ಮುಖ್ಯ ವಿಷಯಕ್ಕೆ ತೆರಳಿ
Peepal Media
ತಾಜಾ ಸುದ್ದಿ
●ಈಸಕ್ಕಿ ಆಸೆಯನ್ನೂ ಮೀರಿದ ಆಯ್ದಕ್ಕಿ ಲಕ್ಕಮ್ಮ●ಗಾಜಾ ಸ್ಮಶಾನದ ಮೇಲೆ ಮತ್ತೆ ಅರಳುತ್ತಾ ನೆತನ್ಯಾಹು ಕುರ್ಚಿ?●ಅರುಣಾಚಲದಲ್ಲಿ ಚೀನಾ ಸೈನಿಕರೊಂದಿಗೆ ಮುಖಾಮುಖಿ: ಕೇಂದ್ರದ ಮೌನವನ್ನು ಪ್ರಶ್ನಿಸಿದ ಕಾಂಗ್ರೆಸ್‌ನ ಜೈರಾಮ್ ರಮೇಶ್●ಕಡತಗಳ ವಿಲೇವಾರಿ ಪ್ರಕ್ರಿಯೆ ಬದಲಾವಣೆ: ಚುನಾವಣಾ ಆಯುಕ್ತರಿಂದ ಕ್ಯಾಬಿನೆಟ್‌ ಕಾರ್ಯದರ್ಶಿಗೆ ಆಕ್ಷೇಪಣಾ ಪತ್ರ●ಮೋದಿ–ಅದಾನಿ ಕುರಿತ ಸಾಕ್ಷ್ಯಚಿತ್ರ ಹಂಚಿಕೊಂಡ ರಾಜ್‌ ಠಾಕ್ರೆ; ತೆಗೆದುಹಾಕುವಂತೆ ಸೂಚನೆಗಳ ನಡುವೆ ಮುಂದುವರೆದ ಚರ್ಚೆ●ಮಂಡ್ಯದಲ್ಲಿ ARAI ಪರೀಕ್ಷಾ ಕೇಂದ್ರಗಳಿಗೆ ಭೂಮಿ ಹಂಚಿಕೆ ವಿಳಂಬ: ರಾಜ್ಯ ಸರ್ಕಾರಕ್ಕೆ ಎಚ್‌.ಡಿ. ಕುಮಾರಸ್ವಾಮಿ ಪತ್ರ●ರಾಷ್ಟ್ರೀಯತೆಯ ಪಾಠ ನನಗೆ ಬೇಕಿಲ್ಲ; ನಮ್ಮ ಗುರಿ ಆಡಳಿತ, ಸಾಮಾಜಿಕ ಜಾಲತಾಣದ ಪ್ರಚಾರವಲ್ಲ: ಕೆ. ಅಣ್ಣಾಮಲೈ●ಕೇವಲ ಮದುವೆಗಾಗಿ ಧರ್ಮಾಂತರವಾಗುವುದನ್ನು ಒಪ್ಪಲು ಸಾಧ್ಯವಿಲ್ಲ: ಬಾಂಬೆ ಹೈಕೋರ್ಟ್‌●ಇನ್ನು ನೋಂದಾಯಿತ ಸಿಮ್‌ ಇದ್ದರೆ ಮಾತ್ರ ವಾಟ್ಸ್‌ಆ್ಯಪ್‌ ಬಳಕೆ ಸಾಧ್ಯ: ಜನವರಿ 1, 2027ರಿಂದ ಹೊಸ ನಿಯಮ ಜಾರಿ●ಈ-ಮುದ್ರ ಡಿಜಿಟಲ್‌ ಪ್ರಮಾಣಪತ್ರಗಳಲ್ಲಿ ಭದ್ರತಾ ಲೋಪ: ಜಾಗತಿಕ ತಂತ್ರಜ್ಞಾನ ವಲಯದಲ್ಲಿ ಆತಂಕ●ಹಾಸನ ಕಾಳಸಂತೆಗೆ ಪಡಿತರ ಅಕ್ಕಿ ಮಾರಾಟ ಯತ್ನ – ಕ್ವಿಂಟಲ್‌ ಗಟ್ಟಲೆ ಅಕ್ಕಿ, ರಾಗಿ ವಶ●ಸದ್ಯದಲ್ಲೆ ಕಬ್ಬು ಬೆಳೆಗಾರರ ಸಭೆ ಕರೆದಿದ್ದೇನೆ – ಸಿಎಂ ಡಿ.ಕೆ ಶಿವಕುಮಾರ್●ರಾಜ್ಯದಲ್ಲಿ ಐದು ದಿನಗಳಲ್ಲಿ ಮಳೆ ಸಾಧ್ಯತೆ – ಹವಾಮಾನ ಇಲಾಖೆ ಮುನ್ಸೂಚನೆ●ಸಿದ್ದರಾಮಯ್ಯ ಅವರನ್ನು ಅಧಿಕಾರದಿಂದ ಇಳಿಸಲು ವ್ಯವಸ್ಥಿತ ಸಂಚು ರೂಪಿಸಿ ಯಶಸ್ವಿಗೊಂಡಿದ್ದಾರೆ – ಸಿಎಂ ಯಡಿಯೂರಪ್ಪ●ಚುನಾವಣಾ ಆಯುಕ್ತರಿಗೆ ರಕ್ಷಣೆ ನೀಡುವ ಕಾನೂನು ರದ್ದುಗೊಳಿಸಿ – ಮಲ್ಲಿಕಾರ್ಜುನ ಖರ್ಗೆ ಆಗ್ರಹ●ದಸರಾ ವೇಳೆ ಪೊಲೀಸರ ಲಾಠಿ ಏಟಿಗೆ 4 ವರ್ಷದ ಬಾಲಕ ಗಂಭೀರ – ICUನಲ್ಲಿ ಅಂತಿಮ ಹೋರಾಟ●ಸೌದಿ ವಿಮಾನ ನಿಲ್ದಾಣದ ಮೇಲೆ ಭೀಕರ ದಾಳಿ – 8 ಮಂದಿಗೆ ಗಾಯ, ಇಬ್ಬರ ಅಂತ್ಯ●ನಂದಿಧ್ವಜ ಪೂಜೆಗೆ ಸಚಿವರಿಗೆ ಅವಕಾಶ ನಿರಾಕರಿಸಿದ ಅಧಿಕಾರಿಗಳ ವಿರುದ್ಧ ತನಿಖೆಗೆ ಆದೇಶ: ಮುಖ್ಯಮಂತ್ರಿ ಡಿ ಕೆ ಶಿವಕುಮಾರ್‌●300 ವರ್ಷಗಳಷ್ಟು ಹಳೆಯ ಐತಿಹಾಸಿಕ ರೇಸ್‌ಕೋರ್ಸ್ ಮಸೀದಿಯ ವಿದ್ಯುತ್ ಹಾಗೂ ನೀರು ಸಂಪರ್ಕ ಕಡಿತ: ತುರ್ತು ರಕ್ಷಣೆ ಕೋರಿದ ದೆಹಲಿ ವಕ್ಫ್ ಮಂಡಳಿ●ತಿಹಾರ್ ಜೈಲಿನಿಂದ ಬಿಡುಗಡೆಯಾದ ಬೆನ್ನಲ್ಲೇ ಸೌರವ್ ದಾಸ್ ಹಾಗೂ ಅಶೋತ್ ರಾಂಕಾಗೆ ದೆಹಲಿ ಅಪರಾಧ ವಿಭಾಗದಿಂದ ಸಮನ್ಸ್

