ಮುಖ್ಯ ವಿಷಯಕ್ಕೆ ತೆರಳಿ
Peepal Media
ತಾಜಾ ಸುದ್ದಿ
ಈಸಕ್ಕಿ ಆಸೆಯನ್ನೂ ಮೀರಿದ ಆಯ್ದಕ್ಕಿ ಲಕ್ಕಮ್ಮಗಾಜಾ ಸ್ಮಶಾನದ ಮೇಲೆ ಮತ್ತೆ ಅರಳುತ್ತಾ ನೆತನ್ಯಾಹು ಕುರ್ಚಿ?ಅರುಣಾಚಲದಲ್ಲಿ ಚೀನಾ ಸೈನಿಕರೊಂದಿಗೆ ಮುಖಾಮುಖಿ: ಕೇಂದ್ರದ ಮೌನವನ್ನು ಪ್ರಶ್ನಿಸಿದ ಕಾಂಗ್ರೆಸ್‌ನ ಜೈರಾಮ್ ರಮೇಶ್ಕಡತಗಳ ವಿಲೇವಾರಿ ಪ್ರಕ್ರಿಯೆ ಬದಲಾವಣೆ: ಚುನಾವಣಾ ಆಯುಕ್ತರಿಂದ ಕ್ಯಾಬಿನೆಟ್‌ ಕಾರ್ಯದರ್ಶಿಗೆ ಆಕ್ಷೇಪಣಾ ಪತ್ರಮೋದಿ–ಅದಾನಿ ಕುರಿತ ಸಾಕ್ಷ್ಯಚಿತ್ರ ಹಂಚಿಕೊಂಡ ರಾಜ್‌ ಠಾಕ್ರೆ; ತೆಗೆದುಹಾಕುವಂತೆ ಸೂಚನೆಗಳ ನಡುವೆ ಮುಂದುವರೆದ ಚರ್ಚೆಮಂಡ್ಯದಲ್ಲಿ ARAI ಪರೀಕ್ಷಾ ಕೇಂದ್ರಗಳಿಗೆ ಭೂಮಿ ಹಂಚಿಕೆ ವಿಳಂಬ: ರಾಜ್ಯ ಸರ್ಕಾರಕ್ಕೆ ಎಚ್‌.ಡಿ. ಕುಮಾರಸ್ವಾಮಿ ಪತ್ರರಾಷ್ಟ್ರೀಯತೆಯ ಪಾಠ ನನಗೆ ಬೇಕಿಲ್ಲ; ನಮ್ಮ ಗುರಿ ಆಡಳಿತ, ಸಾಮಾಜಿಕ ಜಾಲತಾಣದ ಪ್ರಚಾರವಲ್ಲ: ಕೆ. ಅಣ್ಣಾಮಲೈಕೇವಲ ಮದುವೆಗಾಗಿ ಧರ್ಮಾಂತರವಾಗುವುದನ್ನು ಒಪ್ಪಲು ಸಾಧ್ಯವಿಲ್ಲ: ಬಾಂಬೆ ಹೈಕೋರ್ಟ್‌ಇನ್ನು ನೋಂದಾಯಿತ ಸಿಮ್‌ ಇದ್ದರೆ ಮಾತ್ರ ವಾಟ್ಸ್‌ಆ್ಯಪ್‌ ಬಳಕೆ ಸಾಧ್ಯ: ಜನವರಿ 1, 2027ರಿಂದ ಹೊಸ ನಿಯಮ ಜಾರಿಈ-ಮುದ್ರ ಡಿಜಿಟಲ್‌ ಪ್ರಮಾಣಪತ್ರಗಳಲ್ಲಿ ಭದ್ರತಾ ಲೋಪ: ಜಾಗತಿಕ ತಂತ್ರಜ್ಞಾನ ವಲಯದಲ್ಲಿ ಆತಂಕಹಾಸನ ಕಾಳಸಂತೆಗೆ ಪಡಿತರ ಅಕ್ಕಿ ಮಾರಾಟ ಯತ್ನ – ಕ್ವಿಂಟಲ್‌ ಗಟ್ಟಲೆ ಅಕ್ಕಿ, ರಾಗಿ ವಶಸದ್ಯದಲ್ಲೆ ಕಬ್ಬು ಬೆಳೆಗಾರರ ಸಭೆ ಕರೆದಿದ್ದೇನೆ – ಸಿಎಂ ಡಿ.ಕೆ ಶಿವಕುಮಾರ್ರಾಜ್ಯದಲ್ಲಿ ಐದು ದಿನಗಳಲ್ಲಿ ಮಳೆ ಸಾಧ್ಯತೆ – ಹವಾಮಾನ ಇಲಾಖೆ ಮುನ್ಸೂಚನೆಸಿದ್ದರಾಮಯ್ಯ ಅವರನ್ನು ಅಧಿಕಾರದಿಂದ ಇಳಿಸಲು ವ್ಯವಸ್ಥಿತ ಸಂಚು ರೂಪಿಸಿ ಯಶಸ್ವಿಗೊಂಡಿದ್ದಾರೆ – ಸಿಎಂ ಯಡಿಯೂರಪ್ಪಚುನಾವಣಾ ಆಯುಕ್ತರಿಗೆ ರಕ್ಷಣೆ ನೀಡುವ ಕಾನೂನು ರದ್ದುಗೊಳಿಸಿ – ಮಲ್ಲಿಕಾರ್ಜುನ ಖರ್ಗೆ ಆಗ್ರಹದಸರಾ ವೇಳೆ ಪೊಲೀಸರ ಲಾಠಿ ಏಟಿಗೆ 4 ವರ್ಷದ ಬಾಲಕ ಗಂಭೀರ – ICUನಲ್ಲಿ ಅಂತಿಮ ಹೋರಾಟಸೌದಿ ವಿಮಾನ ನಿಲ್ದಾಣದ ಮೇಲೆ ಭೀಕರ ದಾಳಿ – 8 ಮಂದಿಗೆ ಗಾಯ, ಇಬ್ಬರ ಅಂತ್ಯನಂದಿಧ್ವಜ ಪೂಜೆಗೆ ಸಚಿವರಿಗೆ ಅವಕಾಶ ನಿರಾಕರಿಸಿದ ಅಧಿಕಾರಿಗಳ ವಿರುದ್ಧ ತನಿಖೆಗೆ ಆದೇಶ: ಮುಖ್ಯಮಂತ್ರಿ ಡಿ ಕೆ ಶಿವಕುಮಾರ್‌300 ವರ್ಷಗಳಷ್ಟು ಹಳೆಯ ಐತಿಹಾಸಿಕ ರೇಸ್‌ಕೋರ್ಸ್ ಮಸೀದಿಯ ವಿದ್ಯುತ್ ಹಾಗೂ ನೀರು ಸಂಪರ್ಕ ಕಡಿತ: ತುರ್ತು ರಕ್ಷಣೆ ಕೋರಿದ ದೆಹಲಿ ವಕ್ಫ್ ಮಂಡಳಿತಿಹಾರ್ ಜೈಲಿನಿಂದ ಬಿಡುಗಡೆಯಾದ ಬೆನ್ನಲ್ಲೇ ಸೌರವ್ ದಾಸ್ ಹಾಗೂ ಅಶೋತ್ ರಾಂಕಾಗೆ ದೆಹಲಿ ಅಪರಾಧ ವಿಭಾಗದಿಂದ ಸಮನ್ಸ್

