ಮುಖ್ಯ ವಿಷಯಕ್ಕೆ ತೆರಳಿ
Peepal Media
ತಾಜಾ ಸುದ್ದಿ
●ಈಸಕ್ಕಿ ಆಸೆಯನ್ನೂ ಮೀರಿದ ಆಯ್ದಕ್ಕಿ ಲಕ್ಕಮ್ಮ●ಗಾಜಾ ಸ್ಮಶಾನದ ಮೇಲೆ ಮತ್ತೆ ಅರಳುತ್ತಾ ನೆತನ್ಯಾಹು ಕುರ್ಚಿ?●ಅರುಣಾಚಲದಲ್ಲಿ ಚೀನಾ ಸೈನಿಕರೊಂದಿಗೆ ಮುಖಾಮುಖಿ: ಕೇಂದ್ರದ ಮೌನವನ್ನು ಪ್ರಶ್ನಿಸಿದ ಕಾಂಗ್ರೆಸ್‌ನ ಜೈರಾಮ್ ರಮೇಶ್●ಕಡತಗಳ ವಿಲೇವಾರಿ ಪ್ರಕ್ರಿಯೆ ಬದಲಾವಣೆ: ಚುನಾವಣಾ ಆಯುಕ್ತರಿಂದ ಕ್ಯಾಬಿನೆಟ್‌ ಕಾರ್ಯದರ್ಶಿಗೆ ಆಕ್ಷೇಪಣಾ ಪತ್ರ●ಮೋದಿ–ಅದಾನಿ ಕುರಿತ ಸಾಕ್ಷ್ಯಚಿತ್ರ ಹಂಚಿಕೊಂಡ ರಾಜ್‌ ಠಾಕ್ರೆ; ತೆಗೆದುಹಾಕುವಂತೆ ಸೂಚನೆಗಳ ನಡುವೆ ಮುಂದುವರೆದ ಚರ್ಚೆ●ಮಂಡ್ಯದಲ್ಲಿ ARAI ಪರೀಕ್ಷಾ ಕೇಂದ್ರಗಳಿಗೆ ಭೂಮಿ ಹಂಚಿಕೆ ವಿಳಂಬ: ರಾಜ್ಯ ಸರ್ಕಾರಕ್ಕೆ ಎಚ್‌.ಡಿ. ಕುಮಾರಸ್ವಾಮಿ ಪತ್ರ●ರಾಷ್ಟ್ರೀಯತೆಯ ಪಾಠ ನನಗೆ ಬೇಕಿಲ್ಲ; ನಮ್ಮ ಗುರಿ ಆಡಳಿತ, ಸಾಮಾಜಿಕ ಜಾಲತಾಣದ ಪ್ರಚಾರವಲ್ಲ: ಕೆ. ಅಣ್ಣಾಮಲೈ●ಕೇವಲ ಮದುವೆಗಾಗಿ ಧರ್ಮಾಂತರವಾಗುವುದನ್ನು ಒಪ್ಪಲು ಸಾಧ್ಯವಿಲ್ಲ: ಬಾಂಬೆ ಹೈಕೋರ್ಟ್‌●ಇನ್ನು ನೋಂದಾಯಿತ ಸಿಮ್‌ ಇದ್ದರೆ ಮಾತ್ರ ವಾಟ್ಸ್‌ಆ್ಯಪ್‌ ಬಳಕೆ ಸಾಧ್ಯ: ಜನವರಿ 1, 2027ರಿಂದ ಹೊಸ ನಿಯಮ ಜಾರಿ●ಈ-ಮುದ್ರ ಡಿಜಿಟಲ್‌ ಪ್ರಮಾಣಪತ್ರಗಳಲ್ಲಿ ಭದ್ರತಾ ಲೋಪ: ಜಾಗತಿಕ ತಂತ್ರಜ್ಞಾನ ವಲಯದಲ್ಲಿ ಆತಂಕ●ಹಾಸನ ಕಾಳಸಂತೆಗೆ ಪಡಿತರ ಅಕ್ಕಿ ಮಾರಾಟ ಯತ್ನ – ಕ್ವಿಂಟಲ್‌ ಗಟ್ಟಲೆ ಅಕ್ಕಿ, ರಾಗಿ ವಶ●ಸದ್ಯದಲ್ಲೆ ಕಬ್ಬು ಬೆಳೆಗಾರರ ಸಭೆ ಕರೆದಿದ್ದೇನೆ – ಸಿಎಂ ಡಿ.ಕೆ ಶಿವಕುಮಾರ್●ರಾಜ್ಯದಲ್ಲಿ ಐದು ದಿನಗಳಲ್ಲಿ ಮಳೆ ಸಾಧ್ಯತೆ – ಹವಾಮಾನ ಇಲಾಖೆ ಮುನ್ಸೂಚನೆ●ಸಿದ್ದರಾಮಯ್ಯ ಅವರನ್ನು ಅಧಿಕಾರದಿಂದ ಇಳಿಸಲು ವ್ಯವಸ್ಥಿತ ಸಂಚು ರೂಪಿಸಿ ಯಶಸ್ವಿಗೊಂಡಿದ್ದಾರೆ – ಸಿಎಂ ಯಡಿಯೂರಪ್ಪ●ಚುನಾವಣಾ ಆಯುಕ್ತರಿಗೆ ರಕ್ಷಣೆ ನೀಡುವ ಕಾನೂನು ರದ್ದುಗೊಳಿಸಿ – ಮಲ್ಲಿಕಾರ್ಜುನ ಖರ್ಗೆ ಆಗ್ರಹ●ದಸರಾ ವೇಳೆ ಪೊಲೀಸರ ಲಾಠಿ ಏಟಿಗೆ 4 ವರ್ಷದ ಬಾಲಕ ಗಂಭೀರ – ICUನಲ್ಲಿ ಅಂತಿಮ ಹೋರಾಟ●ಸೌದಿ ವಿಮಾನ ನಿಲ್ದಾಣದ ಮೇಲೆ ಭೀಕರ ದಾಳಿ – 8 ಮಂದಿಗೆ ಗಾಯ, ಇಬ್ಬರ ಅಂತ್ಯ●ನಂದಿಧ್ವಜ ಪೂಜೆಗೆ ಸಚಿವರಿಗೆ ಅವಕಾಶ ನಿರಾಕರಿಸಿದ ಅಧಿಕಾರಿಗಳ ವಿರುದ್ಧ ತನಿಖೆಗೆ ಆದೇಶ: ಮುಖ್ಯಮಂತ್ರಿ ಡಿ ಕೆ ಶಿವಕುಮಾರ್‌●300 ವರ್ಷಗಳಷ್ಟು ಹಳೆಯ ಐತಿಹಾಸಿಕ ರೇಸ್‌ಕೋರ್ಸ್ ಮಸೀದಿಯ ವಿದ್ಯುತ್ ಹಾಗೂ ನೀರು ಸಂಪರ್ಕ ಕಡಿತ: ತುರ್ತು ರಕ್ಷಣೆ ಕೋರಿದ ದೆಹಲಿ ವಕ್ಫ್ ಮಂಡಳಿ●ತಿಹಾರ್ ಜೈಲಿನಿಂದ ಬಿಡುಗಡೆಯಾದ ಬೆನ್ನಲ್ಲೇ ಸೌರವ್ ದಾಸ್ ಹಾಗೂ ಅಶೋತ್ ರಾಂಕಾಗೆ ದೆಹಲಿ ಅಪರಾಧ ವಿಭಾಗದಿಂದ ಸಮನ್ಸ್

