ಮುಖ್ಯ ವಿಷಯಕ್ಕೆ ತೆರಳಿ
Peepal Media
ತಾಜಾ ಸುದ್ದಿ
●ಈಸಕ್ಕಿ ಆಸೆಯನ್ನೂ ಮೀರಿದ ಆಯ್ದಕ್ಕಿ ಲಕ್ಕಮ್ಮ●ಗಾಜಾ ಸ್ಮಶಾನದ ಮೇಲೆ ಮತ್ತೆ ಅರಳುತ್ತಾ ನೆತನ್ಯಾಹು ಕುರ್ಚಿ?●ಅರುಣಾಚಲದಲ್ಲಿ ಚೀನಾ ಸೈನಿಕರೊಂದಿಗೆ ಮುಖಾಮುಖಿ: ಕೇಂದ್ರದ ಮೌನವನ್ನು ಪ್ರಶ್ನಿಸಿದ ಕಾಂಗ್ರೆಸ್‌ನ ಜೈರಾಮ್ ರಮೇಶ್●ಕಡತಗಳ ವಿಲೇವಾರಿ ಪ್ರಕ್ರಿಯೆ ಬದಲಾವಣೆ: ಚುನಾವಣಾ ಆಯುಕ್ತರಿಂದ ಕ್ಯಾಬಿನೆಟ್‌ ಕಾರ್ಯದರ್ಶಿಗೆ ಆಕ್ಷೇಪಣಾ ಪತ್ರ●ಮೋದಿ–ಅದಾನಿ ಕುರಿತ ಸಾಕ್ಷ್ಯಚಿತ್ರ ಹಂಚಿಕೊಂಡ ರಾಜ್‌ ಠಾಕ್ರೆ; ತೆಗೆದುಹಾಕುವಂತೆ ಸೂಚನೆಗಳ ನಡುವೆ ಮುಂದುವರೆದ ಚರ್ಚೆ●ಮಂಡ್ಯದಲ್ಲಿ ARAI ಪರೀಕ್ಷಾ ಕೇಂದ್ರಗಳಿಗೆ ಭೂಮಿ ಹಂಚಿಕೆ ವಿಳಂಬ: ರಾಜ್ಯ ಸರ್ಕಾರಕ್ಕೆ ಎಚ್‌.ಡಿ. ಕುಮಾರಸ್ವಾಮಿ ಪತ್ರ●ರಾಷ್ಟ್ರೀಯತೆಯ ಪಾಠ ನನಗೆ ಬೇಕಿಲ್ಲ; ನಮ್ಮ ಗುರಿ ಆಡಳಿತ, ಸಾಮಾಜಿಕ ಜಾಲತಾಣದ ಪ್ರಚಾರವಲ್ಲ: ಕೆ. ಅಣ್ಣಾಮಲೈ●ಕೇವಲ ಮದುವೆಗಾಗಿ ಧರ್ಮಾಂತರವಾಗುವುದನ್ನು ಒಪ್ಪಲು ಸಾಧ್ಯವಿಲ್ಲ: ಬಾಂಬೆ ಹೈಕೋರ್ಟ್‌●ಇನ್ನು ನೋಂದಾಯಿತ ಸಿಮ್‌ ಇದ್ದರೆ ಮಾತ್ರ ವಾಟ್ಸ್‌ಆ್ಯಪ್‌ ಬಳಕೆ ಸಾಧ್ಯ: ಜನವರಿ 1, 2027ರಿಂದ ಹೊಸ ನಿಯಮ ಜಾರಿ●ಈ-ಮುದ್ರ ಡಿಜಿಟಲ್‌ ಪ್ರಮಾಣಪತ್ರಗಳಲ್ಲಿ ಭದ್ರತಾ ಲೋಪ: ಜಾಗತಿಕ ತಂತ್ರಜ್ಞಾನ ವಲಯದಲ್ಲಿ ಆತಂಕ●ಹಾಸನ ಕಾಳಸಂತೆಗೆ ಪಡಿತರ ಅಕ್ಕಿ ಮಾರಾಟ ಯತ್ನ – ಕ್ವಿಂಟಲ್‌ ಗಟ್ಟಲೆ ಅಕ್ಕಿ, ರಾಗಿ ವಶ●ಸದ್ಯದಲ್ಲೆ ಕಬ್ಬು ಬೆಳೆಗಾರರ ಸಭೆ ಕರೆದಿದ್ದೇನೆ – ಸಿಎಂ ಡಿ.ಕೆ ಶಿವಕುಮಾರ್●ರಾಜ್ಯದಲ್ಲಿ ಐದು ದಿನಗಳಲ್ಲಿ ಮಳೆ ಸಾಧ್ಯತೆ – ಹವಾಮಾನ ಇಲಾಖೆ ಮುನ್ಸೂಚನೆ●ಸಿದ್ದರಾಮಯ್ಯ ಅವರನ್ನು ಅಧಿಕಾರದಿಂದ ಇಳಿಸಲು ವ್ಯವಸ್ಥಿತ ಸಂಚು ರೂಪಿಸಿ ಯಶಸ್ವಿಗೊಂಡಿದ್ದಾರೆ – ಸಿಎಂ ಯಡಿಯೂರಪ್ಪ●ಚುನಾವಣಾ ಆಯುಕ್ತರಿಗೆ ರಕ್ಷಣೆ ನೀಡುವ ಕಾನೂನು ರದ್ದುಗೊಳಿಸಿ – ಮಲ್ಲಿಕಾರ್ಜುನ ಖರ್ಗೆ ಆಗ್ರಹ●ದಸರಾ ವೇಳೆ ಪೊಲೀಸರ ಲಾಠಿ ಏಟಿಗೆ 4 ವರ್ಷದ ಬಾಲಕ ಗಂಭೀರ – ICUನಲ್ಲಿ ಅಂತಿಮ ಹೋರಾಟ●ಸೌದಿ ವಿಮಾನ ನಿಲ್ದಾಣದ ಮೇಲೆ ಭೀಕರ ದಾಳಿ – 8 ಮಂದಿಗೆ ಗಾಯ, ಇಬ್ಬರ ಅಂತ್ಯ●ನಂದಿಧ್ವಜ ಪೂಜೆಗೆ ಸಚಿವರಿಗೆ ಅವಕಾಶ ನಿರಾಕರಿಸಿದ ಅಧಿಕಾರಿಗಳ ವಿರುದ್ಧ ತನಿಖೆಗೆ ಆದೇಶ: ಮುಖ್ಯಮಂತ್ರಿ ಡಿ ಕೆ ಶಿವಕುಮಾರ್‌●300 ವರ್ಷಗಳಷ್ಟು ಹಳೆಯ ಐತಿಹಾಸಿಕ ರೇಸ್‌ಕೋರ್ಸ್ ಮಸೀದಿಯ ವಿದ್ಯುತ್ ಹಾಗೂ ನೀರು ಸಂಪರ್ಕ ಕಡಿತ: ತುರ್ತು ರಕ್ಷಣೆ ಕೋರಿದ ದೆಹಲಿ ವಕ್ಫ್ ಮಂಡಳಿ●ತಿಹಾರ್ ಜೈಲಿನಿಂದ ಬಿಡುಗಡೆಯಾದ ಬೆನ್ನಲ್ಲೇ ಸೌರವ್ ದಾಸ್ ಹಾಗೂ ಅಶೋತ್ ರಾಂಕಾಗೆ ದೆಹಲಿ ಅಪರಾಧ ವಿಭಾಗದಿಂದ ಸಮನ್ಸ್

