ಮುಖ್ಯ ವಿಷಯಕ್ಕೆ ತೆರಳಿ
Peepal Media
ತಾಜಾ ಸುದ್ದಿ
●ಈಸಕ್ಕಿ ಆಸೆಯನ್ನೂ ಮೀರಿದ ಆಯ್ದಕ್ಕಿ ಲಕ್ಕಮ್ಮ●ಗಾಜಾ ಸ್ಮಶಾನದ ಮೇಲೆ ಮತ್ತೆ ಅರಳುತ್ತಾ ನೆತನ್ಯಾಹು ಕುರ್ಚಿ?●ಅರುಣಾಚಲದಲ್ಲಿ ಚೀನಾ ಸೈನಿಕರೊಂದಿಗೆ ಮುಖಾಮುಖಿ: ಕೇಂದ್ರದ ಮೌನವನ್ನು ಪ್ರಶ್ನಿಸಿದ ಕಾಂಗ್ರೆಸ್‌ನ ಜೈರಾಮ್ ರಮೇಶ್●ಕಡತಗಳ ವಿಲೇವಾರಿ ಪ್ರಕ್ರಿಯೆ ಬದಲಾವಣೆ: ಚುನಾವಣಾ ಆಯುಕ್ತರಿಂದ ಕ್ಯಾಬಿನೆಟ್‌ ಕಾರ್ಯದರ್ಶಿಗೆ ಆಕ್ಷೇಪಣಾ ಪತ್ರ●ಮೋದಿ–ಅದಾನಿ ಕುರಿತ ಸಾಕ್ಷ್ಯಚಿತ್ರ ಹಂಚಿಕೊಂಡ ರಾಜ್‌ ಠಾಕ್ರೆ; ತೆಗೆದುಹಾಕುವಂತೆ ಸೂಚನೆಗಳ ನಡುವೆ ಮುಂದುವರೆದ ಚರ್ಚೆ●ಮಂಡ್ಯದಲ್ಲಿ ARAI ಪರೀಕ್ಷಾ ಕೇಂದ್ರಗಳಿಗೆ ಭೂಮಿ ಹಂಚಿಕೆ ವಿಳಂಬ: ರಾಜ್ಯ ಸರ್ಕಾರಕ್ಕೆ ಎಚ್‌.ಡಿ. ಕುಮಾರಸ್ವಾಮಿ ಪತ್ರ●ರಾಷ್ಟ್ರೀಯತೆಯ ಪಾಠ ನನಗೆ ಬೇಕಿಲ್ಲ; ನಮ್ಮ ಗುರಿ ಆಡಳಿತ, ಸಾಮಾಜಿಕ ಜಾಲತಾಣದ ಪ್ರಚಾರವಲ್ಲ: ಕೆ. ಅಣ್ಣಾಮಲೈ●ಕೇವಲ ಮದುವೆಗಾಗಿ ಧರ್ಮಾಂತರವಾಗುವುದನ್ನು ಒಪ್ಪಲು ಸಾಧ್ಯವಿಲ್ಲ: ಬಾಂಬೆ ಹೈಕೋರ್ಟ್‌●ಇನ್ನು ನೋಂದಾಯಿತ ಸಿಮ್‌ ಇದ್ದರೆ ಮಾತ್ರ ವಾಟ್ಸ್‌ಆ್ಯಪ್‌ ಬಳಕೆ ಸಾಧ್ಯ: ಜನವರಿ 1, 2027ರಿಂದ ಹೊಸ ನಿಯಮ ಜಾರಿ●ಈ-ಮುದ್ರ ಡಿಜಿಟಲ್‌ ಪ್ರಮಾಣಪತ್ರಗಳಲ್ಲಿ ಭದ್ರತಾ ಲೋಪ: ಜಾಗತಿಕ ತಂತ್ರಜ್ಞಾನ ವಲಯದಲ್ಲಿ ಆತಂಕ●ಹಾಸನ ಕಾಳಸಂತೆಗೆ ಪಡಿತರ ಅಕ್ಕಿ ಮಾರಾಟ ಯತ್ನ – ಕ್ವಿಂಟಲ್‌ ಗಟ್ಟಲೆ ಅಕ್ಕಿ, ರಾಗಿ ವಶ●ಸದ್ಯದಲ್ಲೆ ಕಬ್ಬು ಬೆಳೆಗಾರರ ಸಭೆ ಕರೆದಿದ್ದೇನೆ – ಸಿಎಂ ಡಿ.ಕೆ ಶಿವಕುಮಾರ್●ರಾಜ್ಯದಲ್ಲಿ ಐದು ದಿನಗಳಲ್ಲಿ ಮಳೆ ಸಾಧ್ಯತೆ – ಹವಾಮಾನ ಇಲಾಖೆ ಮುನ್ಸೂಚನೆ●ಸಿದ್ದರಾಮಯ್ಯ ಅವರನ್ನು ಅಧಿಕಾರದಿಂದ ಇಳಿಸಲು ವ್ಯವಸ್ಥಿತ ಸಂಚು ರೂಪಿಸಿ ಯಶಸ್ವಿಗೊಂಡಿದ್ದಾರೆ – ಸಿಎಂ ಯಡಿಯೂರಪ್ಪ●ಚುನಾವಣಾ ಆಯುಕ್ತರಿಗೆ ರಕ್ಷಣೆ ನೀಡುವ ಕಾನೂನು ರದ್ದುಗೊಳಿಸಿ – ಮಲ್ಲಿಕಾರ್ಜುನ ಖರ್ಗೆ ಆಗ್ರಹ●ದಸರಾ ವೇಳೆ ಪೊಲೀಸರ ಲಾಠಿ ಏಟಿಗೆ 4 ವರ್ಷದ ಬಾಲಕ ಗಂಭೀರ – ICUನಲ್ಲಿ ಅಂತಿಮ ಹೋರಾಟ●ಸೌದಿ ವಿಮಾನ ನಿಲ್ದಾಣದ ಮೇಲೆ ಭೀಕರ ದಾಳಿ – 8 ಮಂದಿಗೆ ಗಾಯ, ಇಬ್ಬರ ಅಂತ್ಯ●ನಂದಿಧ್ವಜ ಪೂಜೆಗೆ ಸಚಿವರಿಗೆ ಅವಕಾಶ ನಿರಾಕರಿಸಿದ ಅಧಿಕಾರಿಗಳ ವಿರುದ್ಧ ತನಿಖೆಗೆ ಆದೇಶ: ಮುಖ್ಯಮಂತ್ರಿ ಡಿ ಕೆ ಶಿವಕುಮಾರ್‌●300 ವರ್ಷಗಳಷ್ಟು ಹಳೆಯ ಐತಿಹಾಸಿಕ ರೇಸ್‌ಕೋರ್ಸ್ ಮಸೀದಿಯ ವಿದ್ಯುತ್ ಹಾಗೂ ನೀರು ಸಂಪರ್ಕ ಕಡಿತ: ತುರ್ತು ರಕ್ಷಣೆ ಕೋರಿದ ದೆಹಲಿ ವಕ್ಫ್ ಮಂಡಳಿ●ತಿಹಾರ್ ಜೈಲಿನಿಂದ ಬಿಡುಗಡೆಯಾದ ಬೆನ್ನಲ್ಲೇ ಸೌರವ್ ದಾಸ್ ಹಾಗೂ ಅಶೋತ್ ರಾಂಕಾಗೆ ದೆಹಲಿ ಅಪರಾಧ ವಿಭಾಗದಿಂದ ಸಮನ್ಸ್

