ಮುಖ್ಯ ವಿಷಯಕ್ಕೆ ತೆರಳಿ
Peepal Media
ತಾಜಾ ಸುದ್ದಿ
ಈಸಕ್ಕಿ ಆಸೆಯನ್ನೂ ಮೀರಿದ ಆಯ್ದಕ್ಕಿ ಲಕ್ಕಮ್ಮಗಾಜಾ ಸ್ಮಶಾನದ ಮೇಲೆ ಮತ್ತೆ ಅರಳುತ್ತಾ ನೆತನ್ಯಾಹು ಕುರ್ಚಿ?ಅರುಣಾಚಲದಲ್ಲಿ ಚೀನಾ ಸೈನಿಕರೊಂದಿಗೆ ಮುಖಾಮುಖಿ: ಕೇಂದ್ರದ ಮೌನವನ್ನು ಪ್ರಶ್ನಿಸಿದ ಕಾಂಗ್ರೆಸ್‌ನ ಜೈರಾಮ್ ರಮೇಶ್ಕಡತಗಳ ವಿಲೇವಾರಿ ಪ್ರಕ್ರಿಯೆ ಬದಲಾವಣೆ: ಚುನಾವಣಾ ಆಯುಕ್ತರಿಂದ ಕ್ಯಾಬಿನೆಟ್‌ ಕಾರ್ಯದರ್ಶಿಗೆ ಆಕ್ಷೇಪಣಾ ಪತ್ರಮೋದಿ–ಅದಾನಿ ಕುರಿತ ಸಾಕ್ಷ್ಯಚಿತ್ರ ಹಂಚಿಕೊಂಡ ರಾಜ್‌ ಠಾಕ್ರೆ; ತೆಗೆದುಹಾಕುವಂತೆ ಸೂಚನೆಗಳ ನಡುವೆ ಮುಂದುವರೆದ ಚರ್ಚೆಮಂಡ್ಯದಲ್ಲಿ ARAI ಪರೀಕ್ಷಾ ಕೇಂದ್ರಗಳಿಗೆ ಭೂಮಿ ಹಂಚಿಕೆ ವಿಳಂಬ: ರಾಜ್ಯ ಸರ್ಕಾರಕ್ಕೆ ಎಚ್‌.ಡಿ. ಕುಮಾರಸ್ವಾಮಿ ಪತ್ರರಾಷ್ಟ್ರೀಯತೆಯ ಪಾಠ ನನಗೆ ಬೇಕಿಲ್ಲ; ನಮ್ಮ ಗುರಿ ಆಡಳಿತ, ಸಾಮಾಜಿಕ ಜಾಲತಾಣದ ಪ್ರಚಾರವಲ್ಲ: ಕೆ. ಅಣ್ಣಾಮಲೈಕೇವಲ ಮದುವೆಗಾಗಿ ಧರ್ಮಾಂತರವಾಗುವುದನ್ನು ಒಪ್ಪಲು ಸಾಧ್ಯವಿಲ್ಲ: ಬಾಂಬೆ ಹೈಕೋರ್ಟ್‌ಇನ್ನು ನೋಂದಾಯಿತ ಸಿಮ್‌ ಇದ್ದರೆ ಮಾತ್ರ ವಾಟ್ಸ್‌ಆ್ಯಪ್‌ ಬಳಕೆ ಸಾಧ್ಯ: ಜನವರಿ 1, 2027ರಿಂದ ಹೊಸ ನಿಯಮ ಜಾರಿಈ-ಮುದ್ರ ಡಿಜಿಟಲ್‌ ಪ್ರಮಾಣಪತ್ರಗಳಲ್ಲಿ ಭದ್ರತಾ ಲೋಪ: ಜಾಗತಿಕ ತಂತ್ರಜ್ಞಾನ ವಲಯದಲ್ಲಿ ಆತಂಕಹಾಸನ ಕಾಳಸಂತೆಗೆ ಪಡಿತರ ಅಕ್ಕಿ ಮಾರಾಟ ಯತ್ನ – ಕ್ವಿಂಟಲ್‌ ಗಟ್ಟಲೆ ಅಕ್ಕಿ, ರಾಗಿ ವಶಸದ್ಯದಲ್ಲೆ ಕಬ್ಬು ಬೆಳೆಗಾರರ ಸಭೆ ಕರೆದಿದ್ದೇನೆ – ಸಿಎಂ ಡಿ.ಕೆ ಶಿವಕುಮಾರ್ರಾಜ್ಯದಲ್ಲಿ ಐದು ದಿನಗಳಲ್ಲಿ ಮಳೆ ಸಾಧ್ಯತೆ – ಹವಾಮಾನ ಇಲಾಖೆ ಮುನ್ಸೂಚನೆಸಿದ್ದರಾಮಯ್ಯ ಅವರನ್ನು ಅಧಿಕಾರದಿಂದ ಇಳಿಸಲು ವ್ಯವಸ್ಥಿತ ಸಂಚು ರೂಪಿಸಿ ಯಶಸ್ವಿಗೊಂಡಿದ್ದಾರೆ – ಸಿಎಂ ಯಡಿಯೂರಪ್ಪಚುನಾವಣಾ ಆಯುಕ್ತರಿಗೆ ರಕ್ಷಣೆ ನೀಡುವ ಕಾನೂನು ರದ್ದುಗೊಳಿಸಿ – ಮಲ್ಲಿಕಾರ್ಜುನ ಖರ್ಗೆ ಆಗ್ರಹದಸರಾ ವೇಳೆ ಪೊಲೀಸರ ಲಾಠಿ ಏಟಿಗೆ 4 ವರ್ಷದ ಬಾಲಕ ಗಂಭೀರ – ICUನಲ್ಲಿ ಅಂತಿಮ ಹೋರಾಟಸೌದಿ ವಿಮಾನ ನಿಲ್ದಾಣದ ಮೇಲೆ ಭೀಕರ ದಾಳಿ – 8 ಮಂದಿಗೆ ಗಾಯ, ಇಬ್ಬರ ಅಂತ್ಯನಂದಿಧ್ವಜ ಪೂಜೆಗೆ ಸಚಿವರಿಗೆ ಅವಕಾಶ ನಿರಾಕರಿಸಿದ ಅಧಿಕಾರಿಗಳ ವಿರುದ್ಧ ತನಿಖೆಗೆ ಆದೇಶ: ಮುಖ್ಯಮಂತ್ರಿ ಡಿ ಕೆ ಶಿವಕುಮಾರ್‌300 ವರ್ಷಗಳಷ್ಟು ಹಳೆಯ ಐತಿಹಾಸಿಕ ರೇಸ್‌ಕೋರ್ಸ್ ಮಸೀದಿಯ ವಿದ್ಯುತ್ ಹಾಗೂ ನೀರು ಸಂಪರ್ಕ ಕಡಿತ: ತುರ್ತು ರಕ್ಷಣೆ ಕೋರಿದ ದೆಹಲಿ ವಕ್ಫ್ ಮಂಡಳಿತಿಹಾರ್ ಜೈಲಿನಿಂದ ಬಿಡುಗಡೆಯಾದ ಬೆನ್ನಲ್ಲೇ ಸೌರವ್ ದಾಸ್ ಹಾಗೂ ಅಶೋತ್ ರಾಂಕಾಗೆ ದೆಹಲಿ ಅಪರಾಧ ವಿಭಾಗದಿಂದ ಸಮನ್ಸ್

