ಮುಖ್ಯ ವಿಷಯಕ್ಕೆ ತೆರಳಿ
Peepal Media
ತಾಜಾ ಸುದ್ದಿ
ಈಸಕ್ಕಿ ಆಸೆಯನ್ನೂ ಮೀರಿದ ಆಯ್ದಕ್ಕಿ ಲಕ್ಕಮ್ಮಗಾಜಾ ಸ್ಮಶಾನದ ಮೇಲೆ ಮತ್ತೆ ಅರಳುತ್ತಾ ನೆತನ್ಯಾಹು ಕುರ್ಚಿ?ಅರುಣಾಚಲದಲ್ಲಿ ಚೀನಾ ಸೈನಿಕರೊಂದಿಗೆ ಮುಖಾಮುಖಿ: ಕೇಂದ್ರದ ಮೌನವನ್ನು ಪ್ರಶ್ನಿಸಿದ ಕಾಂಗ್ರೆಸ್‌ನ ಜೈರಾಮ್ ರಮೇಶ್ಕಡತಗಳ ವಿಲೇವಾರಿ ಪ್ರಕ್ರಿಯೆ ಬದಲಾವಣೆ: ಚುನಾವಣಾ ಆಯುಕ್ತರಿಂದ ಕ್ಯಾಬಿನೆಟ್‌ ಕಾರ್ಯದರ್ಶಿಗೆ ಆಕ್ಷೇಪಣಾ ಪತ್ರಮೋದಿ–ಅದಾನಿ ಕುರಿತ ಸಾಕ್ಷ್ಯಚಿತ್ರ ಹಂಚಿಕೊಂಡ ರಾಜ್‌ ಠಾಕ್ರೆ; ತೆಗೆದುಹಾಕುವಂತೆ ಸೂಚನೆಗಳ ನಡುವೆ ಮುಂದುವರೆದ ಚರ್ಚೆಮಂಡ್ಯದಲ್ಲಿ ARAI ಪರೀಕ್ಷಾ ಕೇಂದ್ರಗಳಿಗೆ ಭೂಮಿ ಹಂಚಿಕೆ ವಿಳಂಬ: ರಾಜ್ಯ ಸರ್ಕಾರಕ್ಕೆ ಎಚ್‌.ಡಿ. ಕುಮಾರಸ್ವಾಮಿ ಪತ್ರರಾಷ್ಟ್ರೀಯತೆಯ ಪಾಠ ನನಗೆ ಬೇಕಿಲ್ಲ; ನಮ್ಮ ಗುರಿ ಆಡಳಿತ, ಸಾಮಾಜಿಕ ಜಾಲತಾಣದ ಪ್ರಚಾರವಲ್ಲ: ಕೆ. ಅಣ್ಣಾಮಲೈಕೇವಲ ಮದುವೆಗಾಗಿ ಧರ್ಮಾಂತರವಾಗುವುದನ್ನು ಒಪ್ಪಲು ಸಾಧ್ಯವಿಲ್ಲ: ಬಾಂಬೆ ಹೈಕೋರ್ಟ್‌ಇನ್ನು ನೋಂದಾಯಿತ ಸಿಮ್‌ ಇದ್ದರೆ ಮಾತ್ರ ವಾಟ್ಸ್‌ಆ್ಯಪ್‌ ಬಳಕೆ ಸಾಧ್ಯ: ಜನವರಿ 1, 2027ರಿಂದ ಹೊಸ ನಿಯಮ ಜಾರಿಈ-ಮುದ್ರ ಡಿಜಿಟಲ್‌ ಪ್ರಮಾಣಪತ್ರಗಳಲ್ಲಿ ಭದ್ರತಾ ಲೋಪ: ಜಾಗತಿಕ ತಂತ್ರಜ್ಞಾನ ವಲಯದಲ್ಲಿ ಆತಂಕಹಾಸನ ಕಾಳಸಂತೆಗೆ ಪಡಿತರ ಅಕ್ಕಿ ಮಾರಾಟ ಯತ್ನ – ಕ್ವಿಂಟಲ್‌ ಗಟ್ಟಲೆ ಅಕ್ಕಿ, ರಾಗಿ ವಶಸದ್ಯದಲ್ಲೆ ಕಬ್ಬು ಬೆಳೆಗಾರರ ಸಭೆ ಕರೆದಿದ್ದೇನೆ – ಸಿಎಂ ಡಿ.ಕೆ ಶಿವಕುಮಾರ್ರಾಜ್ಯದಲ್ಲಿ ಐದು ದಿನಗಳಲ್ಲಿ ಮಳೆ ಸಾಧ್ಯತೆ – ಹವಾಮಾನ ಇಲಾಖೆ ಮುನ್ಸೂಚನೆಸಿದ್ದರಾಮಯ್ಯ ಅವರನ್ನು ಅಧಿಕಾರದಿಂದ ಇಳಿಸಲು ವ್ಯವಸ್ಥಿತ ಸಂಚು ರೂಪಿಸಿ ಯಶಸ್ವಿಗೊಂಡಿದ್ದಾರೆ – ಸಿಎಂ ಯಡಿಯೂರಪ್ಪಚುನಾವಣಾ ಆಯುಕ್ತರಿಗೆ ರಕ್ಷಣೆ ನೀಡುವ ಕಾನೂನು ರದ್ದುಗೊಳಿಸಿ – ಮಲ್ಲಿಕಾರ್ಜುನ ಖರ್ಗೆ ಆಗ್ರಹದಸರಾ ವೇಳೆ ಪೊಲೀಸರ ಲಾಠಿ ಏಟಿಗೆ 4 ವರ್ಷದ ಬಾಲಕ ಗಂಭೀರ – ICUನಲ್ಲಿ ಅಂತಿಮ ಹೋರಾಟಸೌದಿ ವಿಮಾನ ನಿಲ್ದಾಣದ ಮೇಲೆ ಭೀಕರ ದಾಳಿ – 8 ಮಂದಿಗೆ ಗಾಯ, ಇಬ್ಬರ ಅಂತ್ಯನಂದಿಧ್ವಜ ಪೂಜೆಗೆ ಸಚಿವರಿಗೆ ಅವಕಾಶ ನಿರಾಕರಿಸಿದ ಅಧಿಕಾರಿಗಳ ವಿರುದ್ಧ ತನಿಖೆಗೆ ಆದೇಶ: ಮುಖ್ಯಮಂತ್ರಿ ಡಿ ಕೆ ಶಿವಕುಮಾರ್‌300 ವರ್ಷಗಳಷ್ಟು ಹಳೆಯ ಐತಿಹಾಸಿಕ ರೇಸ್‌ಕೋರ್ಸ್ ಮಸೀದಿಯ ವಿದ್ಯುತ್ ಹಾಗೂ ನೀರು ಸಂಪರ್ಕ ಕಡಿತ: ತುರ್ತು ರಕ್ಷಣೆ ಕೋರಿದ ದೆಹಲಿ ವಕ್ಫ್ ಮಂಡಳಿತಿಹಾರ್ ಜೈಲಿನಿಂದ ಬಿಡುಗಡೆಯಾದ ಬೆನ್ನಲ್ಲೇ ಸೌರವ್ ದಾಸ್ ಹಾಗೂ ಅಶೋತ್ ರಾಂಕಾಗೆ ದೆಹಲಿ ಅಪರಾಧ ವಿಭಾಗದಿಂದ ಸಮನ್ಸ್

