ಮುಖ್ಯ ವಿಷಯಕ್ಕೆ ತೆರಳಿ
Peepal Media
ತಾಜಾ ಸುದ್ದಿ
ಈಸಕ್ಕಿ ಆಸೆಯನ್ನೂ ಮೀರಿದ ಆಯ್ದಕ್ಕಿ ಲಕ್ಕಮ್ಮಗಾಜಾ ಸ್ಮಶಾನದ ಮೇಲೆ ಮತ್ತೆ ಅರಳುತ್ತಾ ನೆತನ್ಯಾಹು ಕುರ್ಚಿ?ಅರುಣಾಚಲದಲ್ಲಿ ಚೀನಾ ಸೈನಿಕರೊಂದಿಗೆ ಮುಖಾಮುಖಿ: ಕೇಂದ್ರದ ಮೌನವನ್ನು ಪ್ರಶ್ನಿಸಿದ ಕಾಂಗ್ರೆಸ್‌ನ ಜೈರಾಮ್ ರಮೇಶ್ಕಡತಗಳ ವಿಲೇವಾರಿ ಪ್ರಕ್ರಿಯೆ ಬದಲಾವಣೆ: ಚುನಾವಣಾ ಆಯುಕ್ತರಿಂದ ಕ್ಯಾಬಿನೆಟ್‌ ಕಾರ್ಯದರ್ಶಿಗೆ ಆಕ್ಷೇಪಣಾ ಪತ್ರಮೋದಿ–ಅದಾನಿ ಕುರಿತ ಸಾಕ್ಷ್ಯಚಿತ್ರ ಹಂಚಿಕೊಂಡ ರಾಜ್‌ ಠಾಕ್ರೆ; ತೆಗೆದುಹಾಕುವಂತೆ ಸೂಚನೆಗಳ ನಡುವೆ ಮುಂದುವರೆದ ಚರ್ಚೆಮಂಡ್ಯದಲ್ಲಿ ARAI ಪರೀಕ್ಷಾ ಕೇಂದ್ರಗಳಿಗೆ ಭೂಮಿ ಹಂಚಿಕೆ ವಿಳಂಬ: ರಾಜ್ಯ ಸರ್ಕಾರಕ್ಕೆ ಎಚ್‌.ಡಿ. ಕುಮಾರಸ್ವಾಮಿ ಪತ್ರರಾಷ್ಟ್ರೀಯತೆಯ ಪಾಠ ನನಗೆ ಬೇಕಿಲ್ಲ; ನಮ್ಮ ಗುರಿ ಆಡಳಿತ, ಸಾಮಾಜಿಕ ಜಾಲತಾಣದ ಪ್ರಚಾರವಲ್ಲ: ಕೆ. ಅಣ್ಣಾಮಲೈಕೇವಲ ಮದುವೆಗಾಗಿ ಧರ್ಮಾಂತರವಾಗುವುದನ್ನು ಒಪ್ಪಲು ಸಾಧ್ಯವಿಲ್ಲ: ಬಾಂಬೆ ಹೈಕೋರ್ಟ್‌ಇನ್ನು ನೋಂದಾಯಿತ ಸಿಮ್‌ ಇದ್ದರೆ ಮಾತ್ರ ವಾಟ್ಸ್‌ಆ್ಯಪ್‌ ಬಳಕೆ ಸಾಧ್ಯ: ಜನವರಿ 1, 2027ರಿಂದ ಹೊಸ ನಿಯಮ ಜಾರಿಈ-ಮುದ್ರ ಡಿಜಿಟಲ್‌ ಪ್ರಮಾಣಪತ್ರಗಳಲ್ಲಿ ಭದ್ರತಾ ಲೋಪ: ಜಾಗತಿಕ ತಂತ್ರಜ್ಞಾನ ವಲಯದಲ್ಲಿ ಆತಂಕಹಾಸನ ಕಾಳಸಂತೆಗೆ ಪಡಿತರ ಅಕ್ಕಿ ಮಾರಾಟ ಯತ್ನ – ಕ್ವಿಂಟಲ್‌ ಗಟ್ಟಲೆ ಅಕ್ಕಿ, ರಾಗಿ ವಶಸದ್ಯದಲ್ಲೆ ಕಬ್ಬು ಬೆಳೆಗಾರರ ಸಭೆ ಕರೆದಿದ್ದೇನೆ – ಸಿಎಂ ಡಿ.ಕೆ ಶಿವಕುಮಾರ್ರಾಜ್ಯದಲ್ಲಿ ಐದು ದಿನಗಳಲ್ಲಿ ಮಳೆ ಸಾಧ್ಯತೆ – ಹವಾಮಾನ ಇಲಾಖೆ ಮುನ್ಸೂಚನೆಸಿದ್ದರಾಮಯ್ಯ ಅವರನ್ನು ಅಧಿಕಾರದಿಂದ ಇಳಿಸಲು ವ್ಯವಸ್ಥಿತ ಸಂಚು ರೂಪಿಸಿ ಯಶಸ್ವಿಗೊಂಡಿದ್ದಾರೆ – ಸಿಎಂ ಯಡಿಯೂರಪ್ಪಚುನಾವಣಾ ಆಯುಕ್ತರಿಗೆ ರಕ್ಷಣೆ ನೀಡುವ ಕಾನೂನು ರದ್ದುಗೊಳಿಸಿ – ಮಲ್ಲಿಕಾರ್ಜುನ ಖರ್ಗೆ ಆಗ್ರಹದಸರಾ ವೇಳೆ ಪೊಲೀಸರ ಲಾಠಿ ಏಟಿಗೆ 4 ವರ್ಷದ ಬಾಲಕ ಗಂಭೀರ – ICUನಲ್ಲಿ ಅಂತಿಮ ಹೋರಾಟಸೌದಿ ವಿಮಾನ ನಿಲ್ದಾಣದ ಮೇಲೆ ಭೀಕರ ದಾಳಿ – 8 ಮಂದಿಗೆ ಗಾಯ, ಇಬ್ಬರ ಅಂತ್ಯನಂದಿಧ್ವಜ ಪೂಜೆಗೆ ಸಚಿವರಿಗೆ ಅವಕಾಶ ನಿರಾಕರಿಸಿದ ಅಧಿಕಾರಿಗಳ ವಿರುದ್ಧ ತನಿಖೆಗೆ ಆದೇಶ: ಮುಖ್ಯಮಂತ್ರಿ ಡಿ ಕೆ ಶಿವಕುಮಾರ್‌300 ವರ್ಷಗಳಷ್ಟು ಹಳೆಯ ಐತಿಹಾಸಿಕ ರೇಸ್‌ಕೋರ್ಸ್ ಮಸೀದಿಯ ವಿದ್ಯುತ್ ಹಾಗೂ ನೀರು ಸಂಪರ್ಕ ಕಡಿತ: ತುರ್ತು ರಕ್ಷಣೆ ಕೋರಿದ ದೆಹಲಿ ವಕ್ಫ್ ಮಂಡಳಿತಿಹಾರ್ ಜೈಲಿನಿಂದ ಬಿಡುಗಡೆಯಾದ ಬೆನ್ನಲ್ಲೇ ಸೌರವ್ ದಾಸ್ ಹಾಗೂ ಅಶೋತ್ ರಾಂಕಾಗೆ ದೆಹಲಿ ಅಪರಾಧ ವಿಭಾಗದಿಂದ ಸಮನ್ಸ್

