ಮುಖ್ಯ ವಿಷಯಕ್ಕೆ ತೆರಳಿ
Peepal Media
ತಾಜಾ ಸುದ್ದಿ
ಈಸಕ್ಕಿ ಆಸೆಯನ್ನೂ ಮೀರಿದ ಆಯ್ದಕ್ಕಿ ಲಕ್ಕಮ್ಮಗಾಜಾ ಸ್ಮಶಾನದ ಮೇಲೆ ಮತ್ತೆ ಅರಳುತ್ತಾ ನೆತನ್ಯಾಹು ಕುರ್ಚಿ?ಅರುಣಾಚಲದಲ್ಲಿ ಚೀನಾ ಸೈನಿಕರೊಂದಿಗೆ ಮುಖಾಮುಖಿ: ಕೇಂದ್ರದ ಮೌನವನ್ನು ಪ್ರಶ್ನಿಸಿದ ಕಾಂಗ್ರೆಸ್‌ನ ಜೈರಾಮ್ ರಮೇಶ್ಕಡತಗಳ ವಿಲೇವಾರಿ ಪ್ರಕ್ರಿಯೆ ಬದಲಾವಣೆ: ಚುನಾವಣಾ ಆಯುಕ್ತರಿಂದ ಕ್ಯಾಬಿನೆಟ್‌ ಕಾರ್ಯದರ್ಶಿಗೆ ಆಕ್ಷೇಪಣಾ ಪತ್ರಮೋದಿ–ಅದಾನಿ ಕುರಿತ ಸಾಕ್ಷ್ಯಚಿತ್ರ ಹಂಚಿಕೊಂಡ ರಾಜ್‌ ಠಾಕ್ರೆ; ತೆಗೆದುಹಾಕುವಂತೆ ಸೂಚನೆಗಳ ನಡುವೆ ಮುಂದುವರೆದ ಚರ್ಚೆಮಂಡ್ಯದಲ್ಲಿ ARAI ಪರೀಕ್ಷಾ ಕೇಂದ್ರಗಳಿಗೆ ಭೂಮಿ ಹಂಚಿಕೆ ವಿಳಂಬ: ರಾಜ್ಯ ಸರ್ಕಾರಕ್ಕೆ ಎಚ್‌.ಡಿ. ಕುಮಾರಸ್ವಾಮಿ ಪತ್ರರಾಷ್ಟ್ರೀಯತೆಯ ಪಾಠ ನನಗೆ ಬೇಕಿಲ್ಲ; ನಮ್ಮ ಗುರಿ ಆಡಳಿತ, ಸಾಮಾಜಿಕ ಜಾಲತಾಣದ ಪ್ರಚಾರವಲ್ಲ: ಕೆ. ಅಣ್ಣಾಮಲೈಕೇವಲ ಮದುವೆಗಾಗಿ ಧರ್ಮಾಂತರವಾಗುವುದನ್ನು ಒಪ್ಪಲು ಸಾಧ್ಯವಿಲ್ಲ: ಬಾಂಬೆ ಹೈಕೋರ್ಟ್‌ಇನ್ನು ನೋಂದಾಯಿತ ಸಿಮ್‌ ಇದ್ದರೆ ಮಾತ್ರ ವಾಟ್ಸ್‌ಆ್ಯಪ್‌ ಬಳಕೆ ಸಾಧ್ಯ: ಜನವರಿ 1, 2027ರಿಂದ ಹೊಸ ನಿಯಮ ಜಾರಿಈ-ಮುದ್ರ ಡಿಜಿಟಲ್‌ ಪ್ರಮಾಣಪತ್ರಗಳಲ್ಲಿ ಭದ್ರತಾ ಲೋಪ: ಜಾಗತಿಕ ತಂತ್ರಜ್ಞಾನ ವಲಯದಲ್ಲಿ ಆತಂಕಹಾಸನ ಕಾಳಸಂತೆಗೆ ಪಡಿತರ ಅಕ್ಕಿ ಮಾರಾಟ ಯತ್ನ – ಕ್ವಿಂಟಲ್‌ ಗಟ್ಟಲೆ ಅಕ್ಕಿ, ರಾಗಿ ವಶಸದ್ಯದಲ್ಲೆ ಕಬ್ಬು ಬೆಳೆಗಾರರ ಸಭೆ ಕರೆದಿದ್ದೇನೆ – ಸಿಎಂ ಡಿ.ಕೆ ಶಿವಕುಮಾರ್ರಾಜ್ಯದಲ್ಲಿ ಐದು ದಿನಗಳಲ್ಲಿ ಮಳೆ ಸಾಧ್ಯತೆ – ಹವಾಮಾನ ಇಲಾಖೆ ಮುನ್ಸೂಚನೆಸಿದ್ದರಾಮಯ್ಯ ಅವರನ್ನು ಅಧಿಕಾರದಿಂದ ಇಳಿಸಲು ವ್ಯವಸ್ಥಿತ ಸಂಚು ರೂಪಿಸಿ ಯಶಸ್ವಿಗೊಂಡಿದ್ದಾರೆ – ಸಿಎಂ ಯಡಿಯೂರಪ್ಪಚುನಾವಣಾ ಆಯುಕ್ತರಿಗೆ ರಕ್ಷಣೆ ನೀಡುವ ಕಾನೂನು ರದ್ದುಗೊಳಿಸಿ – ಮಲ್ಲಿಕಾರ್ಜುನ ಖರ್ಗೆ ಆಗ್ರಹದಸರಾ ವೇಳೆ ಪೊಲೀಸರ ಲಾಠಿ ಏಟಿಗೆ 4 ವರ್ಷದ ಬಾಲಕ ಗಂಭೀರ – ICUನಲ್ಲಿ ಅಂತಿಮ ಹೋರಾಟಸೌದಿ ವಿಮಾನ ನಿಲ್ದಾಣದ ಮೇಲೆ ಭೀಕರ ದಾಳಿ – 8 ಮಂದಿಗೆ ಗಾಯ, ಇಬ್ಬರ ಅಂತ್ಯನಂದಿಧ್ವಜ ಪೂಜೆಗೆ ಸಚಿವರಿಗೆ ಅವಕಾಶ ನಿರಾಕರಿಸಿದ ಅಧಿಕಾರಿಗಳ ವಿರುದ್ಧ ತನಿಖೆಗೆ ಆದೇಶ: ಮುಖ್ಯಮಂತ್ರಿ ಡಿ ಕೆ ಶಿವಕುಮಾರ್‌300 ವರ್ಷಗಳಷ್ಟು ಹಳೆಯ ಐತಿಹಾಸಿಕ ರೇಸ್‌ಕೋರ್ಸ್ ಮಸೀದಿಯ ವಿದ್ಯುತ್ ಹಾಗೂ ನೀರು ಸಂಪರ್ಕ ಕಡಿತ: ತುರ್ತು ರಕ್ಷಣೆ ಕೋರಿದ ದೆಹಲಿ ವಕ್ಫ್ ಮಂಡಳಿತಿಹಾರ್ ಜೈಲಿನಿಂದ ಬಿಡುಗಡೆಯಾದ ಬೆನ್ನಲ್ಲೇ ಸೌರವ್ ದಾಸ್ ಹಾಗೂ ಅಶೋತ್ ರಾಂಕಾಗೆ ದೆಹಲಿ ಅಪರಾಧ ವಿಭಾಗದಿಂದ ಸಮನ್ಸ್

