ಮುಖ್ಯ ವಿಷಯಕ್ಕೆ ತೆರಳಿ
Peepal Media
ತಾಜಾ ಸುದ್ದಿ
●ಈಸಕ್ಕಿ ಆಸೆಯನ್ನೂ ಮೀರಿದ ಆಯ್ದಕ್ಕಿ ಲಕ್ಕಮ್ಮ●ಗಾಜಾ ಸ್ಮಶಾನದ ಮೇಲೆ ಮತ್ತೆ ಅರಳುತ್ತಾ ನೆತನ್ಯಾಹು ಕುರ್ಚಿ?●ಅರುಣಾಚಲದಲ್ಲಿ ಚೀನಾ ಸೈನಿಕರೊಂದಿಗೆ ಮುಖಾಮುಖಿ: ಕೇಂದ್ರದ ಮೌನವನ್ನು ಪ್ರಶ್ನಿಸಿದ ಕಾಂಗ್ರೆಸ್‌ನ ಜೈರಾಮ್ ರಮೇಶ್●ಕಡತಗಳ ವಿಲೇವಾರಿ ಪ್ರಕ್ರಿಯೆ ಬದಲಾವಣೆ: ಚುನಾವಣಾ ಆಯುಕ್ತರಿಂದ ಕ್ಯಾಬಿನೆಟ್‌ ಕಾರ್ಯದರ್ಶಿಗೆ ಆಕ್ಷೇಪಣಾ ಪತ್ರ●ಮೋದಿ–ಅದಾನಿ ಕುರಿತ ಸಾಕ್ಷ್ಯಚಿತ್ರ ಹಂಚಿಕೊಂಡ ರಾಜ್‌ ಠಾಕ್ರೆ; ತೆಗೆದುಹಾಕುವಂತೆ ಸೂಚನೆಗಳ ನಡುವೆ ಮುಂದುವರೆದ ಚರ್ಚೆ●ಮಂಡ್ಯದಲ್ಲಿ ARAI ಪರೀಕ್ಷಾ ಕೇಂದ್ರಗಳಿಗೆ ಭೂಮಿ ಹಂಚಿಕೆ ವಿಳಂಬ: ರಾಜ್ಯ ಸರ್ಕಾರಕ್ಕೆ ಎಚ್‌.ಡಿ. ಕುಮಾರಸ್ವಾಮಿ ಪತ್ರ●ರಾಷ್ಟ್ರೀಯತೆಯ ಪಾಠ ನನಗೆ ಬೇಕಿಲ್ಲ; ನಮ್ಮ ಗುರಿ ಆಡಳಿತ, ಸಾಮಾಜಿಕ ಜಾಲತಾಣದ ಪ್ರಚಾರವಲ್ಲ: ಕೆ. ಅಣ್ಣಾಮಲೈ●ಕೇವಲ ಮದುವೆಗಾಗಿ ಧರ್ಮಾಂತರವಾಗುವುದನ್ನು ಒಪ್ಪಲು ಸಾಧ್ಯವಿಲ್ಲ: ಬಾಂಬೆ ಹೈಕೋರ್ಟ್‌●ಇನ್ನು ನೋಂದಾಯಿತ ಸಿಮ್‌ ಇದ್ದರೆ ಮಾತ್ರ ವಾಟ್ಸ್‌ಆ್ಯಪ್‌ ಬಳಕೆ ಸಾಧ್ಯ: ಜನವರಿ 1, 2027ರಿಂದ ಹೊಸ ನಿಯಮ ಜಾರಿ●ಈ-ಮುದ್ರ ಡಿಜಿಟಲ್‌ ಪ್ರಮಾಣಪತ್ರಗಳಲ್ಲಿ ಭದ್ರತಾ ಲೋಪ: ಜಾಗತಿಕ ತಂತ್ರಜ್ಞಾನ ವಲಯದಲ್ಲಿ ಆತಂಕ●ಹಾಸನ ಕಾಳಸಂತೆಗೆ ಪಡಿತರ ಅಕ್ಕಿ ಮಾರಾಟ ಯತ್ನ – ಕ್ವಿಂಟಲ್‌ ಗಟ್ಟಲೆ ಅಕ್ಕಿ, ರಾಗಿ ವಶ●ಸದ್ಯದಲ್ಲೆ ಕಬ್ಬು ಬೆಳೆಗಾರರ ಸಭೆ ಕರೆದಿದ್ದೇನೆ – ಸಿಎಂ ಡಿ.ಕೆ ಶಿವಕುಮಾರ್●ರಾಜ್ಯದಲ್ಲಿ ಐದು ದಿನಗಳಲ್ಲಿ ಮಳೆ ಸಾಧ್ಯತೆ – ಹವಾಮಾನ ಇಲಾಖೆ ಮುನ್ಸೂಚನೆ●ಸಿದ್ದರಾಮಯ್ಯ ಅವರನ್ನು ಅಧಿಕಾರದಿಂದ ಇಳಿಸಲು ವ್ಯವಸ್ಥಿತ ಸಂಚು ರೂಪಿಸಿ ಯಶಸ್ವಿಗೊಂಡಿದ್ದಾರೆ – ಸಿಎಂ ಯಡಿಯೂರಪ್ಪ●ಚುನಾವಣಾ ಆಯುಕ್ತರಿಗೆ ರಕ್ಷಣೆ ನೀಡುವ ಕಾನೂನು ರದ್ದುಗೊಳಿಸಿ – ಮಲ್ಲಿಕಾರ್ಜುನ ಖರ್ಗೆ ಆಗ್ರಹ●ದಸರಾ ವೇಳೆ ಪೊಲೀಸರ ಲಾಠಿ ಏಟಿಗೆ 4 ವರ್ಷದ ಬಾಲಕ ಗಂಭೀರ – ICUನಲ್ಲಿ ಅಂತಿಮ ಹೋರಾಟ●ಸೌದಿ ವಿಮಾನ ನಿಲ್ದಾಣದ ಮೇಲೆ ಭೀಕರ ದಾಳಿ – 8 ಮಂದಿಗೆ ಗಾಯ, ಇಬ್ಬರ ಅಂತ್ಯ●ನಂದಿಧ್ವಜ ಪೂಜೆಗೆ ಸಚಿವರಿಗೆ ಅವಕಾಶ ನಿರಾಕರಿಸಿದ ಅಧಿಕಾರಿಗಳ ವಿರುದ್ಧ ತನಿಖೆಗೆ ಆದೇಶ: ಮುಖ್ಯಮಂತ್ರಿ ಡಿ ಕೆ ಶಿವಕುಮಾರ್‌●300 ವರ್ಷಗಳಷ್ಟು ಹಳೆಯ ಐತಿಹಾಸಿಕ ರೇಸ್‌ಕೋರ್ಸ್ ಮಸೀದಿಯ ವಿದ್ಯುತ್ ಹಾಗೂ ನೀರು ಸಂಪರ್ಕ ಕಡಿತ: ತುರ್ತು ರಕ್ಷಣೆ ಕೋರಿದ ದೆಹಲಿ ವಕ್ಫ್ ಮಂಡಳಿ●ತಿಹಾರ್ ಜೈಲಿನಿಂದ ಬಿಡುಗಡೆಯಾದ ಬೆನ್ನಲ್ಲೇ ಸೌರವ್ ದಾಸ್ ಹಾಗೂ ಅಶೋತ್ ರಾಂಕಾಗೆ ದೆಹಲಿ ಅಪರಾಧ ವಿಭಾಗದಿಂದ ಸಮನ್ಸ್

