ಮುಖ್ಯ ವಿಷಯಕ್ಕೆ ತೆರಳಿ
Peepal Media
ತಾಜಾ ಸುದ್ದಿ
●ಈಸಕ್ಕಿ ಆಸೆಯನ್ನೂ ಮೀರಿದ ಆಯ್ದಕ್ಕಿ ಲಕ್ಕಮ್ಮ●ಗಾಜಾ ಸ್ಮಶಾನದ ಮೇಲೆ ಮತ್ತೆ ಅರಳುತ್ತಾ ನೆತನ್ಯಾಹು ಕುರ್ಚಿ?●ಅರುಣಾಚಲದಲ್ಲಿ ಚೀನಾ ಸೈನಿಕರೊಂದಿಗೆ ಮುಖಾಮುಖಿ: ಕೇಂದ್ರದ ಮೌನವನ್ನು ಪ್ರಶ್ನಿಸಿದ ಕಾಂಗ್ರೆಸ್‌ನ ಜೈರಾಮ್ ರಮೇಶ್●ಕಡತಗಳ ವಿಲೇವಾರಿ ಪ್ರಕ್ರಿಯೆ ಬದಲಾವಣೆ: ಚುನಾವಣಾ ಆಯುಕ್ತರಿಂದ ಕ್ಯಾಬಿನೆಟ್‌ ಕಾರ್ಯದರ್ಶಿಗೆ ಆಕ್ಷೇಪಣಾ ಪತ್ರ●ಮೋದಿ–ಅದಾನಿ ಕುರಿತ ಸಾಕ್ಷ್ಯಚಿತ್ರ ಹಂಚಿಕೊಂಡ ರಾಜ್‌ ಠಾಕ್ರೆ; ತೆಗೆದುಹಾಕುವಂತೆ ಸೂಚನೆಗಳ ನಡುವೆ ಮುಂದುವರೆದ ಚರ್ಚೆ●ಮಂಡ್ಯದಲ್ಲಿ ARAI ಪರೀಕ್ಷಾ ಕೇಂದ್ರಗಳಿಗೆ ಭೂಮಿ ಹಂಚಿಕೆ ವಿಳಂಬ: ರಾಜ್ಯ ಸರ್ಕಾರಕ್ಕೆ ಎಚ್‌.ಡಿ. ಕುಮಾರಸ್ವಾಮಿ ಪತ್ರ●ರಾಷ್ಟ್ರೀಯತೆಯ ಪಾಠ ನನಗೆ ಬೇಕಿಲ್ಲ; ನಮ್ಮ ಗುರಿ ಆಡಳಿತ, ಸಾಮಾಜಿಕ ಜಾಲತಾಣದ ಪ್ರಚಾರವಲ್ಲ: ಕೆ. ಅಣ್ಣಾಮಲೈ●ಕೇವಲ ಮದುವೆಗಾಗಿ ಧರ್ಮಾಂತರವಾಗುವುದನ್ನು ಒಪ್ಪಲು ಸಾಧ್ಯವಿಲ್ಲ: ಬಾಂಬೆ ಹೈಕೋರ್ಟ್‌●ಇನ್ನು ನೋಂದಾಯಿತ ಸಿಮ್‌ ಇದ್ದರೆ ಮಾತ್ರ ವಾಟ್ಸ್‌ಆ್ಯಪ್‌ ಬಳಕೆ ಸಾಧ್ಯ: ಜನವರಿ 1, 2027ರಿಂದ ಹೊಸ ನಿಯಮ ಜಾರಿ●ಈ-ಮುದ್ರ ಡಿಜಿಟಲ್‌ ಪ್ರಮಾಣಪತ್ರಗಳಲ್ಲಿ ಭದ್ರತಾ ಲೋಪ: ಜಾಗತಿಕ ತಂತ್ರಜ್ಞಾನ ವಲಯದಲ್ಲಿ ಆತಂಕ●ಹಾಸನ ಕಾಳಸಂತೆಗೆ ಪಡಿತರ ಅಕ್ಕಿ ಮಾರಾಟ ಯತ್ನ – ಕ್ವಿಂಟಲ್‌ ಗಟ್ಟಲೆ ಅಕ್ಕಿ, ರಾಗಿ ವಶ●ಸದ್ಯದಲ್ಲೆ ಕಬ್ಬು ಬೆಳೆಗಾರರ ಸಭೆ ಕರೆದಿದ್ದೇನೆ – ಸಿಎಂ ಡಿ.ಕೆ ಶಿವಕುಮಾರ್●ರಾಜ್ಯದಲ್ಲಿ ಐದು ದಿನಗಳಲ್ಲಿ ಮಳೆ ಸಾಧ್ಯತೆ – ಹವಾಮಾನ ಇಲಾಖೆ ಮುನ್ಸೂಚನೆ●ಸಿದ್ದರಾಮಯ್ಯ ಅವರನ್ನು ಅಧಿಕಾರದಿಂದ ಇಳಿಸಲು ವ್ಯವಸ್ಥಿತ ಸಂಚು ರೂಪಿಸಿ ಯಶಸ್ವಿಗೊಂಡಿದ್ದಾರೆ – ಸಿಎಂ ಯಡಿಯೂರಪ್ಪ●ಚುನಾವಣಾ ಆಯುಕ್ತರಿಗೆ ರಕ್ಷಣೆ ನೀಡುವ ಕಾನೂನು ರದ್ದುಗೊಳಿಸಿ – ಮಲ್ಲಿಕಾರ್ಜುನ ಖರ್ಗೆ ಆಗ್ರಹ●ದಸರಾ ವೇಳೆ ಪೊಲೀಸರ ಲಾಠಿ ಏಟಿಗೆ 4 ವರ್ಷದ ಬಾಲಕ ಗಂಭೀರ – ICUನಲ್ಲಿ ಅಂತಿಮ ಹೋರಾಟ●ಸೌದಿ ವಿಮಾನ ನಿಲ್ದಾಣದ ಮೇಲೆ ಭೀಕರ ದಾಳಿ – 8 ಮಂದಿಗೆ ಗಾಯ, ಇಬ್ಬರ ಅಂತ್ಯ●ನಂದಿಧ್ವಜ ಪೂಜೆಗೆ ಸಚಿವರಿಗೆ ಅವಕಾಶ ನಿರಾಕರಿಸಿದ ಅಧಿಕಾರಿಗಳ ವಿರುದ್ಧ ತನಿಖೆಗೆ ಆದೇಶ: ಮುಖ್ಯಮಂತ್ರಿ ಡಿ ಕೆ ಶಿವಕುಮಾರ್‌●300 ವರ್ಷಗಳಷ್ಟು ಹಳೆಯ ಐತಿಹಾಸಿಕ ರೇಸ್‌ಕೋರ್ಸ್ ಮಸೀದಿಯ ವಿದ್ಯುತ್ ಹಾಗೂ ನೀರು ಸಂಪರ್ಕ ಕಡಿತ: ತುರ್ತು ರಕ್ಷಣೆ ಕೋರಿದ ದೆಹಲಿ ವಕ್ಫ್ ಮಂಡಳಿ●ತಿಹಾರ್ ಜೈಲಿನಿಂದ ಬಿಡುಗಡೆಯಾದ ಬೆನ್ನಲ್ಲೇ ಸೌರವ್ ದಾಸ್ ಹಾಗೂ ಅಶೋತ್ ರಾಂಕಾಗೆ ದೆಹಲಿ ಅಪರಾಧ ವಿಭಾಗದಿಂದ ಸಮನ್ಸ್

