ಮುಖ್ಯ ವಿಷಯಕ್ಕೆ ತೆರಳಿ
Peepal Media
ತಾಜಾ ಸುದ್ದಿ
●ಈಸಕ್ಕಿ ಆಸೆಯನ್ನೂ ಮೀರಿದ ಆಯ್ದಕ್ಕಿ ಲಕ್ಕಮ್ಮ●ಗಾಜಾ ಸ್ಮಶಾನದ ಮೇಲೆ ಮತ್ತೆ ಅರಳುತ್ತಾ ನೆತನ್ಯಾಹು ಕುರ್ಚಿ?●ಅರುಣಾಚಲದಲ್ಲಿ ಚೀನಾ ಸೈನಿಕರೊಂದಿಗೆ ಮುಖಾಮುಖಿ: ಕೇಂದ್ರದ ಮೌನವನ್ನು ಪ್ರಶ್ನಿಸಿದ ಕಾಂಗ್ರೆಸ್‌ನ ಜೈರಾಮ್ ರಮೇಶ್●ಕಡತಗಳ ವಿಲೇವಾರಿ ಪ್ರಕ್ರಿಯೆ ಬದಲಾವಣೆ: ಚುನಾವಣಾ ಆಯುಕ್ತರಿಂದ ಕ್ಯಾಬಿನೆಟ್‌ ಕಾರ್ಯದರ್ಶಿಗೆ ಆಕ್ಷೇಪಣಾ ಪತ್ರ●ಮೋದಿ–ಅದಾನಿ ಕುರಿತ ಸಾಕ್ಷ್ಯಚಿತ್ರ ಹಂಚಿಕೊಂಡ ರಾಜ್‌ ಠಾಕ್ರೆ; ತೆಗೆದುಹಾಕುವಂತೆ ಸೂಚನೆಗಳ ನಡುವೆ ಮುಂದುವರೆದ ಚರ್ಚೆ●ಮಂಡ್ಯದಲ್ಲಿ ARAI ಪರೀಕ್ಷಾ ಕೇಂದ್ರಗಳಿಗೆ ಭೂಮಿ ಹಂಚಿಕೆ ವಿಳಂಬ: ರಾಜ್ಯ ಸರ್ಕಾರಕ್ಕೆ ಎಚ್‌.ಡಿ. ಕುಮಾರಸ್ವಾಮಿ ಪತ್ರ●ರಾಷ್ಟ್ರೀಯತೆಯ ಪಾಠ ನನಗೆ ಬೇಕಿಲ್ಲ; ನಮ್ಮ ಗುರಿ ಆಡಳಿತ, ಸಾಮಾಜಿಕ ಜಾಲತಾಣದ ಪ್ರಚಾರವಲ್ಲ: ಕೆ. ಅಣ್ಣಾಮಲೈ●ಕೇವಲ ಮದುವೆಗಾಗಿ ಧರ್ಮಾಂತರವಾಗುವುದನ್ನು ಒಪ್ಪಲು ಸಾಧ್ಯವಿಲ್ಲ: ಬಾಂಬೆ ಹೈಕೋರ್ಟ್‌●ಇನ್ನು ನೋಂದಾಯಿತ ಸಿಮ್‌ ಇದ್ದರೆ ಮಾತ್ರ ವಾಟ್ಸ್‌ಆ್ಯಪ್‌ ಬಳಕೆ ಸಾಧ್ಯ: ಜನವರಿ 1, 2027ರಿಂದ ಹೊಸ ನಿಯಮ ಜಾರಿ●ಈ-ಮುದ್ರ ಡಿಜಿಟಲ್‌ ಪ್ರಮಾಣಪತ್ರಗಳಲ್ಲಿ ಭದ್ರತಾ ಲೋಪ: ಜಾಗತಿಕ ತಂತ್ರಜ್ಞಾನ ವಲಯದಲ್ಲಿ ಆತಂಕ●ಹಾಸನ ಕಾಳಸಂತೆಗೆ ಪಡಿತರ ಅಕ್ಕಿ ಮಾರಾಟ ಯತ್ನ – ಕ್ವಿಂಟಲ್‌ ಗಟ್ಟಲೆ ಅಕ್ಕಿ, ರಾಗಿ ವಶ●ಸದ್ಯದಲ್ಲೆ ಕಬ್ಬು ಬೆಳೆಗಾರರ ಸಭೆ ಕರೆದಿದ್ದೇನೆ – ಸಿಎಂ ಡಿ.ಕೆ ಶಿವಕುಮಾರ್●ರಾಜ್ಯದಲ್ಲಿ ಐದು ದಿನಗಳಲ್ಲಿ ಮಳೆ ಸಾಧ್ಯತೆ – ಹವಾಮಾನ ಇಲಾಖೆ ಮುನ್ಸೂಚನೆ●ಸಿದ್ದರಾಮಯ್ಯ ಅವರನ್ನು ಅಧಿಕಾರದಿಂದ ಇಳಿಸಲು ವ್ಯವಸ್ಥಿತ ಸಂಚು ರೂಪಿಸಿ ಯಶಸ್ವಿಗೊಂಡಿದ್ದಾರೆ – ಸಿಎಂ ಯಡಿಯೂರಪ್ಪ●ಚುನಾವಣಾ ಆಯುಕ್ತರಿಗೆ ರಕ್ಷಣೆ ನೀಡುವ ಕಾನೂನು ರದ್ದುಗೊಳಿಸಿ – ಮಲ್ಲಿಕಾರ್ಜುನ ಖರ್ಗೆ ಆಗ್ರಹ●ದಸರಾ ವೇಳೆ ಪೊಲೀಸರ ಲಾಠಿ ಏಟಿಗೆ 4 ವರ್ಷದ ಬಾಲಕ ಗಂಭೀರ – ICUನಲ್ಲಿ ಅಂತಿಮ ಹೋರಾಟ●ಸೌದಿ ವಿಮಾನ ನಿಲ್ದಾಣದ ಮೇಲೆ ಭೀಕರ ದಾಳಿ – 8 ಮಂದಿಗೆ ಗಾಯ, ಇಬ್ಬರ ಅಂತ್ಯ●ನಂದಿಧ್ವಜ ಪೂಜೆಗೆ ಸಚಿವರಿಗೆ ಅವಕಾಶ ನಿರಾಕರಿಸಿದ ಅಧಿಕಾರಿಗಳ ವಿರುದ್ಧ ತನಿಖೆಗೆ ಆದೇಶ: ಮುಖ್ಯಮಂತ್ರಿ ಡಿ ಕೆ ಶಿವಕುಮಾರ್‌●300 ವರ್ಷಗಳಷ್ಟು ಹಳೆಯ ಐತಿಹಾಸಿಕ ರೇಸ್‌ಕೋರ್ಸ್ ಮಸೀದಿಯ ವಿದ್ಯುತ್ ಹಾಗೂ ನೀರು ಸಂಪರ್ಕ ಕಡಿತ: ತುರ್ತು ರಕ್ಷಣೆ ಕೋರಿದ ದೆಹಲಿ ವಕ್ಫ್ ಮಂಡಳಿ●ತಿಹಾರ್ ಜೈಲಿನಿಂದ ಬಿಡುಗಡೆಯಾದ ಬೆನ್ನಲ್ಲೇ ಸೌರವ್ ದಾಸ್ ಹಾಗೂ ಅಶೋತ್ ರಾಂಕಾಗೆ ದೆಹಲಿ ಅಪರಾಧ ವಿಭಾಗದಿಂದ ಸಮನ್ಸ್