BMTC ನೇಮಕಾತಿ | ಕೋಲು ಕೊಟ್ಟು ಪೆಟ್ಟು ತಿಂದ ಆರ್‌ ಅಶೋಕ

PPeepal Media Desk

Peepal Media Desk ರಾಜಕೀಯ

• 2 ನಿಮಿಷದ ಓದು

BMTC ನೇಮಕಾತಿ | ಕೋಲು ಕೊಟ್ಟು ಪೆಟ್ಟು ತಿಂದ ಆರ್‌ ಅಶೋಕ

ಬೆಂಗಳೂರು: ನಿನ್ನೆ ದಿನ ವಿಪಕ್ಷ ನಾಯಕ ಆರ್‌ ಅಶೋಕ್‌ ಅವರು BMTC ಎಲೆಕ್ಟ್ರಿಕ್ ಬಸ್ಸುಗಳಲ್ಲಿ‌ ಮಲಯಾಳಿ ಡ್ರೈವರುಗಳನ್ನು ನೇಮಿಸಿಕೊಂಡಿರುವ ಬಗ್ಗೆ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿದ್ದರು. ಅದೀಗ ಅವರಿಗೆ ತಿರುಗುಬಾಣವಾಗಿದ್ದು ಅವರನ್ನು ಮುಜುಗರಕ್ಕೆ ಸಿಲುಕಿಸಿದೆ.

ಟಿವಿ9 ವಾಹಿನಿಯ ವರದಿಯೊಂದನ್ನು ಶೇರ್‌ ಮಾಡಿಕೊಂಡು ಆರ್‌ ಅಶೋಕ ಅವರು “ಕರ್ನಾಟಕ ಸರ್ಕಾರ ರಾಜ್ಯದ ಯುವಕರಿಗೆ ಮೋಸ ಮಾಡುತ್ತಿದೆ” ಎಂದು ತಮ್ಮ X ಖಾತೆಯಲ್ಲಿ ಬರೆದುಕೊಂಡಿದ್ದರು.

ನಂತರ ಈ ಕುರಿತು ರಾಜ್ಯದ ಮುಖ್ಯಮಂತ್ರಿ ಸಿದ್ಧರಾಮಯ್ಯನವರು ಈ ಕುರಿತು ನಿನ್ನೆ ಸಂಜೆ ದೀರ್ಘವಾಗಿ ಪ್ರತಿಕ್ರಿಯಿಸಿದ್ದು ವಿರೋಧ ಪಕ್ಷದ ನಾಟಕವನ್ನು ಎಳೆ ಎಳೆಯಾಗಿ ಬಿಡಿಸಿಟ್ಟಿದ್ದಾರೆ.

ಈ ವಿಷಯವಾಗಿ ಅವರು ತಮ್ಮ ಅಧಿಕೃತ ಸಾಮಾಜಿಕ ಜಾಲತಾಣ ಖಾತೆಗಳಲ್ಲಿ ಪೋಸ್ಟ್‌ ಕೂಡಾ ಮಾಡಿದ್ದಾರೆ.

ತಮ್ಮ ಪೋಸ್ಟಿನಲ್ಲಿ ಅಶೋಕ್‌ ಅವರನ್ನು ನೇರವಾಗಿ ಉಲ್ಲೇಖಿಸಿರುವ ಅವರು “ಸ್ವಾಮಿ ವಿರೋಧ ಪಕ್ಷದ ನಾಯಕರೇ, ನಿಮ್ಮ ಟ್ವೀಟ್ ನಿಮ್ಮ ಪರಮ ಅಜ್ಞಾನದ ಫಲವೋ? ಅಥವಾ ವಿರೋಧ ಪಕ್ಷದ ನಾಯಕ ಅಸ್ವಿತ್ವದಲ್ಲಿದ್ದಾರೆ ಎಂದು ಜನರಿಗೆ ತಿಳಿಸಲು ಟ್ವೀಟ್ ಮಾಡುತ್ತಿರೋ?? ಇದು ನಮ್ಮನ್ನೂ ಸೇರಿಸಿಕೊಂಡಂತೆ ರಾಜ್ಯದ ಜನಸಾಮಾನ್ಯರಿಗೂ ಅರ್ಥವಾಗದೆ ಇರುವ ಯಕ್ಷ ಪ್ರಶ್ನೆ” ಎಂದು ಹೇಳಿದ್ದಾರೆ.

