ಮುಖ್ಯ ವಿಷಯಕ್ಕೆ ತೆರಳಿ
Peepal Media
ತಾಜಾ ಸುದ್ದಿ
ಈಸಕ್ಕಿ ಆಸೆಯನ್ನೂ ಮೀರಿದ ಆಯ್ದಕ್ಕಿ ಲಕ್ಕಮ್ಮಗಾಜಾ ಸ್ಮಶಾನದ ಮೇಲೆ ಮತ್ತೆ ಅರಳುತ್ತಾ ನೆತನ್ಯಾಹು ಕುರ್ಚಿ?ಅರುಣಾಚಲದಲ್ಲಿ ಚೀನಾ ಸೈನಿಕರೊಂದಿಗೆ ಮುಖಾಮುಖಿ: ಕೇಂದ್ರದ ಮೌನವನ್ನು ಪ್ರಶ್ನಿಸಿದ ಕಾಂಗ್ರೆಸ್‌ನ ಜೈರಾಮ್ ರಮೇಶ್ಕಡತಗಳ ವಿಲೇವಾರಿ ಪ್ರಕ್ರಿಯೆ ಬದಲಾವಣೆ: ಚುನಾವಣಾ ಆಯುಕ್ತರಿಂದ ಕ್ಯಾಬಿನೆಟ್‌ ಕಾರ್ಯದರ್ಶಿಗೆ ಆಕ್ಷೇಪಣಾ ಪತ್ರಮೋದಿ–ಅದಾನಿ ಕುರಿತ ಸಾಕ್ಷ್ಯಚಿತ್ರ ಹಂಚಿಕೊಂಡ ರಾಜ್‌ ಠಾಕ್ರೆ; ತೆಗೆದುಹಾಕುವಂತೆ ಸೂಚನೆಗಳ ನಡುವೆ ಮುಂದುವರೆದ ಚರ್ಚೆಮಂಡ್ಯದಲ್ಲಿ ARAI ಪರೀಕ್ಷಾ ಕೇಂದ್ರಗಳಿಗೆ ಭೂಮಿ ಹಂಚಿಕೆ ವಿಳಂಬ: ರಾಜ್ಯ ಸರ್ಕಾರಕ್ಕೆ ಎಚ್‌.ಡಿ. ಕುಮಾರಸ್ವಾಮಿ ಪತ್ರರಾಷ್ಟ್ರೀಯತೆಯ ಪಾಠ ನನಗೆ ಬೇಕಿಲ್ಲ; ನಮ್ಮ ಗುರಿ ಆಡಳಿತ, ಸಾಮಾಜಿಕ ಜಾಲತಾಣದ ಪ್ರಚಾರವಲ್ಲ: ಕೆ. ಅಣ್ಣಾಮಲೈಕೇವಲ ಮದುವೆಗಾಗಿ ಧರ್ಮಾಂತರವಾಗುವುದನ್ನು ಒಪ್ಪಲು ಸಾಧ್ಯವಿಲ್ಲ: ಬಾಂಬೆ ಹೈಕೋರ್ಟ್‌ಇನ್ನು ನೋಂದಾಯಿತ ಸಿಮ್‌ ಇದ್ದರೆ ಮಾತ್ರ ವಾಟ್ಸ್‌ಆ್ಯಪ್‌ ಬಳಕೆ ಸಾಧ್ಯ: ಜನವರಿ 1, 2027ರಿಂದ ಹೊಸ ನಿಯಮ ಜಾರಿಈ-ಮುದ್ರ ಡಿಜಿಟಲ್‌ ಪ್ರಮಾಣಪತ್ರಗಳಲ್ಲಿ ಭದ್ರತಾ ಲೋಪ: ಜಾಗತಿಕ ತಂತ್ರಜ್ಞಾನ ವಲಯದಲ್ಲಿ ಆತಂಕಹಾಸನ ಕಾಳಸಂತೆಗೆ ಪಡಿತರ ಅಕ್ಕಿ ಮಾರಾಟ ಯತ್ನ – ಕ್ವಿಂಟಲ್‌ ಗಟ್ಟಲೆ ಅಕ್ಕಿ, ರಾಗಿ ವಶಸದ್ಯದಲ್ಲೆ ಕಬ್ಬು ಬೆಳೆಗಾರರ ಸಭೆ ಕರೆದಿದ್ದೇನೆ – ಸಿಎಂ ಡಿ.ಕೆ ಶಿವಕುಮಾರ್ರಾಜ್ಯದಲ್ಲಿ ಐದು ದಿನಗಳಲ್ಲಿ ಮಳೆ ಸಾಧ್ಯತೆ – ಹವಾಮಾನ ಇಲಾಖೆ ಮುನ್ಸೂಚನೆಸಿದ್ದರಾಮಯ್ಯ ಅವರನ್ನು ಅಧಿಕಾರದಿಂದ ಇಳಿಸಲು ವ್ಯವಸ್ಥಿತ ಸಂಚು ರೂಪಿಸಿ ಯಶಸ್ವಿಗೊಂಡಿದ್ದಾರೆ – ಸಿಎಂ ಯಡಿಯೂರಪ್ಪಚುನಾವಣಾ ಆಯುಕ್ತರಿಗೆ ರಕ್ಷಣೆ ನೀಡುವ ಕಾನೂನು ರದ್ದುಗೊಳಿಸಿ – ಮಲ್ಲಿಕಾರ್ಜುನ ಖರ್ಗೆ ಆಗ್ರಹದಸರಾ ವೇಳೆ ಪೊಲೀಸರ ಲಾಠಿ ಏಟಿಗೆ 4 ವರ್ಷದ ಬಾಲಕ ಗಂಭೀರ – ICUನಲ್ಲಿ ಅಂತಿಮ ಹೋರಾಟಸೌದಿ ವಿಮಾನ ನಿಲ್ದಾಣದ ಮೇಲೆ ಭೀಕರ ದಾಳಿ – 8 ಮಂದಿಗೆ ಗಾಯ, ಇಬ್ಬರ ಅಂತ್ಯನಂದಿಧ್ವಜ ಪೂಜೆಗೆ ಸಚಿವರಿಗೆ ಅವಕಾಶ ನಿರಾಕರಿಸಿದ ಅಧಿಕಾರಿಗಳ ವಿರುದ್ಧ ತನಿಖೆಗೆ ಆದೇಶ: ಮುಖ್ಯಮಂತ್ರಿ ಡಿ ಕೆ ಶಿವಕುಮಾರ್‌300 ವರ್ಷಗಳಷ್ಟು ಹಳೆಯ ಐತಿಹಾಸಿಕ ರೇಸ್‌ಕೋರ್ಸ್ ಮಸೀದಿಯ ವಿದ್ಯುತ್ ಹಾಗೂ ನೀರು ಸಂಪರ್ಕ ಕಡಿತ: ತುರ್ತು ರಕ್ಷಣೆ ಕೋರಿದ ದೆಹಲಿ ವಕ್ಫ್ ಮಂಡಳಿತಿಹಾರ್ ಜೈಲಿನಿಂದ ಬಿಡುಗಡೆಯಾದ ಬೆನ್ನಲ್ಲೇ ಸೌರವ್ ದಾಸ್ ಹಾಗೂ ಅಶೋತ್ ರಾಂಕಾಗೆ ದೆಹಲಿ ಅಪರಾಧ ವಿಭಾಗದಿಂದ ಸಮನ್ಸ್