ಭಾರತ ಐಕ್ಯತಾ ಯಾತ್ರೆಯಲ್ಲಿ ನಡೆದ ಕಾಂಗ್ರೆಸ್ ನಾಯಕಿ ಸೋನಿಯಾಗಾಂಧಿ

PPeepal Media

Peepal Media ರಾಜಕೀಯ

• 1 ನಿಮಿಷದ ಓದು

ಭಾರತ ಐಕ್ಯತಾ ಯಾತ್ರೆಯಲ್ಲಿ ನಡೆದ ಕಾಂಗ್ರೆಸ್ ನಾಯಕಿ ಸೋನಿಯಾಗಾಂಧಿ

ಅನಾರೋಗ್ಯದ ಹಿನ್ನೆಲೆಯಿಂದ ಸುದೀರ್ಘ ಅವಧಿಯಲ್ಲಿ ಸಾರ್ವಜನಿಕ ಕಾರ್ಯಕ್ರಮಗಳಿಂದ ದೂರವೇ ಇದ್ದ ಸೋನಿಯಾ ಗಾಂಧಿಯವರು ಇಂದು ‘ಭಾರತ ಐಕ್ಯತಾ ಯಾತ್ರೆ’ಯಲ್ಲಿ ಹೆಜ್ಜೆ ಹಾಕಿದ್ದಾರೆ. ಇಂದು ಬೆಳಿಗ್ಗೆ ಮಂಡ್ಯದಿಂದ ಶುರುವಾದ ರಾಹುಲ್ ಗಾಂಧಿ ನೇತೃತ್ವದ ಪಾದಯಾತ್ರೆಯಲ್ಲಿ ಪಕ್ಷದ ಕಾರ್ಯಕರ್ತರು ಮತ್ತು ಮುಖಂಡರ ಜೊತೆಗೆ ಸೋನಿಯಾಗಾಂಧಿಯವರು ಕೆಲವಷ್ಟು ದೂರ ಹೆಜ್ಜೆ ಹಾಕಿದರು.