ದೇಶ ಬಿಟ್ಟು ಓಡಿ ಹೋದವರ ಹೆಸರಿನಲ್ಲೂ ಮೋದಿ ಇದೆ. ನಿಮ್ಮನ್ನು ಅವರಿಗೆ ಹೋಲಿಸಬಹುದೆ?: ಸಿದ್ದರಾಮಯ್ಯ ಪ್ರಶ್ನೆ

PPeepal Media Desk

Peepal Media Desk • ರಾಜಕೀಯ, ರಾಜ್ಯ

• 1 ನಿಮಿಷದ ಓದು

ದೇಶ ಬಿಟ್ಟು ಓಡಿ ಹೋದವರ ಹೆಸರಿನಲ್ಲೂ ಮೋದಿ ಇದೆ. ನಿಮ್ಮನ್ನು ಅವರಿಗೆ ಹೋಲಿಸಬಹುದೆ?: ಸಿದ್ದರಾಮಯ್ಯ ಪ್ರಶ್ನೆ

ಬೆಂಗಳೂರು : ಐಎನ್‌ಡಿಐಎ (INDIA) ಎಂಬ ವಿಪಕ್ಷಗಳ ಒಕ್ಕೂಟದ ನೂತನ ಹೆಸರು ಇಂಡಿಯನ್‌ ಮುಜಾಹಿದ್ದೀನ್‌ ಹಾಗೂ ಈಸ್ಟ್‌ ಇಂಡಿಯಾ ಕಂಪನಿಯಲ್ಲೂ ಇದೆ ಎಂದ ಪ್ರಧಾನಿ ನರೇಂದ್ರ ಮೋದಿ ಹೇಳಿಕೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ತಿರುಗೇಟು ನೀಡಿದ್ದಾರೆ.

ದೇಶ ಬಿಟ್ಟು ಓಡಿ ಹೋಗಿರುವ ನೀರವ್‌ ಮೋದಿ, ಲಲಿತ್‌ ಮೋದಿ ಜೊತೆ ನಿಮ್ಮನ್ನು ಹೋಲಿಸಬಹುದಾ ಎಂದು ಈ ಕುರಿತು ಪ್ರಶ್ನಿಸಿದ್ದಾರೆ.

