ಮುಖ್ಯ ವಿಷಯಕ್ಕೆ ತೆರಳಿ
Peepal Media
ತಾಜಾ ಸುದ್ದಿ
●ಈಸಕ್ಕಿ ಆಸೆಯನ್ನೂ ಮೀರಿದ ಆಯ್ದಕ್ಕಿ ಲಕ್ಕಮ್ಮ●ಗಾಜಾ ಸ್ಮಶಾನದ ಮೇಲೆ ಮತ್ತೆ ಅರಳುತ್ತಾ ನೆತನ್ಯಾಹು ಕುರ್ಚಿ?●ಅರುಣಾಚಲದಲ್ಲಿ ಚೀನಾ ಸೈನಿಕರೊಂದಿಗೆ ಮುಖಾಮುಖಿ: ಕೇಂದ್ರದ ಮೌನವನ್ನು ಪ್ರಶ್ನಿಸಿದ ಕಾಂಗ್ರೆಸ್‌ನ ಜೈರಾಮ್ ರಮೇಶ್●ಕಡತಗಳ ವಿಲೇವಾರಿ ಪ್ರಕ್ರಿಯೆ ಬದಲಾವಣೆ: ಚುನಾವಣಾ ಆಯುಕ್ತರಿಂದ ಕ್ಯಾಬಿನೆಟ್‌ ಕಾರ್ಯದರ್ಶಿಗೆ ಆಕ್ಷೇಪಣಾ ಪತ್ರ●ಮೋದಿ–ಅದಾನಿ ಕುರಿತ ಸಾಕ್ಷ್ಯಚಿತ್ರ ಹಂಚಿಕೊಂಡ ರಾಜ್‌ ಠಾಕ್ರೆ; ತೆಗೆದುಹಾಕುವಂತೆ ಸೂಚನೆಗಳ ನಡುವೆ ಮುಂದುವರೆದ ಚರ್ಚೆ●ಮಂಡ್ಯದಲ್ಲಿ ARAI ಪರೀಕ್ಷಾ ಕೇಂದ್ರಗಳಿಗೆ ಭೂಮಿ ಹಂಚಿಕೆ ವಿಳಂಬ: ರಾಜ್ಯ ಸರ್ಕಾರಕ್ಕೆ ಎಚ್‌.ಡಿ. ಕುಮಾರಸ್ವಾಮಿ ಪತ್ರ●ರಾಷ್ಟ್ರೀಯತೆಯ ಪಾಠ ನನಗೆ ಬೇಕಿಲ್ಲ; ನಮ್ಮ ಗುರಿ ಆಡಳಿತ, ಸಾಮಾಜಿಕ ಜಾಲತಾಣದ ಪ್ರಚಾರವಲ್ಲ: ಕೆ. ಅಣ್ಣಾಮಲೈ●ಕೇವಲ ಮದುವೆಗಾಗಿ ಧರ್ಮಾಂತರವಾಗುವುದನ್ನು ಒಪ್ಪಲು ಸಾಧ್ಯವಿಲ್ಲ: ಬಾಂಬೆ ಹೈಕೋರ್ಟ್‌●ಇನ್ನು ನೋಂದಾಯಿತ ಸಿಮ್‌ ಇದ್ದರೆ ಮಾತ್ರ ವಾಟ್ಸ್‌ಆ್ಯಪ್‌ ಬಳಕೆ ಸಾಧ್ಯ: ಜನವರಿ 1, 2027ರಿಂದ ಹೊಸ ನಿಯಮ ಜಾರಿ●ಈ-ಮುದ್ರ ಡಿಜಿಟಲ್‌ ಪ್ರಮಾಣಪತ್ರಗಳಲ್ಲಿ ಭದ್ರತಾ ಲೋಪ: ಜಾಗತಿಕ ತಂತ್ರಜ್ಞಾನ ವಲಯದಲ್ಲಿ ಆತಂಕ●ಹಾಸನ ಕಾಳಸಂತೆಗೆ ಪಡಿತರ ಅಕ್ಕಿ ಮಾರಾಟ ಯತ್ನ – ಕ್ವಿಂಟಲ್‌ ಗಟ್ಟಲೆ ಅಕ್ಕಿ, ರಾಗಿ ವಶ●ಸದ್ಯದಲ್ಲೆ ಕಬ್ಬು ಬೆಳೆಗಾರರ ಸಭೆ ಕರೆದಿದ್ದೇನೆ – ಸಿಎಂ ಡಿ.