ಕಾಂಗ್ರೆಸ್ ಸರ್ಕಾರ ಚುನಾವಣೆ ಗೆಲ್ಲಲು ಹಣ, ಅಧಿಕಾರದ ದುರ್ಬಳಕೆ ಮಾಡುತ್ತಿದೆ: ಎಚ್.ಡಿ. ಕುಮಾರಸ್ವಾಮಿ ಆರೋಪ

P

Peepal Media • ರಾಜಕೀಯ

• 1 ನಿಮಿಷದ ಓದು

ಕಾಂಗ್ರೆಸ್ ಸರ್ಕಾರ ಚುನಾವಣೆ ಗೆಲ್ಲಲು ಹಣ, ಅಧಿಕಾರದ ದುರ್ಬಳಕೆ ಮಾಡುತ್ತಿದೆ: ಎಚ್.ಡಿ. ಕುಮಾರಸ್ವಾಮಿ ಆರೋಪ

ಬೆಂಗಳೂರು: ರಾಜ್ಯದಲ್ಲಿ ಚುನಾವಣೆಗಳನ್ನು ಗೆಲ್ಲಲು ಕಾಂಗ್ರೆಸ್ ಸರ್ಕಾರವು ಹಣ ಮತ್ತು ಅಧಿಕಾರವನ್ನು ಅತಿಯಾಗಿ ದುರುಪಯೋಗಪಡಿಸಿಕೊಳ್ಳುತ್ತಿದೆ ಹಾಗೂ ‘ಫಾರ್ಮ್ 7’ ಅರ್ಜಿಗಳ ನೆಪವೊಡ್ಡಿ ಬಿಜೆಪಿ ಕಾರ್ಯಕರ್ತರ ವಿರುದ್ಧ ಸುಳ್ಳು ಪ್ರಕರಣ ದಾಖಲಿಸಲು ಪೊಲೀಸರ ಮೇಲೆ ತೀವ್ರ ಒತ್ತಡ ಹೇರುತ್ತಿದೆ ಎಂದು ಕೇಂದ್ರ ಸಚಿವ ಹಾಗೂ ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಗಂಭೀರ ಆರೋಪ ಮಾಡಿದ್ದಾರೆ.

ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, “ಕಾಂಗ್ರೆಸ್ ಸರ್ಕಾರವು ಆರ್ಥಿಕ ಅಹಂಕಾರ ಮತ್ತು ಅಧಿಕಾರ ದುರ್ಬಳಕೆಯ ಮೂಲಕ ತಮಗೆ ಬೇಕಾದುದನ್ನು ಪಡೆಯಲು ಹಾಗೂ ಯಾವುದೇ ಚುನಾವಣೆಯನ್ನು ಗೆಲ್ಲಲು ಹೊರಟಿದೆ. ಇದಕ್ಕೆ ಜನರೇ ತಕ್ಕ ಪಾಠ ಕಲಿಸಲಿದ್ದಾರೆ,” ಎಂದರು. ಇದೇ ವೇಳೆ ನೈಸ್ (NICE) ರಸ್ತೆ ಯೋಜನೆ ಮತ್ತು ಬಿದದಿ ಟೌನ್‌ಶಿಪ್ ವಿಚಾರವಾಗಿ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ವಿರುದ್ಧ ಹರಿಹಾಯ್ದ ಅವರು, “ರೈತರನ್ನು ಬೀದಿಗೆ ತರುವ ಕೆಲಸವನ್ನು ಸರ್ಕಾರ ಮಾಡುತ್ತಿದೆ. ಕಳೆದ ಮೂರು ವರ್ಷಗಳಲ್ಲಿ ರಾಜ್ಯದಲ್ಲಿ 3,500 ಕ್ಕೂ ಹೆಚ್ಚು ರೈತರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ,” ಎಂದು ದೂರಿದರು.

ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್ – SIR) ಮತ್ತು ‘ಫಾರ್ಮ್ 7’ ವಿವಾದಕ್ಕೆ ಸಂಬಂಧಿಸಿದಂತೆ ಮಾತನಾಡಿದ ಕುಮಾರಸ್ವಾಮಿ, “ಮತದಾರರ ಪಟ್ಟಿಯಲ್ಲಿರುವ ದೋಷಗಳ ವಿರುದ್ಧ ಆಕ್ಷೇಪಣೆ ಸಲ್ಲಿಸಲು ಚುನಾವಣಾ ಆಯೋಗವು ದೇಶದ ಎಲ್ಲಾ ರಾಜಕೀಯ ಪಕ್ಷಗಳಿಗೂ ಕಾನೂನುಬದ್ಧ ಹಕ್ಕು ನೀಡಿದೆ. ಮತದಾರರ ಪಟ್ಟಿಯಲ್ಲಿ ಡಬಲ್ ಎಂಟ್ರಿ (ದ್ವಿಪ್ರತಿ), ಮೃತಪಟ್ಟವರ ಹೆಸರುಗಳು ಹಾಗೂ ಅಕ್ರಮ ಬಾಂಗ್ಲಾದೇಶಿಯರ ಹೆಸರುಗಳು ಸೇರ್ಪಡೆಯಾಗಿದ್ದು, ಇವುಗಳನ್ನು ಸರಿಪಡಿಸಿ ಪಟ್ಟಿಯನ್ನು ಸ್ವಚ್ಛಗೊಳಿಸಲು ದೇಶಾದ್ಯಂತ ಹಾಗೂ ಕರ್ನಾಟಕದಲ್ಲಿ ಎಸ್‌ಐಆರ್ ನಡೆಯುತ್ತಿದೆ,” ಎಂದು ಸಮರ್ಥಿಸಿಕೊಂಡರು.

“ಫಾರ್ಮ್ 7 ಸಲ್ಲಿಕೆಯನ್ನು ರಾಜಕೀಯ ಕಾರ್ಯಕರ್ತರು ಮಾಡುವುದು ಸಹಜ. ಅರ್ಜಿ ಸರಿಯಾಗಿದ್ದರೆ ಅಧಿಕಾರಿಗಳು ಒಪ್ಪಿಕೊಳ್ಳುತ್ತಾರೆ, ತಪ್ಪಾಗಿದ್ದರೆ ತಿರಸ್ಕರಿಸುತ್ತಾರೆ. ಕೇವಲ ಫಾರ್ಮ್ 7 ಸಲ್ಲಿಸಿದ್ದಕ್ಕಾಗಿ ಕ್ರಿಮಿನಲ್ ಪ್ರಕರಣ ದಾಖಲಿಸಲು ಕಾನೂನಿನಲ್ಲಿ ಯಾವುದೇ ಅವಕಾಶವಿಲ್ಲ. ಆದರೂ ಕಾಂಗ್ರೆಸ್ ಸರ್ಕಾರ ಪೊಲೀಸರ ಮೇಲೆ ಒತ್ತಡ ಹೇರಿ ಬಿಜೆಪಿ ಕಾರ್ಯಕರ್ತರ ವಿರುದ್ಧ ಎಫ್‌ಐಆರ್ ದಾಖಲಿಸುತ್ತಿದೆ. ಈ ಸಂಬಂಧ ಈಗಾಗಲೇ ಬಿ.ಎಸ್. ಯಡಿಯೂರಪ್ಪ ಹಾಗೂ ಆರ್. ಅಶೋಕ್ ಅವರ ನೇತೃತ್ವದಲ್ಲಿ ಡಿಜಿಪಿಯವರನ್ನು ಭೇಟಿ ಮಾಡಿ ಎಚ್ಚರಿಕೆ ನೀಡಿದ್ದೇವೆ. ಕಾರ್ಯಕರ್ತರ ಮೇಲಿನ ದೌರ್ಜನ್ಯ ಮುಂದುವರಿದರೆ ನಾವು ಬೀದಿಗಿಳಿದು ಹೋರಾಟ ನಡೆಸಲಿದ್ದೇವೆ,” ಎಂದು ಅವರು ಎಚ್ಚರಿಸಿದರು.

P

Peepal Media

Peepal Media · ರಾಜಕೀಯ ವಿಭಾಗ

ಸಂಬಂಧಿತ ಸುದ್ದಿಗಳು

Exit mobile version