ಸತೀಶ್ ಜಾರಕಿಹೊಳಿ ವಿರುದ್ಧದ ಇಡಿ ತನಿಖೆ ಮತ್ತಷ್ಟು ಬಿಗಿಯಾಗುವತ್ತ: ದೆಹಲಿ ತಂಡಕ್ಕೆ ವಹಿಸುವ ಸಾಧ್ಯತೆ

PPeepal Media Desk

Peepal Media Desk ರಾಜಕೀಯ, ರಾಜ್ಯ

• 2 ನಿಮಿಷದ ಓದು

ಸತೀಶ್ ಜಾರಕಿಹೊಳಿ ವಿರುದ್ಧದ ಇಡಿ ತನಿಖೆ ಮತ್ತಷ್ಟು ಬಿಗಿಯಾಗುವತ್ತ: ದೆಹಲಿ ತಂಡಕ್ಕೆ ವಹಿಸುವ ಸಾಧ್ಯತೆ

ಬೆಂಗಳೂರು: ಲೋಕೋಪಯೋಗಿ ಇಲಾಖೆ ಸಚಿವ ಸತೀಶ್ ಜಾರಕಿಹೊಳಿ ಹಾಗೂ ಅವರ ಆಪ್ತರಿಗೆ ಸಂಬಂಧಿಸಿದ ಪ್ರಕರಣದ ಕುರಿತು ಜಾರಿ ನಿರ್ದೇಶನಾಲಯ (ED) ನಡೆಸುತ್ತಿರುವ ತನಿಖೆ ದಿನದಿಂದ ದಿನಕ್ಕೆ ತೀವ್ರಗೊಳ್ಳುತ್ತಿದ್ದು, ಪ್ರಕರಣದ ಗಂಭೀರತೆಯನ್ನು ಪರಿಗಣಿಸಿ ಬೆಂಗಳೂರು ವಲಯದ ತನಿಖೆಯನ್ನು ದೆಹಲಿಯ ಇಡಿ ಕೇಂದ್ರ ಕಚೇರಿಯ ಹಿರಿಯ ಅಧಿಕಾರಿಗಳ ತಂಡಕ್ಕೆ ವಹಿಸುವ ಸಾಧ್ಯತೆ ಇದೆ ಎಂಬ ಮಾಹಿತಿ ಮುನ್ನೆಲೆಗೆ ಬಂದಿದೆ.

ಇತ್ತೀಚೆಗೆ ಇಡಿ ನಿರ್ದೇಶಕ ರಾಹುಲ್ ನವೀನ್ ಅವರು ಬೆಂಗಳೂರಿಗೆ ಭೇಟಿ ನೀಡಿ ಪ್ರಕರಣದ ಪ್ರಗತಿ ಕುರಿತು ಪರಿಶೀಲನೆ ನಡೆಸಿರುವುದು ಈ ಬೆಳವಣಿಗೆಗೆ ಮತ್ತಷ್ಟು ಮಹತ್ವ ನೀಡಿದೆ. ಆದರೆ, ಬೆಂಗಳೂರು ವಲಯದ ತನಿಖೆಯನ್ನು ದೆಹಲಿ ಕೇಂದ್ರ ಕಚೇರಿಯ ತಂಡಕ್ಕೆ ವರ್ಗಾಯಿಸುವ ಕುರಿತು ಇಡಿಯಿಂದ ಅಧಿಕೃತ ಪ್ರಕಟಣೆ ಇನ್ನೂ ಹೊರಬಿದ್ದಿಲ್ಲ.

ಪ್ರಕರಣದ ತನಿಖೆಯ ಭಾಗವಾಗಿ ಬೆಂಗಳೂರು, ಬೆಳಗಾವಿ, ಗೋಕಾಕ್ ಹಾಗೂ ಕೋಲ್ಕತ್ತಾದ 21ಕ್ಕೂ ಹೆಚ್ಚು ಸ್ಥಳಗಳಲ್ಲಿ ಇಡಿ ಅಧಿಕಾರಿಗಳು ಸರಣಿ ಶೋಧ ನಡೆಸಿದ್ದರು. ಈ ಸಂದರ್ಭದಲ್ಲಿ ಸುಮಾರು ₹3.3 ಕೋಟಿ ನಗದು, ₹15 ಲಕ್ಷ ಮೌಲ್ಯದ ವಿದೇಶಿ ಕರೆನ್ಸಿ ಹಾಗೂ ಹಲವು ಮಹತ್ವದ ದಾಖಲೆಗಳು ಮತ್ತು ಡಿಜಿಟಲ್ ಪುರಾವೆಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ತನಿಖಾ ಸಂಸ್ಥೆ ತಿಳಿಸಿದೆ.