ಲೋಕಸಭೆಯಲ್ಲಿ ನೀಟ್ ಮಸೂದೆ ಚರ್ಚೆ: ‘ಮೂರ್ಖರು’ ಪದ ಬಳಕೆ ವಿವಾದ; ರಾಹುಲ್ ಗಾಂಧಿಗೆ ಸ್ಪೀಕರ್ ಎಚ್ಚರಿಕೆ

PPeepal Media Desk

Peepal Media Desk ರಾಜಕೀಯ, ರಾಜ್ಯ

• 1 ನಿಮಿಷದ ಓದು

ಲೋಕಸಭೆಯಲ್ಲಿ ನೀಟ್ ಮಸೂದೆ ಚರ್ಚೆ: ‘ಮೂರ್ಖರು’ ಪದ ಬಳಕೆ ವಿವಾದ; ರಾಹುಲ್ ಗಾಂಧಿಗೆ ಸ್ಪೀಕರ್ ಎಚ್ಚರಿಕೆ

ನವದೆಹಲಿ: ಲೋಕಸಭೆಯಲ್ಲಿ ಬುಧವಾರ ನೀಟ್ (NEET) ಪರೀಕ್ಷಾ ಅಕ್ರಮ ಹಾಗೂ ಪ್ರಶ್ನೆಪತ್ರಿಕೆ ಸೋರಿಕೆ ತಡೆ ಮಸೂದೆ ಕುರಿತು ಸುದೀರ್ಘ ಚರ್ಚೆ ನಡೆಯಿತು. ಈ ವೇಳೆ ಮಾತನಾಡಿದ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ದೇಶದ ಯುವಜನತೆ ಕೇಂದ್ರ ಸರ್ಕಾರದ ವಿರುದ್ಧ ಆಕ್ರೋಶಗೊಂಡಿರುವುದು ಸಮರ್ಥನೀಯ ಎಂದು ಹೇಳಿದರು.

