ಮುಖ್ಯ ವಿಷಯಕ್ಕೆ ತೆರಳಿ
Peepal Media
ತಾಜಾ ಸುದ್ದಿ
●ಈಸಕ್ಕಿ ಆಸೆಯನ್ನೂ ಮೀರಿದ ಆಯ್ದಕ್ಕಿ ಲಕ್ಕಮ್ಮ●ಗಾಜಾ ಸ್ಮಶಾನದ ಮೇಲೆ ಮತ್ತೆ ಅರಳುತ್ತಾ ನೆತನ್ಯಾಹು ಕುರ್ಚಿ?●ಅರುಣಾಚಲದಲ್ಲಿ ಚೀನಾ ಸೈನಿಕರೊಂದಿಗೆ ಮುಖಾಮುಖಿ: ಕೇಂದ್ರದ ಮೌನವನ್ನು ಪ್ರಶ್ನಿಸಿದ ಕಾಂಗ್ರೆಸ್‌ನ ಜೈರಾಮ್ ರಮೇಶ್●ಕಡತಗಳ ವಿಲೇವಾರಿ ಪ್ರಕ್ರಿಯೆ ಬದಲಾವಣೆ: ಚುನಾವಣಾ ಆಯುಕ್ತರಿಂದ ಕ್ಯಾಬಿನೆಟ್‌ ಕಾರ್ಯದರ್ಶಿಗೆ ಆಕ್ಷೇಪಣಾ ಪತ್ರ●ಮೋದಿ–ಅದಾನಿ ಕುರಿತ ಸಾಕ್ಷ್ಯಚಿತ್ರ ಹಂಚಿಕೊಂಡ ರಾಜ್‌ ಠಾಕ್ರೆ; ತೆಗೆದುಹಾಕುವಂತೆ ಸೂಚನೆಗಳ ನಡುವೆ ಮುಂದುವರೆದ ಚರ್ಚೆ●ಮಂಡ್ಯದಲ್ಲಿ ARAI ಪರೀಕ್ಷಾ ಕೇಂದ್ರಗಳಿಗೆ ಭೂಮಿ ಹಂಚಿಕೆ ವಿಳಂಬ: ರಾಜ್ಯ ಸರ್ಕಾರಕ್ಕೆ ಎಚ್‌.ಡಿ. ಕುಮಾರಸ್ವಾಮಿ ಪತ್ರ●ರಾಷ್ಟ್ರೀಯತೆಯ ಪಾಠ ನನಗೆ ಬೇಕಿಲ್ಲ; ನಮ್ಮ ಗುರಿ ಆಡಳಿತ, ಸಾಮಾಜಿಕ ಜಾಲತಾಣದ ಪ್ರಚಾರವಲ್ಲ: ಕೆ. ಅಣ್ಣಾಮಲೈ●ಕೇವಲ ಮದುವೆಗಾಗಿ ಧರ್ಮಾಂತರವಾಗುವುದನ್ನು ಒಪ್ಪಲು ಸಾಧ್ಯವಿಲ್ಲ: ಬಾಂಬೆ ಹೈಕೋರ್ಟ್‌●ಇನ್ನು ನೋಂದಾಯಿತ ಸಿಮ್‌ ಇದ್ದರೆ ಮಾತ್ರ ವಾಟ್ಸ್‌ಆ್ಯಪ್‌ ಬಳಕೆ ಸಾಧ್ಯ: ಜನವರಿ 1, 2027ರಿಂದ ಹೊಸ ನಿಯಮ ಜಾರಿ●ಈ-ಮುದ್ರ ಡಿಜಿಟಲ್‌ ಪ್ರಮಾಣಪತ್ರಗಳಲ್ಲಿ ಭದ್ರತಾ ಲೋಪ: ಜಾಗತಿಕ ತಂತ್ರಜ್ಞಾನ ವಲಯದಲ್ಲಿ ಆತಂಕ●ಹಾಸನ ಕಾಳಸಂತೆಗೆ ಪಡಿತರ ಅಕ್ಕಿ ಮಾರಾಟ ಯತ್ನ – ಕ್ವಿಂಟಲ್‌ ಗಟ್ಟಲೆ ಅಕ್ಕಿ, ರಾಗಿ ವಶ●ಸದ್ಯದಲ್ಲೆ ಕಬ್ಬು ಬೆಳೆಗಾರರ ಸಭೆ ಕರೆದಿದ್ದೇನೆ – ಸಿಎಂ ಡಿ.ಕೆ ಶಿವಕುಮಾರ್●ರಾಜ್ಯದಲ್ಲಿ ಐದು ದಿನಗಳಲ್ಲಿ ಮಳೆ ಸಾಧ್ಯತೆ – ಹವಾಮಾನ ಇಲಾಖೆ ಮುನ್ಸೂಚನೆ●ಸಿದ್ದರಾಮಯ್ಯ ಅವರನ್ನು ಅಧಿಕಾರದಿಂದ ಇಳಿಸಲು ವ್ಯವಸ್ಥಿತ ಸಂಚು ರೂಪಿಸಿ ಯಶಸ್ವಿಗೊಂಡಿದ್ದಾರೆ – ಸಿಎಂ ಯಡಿಯೂರಪ್ಪ●ಚುನಾವಣಾ ಆಯುಕ್ತರಿಗೆ ರಕ್ಷಣೆ ನೀಡುವ ಕಾನೂನು ರದ್ದುಗೊಳಿಸಿ – ಮಲ್ಲಿಕಾರ್ಜುನ ಖರ್ಗೆ ಆಗ್ರಹ●ದಸರಾ ವೇಳೆ ಪೊಲೀಸರ ಲಾಠಿ ಏಟಿಗೆ 4 ವರ್ಷದ ಬಾಲಕ ಗಂಭೀರ – ICUನಲ್ಲಿ ಅಂತಿಮ ಹೋರಾಟ●ಸೌದಿ ವಿಮಾನ ನಿಲ್ದಾಣದ ಮೇಲೆ ಭೀಕರ ದಾಳಿ – 8 ಮಂದಿಗೆ ಗಾಯ, ಇಬ್ಬರ ಅಂತ್ಯ●ನಂದಿಧ್ವಜ ಪೂಜೆಗೆ ಸಚಿವರಿಗೆ ಅವಕಾಶ ನಿರಾಕರಿಸಿದ ಅಧಿಕಾರಿಗಳ ವಿರುದ್ಧ ತನಿಖೆಗೆ ಆದೇಶ: ಮುಖ್ಯಮಂತ್ರಿ ಡಿ ಕೆ ಶಿವಕುಮಾರ್‌●300 ವರ್ಷಗಳಷ್ಟು ಹಳೆಯ ಐತಿಹಾಸಿಕ ರೇಸ್‌ಕೋರ್ಸ್ ಮಸೀದಿಯ ವಿದ್ಯುತ್ ಹಾಗೂ ನೀರು ಸಂಪರ್ಕ ಕಡಿತ: ತುರ್ತು ರಕ್ಷಣೆ ಕೋರಿದ ದೆಹಲಿ ವಕ್ಫ್ ಮಂಡಳಿ●ತಿಹಾರ್ ಜೈಲಿನಿಂದ ಬಿಡುಗಡೆಯಾದ ಬೆನ್ನಲ್ಲೇ ಸೌರವ್ ದಾಸ್ ಹಾಗೂ ಅಶೋತ್ ರಾಂಕಾಗೆ ದೆಹಲಿ ಅಪರಾಧ ವಿಭಾಗದಿಂದ ಸಮನ್ಸ್