ಸಂವಿಧಾನ ಜಾರಿಗೆ ಮೊದಲೇ ಕುರುಬರ ಪತ್ತಿನ‌ ಸಹಕಾರ ಸಂಘ ಸ್ಥಾಪಿಸಿದ್ದು : ಸಿ.ಎಂ.ಸಿದ್ದರಾಮಯ್ಯ ಮೆಚ್ಚುಗೆ

P

Peepal Media Desk • ರಾಜಕೀಯ, ರಾಜ್ಯ

• 1 ನಿಮಿಷದ ಓದು

ಸಂವಿಧಾನ ಜಾರಿಗೆ ಮೊದಲೇ ಕುರುಬರ ಪತ್ತಿನ‌ ಸಹಕಾರ ಸಂಘ ಸ್ಥಾಪಿಸಿದ್ದು : ಸಿ.ಎಂ.ಸಿದ್ದರಾಮಯ್ಯ ಮೆಚ್ಚುಗೆ

ಅಂಬೇಡ್ಕರ್ ಅವರ ಶಿಕ್ಷಣ-ಸಂಘಟನೆ-ಹೋರಾಟ ಎನ್ನುವುದನ್ನು ಪಾಲಿಸಿ
ಶಿಕ್ಷಣ-ಆರೋಗ್ಯ-ಅನ್ನಕ್ಕೆ ನಮ್ಮ ಸರ್ಕಾರದ ಪ್ರಮುಖ ಆಧ್ಯತೆ
ಸಂವಿಧಾನ ಜಾರಿಯಾಗಿ 75 ವರ್ಷವಾದರೂ ಸಂಪೂರ್ಣ ಶಿಕ್ಷಣ ಸಾಧ್ಯವಾಗಿಲ್ಲ : ಸಿಎಂ ಸಿದ್ದರಾಮಯ್ಯ

ಗದಗ ಜೂ 3: ಅಂಬೇಡ್ಕರ್ ಅವರು ಕೊಟ್ಟಿರುವ  ಶಿಕ್ಷಣ-ಸಂಘಟನೆ-ಹೋರಾಟ ಎನ್ನುವ ಮಂತ್ರವನ್ನು ಎಲ್ಲರೂ ಪಾಲಿಸಿಬೇಕು.

ಸಂವಿಧಾನ ಜಾರಿಯಾಗಿ 75 ವರ್ಷವಾದರೂ ಸಂಪೂರ್ಣ ಶಿಕ್ಷಣ ಸಾಧ್ಯವಾಗಿಲ್ಲ ಎಂದು ಸಿ.ಎಂ ಸಿದ್ದರಾಮಯ್ಯ ತಿಳಿಸಿದರು.