ಬ್ರ್ಯಾಂಡ್‌ ಬೆಂಗಳೂರು ಎಂದರೆ ಬೆಂಗಳೂರನ್ನು ಮುಳುಗಿಸುವುದಾ?: ಹೆಚ್‌.ಡಿ. ಕೆ ಟೀಕೆ

PPeepal Media Desk

Peepal Media Desk • ದೇಶ, ರಾಜಕೀಯ, ರಾಜ್ಯ

• 2 ನಿಮಿಷದ ಓದು

ಬ್ರ್ಯಾಂಡ್‌ ಬೆಂಗಳೂರು ಎಂದರೆ ಬೆಂಗಳೂರನ್ನು ಮುಳುಗಿಸುವುದಾ?: ಹೆಚ್‌.ಡಿ. ಕೆ ಟೀಕೆ

ಬೆಂಗಳೂರು: ಬ್ರ್ಯಾಂಡ್‌ ಬೆಂಗಳೂರು ಎಂದರೆ ಬೆಂಗಳೂರನ್ನು ಮುಳುಗಿಸುವುದಾ? ಎಂದು ಈಗಿನ ಕರ್ನಾಟಕ ಸರ್ಕಾರದ ಬ್ರ್ಯಾಂಡ್‌ ಬೆಂಗಳೂರು ವಿಶೇಷ ಯೋಜನೆ ಕುರಿತು ಕೇಂದ್ರ ಸಚಿವ ಎಚ್. ಡಿ. ಕುಮಾರಸ್ವಾಮಿ ಅವರು ಟೀಕಿಸಿದ್ದಾರೆ.

