ಮುಖ್ಯ ವಿಷಯಕ್ಕೆ ತೆರಳಿ
Peepal Media
ತಾಜಾ ಸುದ್ದಿ
ಈಸಕ್ಕಿ ಆಸೆಯನ್ನೂ ಮೀರಿದ ಆಯ್ದಕ್ಕಿ ಲಕ್ಕಮ್ಮಗಾಜಾ ಸ್ಮಶಾನದ ಮೇಲೆ ಮತ್ತೆ ಅರಳುತ್ತಾ ನೆತನ್ಯಾಹು ಕುರ್ಚಿ?ಅರುಣಾಚಲದಲ್ಲಿ ಚೀನಾ ಸೈನಿಕರೊಂದಿಗೆ ಮುಖಾಮುಖಿ: ಕೇಂದ್ರದ ಮೌನವನ್ನು ಪ್ರಶ್ನಿಸಿದ ಕಾಂಗ್ರೆಸ್‌ನ ಜೈರಾಮ್ ರಮೇಶ್ಕಡತಗಳ ವಿಲೇವಾರಿ ಪ್ರಕ್ರಿಯೆ ಬದಲಾವಣೆ: ಚುನಾವಣಾ ಆಯುಕ್ತರಿಂದ ಕ್ಯಾಬಿನೆಟ್‌ ಕಾರ್ಯದರ್ಶಿಗೆ ಆಕ್ಷೇಪಣಾ ಪತ್ರಮೋದಿ–ಅದಾನಿ ಕುರಿತ ಸಾಕ್ಷ್ಯಚಿತ್ರ ಹಂಚಿಕೊಂಡ ರಾಜ್‌ ಠಾಕ್ರೆ; ತೆಗೆದುಹಾಕುವಂತೆ ಸೂಚನೆಗಳ ನಡುವೆ ಮುಂದುವರೆದ ಚರ್ಚೆಮಂಡ್ಯದಲ್ಲಿ ARAI ಪರೀಕ್ಷಾ ಕೇಂದ್ರಗಳಿಗೆ ಭೂಮಿ ಹಂಚಿಕೆ ವಿಳಂಬ: ರಾಜ್ಯ ಸರ್ಕಾರಕ್ಕೆ ಎಚ್‌.ಡಿ. ಕುಮಾರಸ್ವಾಮಿ ಪತ್ರರಾಷ್ಟ್ರೀಯತೆಯ ಪಾಠ ನನಗೆ ಬೇಕಿಲ್ಲ; ನಮ್ಮ ಗುರಿ ಆಡಳಿತ, ಸಾಮಾಜಿಕ ಜಾಲತಾಣದ ಪ್ರಚಾರವಲ್ಲ: ಕೆ. ಅಣ್ಣಾಮಲೈಕೇವಲ ಮದುವೆಗಾಗಿ ಧರ್ಮಾಂತರವಾಗುವುದನ್ನು ಒಪ್ಪಲು ಸಾಧ್ಯವಿಲ್ಲ: ಬಾಂಬೆ ಹೈಕೋರ್ಟ್‌ಇನ್ನು ನೋಂದಾಯಿತ ಸಿಮ್‌ ಇದ್ದರೆ ಮಾತ್ರ ವಾಟ್ಸ್‌ಆ್ಯಪ್‌ ಬಳಕೆ ಸಾಧ್ಯ: ಜನವರಿ 1, 2027ರಿಂದ ಹೊಸ ನಿಯಮ ಜಾರಿಈ-ಮುದ್ರ ಡಿಜಿಟಲ್‌ ಪ್ರಮಾಣಪತ್ರಗಳಲ್ಲಿ ಭದ್ರತಾ ಲೋಪ: ಜಾಗತಿಕ ತಂತ್ರಜ್ಞಾನ ವಲಯದಲ್ಲಿ ಆತಂಕಹಾಸನ ಕಾಳಸಂತೆಗೆ ಪಡಿತರ ಅಕ್ಕಿ ಮಾರಾಟ ಯತ್ನ – ಕ್ವಿಂಟಲ್‌ ಗಟ್ಟಲೆ ಅಕ್ಕಿ, ರಾಗಿ ವಶಸದ್ಯದಲ್ಲೆ ಕಬ್ಬು ಬೆಳೆಗಾರರ ಸಭೆ ಕರೆದಿದ್ದೇನೆ – ಸಿಎಂ ಡಿ.ಕೆ ಶಿವಕುಮಾರ್ರಾಜ್ಯದಲ್ಲಿ ಐದು ದಿನಗಳಲ್ಲಿ ಮಳೆ ಸಾಧ್ಯತೆ – ಹವಾಮಾನ ಇಲಾಖೆ ಮುನ್ಸೂಚನೆಸಿದ್ದರಾಮಯ್ಯ ಅವರನ್ನು ಅಧಿಕಾರದಿಂದ ಇಳಿಸಲು ವ್ಯವಸ್ಥಿತ ಸಂಚು ರೂಪಿಸಿ ಯಶಸ್ವಿಗೊಂಡಿದ್ದಾರೆ – ಸಿಎಂ ಯಡಿಯೂರಪ್ಪಚುನಾವಣಾ ಆಯುಕ್ತರಿಗೆ ರಕ್ಷಣೆ ನೀಡುವ ಕಾನೂನು ರದ್ದುಗೊಳಿಸಿ – ಮಲ್ಲಿಕಾರ್ಜುನ ಖರ್ಗೆ ಆಗ್ರಹದಸರಾ ವೇಳೆ ಪೊಲೀಸರ ಲಾಠಿ ಏಟಿಗೆ 4 ವರ್ಷದ ಬಾಲಕ ಗಂಭೀರ – ICUನಲ್ಲಿ ಅಂತಿಮ ಹೋರಾಟಸೌದಿ ವಿಮಾನ ನಿಲ್ದಾಣದ ಮೇಲೆ ಭೀಕರ ದಾಳಿ – 8 ಮಂದಿಗೆ ಗಾಯ, ಇಬ್ಬರ ಅಂತ್ಯನಂದಿಧ್ವಜ ಪೂಜೆಗೆ ಸಚಿವರಿಗೆ ಅವಕಾಶ ನಿರಾಕರಿಸಿದ ಅಧಿಕಾರಿಗಳ ವಿರುದ್ಧ ತನಿಖೆಗೆ ಆದೇಶ: ಮುಖ್ಯಮಂತ್ರಿ ಡಿ ಕೆ ಶಿವಕುಮಾರ್‌300 ವರ್ಷಗಳಷ್ಟು ಹಳೆಯ ಐತಿಹಾಸಿಕ ರೇಸ್‌ಕೋರ್ಸ್ ಮಸೀದಿಯ ವಿದ್ಯುತ್ ಹಾಗೂ ನೀರು ಸಂಪರ್ಕ ಕಡಿತ: ತುರ್ತು ರಕ್ಷಣೆ ಕೋರಿದ ದೆಹಲಿ ವಕ್ಫ್ ಮಂಡಳಿತಿಹಾರ್ ಜೈಲಿನಿಂದ ಬಿಡುಗಡೆಯಾದ ಬೆನ್ನಲ್ಲೇ ಸೌರವ್ ದಾಸ್ ಹಾಗೂ ಅಶೋತ್ ರಾಂಕಾಗೆ ದೆಹಲಿ ಅಪರಾಧ ವಿಭಾಗದಿಂದ ಸಮನ್ಸ್