“ನಾನು ಮತ್ತು ವಸಂತ ಬಂಗೇರ ಒಟ್ಟಿಗೇ ವಿಧಾನಸಭೆ ಪ್ರವೇಶಿಸಿದ್ದೆವು” : ವಸಂತ ಬಂಗೇರ ನುಡಿನಮನ ಕಾರ್ಯಕ್ರಮದಲ್ಲಿ ಸಿಎಂ ಸಿದ್ದರಾಮಯ್ಯ

PPeepal Media Desk

Peepal Media Desk ರಾಜಕೀಯ

• 1 ನಿಮಿಷದ ಓದು

“ನಾನು ಮತ್ತು ವಸಂತ ಬಂಗೇರ ಒಟ್ಟಿಗೇ ವಿಧಾನಸಭೆ ಪ್ರವೇಶಿಸಿದ್ದೆವು” : ವಸಂತ ಬಂಗೇರ ನುಡಿನಮನ ಕಾರ್ಯಕ್ರಮದಲ್ಲಿ ಸಿಎಂ ಸಿದ್ದರಾಮಯ್ಯ

ನಿಷ್ಠುರ, ನೇರ ನಡೆ ನುಡಿಯ ಸದಾ ಸತ್ಯವನ್ನು ಹೇಳುವ ವಿಶೇಷ ಗುಣ ಬಂಗೇರ ಅವರದ್ದಾಗಿತ್ತು: ಸಿ.ಎಂ

ಬಸ್ಟಾಂಡ್ ಗೆ ಬಂಗೇರ ಹೆಸರಿಡಲು ಸರ್ಕಾರ ಸಿದ್ದ

ಬೆಳ್ತಂಗಡಿ ಬಸ್ಟಾಂಡ್ ಗೆ ವಸಂತ ಬಂಗೇರ ಅವರ ಹೆಸರಿಡಲು ಸರ್ಕಾರ ಸಿದ್ದವಿದೆ. ಜೊತೆಗೆ ಅವರ ಪ್ರತಿಮೆ ಸ್ಥಾಪಿಸಿ ವೃತ್ತದಲ್ಲಿ ಸ್ಥಾಪಿಸಬೇಕು ಎನ್ನುವ ಬೇಡಿಕೆಗೂ ಸರ್ಕಾರ ಸ್ಪಂದಿಸಲಿದೆ ಎಂದು ಭರವಸೆ ನೀಡಿದರು

ಬೆಳ್ತಂಗಡಿ ಏ 21: ನಿಷ್ಠುರ, ನೇರ ನಡೆ ನುಡಿಯ ಸದಾ ಸತ್ಯವನ್ನು ಹೇಳುವ ವಿಶೇಷ ಗುಣ ಬಂಗೇರ ಅವರದ್ದಾಗಿತ್ತು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮೆಚ್ಚುಗೆ ವ್ಯಕ್ತ ಪಡಿಸಿದರು.

ಮಾಜಿ ಸಚಿವ ವಸಂತ ಬಂಗೇರ ಅವರ ಉತ್ತರ ಕ್ರಿಯೆ ಮತ್ತು ನುಡಿ ನಮನ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದರು.

ನಾನು ಮತ್ತು ವಸಂತ ಬಂಗೇರ ಒಟ್ಟಿಗೇ ವಿಧಾನಸಭೆ ಪ್ರವೇಶಿಸಿದ್ದೆವು. ಅವತ್ತಿನಿಂದ ಅವರ ಉಸಿರಿನ ಕೊನೆ ಗಳಿಗೆಯವರೆಗೂ ನನ್ನ ಸ್ನೇಹಿತರಾಗಿದ್ದರು. ಇವರ ಅಗಲಿಕೆ ನನಗೆ ಅಪಾರ ದುಃಖ ತಂದಿದೆ ಎಂದರು.

ಸತ್ಯ, ಬಡವರ ಪರ ಕಾಳಜಿ, ರಾಜಿ ರಹಿತ ಜನಪರ ಕೆಲಸಗಳ ಮೂಲಕ ತಮ್ಮ ವೈಯುಕ್ತಿಕ ಮತ್ತು ರಾಜಕೀಯ ಜೀವನವನ್ನು ಸಾರ್ಥಕಗೊಳಿಸಿಕೊಂಡವರು ಬಂಗೇರ ಅವರು ಜನ ಮಾನಸದಲ್ಲಿ ಶಾಶ್ವತವಾಗಿ ಉಳಿಯಲಿದ್ದಾರೆ ಎಂದರು.