ಬೆಂಗಳೂರಿನಲ್ಲಿ ಮಳೆ ಬಂದಿರುವ ಹಿನ್ನಲೆ, ನಗರದ ಹಲವಾರು ಕಡೆ ರಸ್ತೆಗಳು ಸಂಪೂರ್ಣ ಜಲಾವೃತವಾಗಿದ್ದು, ಸಾರ್ವಜನಿಕರ ಪ್ರಯಾಣಕ್ಕೆ ತೊಂದರೆ ಉಂಟಾಗಿದೆ, ಈ ಕಾರಣ ಹಲಾವರು ಉದ್ಗೋಗಿಗಳಿಗೆ ಮನೆಯಲ್ಲಿ ಕೆಲಸ ನಿರ್ವಹಿಸುವಂತೆ, ಕಂಪನಿಗಳು ಆದೇಶ ಹೊರಡಿಸಿವೆ, ಇನ್ನಾ ಉಳಿದಂತೆ ಕೂಲಿಕಾರರು ಮನೆಯಲ್ಲಿ ಕೂರುವಂತಹ ಪರಿಸ್ಥಿತಿ ನಿರ್ಮಾಣವಾಗಿದ್ದು, ಸಾರ್ವಜನಿಕರ ಆಕ್ರೋಶಕ್ಕೆ ರಾಜ್ಯ ಸರ್ಕಾರ ಗುರಿಯಾಗಿದೆ.

ಈ ಕುರಿತು ಹಲವಾರು ರಾಜಕೀಯ ನಾಯಕರು ಸಾಮಾಜಿಕ ಜಾಲತಾಣದಲ್ಲಿ, ಸರ್ಕಾರದ ವಿರುದ್ಧ ಕಿಡಿಕಾರುತ್ತಿದ್ದು, ಈಗ ಕೇಂದ್ರ ಸಚಿವ ಎಚ್. ಡಿ. ಕುಮಾರಸ್ವಾಮಿ ಅವರ ಟೀಕಿಗೆ ಗುರಿಯಾಗಿದೆ.

ಗ್ರೇಟರ್‌ ಬೆಂಗಳೂರು ಮತ್ತು ಬ್ರಾಂಡ್‌ ಬೆಂಗಳೂರು ಯೋಜನೆ  ಕುರಿತು ತಮ್ಮ ಎಕ್ಸ್‌ನಲ್ಲಿ ಅಸಮಧಾನ ಹಂಚಿಕೊಂಡಿರುವ ಇವರು, ಜನ ಸತ್ತು ಬದುಕುತ್ತಿದ್ದರೆ  ರಾಜ್ಯ ಕಾಂಗ್ರೆಸ್‌ ನಾಯಕರಿಗೆ ಸಾಧನಾ ಸಮಾವೇಶದ ಚಿಂತೆ!  ಜೊತೆಗ ವಾರದಿಂದ ಬಣ್ಣಬಣ್ಣದ ಸರಣಿ ಗ್ಯಾರಂಟಿ ಜಾಹೀರಾತು ಬೇರೆ..! , ಬೆಂಗಳೂರು ಜನ ಬ್ರ್ಯಾಂಡೆಡ್ ನರಕದಲ್ಲಿದ್ದಾರೆ! ನಗರ ನರಳುತ್ತಿದ್ದರೆ ಇವರಿಗೆ ಪ್ರಚಾರದ ಗೀಳು ಎಂದು ಆಕ್ರೋಶ ಹೊರಹಾಕಿದ್ದಾರೆ.