ವಿಶ್ವಾಸಮತ ಯಾಚನೆ ಮಂಡಿಸಿದ ಕೇಜ್ರಿವಾಲ್

PPeepal Media Desk

Peepal Media Desk • ರಾಜಕೀಯ

• 1 ನಿಮಿಷದ ಓದು

ವಿಶ್ವಾಸಮತ ಯಾಚನೆ ಮಂಡಿಸಿದ ಕೇಜ್ರಿವಾಲ್

ದೆಹಲಿ: ಕೇಂದ್ರದ ಆಡಳಿತಾರೂಢ ಬಿಜೆಪಿ ಎಎಪಿ ಸರ್ಕಾರವನ್ನು ಬೀಳಿಸಲು ಷಡ್ಯಂತ್ರ ನಡೆಸುತ್ತಿದೆ ಎಂದು ಕೆಲ ದಿನಗಳಿಂದ ಆರೋಪ ಮಾಡುತ್ತಿದ್ದ ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ಈಗ ಆ ಆರೋಪಕ್ಕೆ ತೆರೆ ಎಳೆದಿದ್ದಾರೆ.

Delhi CM Arvind Kejriwal moves Motion of Confidence in Delhi Assembly.: ಶುಕ್ರವಾರ ದೆಹಲಿ ವಿಧಾನಸಭೆಯಲ್ಲಿ ವಿಶ್ವಾಸಮತ ಯಾಚನೆಯನ್ನು ಮಂಡಿಸಲಾಯಿತು. ಈ ನಿರ್ಣಯದ ಮೇಲಿನ ಚರ್ಚೆಯ ನಂತರ ನಾಳೆ (ಫೆಬ್ರವರಿ 17) ಮತದಾನ ನಡೆಯಲಿದೆ. ವಿಶ್ವಾಸಮತ ಯಾಚನೆ ಸಂದರ್ಭದಲ್ಲಿ ಸಿಎಂ ಕೇಜ್ರಿವಾಲ್‌ ಕುತೂಹಲಕಾರಿ ಮಾತುಗಳನ್ನಾಡಿದ್ದಾರೆ.