ಚುನಾವಣಾ ಬಾಂಡ್ ಎನ್ನುವುದು ಬಿಜೆಪಿಯ ಕೈಯಲ್ಲಿರುವ ರಾಜಕೀಯ ಸುಲಿಗೆಯ ಬ್ರಹ್ಮಾಸ್ತ್ರವೇ? ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರಶ್ನೆ

P

Peepal Media Desk • ರಾಜಕೀಯ

• 1 ನಿಮಿಷದ ಓದು

ಚುನಾವಣಾ ಬಾಂಡ್ ಎನ್ನುವುದು ಬಿಜೆಪಿಯ ಕೈಯಲ್ಲಿರುವ ರಾಜಕೀಯ ಸುಲಿಗೆಯ ಬ್ರಹ್ಮಾಸ್ತ್ರವೇ? ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರಶ್ನೆ

ಸುಪ್ರೀಂ ಕೋರ್ಟ್ ಉನ್ನತಾಧಿಕಾರದ ಸಮಿತಿಯನ್ನು ರಚಿಸಿ ಚುನಾವಣಾ ಬಾಂಡ್ ಹಗರಣದ ತನಿಖೆ ನಡೆಸಬೇಕು ಮತ್ತು ಅಲ್ಲಿಯವರೆಗೆ ಬಿಜೆಪಿಯ ಬ್ಯಾಂಕ್ ಖಾತೆಗಳನ್ನು ಸ್ಥಗಿತಗೊಳಿಸಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಆಗ್ರಹಿಸಿದ್ದಾರೆ.

