ಮುಖ್ಯ ವಿಷಯಕ್ಕೆ ತೆರಳಿ
Peepal Media
ತಾಜಾ ಸುದ್ದಿ
ಈಸಕ್ಕಿ ಆಸೆಯನ್ನೂ ಮೀರಿದ ಆಯ್ದಕ್ಕಿ ಲಕ್ಕಮ್ಮಗಾಜಾ ಸ್ಮಶಾನದ ಮೇಲೆ ಮತ್ತೆ ಅರಳುತ್ತಾ ನೆತನ್ಯಾಹು ಕುರ್ಚಿ?ಅರುಣಾಚಲದಲ್ಲಿ ಚೀನಾ ಸೈನಿಕರೊಂದಿಗೆ ಮುಖಾಮುಖಿ: ಕೇಂದ್ರದ ಮೌನವನ್ನು ಪ್ರಶ್ನಿಸಿದ ಕಾಂಗ್ರೆಸ್‌ನ ಜೈರಾಮ್ ರಮೇಶ್ಕಡತಗಳ ವಿಲೇವಾರಿ ಪ್ರಕ್ರಿಯೆ ಬದಲಾವಣೆ: ಚುನಾವಣಾ ಆಯುಕ್ತರಿಂದ ಕ್ಯಾಬಿನೆಟ್‌ ಕಾರ್ಯದರ್ಶಿಗೆ ಆಕ್ಷೇಪಣಾ ಪತ್ರಮೋದಿ–ಅದಾನಿ ಕುರಿತ ಸಾಕ್ಷ್ಯಚಿತ್ರ ಹಂಚಿಕೊಂಡ ರಾಜ್‌ ಠಾಕ್ರೆ; ತೆಗೆದುಹಾಕುವಂತೆ ಸೂಚನೆಗಳ ನಡುವೆ ಮುಂದುವರೆದ ಚರ್ಚೆಮಂಡ್ಯದಲ್ಲಿ ARAI ಪರೀಕ್ಷಾ ಕೇಂದ್ರಗಳಿಗೆ ಭೂಮಿ ಹಂಚಿಕೆ ವಿಳಂಬ: ರಾಜ್ಯ ಸರ್ಕಾರಕ್ಕೆ ಎಚ್‌.ಡಿ. ಕುಮಾರಸ್ವಾಮಿ ಪತ್ರರಾಷ್ಟ್ರೀಯತೆಯ ಪಾಠ ನನಗೆ ಬೇಕಿಲ್ಲ; ನಮ್ಮ ಗುರಿ ಆಡಳಿತ, ಸಾಮಾಜಿಕ ಜಾಲತಾಣದ ಪ್ರಚಾರವಲ್ಲ: ಕೆ. ಅಣ್ಣಾಮಲೈಕೇವಲ ಮದುವೆಗಾಗಿ ಧರ್ಮಾಂತರವಾಗುವುದನ್ನು ಒಪ್ಪಲು ಸಾಧ್ಯವಿಲ್ಲ: ಬಾಂಬೆ ಹೈಕೋರ್ಟ್‌ಇನ್ನು ನೋಂದಾಯಿತ ಸಿಮ್‌ ಇದ್ದರೆ ಮಾತ್ರ ವಾಟ್ಸ್‌ಆ್ಯಪ್‌ ಬಳಕೆ ಸಾಧ್ಯ: ಜನವರಿ 1, 2027ರಿಂದ ಹೊಸ ನಿಯಮ ಜಾರಿಈ-ಮುದ್ರ ಡಿಜಿಟಲ್‌ ಪ್ರಮಾಣಪತ್ರಗಳಲ್ಲಿ ಭದ್ರತಾ ಲೋಪ: ಜಾಗತಿಕ ತಂತ್ರಜ್ಞಾನ ವಲಯದಲ್ಲಿ ಆತಂಕಹಾಸನ ಕಾಳಸಂತೆಗೆ ಪಡಿತರ ಅಕ್ಕಿ ಮಾರಾಟ ಯತ್ನ – ಕ್ವಿಂಟಲ್‌ ಗಟ್ಟಲೆ ಅಕ್ಕಿ, ರಾಗಿ ವಶಸದ್ಯದಲ್ಲೆ ಕಬ್ಬು ಬೆಳೆಗಾರರ ಸಭೆ ಕರೆದಿದ್ದೇನೆ – ಸಿಎಂ ಡಿ.ಕೆ ಶಿವಕುಮಾರ್ರಾಜ್ಯದಲ್ಲಿ ಐದು ದಿನಗಳಲ್ಲಿ ಮಳೆ ಸಾಧ್ಯತೆ – ಹವಾಮಾನ ಇಲಾಖೆ ಮುನ್ಸೂಚನೆಸಿದ್ದರಾಮಯ್ಯ ಅವರನ್ನು ಅಧಿಕಾರದಿಂದ ಇಳಿಸಲು ವ್ಯವಸ್ಥಿತ ಸಂಚು ರೂಪಿಸಿ ಯಶಸ್ವಿಗೊಂಡಿದ್ದಾರೆ – ಸಿಎಂ ಯಡಿಯೂರಪ್ಪಚುನಾವಣಾ ಆಯುಕ್ತರಿಗೆ ರಕ್ಷಣೆ ನೀಡುವ ಕಾನೂನು ರದ್ದುಗೊಳಿಸಿ – ಮಲ್ಲಿಕಾರ್ಜುನ ಖರ್ಗೆ ಆಗ್ರಹದಸರಾ ವೇಳೆ ಪೊಲೀಸರ ಲಾಠಿ ಏಟಿಗೆ 4 ವರ್ಷದ ಬಾಲಕ ಗಂಭೀರ – ICUನಲ್ಲಿ ಅಂತಿಮ ಹೋರಾಟಸೌದಿ ವಿಮಾನ ನಿಲ್ದಾಣದ ಮೇಲೆ ಭೀಕರ ದಾಳಿ – 8 ಮಂದಿಗೆ ಗಾಯ, ಇಬ್ಬರ ಅಂತ್ಯನಂದಿಧ್ವಜ ಪೂಜೆಗೆ ಸಚಿವರಿಗೆ ಅವಕಾಶ ನಿರಾಕರಿಸಿದ ಅಧಿಕಾರಿಗಳ ವಿರುದ್ಧ ತನಿಖೆಗೆ ಆದೇಶ: ಮುಖ್ಯಮಂತ್ರಿ ಡಿ ಕೆ ಶಿವಕುಮಾರ್‌300 ವರ್ಷಗಳಷ್ಟು ಹಳೆಯ ಐತಿಹಾಸಿಕ ರೇಸ್‌ಕೋರ್ಸ್ ಮಸೀದಿಯ ವಿದ್ಯುತ್ ಹಾಗೂ ನೀರು ಸಂಪರ್ಕ ಕಡಿತ: ತುರ್ತು ರಕ್ಷಣೆ ಕೋರಿದ ದೆಹಲಿ ವಕ್ಫ್ ಮಂಡಳಿತಿಹಾರ್ ಜೈಲಿನಿಂದ ಬಿಡುಗಡೆಯಾದ ಬೆನ್ನಲ್ಲೇ ಸೌರವ್ ದಾಸ್ ಹಾಗೂ ಅಶೋತ್ ರಾಂಕಾಗೆ ದೆಹಲಿ ಅಪರಾಧ ವಿಭಾಗದಿಂದ ಸಮನ್ಸ್