PWD ಕಾಮಗಾರಿಗಳಲ್ಲಿ ಕಮಿಷನ್ ಆರೋಪ
ರಾಜ್ಯದಲ್ಲಿ ಅನುಮೋದನೆಗೊಂಡಿರುವ ಲೋಕೋಪಯೋಗಿ ಇಲಾಖೆಯ ರಸ್ತೆ ಕಾಮಗಾರಿಗಳ ಗುತ್ತಿಗೆಗೆ ಸಂಬಂಧಿಸಿದ ಹಣಕಾಸು ವ್ಯವಹಾರಗಳ ಬಗ್ಗೆಯೂ ತನಿಖೆ ನಡೆಯುತ್ತಿದೆ. ಪಶ್ಚಿಮ ಬಂಗಾಳ ಮೂಲದ ‘ಭಾರತ್ ವಾಣಿಜ್ಯ ಈಸ್ಟರ್ನ್ ಪ್ರೈವೇಟ್ ಲಿಮಿಟೆಡ್’ (BVEPL) ಸಂಸ್ಥೆಗೆ ಕಾಮಗಾರಿ ಗುತ್ತಿಗೆ ದೊರಕಿಸಲು ಲಂಚದ ಹಣ ಪಾವತಿಸಲಾಗಿದ್ದು, ಈ ಹಣವನ್ನು ಅಕ್ರಮ ಮಾರ್ಗಗಳ ಮೂಲಕ ವರ್ಗಾವಣೆ ಮಾಡಲಾಗಿದೆ ಎಂಬ ಅನುಮಾನವನ್ನು ತನಿಖಾ ಸಂಸ್ಥೆ ವ್ಯಕ್ತಪಡಿಸಿದೆ.

ಈ ಹಿನ್ನೆಲೆಯಲ್ಲಿ ಗುತ್ತಿಗೆ ಸಂಸ್ಥೆ, ಸಂಬಂಧಿತ ವ್ಯಕ್ತಿಗಳು ಹಾಗೂ ಹಣಕಾಸು ವಹಿವಾಟುಗಳ ಕುರಿತು ಇಡಿ ಹೆಚ್ಚಿನ ಪರಿಶೀಲನೆ ನಡೆಸುತ್ತಿದೆ.

ಕಾಂಗೋ ಗಣಿಗಾರಿಕಾ ಸಂಸ್ಥೆಯಲ್ಲಿ ಹೂಡಿಕೆ ಆರೋಪ
ಇದೇ ವೇಳೆ ವಿದೇಶಿ ವಿನಿಮಯ ನಿರ್ವಹಣಾ ಕಾಯ್ದೆ (FEMA) ಉಲ್ಲಂಘನೆಯ ಆರೋಪವೂ ಪ್ರಕರಣದಲ್ಲಿ ಪ್ರಮುಖವಾಗಿ ಕಾಣಿಸಿಕೊಂಡಿದೆ. ಆಫ್ರಿಕಾದ ಡೆಮಾಕ್ರಟಿಕ್ ರಿಪಬ್ಲಿಕ್ ಆಫ್ ಕಾಂಗೋದಲ್ಲಿರುವ ಗಣಿಗಾರಿಕಾ ಸಂಸ್ಥೆಯೊಂದರಲ್ಲಿ ಸತೀಶ್ ಜಾರಕಿಹೊಳಿ ಅವರಿಗೆ ಶೇ.40ರಷ್ಟು ಪಾಲುದಾರಿಕೆ ಇದೆ ಎನ್ನಲಾದ ದಾಖಲೆಗಳು ತನಿಖೆಯ ವೇಳೆ ಪತ್ತೆಯಾಗಿವೆ ಎಂದು ಇಡಿ ಹೇಳಿದೆ.

ಜತೆಗೆ ಸಚಿವರ ಕುಟುಂಬ ಸದಸ್ಯರ ಹೆಸರಿನಲ್ಲಿಯೂ ವಿದೇಶಿ ಕಂಪನಿಗಳ ಷೇರುಗಳು ಮತ್ತು ಹೂಡಿಕೆಗಳಿಗೆ ಸಂಬಂಧಿಸಿದ ದಾಖಲೆಗಳು ಪತ್ತೆಯಾಗಿವೆ ಎಂದು ತನಿಖಾ ಸಂಸ್ಥೆ ಹೇಳಿದೆ.

