ಮುಖ್ಯ ವಿಷಯಕ್ಕೆ ತೆರಳಿ
Peepal Media
ತಾಜಾ ಸುದ್ದಿ
ಅಪ್ರಾಪ್ತ ಬಾಲಕಿಯ ವಿರುದ್ಧ ಇಸ್ಲಾಂ ವಿರೋಧಿ ಮತ್ತು ಲೈಂಗಿಕ ನಿಂದನಾತ್ಮಕ ಕಾಮೆಂಟ್‌: ಆರ್‌ಎಸ್‌ಎಸ್ ಕಾರ್ಯಕರ್ತನ ಬಂಧನಕರ್ನಾಟಕ ವಿಧಾನ ಪರಿಷತ್ ಚುನಾವಣೆ: ನಾಲ್ಕೂ ಕ್ಷೇತ್ರಗಳಲ್ಲಿ ಎನ್‌ಡಿಎ ಗೆಲುವು, ಕಾಂಗ್ರೆಸ್‌ಗೆ ಹಿನ್ನಡೆಈಸಕ್ಕಿ ಆಸೆಯನ್ನೂ ಮೀರಿದ ಆಯ್ದಕ್ಕಿ ಲಕ್ಕಮ್ಮಗಾಜಾ ಸ್ಮಶಾನದ ಮೇಲೆ ಮತ್ತೆ ಅರಳುತ್ತಾ ನೆತನ್ಯಾಹು ಕುರ್ಚಿ?ಅರುಣಾಚಲದಲ್ಲಿ ಚೀನಾ ಸೈನಿಕರೊಂದಿಗೆ ಮುಖಾಮುಖಿ: ಕೇಂದ್ರದ ಮೌನವನ್ನು ಪ್ರಶ್ನಿಸಿದ ಕಾಂಗ್ರೆಸ್‌ನ ಜೈರಾಮ್ ರಮೇಶ್ಕಡತಗಳ ವಿಲೇವಾರಿ ಪ್ರಕ್ರಿಯೆ ಬದಲಾವಣೆ: ಚುನಾವಣಾ ಆಯುಕ್ತರಿಂದ ಕ್ಯಾಬಿನೆಟ್‌ ಕಾರ್ಯದರ್ಶಿಗೆ ಆಕ್ಷೇಪಣಾ ಪತ್ರಮೋದಿ–ಅದಾನಿ ಕುರಿತ ಸಾಕ್ಷ್ಯಚಿತ್ರ ಹಂಚಿಕೊಂಡ ರಾಜ್‌ ಠಾಕ್ರೆ; ತೆಗೆದುಹಾಕುವಂತೆ ಸೂಚನೆಗಳ ನಡುವೆ ಮುಂದುವರೆದ ಚರ್ಚೆಮಂಡ್ಯದಲ್ಲಿ ARAI ಪರೀಕ್ಷಾ ಕೇಂದ್ರಗಳಿಗೆ ಭೂಮಿ ಹಂಚಿಕೆ ವಿಳಂಬ: ರಾಜ್ಯ ಸರ್ಕಾರಕ್ಕೆ ಎಚ್‌.ಡಿ. ಕುಮಾರಸ್ವಾಮಿ ಪತ್ರರಾಷ್ಟ್ರೀಯತೆಯ ಪಾಠ ನನಗೆ ಬೇಕಿಲ್ಲ; ನಮ್ಮ ಗುರಿ ಆಡಳಿತ, ಸಾಮಾಜಿಕ ಜಾಲತಾಣದ ಪ್ರಚಾರವಲ್ಲ: ಕೆ. ಅಣ್ಣಾಮಲೈಕೇವಲ ಮದುವೆಗಾಗಿ ಧರ್ಮಾಂತರವಾಗುವುದನ್ನು ಒಪ್ಪಲು ಸಾಧ್ಯವಿಲ್ಲ: ಬಾಂಬೆ ಹೈಕೋರ್ಟ್‌ಇನ್ನು ನೋಂದಾಯಿತ ಸಿಮ್‌ ಇದ್ದರೆ ಮಾತ್ರ ವಾಟ್ಸ್‌ಆ್ಯಪ್‌ ಬಳಕೆ ಸಾಧ್ಯ: ಜನವರಿ 1, 2027ರಿಂದ ಹೊಸ ನಿಯಮ ಜಾರಿಈ-ಮುದ್ರ ಡಿಜಿಟಲ್‌ ಪ್ರಮಾಣಪತ್ರಗಳಲ್ಲಿ ಭದ್ರತಾ ಲೋಪ: ಜಾಗತಿಕ ತಂತ್ರಜ್ಞಾನ ವಲಯದಲ್ಲಿ ಆತಂಕಹಾಸನ ಕಾಳಸಂತೆಗೆ ಪಡಿತರ ಅಕ್ಕಿ ಮಾರಾಟ ಯತ್ನ – ಕ್ವಿಂಟಲ್‌ ಗಟ್ಟಲೆ ಅಕ್ಕಿ, ರಾಗಿ ವಶಸದ್ಯದಲ್ಲೆ ಕಬ್ಬು ಬೆಳೆಗಾರರ ಸಭೆ ಕರೆದಿದ್ದೇನೆ – ಸಿಎಂ ಡಿ.ಕೆ ಶಿವಕುಮಾರ್ರಾಜ್ಯದಲ್ಲಿ ಐದು ದಿನಗಳಲ್ಲಿ ಮಳೆ ಸಾಧ್ಯತೆ – ಹವಾಮಾನ ಇಲಾಖೆ ಮುನ್ಸೂಚನೆಸಿದ್ದರಾಮಯ್ಯ ಅವರನ್ನು ಅಧಿಕಾರದಿಂದ ಇಳಿಸಲು ವ್ಯವಸ್ಥಿತ ಸಂಚು ರೂಪಿಸಿ ಯಶಸ್ವಿಗೊಂಡಿದ್ದಾರೆ – ಸಿಎಂ ಯಡಿಯೂರಪ್ಪಚುನಾವಣಾ ಆಯುಕ್ತರಿಗೆ ರಕ್ಷಣೆ ನೀಡುವ ಕಾನೂನು ರದ್ದುಗೊಳಿಸಿ – ಮಲ್ಲಿಕಾರ್ಜುನ ಖರ್ಗೆ ಆಗ್ರಹದಸರಾ ವೇಳೆ ಪೊಲೀಸರ ಲಾಠಿ ಏಟಿಗೆ 4 ವರ್ಷದ ಬಾಲಕ ಗಂಭೀರ – ICUನಲ್ಲಿ ಅಂತಿಮ ಹೋರಾಟಸೌದಿ ವಿಮಾನ ನಿಲ್ದಾಣದ ಮೇಲೆ ಭೀಕರ ದಾಳಿ – 8 ಮಂದಿಗೆ ಗಾಯ, ಇಬ್ಬರ ಅಂತ್ಯನಂದಿಧ್ವಜ ಪೂಜೆಗೆ ಸಚಿವರಿಗೆ ಅವಕಾಶ ನಿರಾಕರಿಸಿದ ಅಧಿಕಾರಿಗಳ ವಿರುದ್ಧ ತನಿಖೆಗೆ ಆದೇಶ: ಮುಖ್ಯಮಂತ್ರಿ ಡಿ ಕೆ ಶಿವಕುಮಾರ್‌