ನನ್ನಂಥವರಿಗೆ ಅನ್ನಭಾಗ್ಯ ಸಿಗಬಾರದು ಎನ್ನುವ ಉದ್ದೇಶಕ್ಕಷ್ಟೆ ಅನರ್ಹರ ಬಿಪಿಎಲ್ ಕಾರ್ಡ್ ಎಪಿಎಲ್ ಗೆ ಬದಲಾಗಿದೆ ಅಷ್ಟೆ: ಸಿ ಎಂ ಸಿದ್ದರಾಮಯ್ಯ

PPeepal Media

Peepal Media • ರಾಜಕೀಯ

• 2 ನಿಮಿಷದ ಓದು

ನನ್ನಂಥವರಿಗೆ ಅನ್ನಭಾಗ್ಯ ಸಿಗಬಾರದು ಎನ್ನುವ ಉದ್ದೇಶಕ್ಕಷ್ಟೆ ಅನರ್ಹರ ಬಿಪಿಎಲ್ ಕಾರ್ಡ್ ಎಪಿಎಲ್ ಗೆ ಬದಲಾಗಿದೆ ಅಷ್ಟೆ: ಸಿ ಎಂ ಸಿದ್ದರಾಮಯ್ಯ

ಕೆ.ಆರ್.ಪೇಟೆ ಡಿ 4: ನಾನು ಬಡತನ ರೇಖೆಗಿಂತ ಕೆಳಗಿಲ್ಲ. ಹೀಗಾಗಿ ಅನ್ನಭಾಗ್ಯ ನನಗೆ ಸಿಗಬಾರದು. ನನ್ನಂಥವರಿಗೆ ಅನ್ನಭಾಗ್ಯ ಸಿಗಬಾರದು ಎನ್ನುವ ಉದ್ದೇಶಕ್ಕಷ್ಟೆ ಅನರ್ಹರ ಬಿಪಿಎಲ್ ಕಾರ್ಡ್ ಎಪಿಎಲ್ ಗೆ ಬದಲಾಗಿದೆ ಅಷ್ಟೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ನುಡಿದರು.