ರೈತರ ಮೇಲೆ ವಿನಾಕಾರಣ ಎಫ್ಐಆರ್ ಹಾಕಿದ್ದಾರೆ, ಮೊದಲು ನನ್ನನ್ನು ಬಂಧಿಸಿ – ಎಚ್‌.ಡಿ ಕುಮಾರಸ್ವಾಮಿ

ರರಮೇಶ್‌ ಹಾಸನ್‌

ರಮೇಶ್‌ ಹಾಸನ್‌ ದೇಶ, ರಾಜಕೀಯ, ರಾಜ್ಯ

• 1 ನಿಮಿಷದ ಓದು

ರೈತರ ಮೇಲೆ ವಿನಾಕಾರಣ ಎಫ್ಐಆರ್ ಹಾಕಿದ್ದಾರೆ, ಮೊದಲು ನನ್ನನ್ನು ಬಂಧಿಸಿ – ಎಚ್‌.ಡಿ ಕುಮಾರಸ್ವಾಮಿ

ನವದೆಹಲಿ : ಬಿಡದಿಯ ಮಂಡಲಹಳ್ಳಿ ಗ್ರಾಮದ ರೈತರ ಮೇಲೆ ಎಫ್ಐಆರ್ ದಾಖಲಿಸಿರುವ ಪೊಲೀಸರ ಕ್ರಮವನ್ನು ಖಂಡಿಸಿದ ಕೇಂದ್ರ ಸಚಿವ ಎಚ್‍.ಡಿ.ಕುಮಾರಸ್ವಾಮಿ, ನಾಡಿದ್ದು ಆ ಗ್ರಾಮಕ್ಕೆ ನಾನು ಹೋಗುತ್ತೇನೆ. ತಾಕತ್ತಿದ್ದರೆ ನನ್ನ ವಿರುದ್ಧ ಎಫ್ಐಆರ್ ದಾಖಲಿಸಲಿ ಎಂದು ಸವಾಲು ಹಾಕಿದರು.ನವದೆಹಲಿಯಲ್ಲಿ ಮಾತನಾಡಿದ ಅವರು, ಸಂಬಂಧವಿಲ್ಲದವರು ಕೊಟ್ಟ ದೂರಿನ ಮೇರೆಗೆ ರೈತರ ಮೇಲೆ ವಿನಾಕಾರಣ ಎಫ್ಐಆರ್ ಹಾಕಿದ್ದಾರೆ. ಅಕ್ರಮವಾಗಿ ಜಮೀನಿಗೆ ಸರ್ವೆ ಮಾಡಲು ಬಂದಾಗ ರೈತರು ಸಹಜವಾಗಿ ಆಕ್ರೋಶ ವ್ಯಕ್ತಪಡಿಸಿದ್ದಾರೆ ಎಂದು ಹೇಳಿದರು.ಸರ್ಕಾರದ ಚಿತಾವಣೆಯಿಂದಲೇ ಅಧಿಕಾರಿಗಳು ಸರ್ವೆಗೆ ಬಂದಿದ್ದಾರೆ. ಮುಖ್ಯಮಂತ್ರಿಗೆ ಇಷ್ಟೊಂದು ಹಟ ಏಕೆ ಎಂಬುದೇ ಅರ್ಥವಾಗುತ್ತಿಲ್ಲ. ರೈತರ ಮೇಲೆ ಎರಡು ಎಫ್ಐಆರ್‌ಗಳನ್ನು ಹಾಕಿದ್ದಾರೆ. ಅವರಿಗೆ ಧೈರ್ಯವಿದ್ದರೆ ನನ್ನ ವಿರುದ್ಧ ಪ್ರಕರಣ ಹಾಕಲಿ. ನಾನೇ ಚಿತಾವಣೆ ಮಾಡುತ್ತಿದ್ದೇನೆ ಎಂದು ಕೆಲವರು ಹೇಳುತ್ತಿದ್ದಾರೆ. ನನ್ನನ್ನೇ ಮೊದಲ ಆರೋಪಿಯನ್ನಾಗಿ ಮಾಡಿ ಎಂದರು.

