ಮುಖ್ಯ ವಿಷಯಕ್ಕೆ ತೆರಳಿ
Peepal Media
ತಾಜಾ ಸುದ್ದಿ
●ಈಸಕ್ಕಿ ಆಸೆಯನ್ನೂ ಮೀರಿದ ಆಯ್ದಕ್ಕಿ ಲಕ್ಕಮ್ಮ●ಗಾಜಾ ಸ್ಮಶಾನದ ಮೇಲೆ ಮತ್ತೆ ಅರಳುತ್ತಾ ನೆತನ್ಯಾಹು ಕುರ್ಚಿ?●ಅರುಣಾಚಲದಲ್ಲಿ ಚೀನಾ ಸೈನಿಕರೊಂದಿಗೆ ಮುಖಾಮುಖಿ: ಕೇಂದ್ರದ ಮೌನವನ್ನು ಪ್ರಶ್ನಿಸಿದ ಕಾಂಗ್ರೆಸ್‌ನ ಜೈರಾಮ್ ರಮೇಶ್●ಕಡತಗಳ ವಿಲೇವಾರಿ ಪ್ರಕ್ರಿಯೆ ಬದಲಾವಣೆ: ಚುನಾವಣಾ ಆಯುಕ್ತರಿಂದ ಕ್ಯಾಬಿನೆಟ್‌ ಕಾರ್ಯದರ್ಶಿಗೆ ಆಕ್ಷೇಪಣಾ ಪತ್ರ●ಮೋದಿ–ಅದಾನಿ ಕುರಿತ ಸಾಕ್ಷ್ಯಚಿತ್ರ ಹಂಚಿಕೊಂಡ ರಾಜ್‌ ಠಾಕ್ರೆ; ತೆಗೆದುಹಾಕುವಂತೆ ಸೂಚನೆಗಳ ನಡುವೆ ಮುಂದುವರೆದ ಚರ್ಚೆ●ಮಂಡ್ಯದಲ್ಲಿ ARAI ಪರೀಕ್ಷಾ ಕೇಂದ್ರಗಳಿಗೆ ಭೂಮಿ ಹಂಚಿಕೆ ವಿಳಂಬ: ರಾಜ್ಯ ಸರ್ಕಾರಕ್ಕೆ ಎಚ್‌.ಡಿ. ಕುಮಾರಸ್ವಾಮಿ ಪತ್ರ●ರಾಷ್ಟ್ರೀಯತೆಯ ಪಾಠ ನನಗೆ ಬೇಕಿಲ್ಲ; ನಮ್ಮ ಗುರಿ ಆಡಳಿತ, ಸಾಮಾಜಿಕ ಜಾಲತಾಣದ ಪ್ರಚಾರವಲ್ಲ: ಕೆ. ಅಣ್ಣಾಮಲೈ●ಕೇವಲ ಮದುವೆಗಾಗಿ ಧರ್ಮಾಂತರವಾಗುವುದನ್ನು ಒಪ್ಪಲು ಸಾಧ್ಯವಿಲ್ಲ: ಬಾಂಬೆ ಹೈಕೋರ್ಟ್‌●ಇನ್ನು ನೋಂದಾಯಿತ ಸಿಮ್‌ ಇದ್ದರೆ ಮಾತ್ರ ವಾಟ್ಸ್‌ಆ್ಯಪ್‌ ಬಳಕೆ ಸಾಧ್ಯ: ಜನವರಿ 1, 2027ರಿಂದ ಹೊಸ ನಿಯಮ ಜಾರಿ●ಈ-ಮುದ್ರ ಡಿಜಿಟಲ್‌ ಪ್ರಮಾಣಪತ್ರಗಳಲ್ಲಿ ಭದ್ರತಾ ಲೋಪ: ಜಾಗತಿಕ ತಂತ್ರಜ್ಞಾನ ವಲಯದಲ್ಲಿ ಆತಂಕ●ಹಾಸನ ಕಾಳಸಂತೆಗೆ ಪಡಿತರ ಅಕ್ಕಿ ಮಾರಾಟ ಯತ್ನ – ಕ್ವಿಂಟಲ್‌ ಗಟ್ಟಲೆ ಅಕ್ಕಿ, ರಾಗಿ ವಶ●ಸದ್ಯದಲ್ಲೆ ಕಬ್ಬು ಬೆಳೆಗಾರರ ಸಭೆ ಕರೆದಿದ್ದೇನೆ – ಸಿಎಂ ಡಿ.ಕೆ ಶಿವಕುಮಾರ್●ರಾಜ್ಯದಲ್ಲಿ ಐದು ದಿನಗಳಲ್ಲಿ ಮಳೆ ಸಾಧ್ಯತೆ – ಹವಾಮಾನ ಇಲಾಖೆ ಮುನ್ಸೂಚನೆ●ಸಿದ್ದರಾಮಯ್ಯ ಅವರನ್ನು ಅಧಿಕಾರದಿಂದ ಇಳಿಸಲು ವ್ಯವಸ್ಥಿತ ಸಂಚು ರೂಪಿಸಿ ಯಶಸ್ವಿಗೊಂಡಿದ್ದಾರೆ – ಸಿಎಂ ಯಡಿಯೂರಪ್ಪ●ಚುನಾವಣಾ ಆಯುಕ್ತರಿಗೆ ರಕ್ಷಣೆ ನೀಡುವ ಕಾನೂನು ರದ್ದುಗೊಳಿಸಿ – ಮಲ್ಲಿಕಾರ್ಜುನ ಖರ್ಗೆ ಆಗ್ರಹ●ದಸರಾ ವೇಳೆ ಪೊಲೀಸರ ಲಾಠಿ ಏಟಿಗೆ 4 ವರ್ಷದ ಬಾಲಕ ಗಂಭೀರ – ICUನಲ್ಲಿ ಅಂತಿಮ ಹೋರಾಟ●ಸೌದಿ ವಿಮಾನ ನಿಲ್ದಾಣದ ಮೇಲೆ ಭೀಕರ ದಾಳಿ – 8 ಮಂದಿಗೆ ಗಾಯ, ಇಬ್ಬರ ಅಂತ್ಯ●ನಂದಿಧ್ವಜ ಪೂಜೆಗೆ ಸಚಿವರಿಗೆ ಅವಕಾಶ ನಿರಾಕರಿಸಿದ ಅಧಿಕಾರಿಗಳ ವಿರುದ್ಧ ತನಿಖೆಗೆ ಆದೇಶ: ಮುಖ್ಯಮಂತ್ರಿ ಡಿ ಕೆ ಶಿವಕುಮಾರ್‌●300 ವರ್ಷಗಳಷ್ಟು ಹಳೆಯ ಐತಿಹಾಸಿಕ ರೇಸ್‌ಕೋರ್ಸ್ ಮಸೀದಿಯ ವಿದ್ಯುತ್ ಹಾಗೂ ನೀರು ಸಂಪರ್ಕ ಕಡಿತ: ತುರ್ತು ರಕ್ಷಣೆ ಕೋರಿದ ದೆಹಲಿ ವಕ್ಫ್ ಮಂಡಳಿ●ತಿಹಾರ್ ಜೈಲಿನಿಂದ ಬಿಡುಗಡೆಯಾದ ಬೆನ್ನಲ್ಲೇ ಸೌರವ್ ದಾಸ್ ಹಾಗೂ ಅಶೋತ್ ರಾಂಕಾಗೆ ದೆಹಲಿ ಅಪರಾಧ ವಿಭಾಗದಿಂದ ಸಮನ್ಸ್

