ಮಹಾರಾಷ್ಟ್ರದ ನೂತನ ಸಿಎಂ ಆಗಿ ದೇವೇಂದ್ರ ಫಡ್ನವೀಸ್, ನಾಳೆ ಪ್ರಮಾಣ ವಚನ. ಅಧಿಕೃತ ಘೋಷಣೆ
ಲಿಂಕ್ ನಕಲಿಸಲಾಗಿದೆ ✓
ದೇವೇಂದ್ರ ಫಡ್ನವಿಸ್ ಮಹಾರಾಷ್ಟ್ರ ಸಿಎಂ ಅಭ್ಯರ್ಥಿ ಯಾರೆಂಬ ಗೊಂದಲಕ್ಕೆ ತೆರೆ ಬಿದ್ದಿದೆ. ಎಲ್ಲರೂ ನಿರೀಕ್ಷಿಸಿದಂತೆ ಮಹಾರಾಷ್ಟ್ರದ ಮುಂದಿನ ಮುಖ್ಯಮಂತ್ರಿಯಾಗಿ ಬಿಜೆಪಿ ನಾಯಕ ದೇವೇಂದ್ರ ಫಡ್ನವೀಸ್ ಅವರನ್ನು ಅಂತಿಮಗೊಳಿಸಲಾಯಿತು.
ಇದನ್ನು ರಾಜ್ಯ ಬಿಜೆಪಿ ಮುಖ್ಯಸ್ಥರು ಬುಧವಾರ ಅಧಿಕೃತವಾಗಿ ಪ್ರಕಟಿಸಿದ್ದಾರೆ.
ಬುಧವಾರ ಬೆಳಗ್ಗೆ ನಡೆದ ಬಿಜೆಪಿ ಕೋರ್ ಕಮಿಟಿ ಸಭೆಯಲ್ಲಿ ಫಡ್ನವೀಸ್ ಹೆಸರನ್ನು ಸಿಎಂ ಸ್ಥಾನಕ್ಕೆ ಪ್ರಸ್ತಾಪಿಸಿ ಸರ್ವಾನುಮತದಿಂದ ಅಂಗೀಕರಿಸಲಾಯಿತು. ನಾಳೆ (ಡಿಸೆಂಬರ್ 5) ಮುಂಬೈನ ಆಜಾದ್ ಮೈದಾನದಲ್ಲಿ ಸಿಎಂ ಆಗಿ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ ಎಂದು ತಿಳಿದುಬಂದಿದೆ. ಸಿಎಂ ಜತೆಗೆ ಇಬ್ಬರು ಉಪಮುಖ್ಯಮಂತ್ರಿಗಳ ಪ್ರಮಾಣ ವಚನ ಸ್ವೀಕಾರ ನಡೆಯಲಿದೆ ಎಂದು ಸ್ಪಷ್ಟಪಡಿಸಿದ್ದಾರೆ.
ಅಜಿತ್ ಪವಾರ್ ಮತ್ತು ಏಕನಾಥ್ ಶಿಂಧೆ ಉಪ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ ಎಂದು ವರದಿಯಾಗಿದೆ. ಶಿಂಧೆ ಅವರಿಗೆ ಇನ್ನಷ್ಟು ಪ್ರಮುಖ ಹುದ್ದೆಗಳನ್ನು ನೀಡುವ ಸಾಧ್ಯತೆ ಇದೆ ಎಂದು ತಿಳಿದುಬಂದಿದೆ. ಇಂದು ಮಧ್ಯಾಹ್ನ 3:30ಕ್ಕೆ ಮಹಾಯುತಿ ಮುಖಂಡರು ರಾಜ್ಯಪಾಲರನ್ನು ಭೇಟಿ ಮಾಡಲಿದ್ದಾರೆ ಎಂದು ತಿಳಿದು ಬಂದಿದೆ.
Peepal Media
Peepal Media · ರಾಜಕೀಯ ವಿಭಾಗ