ಮುಖ್ಯ ವಿಷಯಕ್ಕೆ ತೆರಳಿ
Peepal Media
ತಾಜಾ ಸುದ್ದಿ
ಈಸಕ್ಕಿ ಆಸೆಯನ್ನೂ ಮೀರಿದ ಆಯ್ದಕ್ಕಿ ಲಕ್ಕಮ್ಮಗಾಜಾ ಸ್ಮಶಾನದ ಮೇಲೆ ಮತ್ತೆ ಅರಳುತ್ತಾ ನೆತನ್ಯಾಹು ಕುರ್ಚಿ?ಅರುಣಾಚಲದಲ್ಲಿ ಚೀನಾ ಸೈನಿಕರೊಂದಿಗೆ ಮುಖಾಮುಖಿ: ಕೇಂದ್ರದ ಮೌನವನ್ನು ಪ್ರಶ್ನಿಸಿದ ಕಾಂಗ್ರೆಸ್‌ನ ಜೈರಾಮ್ ರಮೇಶ್ಕಡತಗಳ ವಿಲೇವಾರಿ ಪ್ರಕ್ರಿಯೆ ಬದಲಾವಣೆ: ಚುನಾವಣಾ ಆಯುಕ್ತರಿಂದ ಕ್ಯಾಬಿನೆಟ್‌ ಕಾರ್ಯದರ್ಶಿಗೆ ಆಕ್ಷೇಪಣಾ ಪತ್ರಮೋದಿ–ಅದಾನಿ ಕುರಿತ ಸಾಕ್ಷ್ಯಚಿತ್ರ ಹಂಚಿಕೊಂಡ ರಾಜ್‌ ಠಾಕ್ರೆ; ತೆಗೆದುಹಾಕುವಂತೆ ಸೂಚನೆಗಳ ನಡುವೆ ಮುಂದುವರೆದ ಚರ್ಚೆಮಂಡ್ಯದಲ್ಲಿ ARAI ಪರೀಕ್ಷಾ ಕೇಂದ್ರಗಳಿಗೆ ಭೂಮಿ ಹಂಚಿಕೆ ವಿಳಂಬ: ರಾಜ್ಯ ಸರ್ಕಾರಕ್ಕೆ ಎಚ್‌.ಡಿ. ಕುಮಾರಸ್ವಾಮಿ ಪತ್ರರಾಷ್ಟ್ರೀಯತೆಯ ಪಾಠ ನನಗೆ ಬೇಕಿಲ್ಲ; ನಮ್ಮ ಗುರಿ ಆಡಳಿತ, ಸಾಮಾಜಿಕ ಜಾಲತಾಣದ ಪ್ರಚಾರವಲ್ಲ: ಕೆ. ಅಣ್ಣಾಮಲೈಕೇವಲ ಮದುವೆಗಾಗಿ ಧರ್ಮಾಂತರವಾಗುವುದನ್ನು ಒಪ್ಪಲು ಸಾಧ್ಯವಿಲ್ಲ: ಬಾಂಬೆ ಹೈಕೋರ್ಟ್‌ಇನ್ನು ನೋಂದಾಯಿತ ಸಿಮ್‌ ಇದ್ದರೆ ಮಾತ್ರ ವಾಟ್ಸ್‌ಆ್ಯಪ್‌ ಬಳಕೆ ಸಾಧ್ಯ: ಜನವರಿ 1, 2027ರಿಂದ ಹೊಸ ನಿಯಮ ಜಾರಿಈ-ಮುದ್ರ ಡಿಜಿಟಲ್‌ ಪ್ರಮಾಣಪತ್ರಗಳಲ್ಲಿ ಭದ್ರತಾ ಲೋಪ: ಜಾಗತಿಕ ತಂತ್ರಜ್ಞಾನ ವಲಯದಲ್ಲಿ ಆತಂಕಹಾಸನ ಕಾಳಸಂತೆಗೆ ಪಡಿತರ ಅಕ್ಕಿ ಮಾರಾಟ ಯತ್ನ – ಕ್ವಿಂಟಲ್‌ ಗಟ್ಟಲೆ ಅಕ್ಕಿ, ರಾಗಿ ವಶಸದ್ಯದಲ್ಲೆ ಕಬ್ಬು ಬೆಳೆಗಾರರ ಸಭೆ ಕರೆದಿದ್ದೇನೆ – ಸಿಎಂ ಡಿ.ಕೆ ಶಿವಕುಮಾರ್ರಾಜ್ಯದಲ್ಲಿ ಐದು ದಿನಗಳಲ್ಲಿ ಮಳೆ ಸಾಧ್ಯತೆ – ಹವಾಮಾನ ಇಲಾಖೆ ಮುನ್ಸೂಚನೆಸಿದ್ದರಾಮಯ್ಯ ಅವರನ್ನು ಅಧಿಕಾರದಿಂದ ಇಳಿಸಲು ವ್ಯವಸ್ಥಿತ ಸಂಚು ರೂಪಿಸಿ ಯಶಸ್ವಿಗೊಂಡಿದ್ದಾರೆ – ಸಿಎಂ ಯಡಿಯೂರಪ್ಪಚುನಾವಣಾ ಆಯುಕ್ತರಿಗೆ ರಕ್ಷಣೆ ನೀಡುವ ಕಾನೂನು ರದ್ದುಗೊಳಿಸಿ – ಮಲ್ಲಿಕಾರ್ಜುನ ಖರ್ಗೆ ಆಗ್ರಹದಸರಾ ವೇಳೆ ಪೊಲೀಸರ ಲಾಠಿ ಏಟಿಗೆ 4 ವರ್ಷದ ಬಾಲಕ ಗಂಭೀರ – ICUನಲ್ಲಿ ಅಂತಿಮ ಹೋರಾಟಸೌದಿ ವಿಮಾನ ನಿಲ್ದಾಣದ ಮೇಲೆ ಭೀಕರ ದಾಳಿ – 8 ಮಂದಿಗೆ ಗಾಯ, ಇಬ್ಬರ ಅಂತ್ಯನಂದಿಧ್ವಜ ಪೂಜೆಗೆ ಸಚಿವರಿಗೆ ಅವಕಾಶ ನಿರಾಕರಿಸಿದ ಅಧಿಕಾರಿಗಳ ವಿರುದ್ಧ ತನಿಖೆಗೆ ಆದೇಶ: ಮುಖ್ಯಮಂತ್ರಿ ಡಿ ಕೆ ಶಿವಕುಮಾರ್‌300 ವರ್ಷಗಳಷ್ಟು ಹಳೆಯ ಐತಿಹಾಸಿಕ ರೇಸ್‌ಕೋರ್ಸ್ ಮಸೀದಿಯ ವಿದ್ಯುತ್ ಹಾಗೂ ನೀರು ಸಂಪರ್ಕ ಕಡಿತ: ತುರ್ತು ರಕ್ಷಣೆ ಕೋರಿದ ದೆಹಲಿ ವಕ್ಫ್ ಮಂಡಳಿತಿಹಾರ್ ಜೈಲಿನಿಂದ ಬಿಡುಗಡೆಯಾದ ಬೆನ್ನಲ್ಲೇ ಸೌರವ್ ದಾಸ್ ಹಾಗೂ ಅಶೋತ್ ರಾಂಕಾಗೆ ದೆಹಲಿ ಅಪರಾಧ ವಿಭಾಗದಿಂದ ಸಮನ್ಸ್