ನಾಯಕತ್ವ ಚರ್ಚೆ ಮಧ್ಯೆ ಡಿಕೆಶಿ ಬಣದ ಶಾಸಕರ ಸಮಾಗಮ: ಮಾಗಡಿ ಬಾಲಕೃಷ್ಣ ಹುಟ್ಟುಹಬ್ಬ, ರಾಜಕೀಯ ಕುತೂಹಲಕ್ಕೆ ಕಾರಣ

PPeepal Media Desk

Peepal Media Desk ರಾಜಕೀಯ, ರಾಜ್ಯ

• 1 ನಿಮಿಷದ ಓದು

ನಾಯಕತ್ವ ಚರ್ಚೆ ಮಧ್ಯೆ ಡಿಕೆಶಿ ಬಣದ ಶಾಸಕರ ಸಮಾಗಮ: ಮಾಗಡಿ ಬಾಲಕೃಷ್ಣ ಹುಟ್ಟುಹಬ್ಬ, ರಾಜಕೀಯ ಕುತೂಹಲಕ್ಕೆ ಕಾರಣ

ಬೆಂಗಳೂರು: ಕಾಂಗ್ರೆಸ್‌ನಲ್ಲಿ ನಾಯಕತ್ವ ಬದಲಾವಣೆ ಕುರಿತ ಚರ್ಚೆಗಳು ಗರಿಗೆದರಿರುವ ಹೊತ್ತಲ್ಲೇ ಮಾಗಡಿ ಶಾಸಕ ಎಚ್‌.ಸಿ. ಬಾಲಕೃಷ್ಣ ಅವರ ಹುಟ್ಟುಹಬ್ಬದ ನೆಪದಲ್ಲಿ ನಡೆದ ಶಾಸಕರ ಸಮಾಗಮ ರಾಜಕೀಯ ವಲಯದಲ್ಲಿ ಸಾಕಷ್ಟು ಕುತೂಹಲ ಹುಟ್ಟಿಸಿದೆ. ಗುರುವಾರ ನಗರದ ಖಾಸಗಿ ಹೋಟೆಲ್‌ನಲ್ಲಿ ನಡೆದ ಈ ಕಾರ್ಯಕ್ರಮದಲ್ಲಿ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ಬಣಕ್ಕೆ ಸೇರಿದವರೇ ಬಹುಪಾಲು ಭಾಗಿಯಾಗಿದ್ದಾರೆ ಎನ್ನುವ ಮಾತು ಕೇಳಿಬರುತ್ತಿದೆ.