ಅತ್ಯಾ*ಚಾರ, ಅನಾಚಾರವನ್ನು ಸಮರ್ಥಿಸುವುದು, ಬೆಂಬಲಿಸುವುದು, ಅತ್ಯಾಚಾರಿಗಳನ್ನು ತಲೆ ಮೇಲೆ ಹೊತ್ತು ಮೆರೆಸುವುದು ಬಿಜೆಪಿಗೆ ಅತ್ಯಂತ ಪ್ರಿಯವಾದ ಕೆಲಸ- ಪ್ರಿಯಾಂಕ್‌ ಖರ್ಗೆ

PPeepal Media

Peepal Media ರಾಜಕೀಯ

• 1 ನಿಮಿಷದ ಓದು

ಅತ್ಯಾ*ಚಾರ, ಅನಾಚಾರವನ್ನು ಸಮರ್ಥಿಸುವುದು, ಬೆಂಬಲಿಸುವುದು, ಅತ್ಯಾಚಾರಿಗಳನ್ನು ತಲೆ ಮೇಲೆ ಹೊತ್ತು ಮೆರೆಸುವುದು ಬಿಜೆಪಿಗೆ ಅತ್ಯಂತ ಪ್ರಿಯವಾದ ಕೆಲಸ- ಪ್ರಿಯಾಂಕ್‌ ಖರ್ಗೆ

ಬಿಜೆಪಿಯವರಿಗೆ ರಾಮನ ಹೆಸರು ಹೇಳುವುದಕ್ಕೆ ಮಿನಿಮಮ್ ಯೋಗ್ಯತೆ ಇಲ್ಲ ಎನ್ನುವುದಕ್ಕೆ ಸಾಕಷ್ಟು ನಿದರ್ಶನಗಳಿವೆ. ಬಿಜೆಪಿಯವರ ಬಾಯಲ್ಲಿ ಮಾತ್ರ ರಾಮ, ಮನದಲ್ಲಿ ಕೀಚಕ, ದುಷ್ಯಾಸನರ ಆರಾಧನೆ ಎಂದು ಪ್ರಿಯಾಂಕ ಖರ್ಗೆ ಹೇಳಿದ್ದಾರೆ.

ಬಾಲಕಿಯೊಬ್ಬಳಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದಡಿ ವಿಚಾರಣೆ ಎದುರಿಸುತ್ತಿರುವ ಯಡಿಯೂರಪ್ಪ ಅವರಿಗೆ ಚುನಾವಣೆಯಲ್ಲಿ ಪ್ರಚಾರ ಮಾಡಲು ಅವಕಾಶ ಕೊಡಬಾರದು ಎಂದು ದೂರು ದಾಖಲಾಗಿರುವ ಹಿನ್ನೆಲೆಯಲ್ಲಿ ಪ್ರಿಯಾಂಕ್‌ ಖರ್ಗೆ ಈ ಮಾತುಗಳನ್ನು ಹೇಳಿದ್ದಾರೆ.