ಮತಗಳ್ಳತನ | ಮುಖ್ಯ ಚುನಾವಣಾಧಿಕಾರಿ ತನ್ನ ಮಾಲಿಕರನ್ನು ರಕ್ಷಿಸುವುದನ್ನು ಬಿಟ್ಟು ಸತ್ಯ ಒಪ್ಪಿಕೊಳ್ಳಲಿ: ಸಿದ್ಧರಾಮಯ್ಯ

PPeepal Media

Peepal Media ರಾಜಕೀಯ

• 1 ನಿಮಿಷದ ಓದು

ಮತಗಳ್ಳತನ | ಮುಖ್ಯ ಚುನಾವಣಾಧಿಕಾರಿ ತನ್ನ ಮಾಲಿಕರನ್ನು ರಕ್ಷಿಸುವುದನ್ನು ಬಿಟ್ಟು ಸತ್ಯ ಒಪ್ಪಿಕೊಳ್ಳಲಿ: ಸಿದ್ಧರಾಮಯ್ಯ

ದೇಶದ ಚುನಾವಣಾ ವ್ಯವಸ್ಥೆಯಲ್ಲಿ ನಡೆಯುತ್ತಿರುವ ವ್ಯವಸ್ಥಿತ ಅಕ್ರಮಗಳ ಕರಾಳ ಮುಖವನ್ನು ಲೋಕಸಭೆಯ ವಿರೋಧ ಪಕ್ಷದ ನಾಯಕರಾದ ರಾಹುಲ್ ಗಾಂಧಿ ಅವರು ಮತ್ತೊಮ್ಮೆ ಬಹಿರಂಗಪಡಿಸಿದ್ದಾರೆ. ಮೊದಲು ಕರ್ನಾಟಕದ ಮಹದೇವಪುರ, ನಂತರ ಆಳಂದ ವಿಧಾನಸಭಾ ಕ್ಷೇತ್ರಗಳಲ್ಲಿನ ಮತಗಳ್ಳತನವನ್ನು ಬಯಲು ಮಾಡಿದ್ದ ಅವರು, ಈಗ ಹರಿಯಾಣ ರಾಜ್ಯದ ಇಡೀ ಚುನಾವಣಾ ಫಲಿತಾಂಶವನ್ನೇ ಹೇಗೆ ಬುಡಮೇಲು ಮಾಡಲಾಗಿದೆ ಎಂಬುದನ್ನು ದಾಖಲೆ ಸಹಿತ ಜನರ ಮುಂದಿಟ್ಟಿದ್ದಾರೆ ಎಂದು ಮುಖ್ಯಮಂತ್ರಿ ಸಿದ್ಧರಾಮಯ್ಯ ಹೇಳಿದ್ದಾರೆ.

ಪಾರದರ್ಶಕ ಮತ್ತು ನಿಷ್ಪಕ್ಷಪಾತ ಚುನಾವಣೆಯ ಮೂಲಕ ಪ್ರಜಾಪ್ರಭುತ್ವವನ್ನು ರಕ್ಷಣೆ ಮಾಡಬೇಕಿರುವ ಚುನಾವಣಾ ಆಯೋಗವೇ ಕೇಂದ್ರ ಸರ್ಕಾರದ ಜೊತೆಗೂಡಿ ಪ್ರಜಾಪ್ರಭುತ್ವ ವ್ಯವಸ್ಥೆಯ ಕತ್ತು ಹಿಸುಕುತ್ತಿದೆ ಎಂಬುದಕ್ಕೆ ಈ ದಾಖಲೆಗಳು ಸಾಕ್ಷಿಯಾಗಿವೆ.

ಈ ಬಾರಿಯ ಮತ ಕಳ್ಳತನದ ಪ್ರಕ್ರಿಯೆಯಲ್ಲಿ ಬಿಜೆಪಿ ಮತ್ತು ಚುನಾವಣಾ ಆಯೋಗವು ತಮ್ಮ ನಿರ್ಲಜ್ಜತನವನ್ನು ಪ್ರದರ್ಶಿಸಿವೆ ಎಂದು ಸಿದ್ಧರಾಮಯ್ಯ ಹೇಳಿದ್ದಾರೆ. ಮಹಾರಾಷ್ಟ್ರ ಮತ್ತು ಕರ್ನಾಟಕ ವಿಧಾನಸಭಾ ಚುನಾವಣೆಯಲ್ಲಿ ಕೇವಲ ಭಾರತೀಯರ ಹೆಸರುಗಳನ್ನಷ್ಟೇ ಬಳಸಿ ನಕಲಿ ಮತದಾರರನ್ನು ಸೃಷ್ಟಿಸುತ್ತಿದ್ದ ಇವರು, ಹರಿಯಾಣದಲ್ಲಿ ಒಂದು ಹೆಜ್ಜೆ ಮುಂದೆ ಹೋಗಿ ಬ್ರೆಜಿಲ್‌ನ ರೂಪದರ್ಶಿಯ ಗುರುತನ್ನು ಕೂಡ ತಮ್ಮ ಮತಗಳ್ಳತನಕ್ಕೆ ಬಳಸಿಕೊಂಡಿದ್ದಾರೆ.