ಈ ಬಗ್ಗೆ ಟ್ವೀಟ್‌ ಮಾಡಿರುವ ಸಿದ್ದರಾಮಯ್ಯ, ವಿರೋಧ ಪಕ್ಷಗಳ ಮೈತ್ರಿಕೂಟ ‘ಇಂಡಿಯಾ’ ವನ್ನು ಈಸ್ಟ್ ಇಂಡಿಯಾ ಕಂಪನಿ ಮತ್ತು ಇಂಡಿಯನ್ ಮುಜಾಹಿದ್ದೀನ್ ಗೆ ಹೋಲಿಸಿರುವ ಪ್ರಧಾನಿ ನರೇಂದ್ರ ಮೋದಿ ಅವರೇ. ಭಾರತೀಯರ ನೂರಾರು ಕೋಟಿ ತೆರಿಗೆ ಹಣವನ್ನು ಲೂಟಿ ಮಾಡಿ ದೇಶ ಬಿಟ್ಟು ಓಡಿಹೋಗಿರುವ ನೀರವ್ ಮೋದಿ ಮತ್ತು ಲಲಿತ್ ಮೋದಿ ಅವರ ಹೆಸರಿನಲ್ಲಿಯೂ ನಿಮ್ಮ ಹೆಸರಿನ ಮೋದಿ ಇದೆಯಲ್ಲಾ? ಅವರನ್ನು ನಿಮ್ಮ ಜೊತೆ ಹೋಲಿಸಬಹುದಾ? ಎಂದು ಕೇಳಿದ್ದಾರೆ.

https://twitter.com/siddaramaiah/status/1684081838401400835?s=20

ಲಲಿತ್ ಮತ್ತು ನೀರವ್ ಹೆಸರಲ್ಲಿಯೂ ಮೋದಿ ಇದೆಯಲ್ಲಾ ಎಂಬ ಸಾಮಾನ್ಯ ಪ್ರಶ್ನೆ ಕೇಳಿದ ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ವಿರುದ್ಧ ಮಾನನಷ್ಟ ಮೊಕದ್ದಮೆ ಹೂಡಿ, ಎರಡು ವರ್ಷ ಜೈಲು ಶಿಕ್ಷೆ ನೀಡಿ, ಲೋಕಸಭೆಯಿಂದ ಅನರ್ಹಗೊಳಿಸಲಾಯಿತು. ಈಗ ಇಂಡಿಯಾವನ್ನು ಈಸ್ಟ್ ಇಂಡಿಯಾ ಕಂಪನಿ ಮತ್ತು ಇಂಡಿಯನ್ ಮುಜಾಹಿದ್ದೀನ್ ಗೆ ಹೋಲಿಸಿರುವ ನಿಮ್ಮ ಹೋಲಿಕೆಗೆ ರಾಹುಲ್ ಗಾಂಧಿಯವರ ವಿರುದ್ಧದ ಕ್ರಮ ಅನ್ವಯವಾಗುವುದಿಲ್ಲವೇ? ಎಂದು ಪ್ರಶ್ನಿಸಿದ್ದಾರೆ.

ಪ್ರಧಾನಿ ನರೇಂದ್ರ ಮೋದಿ ಅವರೇ ಇಂಡಿಯಾ ಎಂಬ ಸುಂದರ, ಸುಮಧುರ ಮತ್ತು ಪವಿತ್ರ ಹೆಸರಿನ ಬಗ್ಗೆ ನಿಮಗೆ ಯಾಕೆ ಇಷ್ಟೊಂದು ದ್ವೇಷ? ಇಂಡಿಯಾ ಹೆಸರಿನ ಬಗ್ಗೆ ಇಷ್ಟೊಂದು ಅಸಹನೆ ಹೊಂದಿರುವ ನೀವು ನಿಮ್ಮದೇ ಸರ್ಕಾರದ ಕಾರ್ಯಕ್ರಮಗಳಾದ ಮೇಕ್ ಇನ್ ಇಂಡಿಯಾ, ಸ್ಟಾರ್ಟ್ ಅಪ್ ಇಂಡಿಯಾ, ಸ್ಕಿಲ್ ಇಂಡಿಯಾ ಮೊದಲಾದ ಕಾರ್ಯಕ್ರಮಗಳ ಹೆಸರನ್ನೂ ಬದಲಾಯಿಸುವಿರಾ? ಸಿದ್ದರಾಮಯ್ಯ ಮೋದಿ ಅವರನ್ನು ಪ್ರಶ್ನಿಸಿದ್ದಾರೆ.

PPeepal Media Desk

Peepal Media Desk

Peepal Media · ರಾಜಕೀಯ ವಿಭಾಗ

ಸಂಬಂಧಿತ ಸುದ್ದಿಗಳು