ಲೈಂಗಿಕ ದೌರ್ಜನ್ಯ ಪ್ರಕರಣ, ಬ್ರಿಜ್‌ ಭೂಷಣ್‌ ಮೇಲೆ ಕಾನೂನು ಕ್ರಮ ಜರುಗಿಸಿ ಶಿಕ್ಷೆಗೆ ಗುರಿಪಡಿಸಬೇಕು; ದೆಹಲಿ ಪೊಲೀಸ್

P

Peepal Media Desk • ದೇಶ, ರಾಜಕೀಯ

• 2 ನಿಮಿಷದ ಓದು

ನವದೆಹಲಿ: ಭಾರತೀಯ ಕುಸ್ತಿ ಒಕ್ಕೂಟದ ಅಧ್ಯಕ್ಷ ಮತ್ತು ಬಿಜೆಪಿ ಸಂಸದ ಬ್ರಿಜ್ ಭೂಷಣ್ ಶರಣ್ ಸಿಂಗ್ ಅವರು ಕಿರುಕುಳ ಮತ್ತು ಹಿಂಬಾಲಿಸುವ ಪ್ರಕರಣದಲ್ಲಿ ಭಾಗಿಯಾಗಿದ್ದು ಅವರನ್ನು ವಿಚಾರಣೆಗೆ ಒಳಪಡಿಸಬೇಕು ಎಂದು ದೆಹಲಿ ಪೊಲೀಸರು ನ್ಯಾಯಾಲಯಕ್ಕೆ ಸಲ್ಲಿಸಿದ ಚಾರ್ಜ್‌ ಶೀಟನ್ನು ಉಲ್ಲೇಖಿಸಿ ಇಂಡಿಯನ್ ಎಕ್ಸ್‌ಪ್ರೆಸ್ ಹೇಳಿದೆ. ಇಲ್ಲಿಯವರೆಗಿನ ತನಿಖೆಯ ಆಧಾರದ ಮೇಲೆ, ಸಿಂಗ್ ಅವರನ್ನು “ಲೈಂಗಿಕ ಕಿರುಕುಳ, ಕಿರುಕುಳ ಮತ್ತು ಹಿಂಬಾಲಿಸುವಿಕೆಯ ಅಪರಾಧಗಳಿಗಾಗಿ ವಿಚಾರಣೆಗೆ ಒಳಪಡಿಸಬಹುದು ಮತ್ತು ಶಿಕ್ಷಿಸಬಹುದು” ಎಂದು ದೆಹಲಿ ಪೊಲೀಸ್ ಸಲ್ಲಿಸಿರುವ ದೋಷಾರೋಪ ಪಟ್ಟಿ ಹೇಳುತ್ತದೆ.

ಬ್ರಿಜ್ ಭೂಷಣ್ ಶರಣ್ ಸಿಂಗ್ ವಿರುದ್ಧ ಭಾರತೀಯ ದಂಡ ಸಂಹಿತೆಯ ಸೆಕ್ಷನ್ 506 (ಕ್ರಿಮಿನಲ್ ಬೆದರಿಕೆ), 354 (ಮಹಿಳೆಯ ಘನತೆಗೆ ಧಕ್ಕೆ), 354 ಎ (ಲೈಂಗಿಕ ಕಿರುಕುಳ) ಮತ್ತು 354 ಡಿ (ಹಿಂಬಾಲಿಸುವಿಕೆ) ಅಡಿಯಲ್ಲಿ ಆರೋಪ ಹೊರಿಸಲಾಗಿದೆ. ಜೂನ್ 13ರಂದು ನ್ಯಾಯಾಲಯಕ್ಕೆ ಚಾರ್ಜ್ ಶೀಟ್ ಸಲ್ಲಿಸಲಾಗಿದೆ. ಒಂದು ಪ್ರಕರಣದಲ್ಲಿ, ಬ್ರಿಜ್ ಭೂಷಣ್ ಸಿಂಗ್ “ಅನೇಕ ಬಾರಿ ಮತ್ತು ನಿರಂತರವಾಗಿ” ಕಿರುಕುಳ ನೀಡಿದ್ದಾರೆ ಎಂದು ದೋಷಾರೋಪ ಪಟ್ಟಿಯಲ್ಲಿ ತಿಳಿಸಲಾಗಿದೆ.

ಬ್ರಿಜ್ ಭೂಷಣ್ ಶರಣ್ ಸಿಂಗ್ ವಿರುದ್ಧ ಒಟ್ಟು ಆರು ಪ್ರಕರಣಗಳು ದಾಖಲಾಗಿದ್ದು, ಅವುಗಳಲ್ಲಿ ಎರಡು ಪ್ರಕರಣಗಳಲ್ಲಿ  ಸೆಕ್ಷನ್ 354, 354 ಎ, 354 ಡಿ  ಅಡಿಯಲ್ಲಿ ಆರೋಪ ಹೊರಿಸಲಾಗಿದೆ .