ಇದರಿಂದಾಗಿ ಈ ಬಾರಿ ಅಂತಾರಾಷ್ಟ್ರೀಯ ಮಟ್ಟದಲ್ಲಿ ದೇಶ ಮತ್ತು ಪ್ರಜಾಪ್ರಭುತ್ವ ವ್ಯವಸ್ಥೆಯ ಮಾನ ಹೋಗುವುದು ಖಚಿತ ಎಂದು ಅವರು ತೀವ್ರ ಟೀಕೆ ಮಾಡಿದ್ದಾರೆ. ಹರಿಯಾಣ ವಿಧಾನಸಭಾ ಚುನಾವಣೆಯಲ್ಲಿ 5 ಲಕ್ಷಕ್ಕೂ ಅಧಿಕ ನಕಲಿ ಮತದಾರರು ಮತ್ತು ತಿರುಚಿದ ಅಥವಾ ಗುರುತಿಸಲು ಸಾಧ್ಯವಾಗದಂತಹ ಫೋಟೊಗಳನ್ನು ಬಳಸಿ 1 ಲಕ್ಷಕ್ಕೂ ಅಧಿಕ ಮತಗಳನ್ನು ಕಳವು ಮಾಡಲಾಗಿದೆ. ಈ ರೀತಿ ಒಟ್ಟು ಹರಿಯಾಣ ವಿಧಾನಸಭಾ ಚುನಾವಣೆಯಲ್ಲಿ 25 ಲಕ್ಷಕ್ಕೂ ಅಧಿಕ ಮತಗಳ್ಳತನ ನಡೆದಿದ್ದು, ಹರಿಯಾಣದಲ್ಲಿ ಮತ ಚಲಾಯಿಸಿದ ಪ್ರತಿ 8 ಜನರ ಪೈಕಿ ಒಂದು ನಕಲಿ ಮತ ಇದೆ ಎಂದು ಸ್ಪಷ್ಟವಾಗಿದೆ ಎಂದು ಮುಖ್ಯಮಂತ್ರಿ ಹೇಳಿದ್ದಾರೆ.

ದೇಶದ ಬಹುತೇಕ ಚುನಾವಣಾ ಸಮೀಕ್ಷೆಗಳು ಹರಿಯಾಣದಲ್ಲಿ ಬಿಜೆಪಿ ಧೂಳೀಪಟವಾಗಲಿದೆ ಎಂದು ಭವಿಷ್ಯ ನುಡಿದಿದ್ದವು. ಹರಿಯಾಣದ ಜನ ಈ ಬಾರಿ ಬಿಜೆಪಿ ಸರ್ಕಾರವನ್ನು ಕಿತ್ತೊಗೆಯಲೇಬೇಕು ಎಂದು ದೃಢ ಸಂಕಲ್ಪ ಮಾಡಿದ್ದರೂ, ಬಿಜೆಪಿ ಹೇಗೆ ಬಹುಮತ ಪಡೆದು ಸರ್ಕಾರ ರಚಿಸಿತು ಎನ್ನುವ ಅನುಮಾನಕ್ಕೆ ರಾಹುಲ್ ಗಾಂಧಿಯವರ ಈ ದಾಖಲೆಗಳು ಉತ್ತರ ನೀಡಿವೆ.

ತಮ್ಮ ಮೇಲಿನ ಆರೋಪಗಳಿಗೆ ಹಾರಿಕೆ ಉತ್ತರ ನೀಡಿ ಪಲಾಯನ ಮಾಡುತ್ತಿದ್ದ, ಆರೋಪ ಮಾಡಿದವರನ್ನೇ ಪ್ರಮಾಣ ಮಾಡಿ ಎಂದು ಅಸಂಬದ್ಧವಾಗಿ ಮಾತನಾಡುತ್ತಿದ್ದ ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಅವರು ಈ ಬಾರಿಯಾದರೂ “ತನ್ನ ಮಾಲೀಕರ” ರಕ್ಷಣೆಯ ದುಸ್ಸಾಹಸಕ್ಕೆ ಕೈಹಾಕದೆ ಸತ್ಯ ಒಪ್ಪಿಕೊಂಡು, ಮಾಡಿದ ಪಾಪಗಳಿಗೆ ಕಾನೂನಿನ ಮೂಲಕ ಪ್ರಾಯಶ್ಚಿತ್ತ ಮಾಡಿಕೊಳ್ಳಲಿ ಎಂದು ಸಿದ್ಧರಾಮಯ್ಯ ಅವರು ಖಡಕ್ ಆಗಿ ಆಗ್ರಹಿಸಿದ್ದಾರೆ.

PPeepal Media

Peepal Media

Peepal Media · ರಾಜಕೀಯ ವಿಭಾಗ

ಸಂಬಂಧಿತ ಸುದ್ದಿಗಳು