‘‘ಬೇರೆ ರಾಜ್ಯಗಳಲ್ಲಿ ಸುಳ್ಳು ಪ್ರಕರಣಗಳಲ್ಲಿ ಪಕ್ಷಗಳನ್ನು ಒಡೆದು ಸರಕಾರಗಳನ್ನು ಉರುಳಿಸುವುದನ್ನು ನೋಡುತ್ತಿದ್ದೇವೆ. ದೆಹಲಿ ಮದ್ಯ ಹಗರಣ ಪ್ರಕರಣದ ನೆಪದಲ್ಲಿ ಎಎಪಿ ನಾಯಕರನ್ನು ಬಂಧಿಸಲು ಅವರು ಬಯಸಿದ್ದಾರೆ. ಅವರು ಎಎಪಿ ಸರ್ಕಾರವನ್ನು ಉರುಳಿಸಲು ನೋಡುತ್ತಿದ್ದಾರೆ. ಏಕೆಂದರೆ ನಮ್ಮ ಪಕ್ಷ ಇರುವ ತನಕ ಅವರು ದೆಹಲಿ ಚುನಾವಣೆಯಲ್ಲಿ ಎಂದಿಗೂ ಗೆಲ್ಲುವುದಿಲ್ಲ. ಆದರೆ, ನಮ್ಮ ಪಕ್ಷದ ಯಾವೊಬ್ಬ ಶಾಸಕರೂ ಪಕ್ಷ ಬಿಟ್ಟಿಲ್ಲ. ಎಲ್ಲ ಶಾಸಕರು ಒಗ್ಗಟ್ಟಾಗಿದ್ದೇವೆ ಎಂಬುದನ್ನು ಜನತೆಗೆ ಸಾಬೀತುಪಡಿಸಲು ವಿಶ್ವಾಸಮತ ಯಾಚನೆ ಮಾಡುತ್ತಿದ್ದೇನೆ ಎಂದು ಅರವಿಂದ್ ಕೇಜ್ರಿವಾಲ್ ಸ್ಪಷ್ಟಪಡಿಸಿದ್ದಾರೆ.

ದೆಹಲಿ ಮದ್ಯದ ಪ್ರಕರಣಕ್ಕೆ ಹಾಜರಾಗುವಂತೆ ಇಡಿ ಪದೇ ಪದೇ ಸಮನ್ಸ್ ಜಾರಿ ಮಾಡುತ್ತಿರುವ ಹಿನ್ನೆಲೆಯಲ್ಲಿ ಸಿಎಂ ಕೇಜ್ರಿವಾಲ್ ಕುತೂಹಲಕಾರಿ ಹೇಳಿಕೆ ನೀಡಿದ್ದಾರೆ. ಬಿಜೆಪಿ ನಾಯಕರನ್ನು ಉದ್ದೇಶಿಸಿ ಮಾತನಾಡಿದ ಅವರು, ಮದ್ಯದ ಹಗರಣ ಎಂದು ಕರೆಯಲಾಗುತ್ತಿರುವುದು ಹಗರಣವಲ್ಲ ಮತ್ತು ನಿಷ್ಪಕ್ಷಪಾತ ತನಿಖೆ ಅವರಿಗೆ ಬೇಕಾಗಿಲ್ಲ. ಎಲ್ಲಾ ಎಎಪಿ ನಾಯಕರನ್ನು ಹಗರಣದ ನೆಪದಲ್ಲಿ ಬಂಧಿಸಲಾಯಿತು ಮತ್ತು ಅವರ ಏಕೈಕ ಗುರಿ ದೆಹಲಿ ಸರ್ಕಾರವನ್ನು ಹೇಗಾದರೂ ಬೀಳಿಸುವುದಾಗಿದೆ ಎಂದು ಅವರು ಹೇಳಿದರು.

25 ಕೋಟಿ ನೀಡುವುದಾಗಿ ಭರವಸೆ ನೀಡಿ ಬಿಜೆಪಿಯವರು ತಮ್ಮ ಬಳಿಗೆ ಬಂದಿದ್ದಾರೆ ಎಂದು ಇಬ್ಬರು ಆಪ್ ಶಾಸಕರು ಹೇಳಿದ್ದು, ಸಿಎಂ ಅರವಿಂದ್ ಕೇಜ್ರಿವಾಲ್ ಅವರನ್ನು ಬಂಧಿಸಿ ಸರ್ಕಾರ ಬೀಳಿಸುವ ಮೂಲಕ ಶಾಸಕರನ್ನು ಹೆದರಿಸಲು ಯತ್ನಿಸಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು. ವಿಶ್ವಾಸಮತ ಯಾಚನೆಯಲ್ಲಿ ಭಾಗವಹಿಸುವಂತೆ ವಿಧಾನಸಭೆ ಸಾಕ್ಷಿಯಾಗಿ ಶಾಸಕರಿಗೆ ಕೇಜ್ರಿವಾಲ್ ಕೇಳಿಕೊಂಡರು.

PPeepal Media Desk

Peepal Media Desk

Peepal Media · ರಾಜಕೀಯ ವಿಭಾಗ

ಸಂಬಂಧಿತ ಸುದ್ದಿಗಳು