ಬಂಗೇರ ಅವರು ತಮ್ಮ ಬದುಕಿನುದ್ದಕ್ಕೂ ವಿಶ್ವ ಮಾನವ ಮೌಲ್ಯವನ್ನು ಪಾಲಿಸಿದರು. ಬಂಗೇರ ಅವರು ನನ್ನ ಬಳಿಗೆ ಯಾವತ್ತೂ ವೈಯುಕ್ತಿಕ ಕೆಲಸಗಳಿಗಾಗಿ ಬಂದಿಲ್ಲ. ಬಂದಾಗಲೆಲ್ಲಾ ಜನರ ಕೆಲಸಗಳಿಗಾಗಿ ಬೇಡಿಕೆ ಇಟ್ಟಿದ್ದರು. ಐದು ಬಾರಿ ಶಾಸಕರಾದರೂ ಮಂತ್ರಿ ಆಗಲು ಯಾವತ್ತೂ ಸಣ್ಣ ಲಾಭಿ ಕೂಡ ನಡೆಸಿದವರಲ್ಲ. ಹೀಗಾಗಿ ಇವರು ಅತ್ಯಂತ ಮಾದರಿ ರಾಜಕೀಯ ನಾಯಕರಾಗಿದ್ದರು ಎಂದು ಬಣ್ಣಿಸಿದರು.

2023 ರಲ್ಲೂ ಚುನಾವಣೆಯಲ್ಲಿ ಸ್ಪರ್ಧಿಸಲು ಮನವಿ ಮಾಡಿದರೂ ಅವರು ಒಪ್ಪಲಿಲ್ಲ. ಈ ಬಾರಿ ಸ್ಪರ್ಧಿಸಿದ್ದರೆ ಖಂಡಿತಾ ಗೆದ್ದು ಮಂತ್ರಿಯಾಗುತ್ತಿದ್ದರು ಎಂದು ವಿವರಿಸಿದರು.

ವಸಂತ ಬಂಗೇರ ಅವರ ಸಾವಿನಿಂದ ರಾಜ್ಯ ರಾಜಕಾರಣ ಅತ್ಯಂತ ಬಡವಾಗಿದೆ. ಇವರ ಆರೋಗ್ಯ ಚೇತರಿಸಿಕೊಳ್ಳುತ್ತದೆ ಮತ್ತಷ್ಟು ಕಾಲ ನಮ್ಮ ಜೊತೆಗೆ ಇರುತ್ತಾರೆ ಎನ್ನುವ ಆಸೆ ಇತ್ತು. ಆದರೆ ನಮ್ಮನ್ನು ಅಗಲಿಬಿಟ್ಟಿರುವುದು ನನ್ನ ಪ್ರೀತಿಯ ಸ್ನೇಹಿತನನ್ನು ಕಳೆದುಕೊಂಡಂತಾಗಿದೆ ಎಂದು ಬೇಸರ ವ್ಯಕ್ತಪಡಿಸಿದರು.

ಮಾಜಿ ಸಚಿವ ಜನಾರ್ಧನ ಪೂಜಾರಿ, ಸ್ಪೀಕರ್ ಯು.ಟಿ.ಖಾದರ್ ಮತ್ತು ವಸಂತ ಬಂಗೇರ ಅವರ ಕುಟುಂಬದ ಸದಸ್ಯರು ಹಾಗೂ ಅಪಾರ ಸಂಖ್ಯೆಯ ಅಭಿಮಾನಿಗಳು ಉಪಸ್ಥಿತರಿದ್ದರು.

ವಿಷಯಗಳು: #peepal #peepalmedia
PPeepal Media Desk

Peepal Media Desk

Peepal Media · ರಾಜಕೀಯ ವಿಭಾಗ

ಸಂಬಂಧಿತ ಸುದ್ದಿಗಳು