ಈ ಸೆಕ್ಷನ್ನುಗಳ ಅಡಿಯಲ್ಲಿ ಅಪರಾಧ ಸಾಬೀತಾದರೆ, ಐದು ವರ್ಷಗಳವರೆಗೆ ಜೈಲು ಶಿಕ್ಷೆ ವಿಧಿಸಲಾಗುತ್ತದೆ. ಆರೋಪಪಟ್ಟಿಯಲ್ಲಿ ದೆಹಲಿ ಪೊಲೀಸರು ಬ್ರಿಜ್ ಭೂಷಣ್ ಶರಣ್ ಸಿಂಗ್ ಮತ್ತು ಸಾಕ್ಷಿಗಳಿಗೆ ಸಮನ್ಸ್ ನೀಡುವಂತೆ ನ್ಯಾಯಾಲಯಕ್ಕೆ ಮನವಿ ಮಾಡಿದ್ದಾರೆ.

ದೋಷಾರೋಪ ಪಟ್ಟಿಯ ಪ್ರಕಾರ, ತನಿಖಾಧಿಕಾರಿಗಳು ಒಟ್ಟು 108 ಸಾಕ್ಷಿಗಳನ್ನು ಪರಿಶೀಲಿಸಿದ್ದಾರೆ, ಅವರಲ್ಲಿ 15  ಮಂದಿ ಕುಸ್ತಿಪಟುಗಳು, ತರಬೇತುದಾರರು ಮತ್ತು ರೆಫರಿಗಳು ಸಹ ಸೇರಿದ್ದಾರೆ. ಇವರೆಲ್ಲರೂ ಕುಸ್ತಿಪಟುಗಳು ಮಾಡಿದ ಆರೋಪಗಳನ್ನು ಬೆಂಬಲಿಸಿದ್ದಾರೆ.

ಆದರೆ ಇದನ್ನು ನಿರಾಕರಿಸಿರು ಬ್ರಿಜ್‌ ಭೂಷಣ್‌ ಸಿಂಗ್‌ ತಾನು ಕುಸ್ತಿಪಟುಗಳನ್ನು ಎಂದಿಗೂ ಭೇಟಿ ಮಾಡಿಲ್ಲ ಅಥವಾ ಅವರ ಫೋನ್ ನಂಬರುಗಳನ್ನು ಹೊಂದಿಲ್ಲ ಎಂದು ಹೇಳಿದ್ದಾರೆ.

ಮಹಿಳಾ ಕುಸ್ತಿಪಟುಗಳು  15  ಲೈಂಗಿಕ ಕಿರುಕುಳದ ಘಟನೆಗಳನ್ನು ಆರೋಪಿಸಿದ್ದರು.

ಇಂಡಿಯನ್ ಎಕ್ಸ್ಪ್ರೆಸ್ ಪತ್ರಿಕೆಯು ಮಹಿಳಾ ಕುಸ್ತಿಪಟುಗಳ ಆರೋಪಗಳು ಮತ್ತು ದೋಷಾರೋಪ ಪಟ್ಟಿಯಿಂದ ಸಾಕ್ಷಿಗಳ ಹೇಳಿಕೆಗಳನ್ನು ಪ್ರಕಟಿಸಿದೆ.

ಮಹಿಳಾ ಕುಸ್ತಿಪಟುವೊಬ್ಬರು ರೆಸ್ಟೋರೆಂಟಿನಲ್ಲಿ ಊಟದ ಸಮಯದಲ್ಲಿ ಕಿರುಕುಳ ನೀಡಿದ್ದಾರೆ ಎಂದು ಆರೋಪಿಸಿದ್ದಾರೆ.

