಿಗೆ ಮಾತನಾಡಿದರು.

ತಮ್ಮ ಡಿ.ಕೆ.ಸುರೇಶ್ ರಿಗೆ ಚುನಾವಣೆಯಲ್ಲಿ ಆಸಕ್ತಿ ಇಲ್ಲ. ಜನ ನಮಗೆ ವಿಶ್ರಾಂತಿ ಸೂಚಿಸಿದ್ದಾರೆ ಎಂದು ಚುನಾವಣೆ ರಾಜಕೀಯವನ್ನು ತೀರಸ್ಕರಿಸುತ್ತಿದ್ದಾರೆ. ಆದರೆ ಪಕ್ಷ ಇಚ್ಚಿಸಿದರೆ ನಿಲ್ಲಬೇಕಾಗುತ್ತದೆ ಎಂದು ಹೇಳಿದರು.

ದೇವರು ನಮಗೆ ಈಗ ಅಧಿಕಾರ ಕೊಟ್ಟಿದ್ದಾರೆ. 136 ಸೀಟ್ ಕೊಟ್ಟಿದ್ದಾರೆ, ಅದನ್ನು ಉಳಿಸಿಕೊಳ್ಳಬೇಕು. ಚನ್ನಪಟ್ಟಣ ಜನಕ್ಕೆ ಏನೂ ಅಭಿವೃದ್ಧಿ ಆಗಿಲ್ಲ ಎಂಬ ಭಾವನೆ ಇದೆ. ನಾವು ಒಂದಿಷ್ಟು ಅಳಿಲು ಸೇವೆ ಮಾಡಬೇಕು ಎಂದು ಉದ್ದೇಶಿಸಿದ್ದೇವೆ. ಅದಕ್ಕೆಇದೀಗ ಸರಿಯಾದ ಸಮಯ ಬಂದಿದೆ ಎಂದು ಮಾರ್ಮಿಕವಾಗಿ ನುಡಿದರು.

ಎಚ್.ಡಿ.ಕುಮಾರಸ್ವಾಮಿ ಬಹಳ ಲೇಟಾಗಿ ರಾಜಕಾರಣಕ್ಕೆ ಬಂದವರು. ನಾನು 1985ರಲ್ಲೇ ವಿಧಾನಸಭಾ ಚುನಾವಣೆಗೆ ನಿಂತೆ. ಅವರು 1995ರ ನಂತರ ರಾಜಕಾರಣಕ್ಕೆ ಬಂದವರು. ಅವರಿಗಿಂತ 10 ವರ್ಷ ಮೊದಲೇ ನನಗೆ ಚನ್ನಪಟ್ಟಣ ಗೊತ್ತು. ಎಂದು ಡಿಕೆಶಿ ಹೇಳಿದರು.

ಹೆಚ್ಚಿನ ಡಿಸಿಎಂ ಸ್ಥಾನಗಳಿಗೆ ಬೇಡಿಕೆ ಸೃಷ್ಟಿಯಾಗಿರುವ ಬಗ್ಗೆ ಪ್ರತಿಕ್ರಿಯಿಸಿದ ಡಿಕೆಶಿ, ನೀವು ಪ್ರತಿ ದಿನ ಸುದ್ದಿ ಪ್ರಕಟ ಮಾಡುತ್ತಿದ್ದೀರಲ್ಲ, ಅದರಿಂದ ಖುಷಿಯಾಗುವವರಿಗೆ ಆಗಲಿ. ಯಾರು ಏನು ಬೇಕಿದ್ದರೂ ಬೇಡಿಕೆ ಇಡಲಿ. ಪಕ್ಷ ಯಾರಿಗೆ ಏನು ಉತ್ತರ ಕೊಡಬೇಕೋ ಕೊಡುತ್ತದೆ ಎಂದರು.

PPeepal Media

Peepal Media

Peepal Media · ರಾಜಕೀಯ ವಿಭಾಗ

ಸಂಬಂಧಿತ ಸುದ್ದಿಗಳು