ಕಾಂಗ್ರೆಸ್ ಸರ್ಕಾರದ  ಸಾಧನೆ ಬೆಂಗಳೂರು ರಸ್ತೆಗಳಲ್ಲಿ, ಚರಂಡಿಗಳಲ್ಲಿ ಕೊಚ್ಚೆಯಾಗಿ ಕೊಚ್ಚಿ ಹೋಗುತ್ತಿದೆ. ಇವರಿಗೆ ಆತ್ಮಸಾಕ್ಷಿ ಎನ್ನುವುದು ಇದೆಯಾ? ಸತ್ತ ಸರಕಾರಕ್ಕೆ ಸಾಧನೆ ಸಮಾವೇಶ ಬೇರೆ ಕೇಡು ಎಂದು ಟೀಕಿಸಿದ್ದಾರೆ.

ಈ ವೇಳೆ ಡಿ.ಕೆ. ಶಿವಕುಮಾರ್‌ ಅವರ ಕುರಿತು ವಾಗ್ದಾಳಿ ನಡೆಸಿರುವ ಕುಮಾರ ಸ್ಮಾಮಿಯವರು, ಡಿಸಿಎಂ ಡಿ.ಕೆ.ಶಿವಕುಮಾರ್‌ ಮಾತಿನ ಡಬ್ಬಾ ಹೊಡೆಯುವುದು ಬಿಟ್ಟು, ಪ್ರತಿಪಕ್ಷಗಳನ್ನು ನಿಂದಿಸುವುದನ್ನು ಪಕ್ಕಕ್ಕಿಟ್ಟು ಕೆಲಸ ಮಾಡಲಿ. ವಾರ್ ರೂಂನಲ್ಲಿ ಕೂತು, ಜನತ ದಳ ಮತ್ತೆ ಬಿಜೆಪಿ  ಮೇಲೆ ಪ್ರಾಕ್ಸಿವಾರ್ ಮಾಡಿದರೆ ಪ್ರಯೋಜನವೇನು? ಕೈಲಾಗದವನಿಗೆ ಬಾಯಿ ಭದ್ರ ಇರುವುದಿಲ್ಲ. ಈ ಮನುಷ್ಯ ಆ ಪರಿಸ್ಥಿತಿಯಲ್ಲಿದ್ದಾರೆ ಎಂದಿದ್ದಾರೆ.

ಈ ವೇಳೆ ಗ್ರೇಟರ್‌ ಬೆಂಗಳೂರು? ಕುರಿತು ಅಭಿಪ್ರಾಯ ಹಂಚಿಕೊಂಡಿರುವ ಇವರು,  ಯಾವ ಪುರುಷಾರ್ಥಕ್ಕೆ ಗ್ರೇಟರ್‌ ಬೆಂಗಳೂರು? ಯಾರ ಉದ್ಧಾರಕ್ಕೆ ಬ್ರ್ಯಾಂಡ್‌ ಬೆಂಗಳೂರು? ಲೂಟಿ ಹೊಡೆಯೋದಕ್ಕೆ ಹೊಸ ಹೊಸ ಹೆಸರೇ?! ಎರಡು ವರ್ಷಗಳಿಂದ ಬ್ರ್ಯಾಂಡ್‌, ಬ್ರ್ಯಾಂಡ್‌  ಎಂದು ಭಜನೆ ಮಾಡುತ್ತಿದ್ದೀರಲ್ಲ, ಬ್ರ್ಯಾಂಡ್‌ ಎಂದರೆ ಬೆಂಗಳೂರನ್ನು ಮುಳುಗಿಸುವುದಾ? ಎಂದು ಕಾಂಗ್ರೆಸ್‌ ಸರ್ಕಾರವನ್ನಾ ಪ್ರಶ್ನಿಸಿದ್ದಾರೆ.