“ಕರ್ನಾಟಕಕ್ಕೆ ಪ್ರಧಾನಿ ನರೇಂದ್ರ ಮೋದಿಯವರಿಗೆ ಸ್ವಾಗತ. ಜಗತ್ತಿನ ಅತ್ಯಂತ ದೊಡ್ಡ ಭ್ರಷ್ಟಾಚಾರ ಹಗರಣವಾಗಿ ಹೊರಹೊಮ್ಮುತ್ತಿರುವ ಚುನಾವಣಾ ಬಾಂಡ್ ಸುಲಿಗೆ ಬಗ್ಗೆ ಭಾರತೀಯ ಜನತಾ ಪಕ್ಷ ಯಾಕೆ ಮೌನವಾಗಿದೆ? ಸ್ವಿಸ್ ಬ್ಯಾಂಕ್ ನಲ್ಲಿರುವ ಕಪ್ಪು ಹಣ ತಂದು ಜನರಿಗೆ ಹಂಚುತ್ತೇವೆ, ನೋಟ್ ಬ್ಯಾನ್ ಮಾಡಿ ಕಪ್ಪುಹಣದ ಮೂಲೋತ್ಪಾಟನೆ ಮಾಡುತ್ತೇವೆ, ನಾ ಖಾವೂಂಗಾ – ನಾ ಖಾನೆ ದೂಂಗಾ, ದೇಶದ ಸಂಪತ್ತಿಗೆಲ್ಲ ನಾನೇ ಚೌಕಿದಾರ ಎಂದೆಲ್ಲ ಹೇಳಿ ಹತ್ತು ವರ್ಷಗಳಿಂದ ಅಧಿಕಾರದಲ್ಲಿರುವ ಮೋದಿಯವರೇ ಕನಿಷ್ಠ ಚುನಾವಣಾ ಬಾಂಡ್ ಹಗರಣದ ಬಗ್ಗೆಯಾದರೂ ಉತ್ತರಿಸಿ” ಎಂದು ಪ್ರಧಾನಿಯವರನ್ನು ಮುಖ್ಯಮಂತ್ರಿ ಪ್ರಶ್ನಿಸಿದ್ದಾರೆ.

“ಸುಪ್ರೀಂ ಕೋರ್ಟ್ ಆದೇಶದ ಹೊರತಾಗಿಯೂ ಭಾರತೀಯ ಸ್ಟೇಟ್ ಬ್ಯಾಂಕ್ ಸಂಪೂರ್ಣ ಮಾಹಿತಿ ನೀಡಲು ಯಾಕೆ ಹಿಂಜರಿಯುತ್ತಿದೆ? ಚುನಾವಣಾ ಬಾಂಡ್ ಗಳ ಮಾರಾಟ ಮತ್ತು ಖರೀದಿ ವ್ಯವಹಾರ ಕಾನೂನುಬದ್ಧವಾಗಿ ನಡೆದಿದ್ದರೆ ಎಸ್‌ಬಿಐ ಯಾಕೆ ಮಾಹಿತಿ ಮುಚ್ಚಿಡಲು ಪ್ರಯತ್ನಿಸುತ್ತಿದೆ? ಎಸ್‌ಬಿಐ ಮೇಲೆ ಒತ್ತಡ ಹೇರುತ್ತಿರುವವರು ಯಾರು?

ಮಾಧ್ಯಮಗಳು ವಿಶ್ಲೇಷಿಸುತ್ತಿರುವ ಚುನಾವಣಾ ಆಯೋಗ ಪ್ರಕಟಿಸಿರುವ ಮಾಹಿತಿಯನ್ನು ನೋಡಿದರೆ ಕೇಂದ್ರ ಸರ್ಕಾರ ಉದ್ಯಮಿಗಳ ಬ್ಲಾಕ್ ಮೇಲ್ ಮಾಡುತ್ತಿರುವಂತೆ ಕಾಣುತ್ತಿದೆ. ಉದ್ಯಮಿಗಳ ಮೇಲೆ ನಡೆದಿರುವ ಐಟಿ, ಇಡಿ, ಸಿಬಿಐ ದಾಳಿಗಳ ದಿನಾಂಕ ಮತ್ತು ಆ ಉದ್ಯಮಿಗಳು ಚುನಾವಣಾ ಬಾಂಡ್ ಗಳ ಖರೀದಿ ದಿನಾಂಕಗಳನ್ನು ನೋಡಿದರೆ ಇದೊಂದು ಪಕ್ಕಾ ಬ್ಲಾಕ್ ಮೇಲ್ ಹಗರಣದಂತೆ ಕಾಣುತ್ತಿದೆ. ದೇಣಿಗೆ ವಸೂಲಿಗಾಗಿ ಕೇಂದ್ರ ಸರ್ಕಾರ ತನ್ನ ಅಧೀನದಲ್ಲಿರುವ ತನಿಖಾ ಸಂಸ್ಥೆಗಳನ್ನು ದುರುಪಯೋಗಪಡಿಸಿಕೊಳ್ಳುತ್ತಿದೆಯೇ? ಚುನಾವಣಾ ಬಾಂಡ್ ಎನ್ನುವುದು ಬಿಜೆಪಿಯ ಕೈಯಲ್ಲಿರುವ ರಾಜಕೀಯ ಸುಲಿಗೆಯ ಬ್ರಹ್ಮಾಸ್ತ್ರವೇ? ಪ್ರಧಾನಿಯವರೇ ಉತ್ತರಿಸಿ” ಎಂದು ಅವರು ಕೇಳಿದ್ದಾರೆ.