ಕೆ.ಆರ್.ಪೇಟೆಯಲ್ಲಿ ಕಸಬಾ ಪ್ರಾಥಮಿಕ‌ ಕೃಷಿ ಪತ್ತಿನ ಸಹಕಾರ ಸಂಘದ ಕಟ್ಟಡವನ್ನು ಉದ್ಘಾಟಿಸಿ ಹಲವು ಫಲಾನುಭವಿಗಳಿಗೆ ಸಾಲದ ಚೆಕ್ ವಿತರಿಸಿ ಮಾತನಾಡಿದರು.

GDP ಯಲ್ಲಿ ಇಡೀ ದೇಶದಲ್ಲಿ ನಾವೇ ನಂಬರ್ ಒನ್. ಇದಕ್ಕೆ ಸಹಕಾರ ಕ್ಷೇತ್ರದ ಕೊಡುಗೆ ಅಪಾರ. ರೈತರ ಶ್ರಮಕ್ಕೆ ತಕ್ಕ ಫಲ ಸಿಗಬೇಕು. ನಮ್ಮ ಉತ್ಪಾದನೆಗೆ ನಾವೇ ಬೆಲೆ ನಿಗಧಿ ಮಾಡುವಂತಾಗಬೇಕು ಎಂದರು.

ಕೈಗಾರಿಕೋದ್ಯಮಿಗಳು ಅವರು ತಯಾರಿಸಿದ ವಸ್ತುಗೆ ಅವರೇ ಬೆಲೆ ನಿಗಧಿ ಮಾಡ್ತಾರೆ. ಇದೇ ಅಧಿಕಾರ ನಮ್ಮ‌ ರೈತರಿಗೂ ಸಿಗಬೇಕು.

ನಾವು ಒಕ್ಕೂಟ ವ್ಯವಸ್ಥೆಯಲ್ಲಿದ್ದೇವೆ. ಒಕ್ಕೂಟ ವ್ಯವಸ್ಥೆ ಯಶಸ್ವಿ ಆಗಬೇಕಾದರೆ ದೇಶದ 140 ಕೋಟಿ ಜನರಿಗೂ ಸಕಲ ಸಹಕಾರ ಕೊಡಬೇಕು. ನಮ್ಮ ರೈತ ಸಮುದಾಯಕ್ಕೆ ಬೆಲೆ ಫಿಕ್ಸ್ ಮಾಡುವ ಅಧಿಕಾರ ಬರಬೇಕು. ಆಗ ತಾರತಮ್ಯ ನಿವಾರಣೆ ಆಗುತ್ತದೆ ಎಂದರು.

ನಾನು ಬಡತನ ರೇಖೆಗಿಂತ ಕೆಳಗಿಲ್ಲ. ಹೀಗಾಗಿ ಅನ್ನಭಾಗ್ಯ ನನಗೆ ಸಿಗಬಾರದು. ನನ್ನಂಥವರಿಗೆ ಅನ್ನಭಾಗ್ಯ ಸಿಗಬಾರದು ಎನ್ನುವ ಉದ್ದೇಶಕ್ಕಷ್ಟೆ ಅನರ್ಹರ ಬಿಪಿಎಲ್ ಕಾರ್ಡ್ ಎಪಿಎಲ್ ಗೆ ಬದಲಾಗಿದೆ ಅಷ್ಟೆ. ತೆರಿಗೆ ಕಟ್ಟುವವರಿಗೆ ಅನ್ನಭಾಗ್ಯದ ಅಗತ್ಯ ಇಲ್ಲ ಅಲ್ಲವೇ ಎಂದು ಪ್ರಶ್ನಿಸಿದರು.

ಈ ದೇಶಕ್ಕೆ ಸಿಕ್ಕ ರಾಜಕೀಯ ಸ್ವಾತಂತ್ರ್ಯ ಯಶಸ್ವಿ ಆಗಬೇಕಾದರೆ, ಪ್ರತಿಯೊಬ್ಬರಿಗೂ ಆರ್ಥಿಕ ಮತ್ತು ಸಾಮಾಜಿಕ ಸ್ವಾತಂತ್ರ್ಯ ಸಿಗಬೇಕು ಎನ್ನುವ ಅಂಬೇಡ್ಕರ್ ಅವರ ಮಾತನ್ನು ಉಲ್ಲೇಖಿಸಿ ಈ ಕಾರಣಕ್ಕೇ ನಾವು ಅನ್ನ ಭಾಗ್ಯ ಮತ್ತು ಆರ್ಥಿಕ ಶಕ್ತಿ ಕೊಡುವ ಐದೈದು ಗ್ಯಾರಂಟಿಗಳನ್ನು ಜಾರಿ ಮಾಡಿದ್ದೇವೆ ಎಂದರು.