ಮುಂದುವರೆದು “ನೀವು ಸುಳ್ಳಿನ ಕೋಟೆಯನ್ನು ಎಷ್ಟೇ ದೊಡ್ಡದಾಗಿ ಕಟ್ಟಿದರೂ ಅದರ ಆಯುಷ್ಯ ಕಡಿಮೆ. ನಮ್ಮ ಸತ್ಯದ ಒಂದು ಏಟಿಗೆ ಅದು ಕುಸಿದುಬೀಳುತ್ತಲೇ ಇದೆ. ನೀವು ಮತ್ತೆ ಮತ್ತೆ ಸುಳ್ಳುಗಳನ್ನು ಹೇಳಿ ನಮ್ಮ ಕೈಗೆ ದೊಣ್ಣೆ ಕೊಟ್ಟು ಹೊಡೆಸಿಕೊಳ್ಳುತ್ತಲೇ ಇದ್ದೀರಿ. ಇದು ಮುಂದುವರಿಯಲಿ ಆಲ್ ದಿ ಬೆಸ್ಟ್.

ಈಗ ಸತ್ಯದ ಮಾತುಗಳನ್ನು ಕೇಳುವಂತವರಾಗಿ.
ಪ್ರಪ್ರಥಮವಾಗಿ ಸಾರಿಗೆ ಸಂಸ್ಥೆಗಳಲ್ಲಿ ಎಲೆಕ್ಟ್ರಿಕ್ ಬಸ್ಸುಗಳ ಸೇರ್ಪಡೆಯು ಕೇಂದ್ರ ಸರ್ಕಾರದ ನೀತಿ ಯೋಜನೆಯಂತೆ ಜಾರಿಯಾಗಿದೆ. ಎಲೆಕ್ಟ್ರಿಕ್ ಬಸ್ಸುಗಳನ್ನು ಸಾರಿಗೆ ಸಂಸ್ಥೆಗಳು ನೇರವಾಗಿ ಖರೀದಿಸುವಂತಿಲ್ಲ, ಖಾಸಗಿ ಕಂಪನಿಯವರು ಮಾಲೀಕತ್ವ ಹೊಂದಿರುತ್ತಾರೆ, ಅವರಿಗೆ ಸಬ್ಸಿಡಿಯನ್ನು ಕೇಂದ್ರ ಸರ್ಕಾರವು ನೇರವಾಗಿ ನೀಡುತ್ತದೆ ಹಾಗೂ ಚಾಲಕರನ್ನು ನಿಯೋಜಿಸುವ ಕಾರ್ಯವು ಖಾಸಗಿ ಅವರಿಗೆ ನೀಡಲಾಗಿದೆ‌.

ಚಾಲಕರ ವೇತನ, ಆಯ್ಕೆ ಯಾವುದರಲ್ಲಿಯೂ ಸಾರಿಗೆ ಸಂಸ್ಥೆಗಳಿಗೆ ತೀರ್ಮಾನ ತೆಗೆದುಕೊಳ್ಳುವ ಅಧಿಕಾರವಿಲ್ಲ. ಬಸ್ಸುಗಳ ಕಾರ್ಯಾಚರಣೆ ಹೊಣೆ ಮಾತ್ರ ಸಾರಿಗೆ ಸಂಸ್ಥೆಗಳದ್ದು, ಈ ವಿಷಯವನ್ನು ಹತ್ತು ಹಲವಾರು ಬಾರಿ ನಮ್ಮ ಸಾರಿಗೆ ಸಚಿವರು ಪ್ರತಿಯೊ‌ಂದು ವೇದಿಕೆಯಲ್ಲಿಯೂ ಸ್ಪಷ್ಟಪಡಿಸಿರುತ್ತಾರೆ. ತಮಗೆ ಅದು ಅರ್ಥವಾಗದಿರುವುದು ನಿಜಕ್ಕೂ ಶೋಚನೀಯ.