ಈ ಕುರಿತು ಟ್ವಿಟರ್‌ ಹೇಳಿಕೆ ನೀಡಿರುವ ಅವರು “ಬಿಲ್ಕಿಸ್ ಬಾನು ಅತ್ಯಾಚಾರಿಗಳನ್ನು ಹೂ ಹಾರ ಹಾಕಿ ಸನ್ಮಾನಿಸಿದ್ದರು, ಉತ್ತರ ಪದೇಶ, ಕಾಶ್ಮೀರದಲ್ಲಿ ಅತ್ಯಾಚಾರಿಗಳ ಮೆರವಣಿಗೆಯನ್ನೇ ನಡೆಸಿದ್ದರು. ಈಗ
“ಯುಪಿ ಮಾಡೆಲ್“ನ್ನು ಯಶಸ್ವಿಯಾಗಿ ಕರ್ನಾಟಕದಲ್ಲಿ ಪಾಲನೆ ಮಾಡುತ್ತಿದ್ದಾರೆ ಎಂದು ಕಟಕಿಯಾಡಿದ್ದಾರೆ.

ಅಪ್ರಾಪ್ತ ಬಾಲಕಿಯ ಮೇಲೆ ದೌರ್ಜನ್ಯ ಎಸಗಿದ ಬಗ್ಗೆ ಪೊಕ್ಸೋ ಪ್ರಕರಣ ದಾಖಲಾಗಿ, ಚಾರ್ಜ್ ಶೀಟ್ ಸಲ್ಲಿಕೆಯಾಗಿದ್ದರೂ ಮಾನ್ಯ ಯಡಿಯೂರಪ್ಪನವರನ್ನು ಚುನಾವಣಾ ಪ್ರಚಾರದ ವೇದಿಕೆ ಹತ್ತಿಸಿದೆ.

ಪೊಕ್ಸೋ ಆರೋಪಿ ಶ್ರೀ ಯಡಿಯೂರಪ್ಪನವರನ್ನು ಚುನಾವಣಾ ಪ್ರಚಾರದ ವೇದಿಕೆ ಹತ್ತಿಸಿರುವ ಬಿಜೆಪಿ ಕರ್ನಾಟಕದ ಜನತೆಗೆ ಯಾವ ಸಂದೇಶ ನೀಡಲು ಹೊರಟಿದೆ? ಬಿಜೆಪಿಗೆ ಮತ ಹಾಕಿದರೆ ಅತ್ಯಾಚಾರ ಉಚಿತ, ದೌರ್ಜನ್ಯ ಖಚಿತ ಎಂಬ ಸಂದೇಶ ನೀಡುತ್ತಿದ್ದೀರಾ ಎಂದು ಅವರು ಕೇಳಿದ್ದಾರೆ.

ಯಡಿಯೂರಪ್ಪನವರನ್ನು ಯಾವುದೇ ವೇದಿಕೆ ಹತ್ತಿಸಬಾರದು ಎಂದು ಯತ್ನಾಳ್ ಅವರೇ ಹೇಳಿದ್ದರು, ಆದರೂ ಸ್ವಪಕ್ಷದವರ ಅಭಿಪ್ರಾಯಕ್ಕೆ ಕಿಂಚಿತ್ತೂ ಮನ್ನಣೆ ನೀಡದ ಬಿಜೆಪಿ ಸುಳ್ಳೇ ತನ್ನ ಧರ್ಮ, ಸ್ತ್ರೀ ಪೀಡನೆಯೇ ತನ್ನ ಸಂಸ್ಕೃತಿ ಎನ್ನುವುದನ್ನು ಸಾಭೀತು ಮಾಡಿದೆ.

ನಾಡಿನ ಮಹಿಳೆಯರ ಬಗ್ಗೆ ಸ್ವಲ್ಪವಾದರೂ ಗೌರವವಿದ್ದರೆ, ಸಾರ್ವಜನಿಕ ಲಜ್ಜೆಯನ್ನು ಮೈಗೂಡಿಸಿಕೊಂಡಿದ್ದರೆ ಬಿಜೆಪಿ ಪೊಕ್ಸೋದಂತಹ ಗಂಭೀರ ಆರೋಪ ಎದುರಿಸುತ್ತಿರುವ ಯಡಿಯೂರಪ್ಪನವರನ್ನು ಯಾವುದೇ ವೇದಿಕೆ ಹತ್ತಿಸದೆ ತನ್ನ ನೈತಿಕತೆ ಪ್ರದರ್ಶಿಸಲಿ ಎಂದು ಸಚಿವ ಪ್ರಿಯಾಂಕ್‌ ಖರ್ಗೆ ಆಗ್ರಹಿಸಿದ್ದಾರೆ

PPeepal Media

Peepal Media

Peepal Media · ರಾಜಕೀಯ ವಿಭಾಗ

ಸಂಬಂಧಿತ ಸುದ್ದಿಗಳು