ಊರಿನಲ್ಲಿ ಇಲ್ಲದವರು, ದೆಹಲಿಗೆ ಬಂದಿದ್ದವರ ಮೇಲೂ ಪ್ರಕರಣ ದಾಖಲಿಸಿದ್ದಾರೆ. ಇಂತಹ ಬೆದರಿಕೆ ಮತ್ತು ಪ್ರಕರಣಗಳಿಗೆ ಹೆದರುವ ಪ್ರಶ್ನೆಯೇ ಇಲ್ಲ. ರೈತರು ಶಾಂತಿಯುತವಾಗಿ ಪ್ರತಿಭಟನೆ ಮುಂದುವರಿಸಬೇಕು. ನ್ಯಾಯಾಲಯದ ಮುಂದೆ ನಾವೆಲ್ಲ ಹೋರಾಟ ಮಾಡೋಣ ಎಂದು ಅವರು ಹೇಳಿದರು. ಬಿಡದಿ ಟೌನ್‌ಶಿಪ್‌ ವಿವಾದ ತಾರಕಕ್ಕೇರುತ್ತಿದ್ದಂತೆ, ಪೊಲೀಸ್‌ ಇನ್ಸ್‌ಪೆಕ್ಟರ್‌ ರಮೇಶ್‌ ಮತ್ತು ರೈತರ ದಾಳಿಯಲ್ಲಿ ಜಖಂಗೊಂಡ ಇನ್ನೊವಾ ಕಾರು ಚಾಲಕ ಸಮೀರ್‌ ನೀಡಿದ ದೂರಿನ ಅನ್ವಯ 2 ಪ್ರತ್ಯೇಕ ಪ್ರಕರಣಗಳು ದಾಖಲಾಗಿವೆ. ಒಟ್ಟು 22ಕ್ಕೂ ಹೆಚ್ಚು ಸೆಕ್ಷನ್‌ ದಾಖಲಿಸಲಾಗಿದೆ.

ಇವುಗಳಲ್ಲಿ ಪ್ರಮುಖವಾಗಿ ಬಿಎನ್‌ಎಸ್‌ ಸೆಕ್ಷನ್‌ 109(1) ಕೊಲೆ ಯತ್ನ, ಸೆಕ್ಷನ್‌ 118(1) ಅಪಾಯಕಾರಿ ಆಯುಧಗಳಿಂದ ತೀವ್ರ ಗಾಯಗೊಳಿಸುವುದು, ಸರ್ಕಾರಿ ನೌಕರನ ಕರ್ತವ್ಯಕ್ಕೆ ಅಡ್ಡಿ ಹಾಗೂ ಹಲ್ಲೆಯಂತಹ ಜಾಮೀನು ರಹಿತ ಅಪರಾಧದ ಸೆಕ್ಷನ್‌ ಸೇರಿಸಲಾಗಿದೆ. ಇನ್ನು, ಮಂಡಲಹಳ್ಳಿ ಗಲಾಟೆಗೆ ಸಂಬಂಧಿಸಿದಂತೆ ಎಫ್‌ಐಆರ್‌ ದಾಖಲಿಸಿಕೊಂಡಿರುವ ಪೊಲೀಸರು ಸದ್ಯ ಯಾವ ರೈತರನ್ನೂ ಬಂಧಿಸಿಲ್ಲ.

ವಿಷಯಗಳು: #karnataka #news #state politics
ರರಮೇಶ್‌ ಹಾಸನ್‌

ರಮೇಶ್‌ ಹಾಸನ್‌

Peepal Media · ದೇಶ ವಿಭಾಗ

ಸಂಬಂಧಿತ ಸುದ್ದಿಗಳು