ರಾಹುಲ್ ಗಾಂಧಿ ಅನರ್ಹತೆ ರದ್ದು ; ಮಣಿಪುರದ ಕೂಗಿಗೆ ಬರಲಿದೆಯಾ ಹೆಚ್ಚಿನ ಬಲ?

PPeepal Media Desk

Peepal Media Desk • ರಾಜಕೀಯ

• 1 ನಿಮಿಷದ ಓದು

ರಾಹುಲ್ ಗಾಂಧಿ ಅನರ್ಹತೆ ರದ್ದು ; ಮಣಿಪುರದ ಕೂಗಿಗೆ ಬರಲಿದೆಯಾ ಹೆಚ್ಚಿನ ಬಲ?

ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಯವರ ಸಂಸತ್‌ ಸ್ಥಾನದ ಅನರ್ಹತೆಯನ್ನ ಲೋಕಸಭೆಯ ಸ್ಪೀಕರ್‌ ಓಂ ಪ್ರಕಾಶ್‌ ಬಿರ್ಲಾ ವಾಪಸ್‌ ಪಡೆದಿದ್ದಾರೆ. ಆ ಮೂಲಕ ಸುಪ್ರೀಂಕೋರ್ಟ್ ಆದೇಶದ ನಂತರ ರಾಹುಲ್ ಅಧಿಕೃತವಾಗಿ ಸಂಸದರಾಗಿ ಮರಳಿದ್ದಾರೆ. ರಾಹುಲ್ ಅನರ್ಹತೆ ರದ್ಧಾಗುತ್ತಿದ್ದಂತೆ ಮಣಿಪುರದ ಶಾಂತಿ ಸ್ಥಾಪನೆಗೆ ಮುಂದೆ ನಿಂತಿರುವ INDIA ಒಕ್ಕೂಟಕ್ಕೆ ಹೆಚ್ಚಿನ ಬಲ ಬಂದಂತಾಗಿದೆ.

ಈಗಾಗಲೇ INDIA ಒಕ್ಕೂಟ ಮಣಿಪುರದಲ್ಲಿ ಶಾಂತಿ ಸ್ಥಾಪನೆಗೆ ಜನಪ್ರತಿನಿಧಿಗಳ ಒಂದು ನಿಯೋಗ ರಚಿಸಿರುವ ಹಿನ್ನೆಲೆಯಲ್ಲಿ ಈಗಾಗಲೇ ಒಂದು ತಂಡ ಅಲ್ಲಿಗೆ ತೆರಳಿ, ಸಂತ್ರಸ್ತರ ಜೊತೆಗೆ ಮಾತುಕತೆ ನಡೆಸಿದೆ. ಇನ್ನು ರಾಹುಲ್ ಆಗಮನದ ನಂತರ ಅಲ್ಲಿನ ಸರ್ಕಾರಕ್ಕೆ ಒತ್ತಡ ಹಾಕುವುದಕ್ಕೆ, NDA ಒಕ್ಕೂಟದ ಓಟಕ್ಕೆ ಬ್ರೇಕ್ ಹಾಕಲು ರಾಹುಲ್ ಗಾಂಧಿ ಕಡೆಯಿಂದ ಹೆಚ್ಚಿನ ಬಲ ಬರಲಿದೆ ಎಂದೇ ನಿರೀಕ್ಷಿಸಲಾಗಿದೆ. ಈಗಾಗಲೇ ಕೇಂದ್ರ ಮತ್ತು ರಾಜ್ಯ ಎರಡೂ ಕಡೆಗಳಿಂದ ಅಧಿಕಾರದಲ್ಲಿರುವ ಬಿಜೆಪಿ, ಮಣಿಪುರ ಹಿಂಸಾಚಾರ ತಡೆಯುವಲ್ಲಿ ವಿಫಲವಾಗಿದೆ ಎಂದು ಆರೋಪಿಸಿ ಇಂಡಿಯಾ ಒಕ್ಕೂಟ ಹಲವಷ್ಟು ಪ್ರತಿಭಟನೆಗಳನ್ನು ಕೂಡ ನಡೆಸಿವೆ.

ಈಗಾಗಲೇ ಮಣಿಪುರ ಹಿಂಸಾಚಾರ ಕುರಿತಂತೆ ವಿಪಕ್ಷಗಳು ಸರ್ಕಾರದ ವಿರುದ್ಧ ಅವಿಶ್ವಾಸ ನಿರ್ಣಯ ಮಂಡಿಸಿವೆ. ಮಣಿಪುರ ಹಿಂಸಾಚಾರ ತಡೆಯಲು ಆಡಳಿತ ಪಕ್ಷದ ಮೌನ ಮತ್ತು ಅಸಮರ್ಥತೆ ಬಗ್ಗೆ ವಿಪಕ್ಷಗಳು ಸಂಸತ್ ನಲ್ಲಿ ಚರ್ಚೆಗೆ ಆಗ್ರಹಿಸಿವೆ. ಚರ್ಚೆಗೆ ಕಲಾಪ ಸಲಹಾ ಸಮಿತಿ 12 ಗಂಟೆಗಳಷ್ಟು ಅವಕಾಶ ನೀಡಿದೆ.