ಯುವಕರಿಗೆ ಅದರಲ್ಲಿಯೂ ರಾಜ್ಯದ ಯುವಕರಿಗೆ ನಿರುದ್ಯೋಗ ಭಾಗ್ಯ ಕಲ್ಪಿಸಲು ಕಾರಣವಾದ ಕೇಂದ್ರ ಸರ್ಕಾರದ ಈ ಯೋಜನೆಯ ಬಗೆಗಿನ ತಮ್ಮ ನೋವು, ದುಃಖ ಮತ್ತು ಸಂಕಟಗಳಿಗೆ ಉತ್ತರ ಕಂಡುಕೊಳ್ಳುವ ತವಕ ನಿಮ್ಮಲ್ಲಿದ್ದರೆ ದಯವಿಟ್ಟು ನಿಮ್ಮ ಪೂಜ್ಯ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರನ್ನು ಕೇಳಿ ಉತ್ತರ ಪಡೆಯಿರಿ, ಅಸಂಬದ್ಧ ಟ್ವೀಟ್ ಗಳ ಮೂಲಕ ನಿಮ್ಮ ಅಜ್ಞಾನವನ್ನು ಪ್ರದರ್ಶಿಸಬೇಡಿ” ಎಂದು ವ್ಯಂಗ್ಯವಾಡಿದ್ದಾರೆ.

“ರಾಜ್ಯದ ಬಿಜೆಪಿ ನಾಯಕರೇ, ನಿಮ್ಮ ಆಡಳಿತ ಅವಧಿಯಲ್ಲಿ ಸಾರಿಗೆ ಸಂಸ್ಥೆಗಳ ಮೇಲೆ ರೂ.5,900 ಕೋಟಿ ಸಾಲ ಮಾಡಿ ಆ ಹೊರೆಯನ್ನು ನಮ್ಮ‌ ತಲೆ ಮೇಲೆ ಹೊರೆಸಿ ಹೋಗಿದ್ದೀರಿ. ಶಾಂತಿನಗರ ಟಿ.ಟಿ.ಎಂ.ಸಿ ಯನ್ನು ಸಾಲ ಪಡೆಯಲು ಅಡವಿಟ್ಟಿದ್ದು, ತಮ್ಮ ಆಡಳಿತ ಅವಧಿಯಲ್ಲಿಯೇ ಎಂದು ಪ್ರತ್ಯೇಕವಾಗಿ ಹೇಳುವ ಅಗತ್ಯವಿಲ್ಲವೆನಿಸುತ್ತದೆ.

ಸಾರಿಗೆ ಸಂಸ್ಥೆಗಳಲ್ಲಿ 14,000 ಹುದ್ದೆಗಳು ಖಾಲಿಯಿದ್ದರೂ, ತಮ್ಮ ಅವಧಿಯಲ್ಲಿ ಒಂದೇ ಒಂದು ನೇಮಕಾತಿ ಮಾಡದೆ, ನಮ್ಮ ಅವಧಿಯಲ್ಲಿ ಹೊರಡಿಸಲಾಗಿದ್ದ ನೇಮಕಾತಿ‌ ಪ್ರಕಟಣೆಗಳಿಗೂ ತಡೆತಂದಿರುವುದನ್ನು ಮರೆತು ಬಿಟ್ಟಿದ್ದೀರಾ?

ನಮ್ಮ‌ ಸರ್ಕಾರ ಬಂದೊಡನೆಯೇ ನೇಮಕಾತಿ ಪ್ರಕ್ರಿಯೆಗಳಿಗೆ ಚಾಲನೆ ನೀಡಿದ್ದು, ಈಗಾಗಲೇ 1,650 ಚಾಲಕ/ ನಿರ್ವಾಹಕರು ಹಾಗೂ 250 ತಾಂತ್ರಿಕ ಸಿಬ್ಬಂದಿಗಳನ್ನು ನೇಮಕ ಮಾಡಲಾಗಿದೆ. ಉಳಿದ ಹುದ್ದೆಗಳ ನೇಮಕಾತಿ ಪ್ರಕ್ರಿಯೆ ಭರದಿಂದ ಸಾಗಿದೆ. ನಾಲ್ಕು ಸಾರಿಗೆ ನಿಗಮಗಳಲ್ಲಿ‌ ಕಳೆದ ಒಂದು ವರ್ಷದ ಅವಧಿಯಲ್ಲಿ 500 ಕ್ಕೂ ಹೆಚ್ಚು ಅನುಕಂಪದ ಆಧಾರದ‌ ಮೇಲೆ‌ ನೇಮಕಾತಿ‌ ಪತ್ರವನ್ನು ಸಿಬ್ಬಂದಿಗಳ ಅವಲಂಬಿತರಿಗೆ ನೀಡಲಾಗಿದೆ.