“ಬಯಲಾಗುತ್ತಿರುವ ಮಾಹಿತಿಗಳನ್ನು ನೋಡಿದರೆ ಚುನಾವಣಾ ಬಾಂಡ್ ಹಗರಣದಲ್ಲಿ ದೊಡ್ಡ ಸಂಖ್ಯೆಯಲ್ಲಿ ಭಾಗಿಯಾಗಿರುವವರು ಮೂಲಭೂತ ಸೌಕರ್ಯ ನಿರ್ಮಾಣದ ಎಂಜನಿಯರಿಂಗ್ ಸಂಸ್ಥೆಗಳು ಮತ್ತು ಔಷಧಿ ಉತ್ಪಾದನಾ ಕಂಪೆನಿಗಳು. ಇಂತಹ ಭ್ರಷ್ಟ, ವಂಚಕ ಸಂಸ್ಥೆಗಳು ನಿರ್ಮಾಣ ಮಾಡಿರುವ ರಸ್ತೆ, ಸೇತುವೆ, ಕಟ್ಟಡಗಳು ಎಷ್ಟು ಸುಭದ್ರ? ಇಂತಹ ಭ್ರಷ್ಟ-ವಂಚಕ ಸಂಸ್ಥೆಗಳು ತಯಾರಿಸಿದ ಔಷಧಿಗಳು ಎಷ್ಟು ಸುರಕ್ಷಿತ? ಇದಕ್ಕೆ ಉತ್ತರಿಸಬೇಕಾದವರು ನೀವಲ್ಲವೇ ಪ್ರಧಾನಿಗಳೇ?

ಸುಪ್ರೀಂಕೋರ್ಟ್ ಖುದ್ದಾಗಿ ಮುಂದೆ ನಿಂತು ಬಯಲು ಮಾಡುತ್ತಿರುವ ಚುನಾವಣಾ ಬಾಂಡ್ ಹಗರಣದ ಬಗ್ಗೆ ದೇಶದ ಪ್ರತಿಯೊಬ್ಬ ಪ್ರಜೆಯಲ್ಲಿಯೂ ಅನುಮಾನ ಹುಟ್ಟಿಕೊಂಡಿದೆ. ತಮ್ಮ ತೆರಿಗೆ ಹಣದ ದುರುಪಯೋಗ ನಡೆದಿದೆ. ಇದರಲ್ಲಿ ಕೇಂದ್ರ ಸರ್ಕಾರದ ಪಾತ್ರವಿದೆ ಎಂದು ಜನತೆ ನಂಬಿದ್ದಾರೆ. ಈ ಅನುಮಾನವನ್ನು ಹೋಗಲಾಡಿಸಲು ಸುಪ್ರೀಂ ಕೋರ್ಟ್ ಉನ್ನತಾಧಿಕಾರದ ಸಮಿತಿಯನ್ನು ರಚಿಸಿ ಚುನಾವಣಾ ಬಾಂಡ್ ಹಗರಣದ ತನಿಖೆ ನಡೆಸಬೇಕು ಮತ್ತು ಅಲ್ಲಿಯ ವರೆಗೆ ಬಿಜೆಪಿಯ ಬ್ಯಾಂಕ್ ಖಾತೆಗಳನ್ನು ಸ್ಥಗಿತಗೊಳಿಸಬೇಕು ಎಂದು ನಾನು ಒತ್ತಾಯಿಸುತ್ತೇನೆ” ಎಂದು ಬಲವಾಗಿ ಆಗ್ರಹಿಸಿದ್ದಾರೆ

P

Peepal Media Desk

Peepal Media · ರಾಜಕೀಯ ವಿಭಾಗ

ಸಂಬಂಧಿತ ಸುದ್ದಿಗಳು

Exit mobile version