ಆಯುಧ ಪೂಜೆ ಮತ್ತು ವಿಜಯದಶಮಿ ಕಾರಣದಿಂದ ಎರಡು ದಿನಗಳ ಕಾಲ ವಿರಾಮ ತಗೆದುಕೊಂಡಿದ್ದ ಭಾರತ ಐಕ್ಯತಾ ಯಾತ್ರೆ ಇಂದು ಬೆಳಿಗ್ಗೆಯಿಂದ ಮತ್ತೆ ಚಾಲನೆ ಪಡೆದುಕೊಂಡಿದೆ. ಯಾತ್ರೆಯಲ್ಲಿ ಪಾಲ್ಗೊಳ್ಳುವ ಉದ್ದೇಶದಿಂದ ಕಳೆದ ಸೋಮವಾರವೇ ಕರ್ನಾಟಕಕ್ಕೆ ಬಂದಿದ್ದ ಕಾಂಗ್ರೆಸ್ ನಾಯಕಿ ಸೋನಿಯಾಗಾಂಧಿ ಎರಡು ದಿನಗಳ ದಸರಾ ವಿರಾಮದ ನಂತರ ತಮ್ಮ ಪುತ್ರ ರಾಹುಲ್ ಜೊತೆಗೆ ಇಂದು ನಡಿಗೆಯಲ್ಲಿ ಜೊತೆಯಾದರು.

ಕರ್ನಾಟಕದ ರಾಜಕೀಯ ಬೆಳವಣಿಗೆಯಲ್ಲಿ ಇದು ರಾಜ್ಯದ ಸಾರ್ವತ್ರಿಕ ಚುನಾವಣಾ ವರ್ಷವೂ ಆಗಿರುವುದರಿಂದ ಕಾಂಗ್ರೆಸ್ ನ ಈ ಭಾರತ್ ಐಕ್ಯತಾ ಯಾತ್ರೆ ಹಲವಷ್ಟು ಮಹತ್ವ ಪಡೆದುಕೊಂಡಿದೆ. ಈ ಹಿನ್ನೆಲೆಯಲ್ಲಿ ಬಿಜೆಪಿ ಕೂಡಾ ನಾನಾ ರೀತಿಯ ತಂತ್ರಗಾರಿಕೆಯಲ್ಲಿ ತೊಡಗಿದೆ.

ಸಧ್ಯ ‘ಸೋನಿಯಾಗಾಂಧಿಯವರು ಪಾದಯಾತ್ರೆಯಲ್ಲಿ ಪಾಲ್ಗೊಂಡಿರುವುದು ಪಕ್ಷಕ್ಕೆ ಹೆಮ್ಮೆಯ ಸಂಗತಿಯಾಗಿದೆ. ಯುವ ಜನತೆ ಯಾತ್ರೆಯಲ್ಲಿ ಜೊತೆಯಾಗಲು ಇದು ಮತ್ತಷ್ಟು ಹುರುಪು ನೀಡಿದೆ. ವಿಜಯದಶಮಿ ನಂತರ ರಾಜ್ಯದಲ್ಲಿ ಕಾಂಗ್ರೆಸ್ ವಿಜಯೋತ್ಸವ ಆಚರಿಸಲಿದೆ‌. ಪಾದಯಾತ್ರೆ ಮೂಲಕ ಪ್ರತಿಯೊಬ್ಬ ಮುಖಂಡರೂ ತಳಮಟ್ಟದ ಸಾಮಾನ್ಯ ಮತದಾರರನ್ನೂ ತಲುಪುವ ಉದ್ದೇಶ ಕೂಡಾ ಈಡೇರುತ್ತಿದೆ. ಸೋನಿಯಾ ಗಾಂಧಿ ಅವರು ಕರ್ನಾಟಕದ ಬೀದಿಗಳಲ್ಲಿ ನಡೆಯಲು ಬಂದಿರುವುದು ನಮಗೆ ಹೆಮ್ಮೆ, ನಾವು ರಾಜ್ಯದಲ್ಲಿ ಮತ್ತೆ ಅಧಿಕಾರಕ್ಕೆ ಬರುತ್ತೇವೆ ಮತ್ತು ಬಿಜೆಪಿ ತನ್ನ ಅಂಗಡಿಯನ್ನು ಮುಚ್ಚುವ ಹಾದಿಯಲ್ಲಿದೆ’ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಹೇಳಿದ್ದಾರೆ.

PPeepal Media

Peepal Media

Peepal Media · ರಾಜಕೀಯ ವಿಭಾಗ

ಸಂಬಂಧಿತ ಸುದ್ದಿಗಳು