ಯುವಕರಿಗೆ ನಿರುದ್ಯೋಗ ಭಾಗ್ಯ ಕರುಣಿಸಿ, ಸಾರಿಗೆ ಸಂಸ್ಥೆಗಳನ್ನು ಅವನತಿಯತ್ತ ಕೊಂಡ್ಯೊಯ್ದ ಹೆಗ್ಗಳಿಕೆ ತಮ್ಮದೇ ಅಲ್ಲವೇ? ನಾವು ನುಡಿದಂತೆ ನಡೆಯುವವರು, ತಮ್ಮಂತೆ ಬರೀ ಭಾಷಣದಲ್ಲಿ ಕೋಟಿ ಕೋಟಿ ಉದ್ಯೋಗ ಭಾಗ್ಯ ಕರುಣಿಸಿ, ಯುವಜನರನ್ನು ಶೋಷಿಸುವ ಕಾರ್ಯ ಮಾಡಿಲ್ಲ.

ಸಾರಿಗೆ ಸಂಸ್ಥೆಗಳಲ್ಲಿ ಕಳೆದ 5 ವರ್ಷಗಳಲ್ಲಿ ಹೊಸ ಬಸ್ಸುಗಳ ಸೇರ್ಪಡೆ ಮಾಡದೇ, ಡಕೋಟ ಬಸ್ಸುಗಳನ್ನು ದಯಪಾಲಿಸಿರುವ ನೀವು ಮಾತನಾಡುವ ಪರಿಗೆ ವಿಷಾದವಲ್ಲದೇ ಮತ್ತೇನು ವ್ಯಕ್ತಪಡಿಸಲು ಸಾಧ್ಯ? ತಮ್ಮ ಬೇಜಾವಬ್ದಾರಿ, ಆಧಾರರಹಿತ, ತಪ್ಪು ಹೇಳಿಕೆಗಳಿಗೆ ಸಂತಾಪ ಸೂಚಿಸುತ್ತಾ ನಿಮಗೆ ನೀವು ನಂಬಿರುವ ದೇವರು ಸತ್ಯ ಹೇಳುವ ಸದ್ಬುದ್ದಿಯನ್ನು ಕರುಣಿಸಲು ಎಂದು ಹಾರೈಸುತ್ತೇನೆ” ಎಂದು ದೀರ್ಘ ಉತ್ತರ ಕೊಟ್ಟಿದ್ದಾರೆ.

ಇತ್ತೀಚೆಗೆ ಬಸ್‌ ಸೋರುತ್ತದೆ ಎಂದು ಸಾರಿಗೆ ಇಲಾಖೆಯನ್ನು ಟೀಕಿಸಿ ಪೋಸ್ಟ್‌ ಮಾಡಿ ಸಾರಿಗೆ ಸಚಿವ ರಾಮಲಿಂಗ ರೆಡ್ಡಿಯವರಿಂದಲೂ ಬಿಜೆಪಿ ಸರಿಯಾಗಿ ಹೇಳಿಸಿಕೊಂಡಿದ್ದನ್ನು ಇಲ್ಲಿ ನೆನಪಿಸಿಕೊಳ್ಳಬಹುದಾಗಿದೆ.

PPeepal Media Desk

Peepal Media Desk

Peepal Media · ರಾಜಕೀಯ ವಿಭಾಗ

ಸಂಬಂಧಿತ ಸುದ್ದಿಗಳು