ಬಡ ಕುಟುಂಬದವರ ಮತ್ತು ನಮ್ಮ ಹೆಣ್ಣು ಮಕ್ಕಳ ಹಣ ಉಳಿತಾಯ ಆಗಲಿ ಎನ್ನುವ ಕಾರಣದಿಂದ ಗೃಹಲಕ್ಷ್ಮಿ, ಗೃಹಜ್ಯೋತಿ, ಶಕ್ತಿ, ಅನ್ನಭಾಗ್ಯ ಯೋಜನೆಗಳನ್ನು ನಮ್ಮ ಜನರ ಮನೆ ಬಾಗಿಲಿಗೆ ತಲುಪಿಸಿದ್ದೇವೆ ಎಂದರು‌.

ಕೈಯಲ್ಲಿ ಕಾಸಿದ್ದರೆ ತಾನೆ ನಮ್ಮ ಜನ ಖರೀದಿಗೆ ಹೋಗೋದು. ಅದಕ್ಕೇ ಜನರ ಕೈಯಲ್ಲಿ ಕಾಸು ಇರುವ ಯೋಜನೆ ಜಾರಿ ಮಾಡಿದ್ದೇವೆ ಎಂದರು.

ಕೆ.ಆರ್.ಪೇಟೆ ರಸ್ತೆ, ಕೆರೆ, ಸೇತುವೆಗೆ ಹಣ ಕೊಡ್ತೀನಿ

ಕೆ.ಆರ್.ಪೇಟೆಯಲ್ಲಿ ಹಾಳಾಗಿರುವ ರಸ್ತೆ, ಕೆರೆ, ಸೇತುವೆಗೆ ಹಣ ಕೊಡಬೇಕು ಎನ್ನುವ ಮನವಿ ಬಂದಿದೆ. ನಾವು ಬೇಡಿಕೆಗೆ ತಕ್ಕಷ್ಟು ಹಣವನ್ನು ಖಂಡಿತಾ ಬಿಡುಗಡೆ ಮಾಡ್ತೀನಿ ಎಂದು ಭರವಸೆ ನೀಡಿದರು.‌

ದಿನಕ್ಕೆ 5 ಕೋಟಿ ಹಾಲು ಉತ್ಪಾದಕರಿಗೆ ಕೊಡ್ತಾ ಇದ್ದೀವಿ

ರಾಜ್ಯದಲ್ಲಿ ಪ್ರತೀ ಲೀಟರ್ ಹಾಲಿಗೆ 5 ರೂಪಾಯಿ ಸಹಾಯ ಧನ ಜಾರಿ ಮಾಡಿದ್ದು ನಾವು. ದಿನಕ್ಕೆ ರಾಜ್ಯದಲ್ಲಿ ಒಂದು ಕೋಟಿ ಲೀಟರ್ ಹಾಲು ಉತ್ಪಾದನೆ ಆಗುತ್ತಿದೆ. ಅಂದರೆ ಪ್ರತೀ ದಿನ 5 ಕೋಟಿ ರೂಪಾಯಿಯನ್ನು ಹಾಲು ಉತ್ಪಾದಕರಿಗೆ ಕೊಡುತ್ತಿದ್ದೇವೆ ಎಂದು ಲೆಕ್ಕ ವಿವರಿಸಿದರು.

ನಾವು ಒಂದು ಕಡೆ ರೈತರಿಗೆ ಶಕ್ತಿ ತುಂಬುತ್ತಿದ್ದೇವೆ. ಮತ್ತೊಂದು ಕಡೆ ಕೇಂದ್ರ ಸರ್ಕಾರ ರೈತರಿಗೆ ದ್ರೋಹ ಎಸಗುತ್ತಿದೆ. ರಾಜ್ಯದ ರೈತರಿಗೆ ನಬಾರ್ಡ್ ನಿಂದ ಕೊಡುವ ಸಬ್ಸಿಡಿ ಸಾಲದ ಪ್ರಮಾಣವನ್ನು ಶೇ58 ರಷ್ಟು ಕಡಿತಗೊಳಿಸಿದೆ. ಬರೀ ಭಾಷಣ ಮಾಡಿದರೆ ರೈತರ ಬದುಕು ಉದ್ದಾರ ಆಗಲ್ಲ ಎಂದು ಬಿಜೆಪಿಯ ಭಾಷಣದ ನೀತಿಯನ್ನು ಟೀಕಿಸಿದರು‌.

PPeepal Media

Peepal Media

Peepal Media · ರಾಜಕೀಯ ವಿಭಾಗ

ಸಂಬಂಧಿತ ಸುದ್ದಿಗಳು