“ನಾನು ಹೋಟೆಲ್ಲಿನ ರೆಸ್ಟೋರೆಂಟಿನಲ್ಲಿ ಊಟ ಮಾಡುತ್ತಿದ್ದಾಗ, ಆರೋಪಿ (ಸಿಂಗ್) ನನ್ನನ್ನು ಊಟದ ಟೇಬಲ್ಲಿಗೆ ಕರೆದು, ನನ್ನ ಎದೆಯ ಮೇಲೆ ತನ್ನ ಕೈಗಳನ್ನು ಇರಿಸಿ, ಒತ್ತಿದ ಮತ್ತು ನಂತರ ತನ್ನ ಕೈಯನ್ನು ನನ್ನ ಹೊಟ್ಟೆಗೆ ಸರಿಸಿದರು, ಈ ರೀತಿ ಮೂರು ನಾಲ್ಕು ಬಾರಿ ಮಾಡಿದ್ದಾರೆ. ಡಬ್ಲ್ಯುಎಫ್ಐ ಕಚೇರಿಯಲ್ಲಿ ಅವರು ನನ್ನನ್ನು ಅನುಚಿತವಾಗಿ ಸ್ಪರ್ಶಿಸಿದರು. ಅವರು ನನ್ನ ಒಪ್ಪಿಗೆಯಿಲ್ಲದೆ ನನ್ನ ಅಂಗೈ, ಮೊಣಕಾಲುಗಳು, ತೊಡೆಗಳು, ಭುಜಗಳನ್ನು ಸ್ಪರ್ಶಿಸಿದರು, ನನ್ನ ಎದೆಯ ಮೇಲೆ ತಮ್ಮ ಕೈಗಳನ್ನು ಇಟ್ಟು ನನ್ನ ಉಸಿರಾಟವನ್ನು ಪರೀಕ್ಷಿಸುವ ನೆಪದಲ್ಲಿ ಅವುಗಳನ್ನು ನನ್ನ ಹೊಟ್ಟೆಗೆ ಕರೆದೊಯ್ದರು.“ ಎಂದಿದ್ದಾರೆ ಮಹಿಳಾ ಕುಸ್ತಿಪಟುವಿನ ಈ ಆರೋಪಗಳನ್ನು ಬೆಂಬಲಿಸಿ ಇತರ ಮೂವರು ಮಹಿಳಾ ಕುಸ್ತಿಪಟುಗಳು ಸಹ ಹೇಳಿಕೆಗಳನ್ನು ನೀಡಿದ್ದಾರೆ.

ಉಸಿರು ಪರೀಕ್ಷಿಸುವ ಹೆಸರಿನಲ್ಲಿ ಮಹಿಳಾ ಕುಸ್ತಿಪಟುವೊಬ್ಬರನ್ನು ತಪ್ಪಾಗಿ ಸ್ಪರ್ಶಿಸಲಾಗಿದೆ ಎಂದು ಪ್ರತ್ಯಕ್ಷದರ್ಶಿ ಕುಸ್ತಿಪಟುವೊಬ್ಬರು ತಮ್ಮ ಹೇಳಿಕೆಯಲ್ಲಿ ತಿಳಿಸಿದ್ದಾರೆ.

ಮಹಿಳಾ ಕುಸ್ತಿಪಟುವನ್ನು ತಾನು ಅಭಿನಂದಿಸಲು ಪ್ರಾಕ್ಟೀಸ್‌ ಏರಿಯಾಕ್ಕೆ ಹೋಗಿದ್ದಾಗ, ಬ್ರಿಜ್‌ ಭೂಷಣ್‌ ಅವರು ಮಹಿಳೆಯ ಎದೆ ಮತ್ತು ಹೊಟ್ಟೆಯ ಮೇಲೆ ಕೈಯಾಡಿಸುತ್ತಿದ್ದಿದ್ದನ್ನು ತಾನು ನೋಡಿದ್ದಾಗಿ ಎಂದು ಮತ್ತೊಬ್ಬ ಪ್ರತ್ಯಕ್ಷದರ್ಶಿ ಹೇಳಿದ್ದಾರೆ.

ವಿಷಯಗಳು: #peepal #peepalmedia #politics
P

Peepal Media Desk

Peepal Media · ದೇಶ ವಿಭಾಗ

ಸಂಬಂಧಿತ ಸುದ್ದಿಗಳು

Exit mobile version