ಯುವಕರು ದೇಶದ ಭವಿಷ್ಯವನ್ನು ರೂಪಿಸುವವರಾಗಿದ್ದು, ಪ್ರತಿಯೊಬ್ಬರೂ ಅವರನ್ನು ಗೌರವಿಸಬೇಕು. ವಿದ್ಯಾರ್ಥಿಗಳು ಪ್ರತಿಭಟನೆ ನಡೆಸುವ ವೇಳೆ ಯಾವುದೇ ದ್ವೇಷ ಅಥವಾ ಕೋಪ ಹೊಂದಿರಲಿಲ್ಲ. ಬದಲಾಗುತ್ತಿರುವ ಜಗತ್ತಿನ ಬೆಳವಣಿಗೆಗಳನ್ನು ವಿದ್ಯಾರ್ಥಿಗಳು ಸೂಕ್ಷ್ಮವಾಗಿ ಗಮನಿಸಿ ಅರ್ಥಮಾಡಿಕೊಳ್ಳುತ್ತಿದ್ದಾರೆ ಎಂದು ಅವರು ಅಭಿಪ್ರಾಯಪಟ್ಟರು.

ಭಾಷಣದ ವೇಳೆ ರಾಹುಲ್ ಗಾಂಧಿ, “ವಿದ್ಯಾರ್ಥಿಗಳು ನನ್ನ ಬಳಿ ತಮ್ಮ ಅಳಲು ತೋಡಿಕೊಳ್ಳುತ್ತಾ, ‘ಮೂರ್ಖರು ನಮ್ಮ ಸಮಸ್ಯೆಗಳನ್ನು ಆಲಿಸುತ್ತಿಲ್ಲ, ಅಂಧಭಕ್ತರು ಅವರನ್ನು ಅನುಸರಿಸುತ್ತಿದ್ದಾರೆ’ ಎಂದು ಹೇಳುತ್ತಿದ್ದರು” ಎಂದು ಉಲ್ಲೇಖಿಸಿದರು. ಅವರು ‘ಮೂರ್ಖರು’ ಎಂಬ ಪದ ಬಳಸುತ್ತಿದ್ದಂತೆಯೇ ಆಡಳಿತ ಪಕ್ಷದ ಸದಸ್ಯರು ಹಾಗೂ ಸಚಿವರು ತೀವ್ರ ಆಕ್ಷೇಪ ವ್ಯಕ್ತಪಡಿಸಿದರು.

ಈ ವೇಳೆ ಕೇಂದ್ರ ಸಚಿವ ಕಿರೆಣ್ ರಿಜಿಜು ಎದ್ದು ನಿಂತು, ರಾಹುಲ್ ಗಾಂಧಿ ಅವರು ಸಂಸತ್ತಿನಲ್ಲಿ ಅಸಂಸದೀಯ ಪದ ಬಳಸಿ ಸದನದ ಘನತೆಗೆ ಧಕ್ಕೆ ತರುತ್ತಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಸದನದಲ್ಲಿ ಗದ್ದಲ ಉಂಟಾದ ಬಳಿಕ ಸ್ಪಷ್ಟನೆ ನೀಡಿದ ರಾಹುಲ್ ಗಾಂಧಿ, “ನಾನು ಯಾರನ್ನೂ ನೇರವಾಗಿ ಮೂರ್ಖರು ಎಂದು ಕರೆದಿಲ್ಲ. ಇಲ್ಲಿರುವ ಯಾವುದೇ ಸದಸ್ಯರಿಗೂ ಆ ರೀತಿ ಸಂಬೋಧಿಸಿಲ್ಲ. ವಿದ್ಯಾರ್ಥಿಗಳು ಹೇಳಿದ ಮಾತನ್ನು ಮಾತ್ರ ಉಲ್ಲೇಖಿಸಿದ್ದೇನೆ” ಎಂದು ಸಮರ್ಥಿಸಿಕೊಂಡರು.

ಪರಿಸ್ಥಿತಿ ತೀವ್ರಗೊಳ್ಳುತ್ತಿದ್ದಂತೆ ಮಧ್ಯಪ್ರವೇಶಿಸಿದ ಲೋಕಸಭೆ ಸ್ಪೀಕರ್, ಸಂಸತ್ತಿನ ಗೌರವ ಕಾಪಾಡುವ ದೃಷ್ಟಿಯಿಂದ ಇಂತಹ ಅಸಂಸದೀಯ ಪದಗಳ ಬಳಕೆಯನ್ನು ತಪ್ಪಿಸುವಂತೆ ರಾಹುಲ್ ಗಾಂಧಿಗೆ ಸೂಚನೆ ನೀಡಿದರು.

PPeepal Media Desk

Peepal Media Desk

Peepal Media · ರಾಜಕೀಯ ವಿಭಾಗ

ಸಂಬಂಧಿತ ಸುದ್ದಿಗಳು