ಕಾರ್ಯಕ್ರಮದಲ್ಲಿ ಸಚಿವ ಡಿ. ಸುಧಾಕರ್, ಶಾಸಕರಾದ ಶಿವಗಂಗಾ ಬಸವರಾಜು, ಕುಣಿಗಲ್ ಶಾಸಕ ಡಾ. ರಂಗನಾಥ್, ಸಿ.ಪಿ. ಯೋಗೇಶ್ವರ್, ನಯನಾ ಮೋಟಮ್ಮ, ಆನೇಕಲ್ ಶಾಸಕ ಶಿವಣ್ಣ ಸೇರಿದಂತೆ ಒಟ್ಟು 18 ಮಂದಿ ಶಾಸಕರು ಭಾಗಿಯಾಗಿದ್ದರು ಎಂದು ತಿಳಿದುಬಂದಿದೆ. ಈ ಸಂದರ್ಭದ ಚಿತ್ರಗಳು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದ್ದು, ಸಭೆಗೆ ರಾಜಕೀಯ ಅರ್ಥ ಕಲ್ಪಿಸುವ ಪ್ರಯತ್ನಗಳು ಕೂಡ ನಡೆಯುತ್ತಿವೆ.

ಸೂತ್ರಗಳ ಪ್ರಕಾರ, ಇದು ಕೇವಲ ಹುಟ್ಟುಹಬ್ಬದ ಆಚರಣೆ ಮಾತ್ರವಲ್ಲದೆ, ಮುಂದಿನ ರಾಜಕೀಯ ಬೆಳವಣಿಗೆಗಳ ಕುರಿತ ಅನೌಪಚಾರಿಕ ಚರ್ಚೆಗೆ ವೇದಿಕೆಯಾಯಿತೇ ಎಂಬ ಪ್ರಶ್ನೆಗಳು ಎದ್ದಿವೆ. ಕಾಂಗ್ರೆಸ್ ಒಳರಾಜಕೀಯದಲ್ಲಿ ಇತ್ತೀಚೆಗೆ ಕಾಣಿಸಿಕೊಂಡಿರುವ ಚಟುವಟಿಕೆಗಳ ಹಿನ್ನೆಲೆಯಲ್ಲಿ ಈ ಕೂಟಕ್ಕೆ ಹೆಚ್ಚಿನ ಪ್ರಾಮುಖ್ಯತೆ ಸಿಕ್ಕಿದೆ.

ಆದರೆ, ಸಭೆಗೆ ರಾಜಕೀಯ ಬಣ್ಣ ಹಚ್ಚಬಾರದು ಎಂದು ಶಾಸಕ ಸಿ.ಪಿ. ಯೋಗೇಶ್ವರ್ ಸ್ಪಷ್ಟಪಡಿಸಿದ್ದಾರೆ. “ಬಾಲಕೃಷ್ಣ ಅವರ ಆಹ್ವಾನಕ್ಕೆ ಸ್ಪಂದಿಸಿ ಊಟಕ್ಕೆ ಹಾಜರಾಯಿತು. ಸುಮಾರು 40 ಮಂದಿ ಶಾಸಕರು ಇದ್ದರು. ಇದು ಸೌಹಾರ್ದ ಕೂಟ ಮಾತ್ರ,” ಎಂದು ಅವರು ಪ್ರತಿಕ್ರಿಯಿಸಿದ್ದಾರೆ.

ಹೀಗಿದ್ದರೂ, ನಾಯಕತ್ವ ಬದಲಾವಣೆ ಕುರಿತ ಚರ್ಚೆ ಜೋರಾಗಿರುವ ಸಂದರ್ಭದಲ್ಲೇ ಡಿಕೆಶಿ ಬಣದ ಶಾಸಕರು ಒಂದೇ ವೇದಿಕೆಯಲ್ಲಿ ಕಾಣಿಸಿಕೊಂಡಿರುವುದು ಕಾಂಗ್ರೆಸ್ ರಾಜಕೀಯದಲ್ಲಿ ಹೊಸ ಸಮೀಕರಣಗಳ ಸೂಚನೆಯೇ ಎಂಬ ಚರ್ಚೆ ರಾಜಕೀಯ ವಲಯದಲ್ಲಿ ಮುಂದುವರಿದಿದೆ.

PPeepal Media Desk

Peepal Media Desk

Peepal Media · ರಾಜಕೀಯ ವಿಭಾಗ

ಸಂಬಂಧಿತ ಸುದ್ದಿಗಳು