ಗದಗದ ಕರ್ನಾಟಕ ಕುರುಬರ ಸಂಘ ಆಯೋಜಿಸಿದ್ದ ಕರ್ನಾಟಕ ಕುರುಬರ ಸಹಕಾರ ಪತ್ತಿನ ಸಂಘದ  ಶತಮಾನೋತ್ಸವ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.

ನೂರು ವರ್ಷಗಳ ಹಿಂದೆಯೇ ಕುರುಬ ಸಮಾಜವನ್ನು ಸಂಘಟಿಸಿ ಸಹಕಾರ ಸಂಘ ಸ್ಥಾಪಿಸಿದ್ದು ಅತ್ಯಂತ ಮುಂದಾಲೋಚನೆಯ ಸಾಮಾಜಿಕ ನ್ಯಾಯದ ಕಾರ್ಯ ಎಂದರು. 

ಶಿಕ್ಷಣ-ಸಂಘಟನೆ-ಹೋರಾಟ ಅಂಬೇಡ್ಕರ್ ಅವರು ದೇಶದ ಹಿಂದುಳಿದವರಿಗೆ ಕೊಟ್ಟಿರುವ ಮಂತ್ರ. ಆದರೆ, ಸಂವಿಧಾನ ಜಾರಿಗೆ ಮೊದಲೇ ಮುಂದಾಲೋಚನೆಯಿಂದ ಪತ್ತಿನ‌ ಸಹಕಾರ ಸಂಘ ಸ್ಥಾಪಿಸಿರುವುದು ಅತ್ಯಂತ ಶ್ಲಾಘನೀಯ ಕಾರ್ಯ ಎಂದರು.

ಸಮಾಜದಲ್ಲಿ ಆರ್ಥಿಕವಾಗಿ, ಸಾಮಾಜಿಕವಾಗಿ ಶೂದ್ರ ವರ್ಗದ ಜನ‌ ಹಿಂದುಳಿಯಲು ಅವರು ಅಕ್ಷರ ಸಂಸ್ಕೃತಿಯಿಂದ ವಂಚಿತರಾಗಿದ್ದೇ ಪ್ರಮುಖ ಕಾರಣ. ಶೂದ್ರರು, ದಲಿತರು ಮಾತ್ರ ಶಿಕ್ಷಣ ಪಡೆಯುವಂತಿರಲಿಲ್ಲ . ಅಂಬೇಡ್ಕರ್ ಅವರ ಜೀವಮಾನದ ಹೋರಾಟವೇ ಈ‌ ಅಸಮಾನತೆಯನ್ನು ಅಳಿಸುವುದಾಗಿತ್ತು. ಇದಕ್ಕೆ ಶಿಕ್ಷಣವೇ ಪ್ರಮುಖ‌ ಅಸ್ತ್ರ ಎಂದು ಅಂಬೇಡ್ಕರ್ ಮನಗಂಡಿದ್ದರು. 

ಶಿಕ್ಷಣ ದೊರಕದಿದ್ದರೆ ಸ್ವಾಭಿಮಾನಿಗಳಾಗಿ ಇರಲು ಸಾಧ್ಯವೇ ಇಲ್ಲ. ನನಗೆ ರಾಜಪ್ಪ ಎನ್ನುವ ಶಿಕ್ಷಕರು ಸಿಗದೇ ಹೋಗಿದ್ದರೆ ನನಗೆ ಶಿಕ್ಷಣವೂ ಸಿಗುತ್ತಿರಲಿಲ್ಲ, ನಾನು ಮುಖ್ಯಮಂತ್ರಿಯೂ ಆಗುತ್ತಿರಲಿಲ್ಲ. ಹಸು ಕಾಯ್ಕೊಂಡು ಇರಬೇಕಾಗಿತ್ತು ಎಂದರು.

ಅದಕ್ಕೇ ನಮ್ಮ ಸರ್ಕಾರ ಶಿಕ್ಷಣ-ಆರೋಗ್ಯ-ಅನ್ನಕ್ಕೆ  ಪ್ರಮುಖ ಆಧ್ಯತೆ ನೀಡುತ್ತಿದೆ. ಅಂಬೇಡ್ಕರ್, ಬಸವಣ್ಣ, ಮಹಾತ್ಮ ಗಾಂಧಿಯವರ ಆಶಯಗಳು ಈಡೇರಬೇಕಾದರೆ ಸರ್ವರಿಗೂ ಶಿಕ್ಷಣ ಸಿಗಬೇಕು. ಎಲ್ಲರಿಗೂ ಆರ್ಥಿಕ ಶಕ್ತಿ ಬರಬೇಕು ಎಂದರು.

P

Peepal Media Desk

Peepal Media · ರಾಜಕೀಯ ವಿಭಾಗ

ಸಂಬಂಧಿತ ಸುದ್ದಿಗಳು

Exit mobile version