ಮುಂದುವರೆದು ಅವರು, ಬೆಂಗಳೂರು ನಗರಾಭಿವೃದ್ಧಿ ಇಲಾಖೆ ಈ ವ್ಯಕ್ತಿ ಪಾಲಿಗೆ ಬೆಂಗಳೂರು ನಗದು ಅಭಿವೃದ್ಧಿ ಇಲಾಖೆಯಾಗಿ ಬದಲಾಗಿದೆ, ಬಯಸಿದಾಗ ನೋಟಿನ ಮಳೆ ಸುರಿಸುವ ಅಕ್ಷಯಪಾತ್ರೆ! ಎರಡು ವರ್ಷಗಳಿಂದ ಸುರಿದ ನೋಟಿನ ಮಳೆ ಪ್ರಮಾಣ ಎಷ್ಟು? ಕೈ ಇಟ್ಟ ಕಡೆಯಲ್ಲಾ ದುಡ್ಡು! ಜನರ ಮೇಲೆ ತೆರಿಗೆ ಮೇಲೆ ತೆರಿಗೆ! ಎರಡು ವರ್ಷಗಳಲ್ಲಿ ಎಷ್ಟೊಂದು ಬಾರಿ ಸಾಯಿ ಬಡವಾಣೆ ಮುಳುಗಿತು? ಅಲ್ಲಿಗೆ ಡಿಸಿಎಂ ಎಷ್ಟು ಸಲ ಹೋಗಿದ್ದರು? ಈ ಹಿಂದೆ ನಗರಾಭಿವೃದ್ಧಿ ಮಂತ್ರಿ ಆಗಿದ್ದಾಗ ನಗರಕ್ಕೇನು ಮಾಡಿದ್ದರು? ಸಚಿವಗಿರಿಯನ್ನು ಸ್ವ-ನಗದು ಅಭಿವೃದ್ಧಿಗೆ ಬಳಸಿಕೊಂಡರಷ್ಟೇ. ಮಾತೆತ್ತಿದರೆ ಬೆಂಗಳೂರಿಗೆ ಹೆಚ್.ಡಿ.ಕುಮಾರಸ್ವಾಮಿ ಏನು ಮಾಡಿದರೆಂದು ಕೇಳುತ್ತಾರೆ. 2006ರ 20 ತಿಂಗಳ ಅವಧಿಯಲ್ಲಿ 58 ರಸ್ತೆ ಅಗಲೀಕರಣ, ಮೆಟ್ರೋ ಮೊದಲ ಹಂತ ಕಾಮಗಾರಿಗೆ ಚಾಲನೆ, ಹೊಸ ಏರ್‌ʼಪೋರ್ಟ್‌ ರಸ್ತೆ, ನೆಲಮಂಗಲ ರಸ್ತೆ, ಎಲೆಕ್ಟ್ರಾನಿಕ್ ರಸ್ತೆ ಅಭಿವೃದ್ಧಿ ಸೇರಿ ಎಷ್ಟೋ ಕೆಲಸ ಮಾಡಿದ್ದೇನೆ. ಕೆರೆಯನ್ನೇ ನುಂಗಿ ಜೆಪಿ ನಗರ ಡಾಲರ್ಸ್‌ ಕಾಲೋನಿ ಮಾಡಿದ್ದರಲ್ಲ, ಆ ಮನೆಗಳಿಗೆ ಕೆರೆ ನೀರು ನುಗ್ಗುತ್ತಿದ್ದನ್ನು ತಪ್ಪಿಸಿದ್ದು ಯಾರು? ಎಂದು ಪ್ರಶ್ನೆಗಳ ಪಟಾಕಿ ಸಿಡಿಸಿದ್ದಾರೆ.

ಹಿಂದೆ ಬಿಜೆಪಿ ಜತೆ 20 ತಿಂಗಳು, ಇನ್ನೊಮ್ಮೆ ನಿಮ್ಮ ಜೊತೆ 14 ತಿಂಗಳು. ನನ್ನ ಕೆಲಸಗಳಿಗೆ ದಾಖಲೆಗಳಿವೆ , ಓದಿಕೊಳ್ಳಿ. ಕೊಟ್ಟ ಕುದುರೆ ಏರದವನು ಶೂರನೂ ಅಲ್ಲ, ವೀರನೂ ಅಲ್ಲ. ಜನ ನಿಮಗೆ ಕುದುರೆ ಕೊಟ್ಟಿದ್ದಾರೆ. ಕುದುರೆ ಶೋಕಿಗಲ್ಲ. ಪೆನ್ನು ಅಲಂಕಾರಕ್ಕಲ್ಲ. ಇನ್ನಾದರೂ ಮಾತು ನಿಲ್ಲಿಸಿ ಕೆಲಸ ಮಾಡಿ. ಇಲ್ಲವಾದರೆ ನಿಮ್ಮ ಬ್ರ್ಯಾಂಡಿಗೆ ಜನ ಅದೇ ನೀರು ಬಿಟ್ಟಾರು! ಎಂದು ವ್ಯಂಗಿಸಿದ್ದಾರೆ.

PPeepal Media Desk

Peepal Media Desk

Peepal Media · ದೇಶ ವಿಭಾಗ

ಸಂಬಂಧಿತ ಸುದ್ದಿಗಳು