ಈ ನಡುವೆ ವಿಪಕ್ಷಗಳ ಆರೋಪಕ್ಕೆ ಪ್ರಧಾನಿ ನರೇಂದ್ರ ಮೋದಿ ಗುರುವಾರ ಉತ್ತರ ಕೊಡಬಹುದು ಎಂದೇ ನಿರೀಕ್ಷೆ ಮಾಡಲಾಗಿದೆ. ಮಣಿಪುರ ಹಿಂಸಾಚಾರ ಕುರಿತಂತೆ ಸಂಸತ್‌ನಲ್ಲಿ ಪ್ರಧಾನಿ ನರೇಂದ್ರ ಮೋದಿ ಹೇಳಿಕೆ ನೀಡಬೇಕು ಎಂದು ವಿರೋಧ ಪಕ್ಷಗಳು ಆಗ್ರಹಿಸಿದ್ದವು. ಆದರೆ ಸರ್ಕಾರ ವಿಪಕ್ಷಗಳ ಬೇಡಿಕೆಯನ್ನು ತಿರಸ್ಕರಿಸಿತ್ತು. ಇದಕ್ಕಾಗಿಯೇ ಮೋದಿಯನ್ನು ಮಾತನಾಡುವಂತೆ ಮಾಡಲು ವಿಪಕ್ಷಗಳು ಅವಿಶ್ವಾಸ ನಿರ್ಣಯ ಎನ್ನುವ ಅಸ್ತ್ರ ಪ್ರಯೋಗಿಸಿವೆ.

ರಾಹುಲ್ ಗಾಂಧಿ ಈಗ ಸಂಸದರ ಸ್ಥಾನ ಮರಳಿ ಪಡೆದುಕೊಂಡಿದ್ದು, ಸಂಸತ್ ಕಲಾಪದಲ್ಲಿ ಭಾಗವಹಿಸುವುದರಿಂದ ಮಣಿಪುರ ವಿಚಾರದಲ್ಲಿ ವಿಪಕ್ಷಗಳಿಗೆ ಮತ್ತಷ್ಟು ಬಲ ಬಂದಿದೆ. ಈ ಹಿಂದೆಯೂ ರಾಹುಲ್ ಗಾಂಧಿ ಮಣಿಪುರದ ಹಿಂಸಾಚಾರ ಪೀಡಿತ ಪ್ರದೇಶಗಳಿಗೆ ಭೇಟಿ ನೀಡಿ ಅಲ್ಲಿ ಜನರ ಸಮಸ್ಯೆಗಳನ್ನು ಆಲಿಸಿದ್ದರು. ಮಣಿಪುರದಲ್ಲಿ ಶಾಂತಿ ಮರುಸ್ಥಾಪನೆಗೆ ಇಂಡಿಯಾ ಪಕ್ಷಗಳ ಒಕ್ಕೂಟ ಶ್ರಮಿಸುತ್ತದೆ ಎಂದು ಹೇಳಿದ್ದರು.

ಹಲವು ವಿಚಾರಗಳಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರಿಗೆ ನೇರ ಸವಾಲು ಹಾಕುವ ರಾಹುಲ್ ಗಾಂಧಿ, ಸಂಸತ್ತಿನಲ್ಲಿ ಮಣಿಪುರ ಹಿಂಸಾಚಾರದ ಬಗ್ಗೆ ಧ್ವನಿ ಎತ್ತಲಿದ್ದಾರೆ. ವಿಪಕ್ಷಗಳ ಹೋರಾಟ ಮತ್ತಷ್ಟು ತೀವ್ರವಾಗುವ ಸಾಧ್ಯತೆ ಇದೆ.

PPeepal Media Desk

Peepal Media Desk

Peepal Media · ರಾಜಕೀಯ ವಿಭಾಗ

ಸಂಬಂಧಿತ ಸುದ್ದಿಗಳು