‘ಹೂಡಿಕೆ ಮಾಡಿಲ್ಲ’ ಎಂದ ಸಚಿವ
ಇಡಿ ಆರೋಪಗಳಿಗೆ ಪ್ರತಿಕ್ರಿಯಿಸಿರುವ ಸತೀಶ್ ಜಾರಕಿಹೊಳಿ, ವಿದೇಶಗಳಲ್ಲಿ ಬಂಡವಾಳ ಹೂಡಿಕೆ ಮಾಡಲು ಯೋಜನೆ ರೂಪಿಸಲಾಗಿತ್ತೇ ಹೊರತು, ಇನ್ನೂ ಯಾವುದೇ ಹೂಡಿಕೆ ಮಾಡಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.

ವಿದೇಶದಲ್ಲಿ ಹೂಡಿಕೆ ಮಾಡಲು ನಿಯಮಾನುಸಾರ ಭಾರತೀಯ ರಿಸರ್ವ್ ಬ್ಯಾಂಕ್ (RBI) ಹಾಗೂ ಸಂಬಂಧಿತ ಸಂಸ್ಥೆಗಳಿಂದ ಅನುಮತಿ ಪಡೆಯುವ ಪ್ರಕ್ರಿಯೆಯಲ್ಲಿದ್ದೇವೆ. ಇಡಿ ವಶಪಡಿಸಿಕೊಂಡಿರುವ ಹಣಕ್ಕೆ ಸಂಬಂಧಿಸಿದ ಸೂಕ್ತ ದಾಖಲೆಗಳನ್ನು ನ್ಯಾಯಾಲಯ ಹಾಗೂ ಅಧಿಕಾರಿಗಳಿಗೆ ಸಲ್ಲಿಸಿ, ಕಾನೂನುಬದ್ಧವಾಗಿ ಹಣವನ್ನು ಬಿಡಿಸಿಕೊಳ್ಳಲಾಗುವುದು ಎಂದು ಅವರು ತಿಳಿಸಿದ್ದಾರೆ.

ರಾಜಕೀಯ ಆರೋಪ–ಪ್ರತ್ಯಾರೋಪ
ಇಡಿ ದಾಳಿಯ ಬೆನ್ನಲ್ಲೇ ರಾಜ್ಯದ ರಾಜಕೀಯ ವಲಯದಲ್ಲಿಯೂ ಆರೋಪ–ಪ್ರತ್ಯಾರೋಪ ತೀವ್ರಗೊಂಡಿದೆ. ಆಡಳಿತಾರೂಢ ಕಾಂಗ್ರೆಸ್ ನಾಯಕರು ತನಿಖಾ ಕ್ರಮವನ್ನು ರಾಜಕೀಯ ಪ್ರೇರಿತ ಎಂದು ಟೀಕಿಸಿದ್ದರೆ, ವಿರೋಧ ಪಕ್ಷಗಳು ಪ್ರಕರಣದ ಹಿನ್ನೆಲೆಯಲ್ಲಿ ಸಚಿವ ಸತೀಶ್ ಜಾರಕಿಹೊಳಿ ಅವರ ರಾಜೀನಾಮೆಗೆ ಆಗ್ರಹಿಸಿವೆ.

ಈ ನಡುವೆ ಪ್ರಕರಣದ ತನಿಖೆ ದೆಹಲಿ ಕೇಂದ್ರ ಕಚೇರಿಯ ಹಿರಿಯ ಅಧಿಕಾರಿಗಳ ಮೇಲ್ವಿಚಾರಣೆಗೆ ತೆರಳುವ ಸಾಧ್ಯತೆ ಇದೆ ಎಂಬ ಮಾಹಿತಿ ರಾಜಕೀಯ ವಲಯದಲ್ಲಿ ಚರ್ಚೆಗೆ ಗ್ರಾಸವಾಗಿದೆ. ವಶಪಡಿಸಿಕೊಳ್ಳಲಾದ ನಗದು, ದಾಖಲೆಗಳು ಮತ್ತು ಡಿಜಿಟಲ್ ಪುರಾವೆಗಳ ಪರಿಶೀಲನೆಯ ಬಳಿಕ ಇಡಿ ಕೈಗೊಳ್ಳಲಿರುವ ಮುಂದಿನ ಕ್ರಮಗಳತ್ತ ಇದೀಗ ಗಮನ ನೆಟ್ಟಿದೆ.

PPeepal Media Desk

Peepal Media Desk

Peepal Media · ರಾಜಕೀಯ ವಿಭಾಗ

ಸಂಬಂಧಿತ ಸುದ್ದಿಗಳು