ಖಾತೆ ಹಂಚಿಕೆ ಕಗ್ಗಂಟಿಗೆ ತೆರೆ: ನೂತನ ಸಚಿವರಿಗೆ ಖಾತೆ ಹಂಚಿಕೆ

PPeepal Media Desk

Peepal Media Desk ರಾಜಕೀಯ, ರಾಜ್ಯ

• 1 ನಿಮಿಷದ ಓದು

ಖಾತೆ ಹಂಚಿಕೆ ಕಗ್ಗಂಟಿಗೆ ತೆರೆ: ನೂತನ ಸಚಿವರಿಗೆ ಖಾತೆ ಹಂಚಿಕೆ

ಬೆಂಗಳೂರು: ಕರ್ನಾಟಕ ರಾಜ್ಯ ಸಚಿವ ಸಂಪುಟದ ವಿಸ್ತರಣೆಯ ಬಳಿಕ ಹಲವು ದಿನಗಳಿಂದ ಕಗ್ಗಂಟಾಗಿದ್ದ ನೂತನ ಸಚಿವರ ಖಾತೆ ಹಂಚಿಕೆ ಪ್ರಕ್ರಿಯೆಗೆ ಕೊನೆಗೂ ತೆರೆ ಬಿದ್ದಿದೆ. ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಕಾಂಗ್ರೆಸ್‌ ಹೈಕಮಾಂಡ್‌ನೊಂದಿಗೆ ಸಮಾಲೋಚನೆ ನಡೆಸಿದ ಬಳಿಕ ಸಚಿವರಿಗೆ ಖಾತೆಗಳನ್ನು ಹಂಚಿಕೆ ಮಾಡಲಾಗಿದೆ. ಆಗಸ್ಟ್‌ 3ರಂದು 19 ಮಂದಿ ನೂತನ ಸಚಿವರು ಪ್ರಮಾಣವಚನ ಸ್ವೀಕರಿಸಿದ್ದು, ಇದರಿಂದ ರಾಜ್ಯ ಸಚಿವ ಸಂಪುಟದ ಒಟ್ಟು ಬಲ 33ಕ್ಕೆ ಏರಿಕೆಯಾಗಿದೆ.

ಖಾತೆ ಹಂಚಿಕೆಯಲ್ಲಿ ಕೆಲವು ಪ್ರಮುಖ ಬದಲಾವಣೆಗಳೂ ನಡೆದಿವೆ. ಆರಂಭದಲ್ಲಿ ಆಹಾರ ಮತ್ತು ನಾಗರಿಕ ಸರಬರಾಜು ಖಾತೆ ವಹಿಸಿಕೊಳ್ಳಲಿದ್ದಾರೆ ಎನ್ನಲಾಗಿದ್ದ ಹಿರಿಯ ಸಚಿವ ಕೆ.ಎಚ್. ಮುನಿಯಪ್ಪ ಅವರಿಗೆ ಇದೀಗ ಸಮಾಜ ಕಲ್ಯಾಣ ಇಲಾಖೆ ನೀಡಲಾಗಿದೆ. ಆಹಾರ ಮತ್ತು ನಾಗರಿಕ ಸರಬರಾಜು ಖಾತೆಯನ್ನು ರಿಜ್ವಾನ್ ಅರ್ಷದ್ ಅವರಿಗೆ ವಹಿಸಲಾಗಿದೆ ಎಂದು ವರದಿಯಾಗಿದೆ.

ಪಟ್ಟಿಯ ಪ್ರಕಾರ ಸಚಿವರಿಗೆ ಹಂಚಿಕೆಯಾಗಿರುವ ಖಾತೆಗಳು ಹೀಗಿವೆ:

  • ಕೆ.ಎಚ್. ಮುನಿಯಪ್ಪ – ಸಮಾಜ ಕಲ್ಯಾಣ ಇಲಾಖೆ
  • ಎನ್. ಚಲುವರಾಯಸ್ವಾಮಿ – ಕೃಷಿ ಇಲಾಖೆ
  • ಮಧು ಬಂಗಾರಪ್ಪ – ಪ್ರಾಥಮಿಕ ಶಿಕ್ಷಣ ಇಲಾಖೆ
  • ಬಸವರಾಜ ರಾಯರೆಡ್ಡಿ – ಉನ್ನತ ಶಿಕ್ಷಣ ಇಲಾಖೆ
  • ಜಮೀರ್ ಅಹ್ಮದ್ ಖಾನ್ – ವಸತಿ ಇಲಾಖೆ
  • ಲಕ್ಷ್ಮಣ ಸವದಿ – ಸಹಕಾರ ಇಲಾಖೆ
  • ಎಚ್.ಸಿ. ಬಾಲಕೃಷ್ಣ – ಸಣ್ಣ ನೀರಾವರಿ ಇಲಾಖೆ
  • ಡಾ. ಅಜಯ್ ಸಿಂಗ್ – ಅರಣ್ಯ ಮತ್ತು ಪರಿಸರ ಇಲಾಖೆ
  • ಪುಟ್ಟರಂಗಶೆಟ್ಟಿ – ಪಶು ಸಂಗೋಪನೆ ಇಲಾಖೆ
  • ಸಂತೋಷ್ ಲಾಡ್ – ಕಾರ್ಮಿಕ ಇಲಾಖೆ
  • ಎಸ್.ಎಸ್. ಮಲ್ಲಿಕಾರ್ಜುನ್ – ಗಣಿ ಮತ್ತು ಭೂ ವಿಜ್ಞಾನ ಇಲಾಖೆ
  • ಕೆ.ಎಂ. ಶಿವಲಿಂಗೇಗೌಡ – ತೋಟಗಾರಿಕೆ ಮತ್ತು ರೇಷ್ಮೆ ಇಲಾಖೆ
  • ನರೇಂದ್ರ ಸ್ವಾಮಿ – ಅಬಕಾರಿ ಇಲಾಖೆ
  • ರುದ್ರಪ್ಪ ಲಮಾಣಿ – ಯುವಜನ ಮತ್ತು ಕ್ರೀಡಾ ಇಲಾಖೆ
  • ಕೆ.ಎಸ್. ಬಸವಂತಪ್ಪ – ಮೀನುಗಾರಿಕೆ, ಬಂದರು ಇಲಾಖೆ
  • ಬಿ. ನಾಗೇಂದ್ರ – ಪೌರಾಡಳಿತ ಇಲಾಖೆ
  • ಶಿವರಾಜ್ ತಂಗಡಗಿ – ಕನ್ನಡ ಮತ್ತು ಸಂಸ್ಕೃತಿ ಇಲಾಖೆ
  • ವಿಜಯಾನಂದ ಕಾಶಪ್ಪನವರ್ – ಜವಳಿ ಮತ್ತು ಕೃಷಿ ಮಾರುಕಟ್ಟೆ ಇಲಾಖೆ
  • ಟಿ. ರಘುಮೂರ್ತಿ – ಎಸ್ಸಿ/ಎಸ್ಟಿ ಪಂಗಡ ಅಭಿವೃದ್ಧಿ ಇಲಾಖೆ

ಈ ಖಾತೆ ಹಂಚಿಕೆಯೊಂದಿಗೆ ನೂತನ ಸಚಿವರಿಗೆ ಆಡಳಿತಾತ್ಮಕ ಜವಾಬ್ದಾರಿ ಸ್ಪಷ್ಟವಾಗಿದ್ದು, ವಿಧಾನಮಂಡಲದ ಮುಂಗಾರು ಅಧಿವೇಶನದ ಹಿನ್ನೆಲೆಯಲ್ಲಿ ಸರ್ಕಾರದ ಕಾರ್ಯಚಟುವಟಿಕೆಗಳಿಗೆ ವೇಗ ಸಿಗುವ ನಿರೀಕ್ಷೆ ಮೂಡಿದೆ. ಖಾತೆ ಹಂಚಿಕೆಯಲ್ಲಿ ನಡೆದ ವಿಳಂಬವನ್ನು ಪ್ರತಿಪಕ್ಷಗಳು ತೀವ್ರವಾಗಿ ಟೀಕಿಸಿದ್ದವು. ಇದೀಗ ಖಾತೆ ಹಂಚಿಕೆ ಪೂರ್ಣಗೊಂಡಿರುವುದರಿಂದ ಸಚಿವರು ತಮ್ಮ ತಮ್ಮ ಇಲಾಖೆಗಳ ಆಡಳಿತದತ್ತ ಗಮನಹರಿಸಲು ಅವಕಾಶ ದೊರೆತಂತಾಗಿದೆ.

ಆದರೆ ಸಂಪುಟದಲ್ಲಿ ಮಹಿಳಾ ಪ್ರಾತಿನಿಧ್ಯದ ಕೊರತೆ ಮುಂದುವರಿದಿದ್ದು, ಒಂದು ಸಚಿವ ಸ್ಥಾನ ಇನ್ನೂ ಖಾಲಿ ಉಳಿದಿದೆ. ಈ ಸ್ಥಾನವನ್ನು ಯಾವ ಮಹಿಳಾ ಶಾಸಕಿಗೆ ನೀಡುವ ಸಾಧ್ಯತೆ ಇದೆ ಎಂಬ ಚರ್ಚೆಯೂ ನಡೆಯುತ್ತಿದೆ.

PPeepal Media Desk

Peepal Media Desk

Peepal Media · ರಾಜಕೀಯ ವಿಭಾಗ

ಸಂಬಂಧಿತ ಸುದ್ದಿಗಳು