ಕೆ ಶಿವಕುಮಾರ್●ರಾಜ್ಯದಲ್ಲಿ ಐದು ದಿನಗಳಲ್ಲಿ ಮಳೆ ಸಾಧ್ಯತೆ – ಹವಾಮಾನ ಇಲಾಖೆ ಮುನ್ಸೂಚನೆ●ಸಿದ್ದರಾಮಯ್ಯ ಅವರನ್ನು ಅಧಿಕಾರದಿಂದ ಇಳಿಸಲು ವ್ಯವಸ್ಥಿತ ಸಂಚು ರೂಪಿಸಿ ಯಶಸ್ವಿಗೊಂಡಿದ್ದಾರೆ – ಸಿಎಂ ಯಡಿಯೂರಪ್ಪ●ಚುನಾವಣಾ ಆಯುಕ್ತರಿಗೆ ರಕ್ಷಣೆ ನೀಡುವ ಕಾನೂನು ರದ್ದುಗೊಳಿಸಿ – ಮಲ್ಲಿಕಾರ್ಜುನ ಖರ್ಗೆ ಆಗ್ರಹ●ದಸರಾ ವೇಳೆ ಪೊಲೀಸರ ಲಾಠಿ ಏಟಿಗೆ 4 ವರ್ಷದ ಬಾಲಕ ಗಂಭೀರ – ICUನಲ್ಲಿ ಅಂತಿಮ ಹೋರಾಟ●ಸೌದಿ ವಿಮಾನ ನಿಲ್ದಾಣದ ಮೇಲೆ ಭೀಕರ ದಾಳಿ – 8 ಮಂದಿಗೆ ಗಾಯ, ಇಬ್ಬರ ಅಂತ್ಯ●ನಂದಿಧ್ವಜ ಪೂಜೆಗೆ ಸಚಿವರಿಗೆ ಅವಕಾಶ ನಿರಾಕರಿಸಿದ ಅಧಿಕಾರಿಗಳ ವಿರುದ್ಧ ತನಿಖೆಗೆ ಆದೇಶ: ಮುಖ್ಯಮಂತ್ರಿ ಡಿ ಕೆ ಶಿವಕುಮಾರ್‌●300 ವರ್ಷಗಳಷ್ಟು ಹಳೆಯ ಐತಿಹಾಸಿಕ ರೇಸ್‌ಕೋರ್ಸ್ ಮಸೀದಿಯ ವಿದ್ಯುತ್ ಹಾಗೂ ನೀರು ಸಂಪರ್ಕ ಕಡಿತ: ತುರ್ತು ರಕ್ಷಣೆ ಕೋರಿದ ದೆಹಲಿ ವಕ್ಫ್ ಮಂಡಳಿ●ತಿಹಾರ್ ಜೈಲಿನಿಂದ ಬಿಡುಗಡೆಯಾದ ಬೆನ್ನಲ್ಲೇ ಸೌರವ್ ದಾಸ್ ಹಾಗೂ ಅಶೋತ್ ರಾಂಕಾಗೆ ದೆಹಲಿ ಅಪರಾಧ ವಿಭಾಗದಿಂದ ಸಮನ್ಸ್

ದೇಶದಲ್ಲಿನ ಯಾವ ದುರಂತಕ್ಕೆ ಬಿಜೆಪಿ ನಾಯಕರು ಹೊಣೆ ಹೊತ್ತಿದ್ದಾರೆ? : ಗಂಭೀರ ಪ್ರಶ್ನೆಗಳನ್ನು ಎತ್ತಿದ ಸಿಎಂ ಸಿದ್ದರಾಮಯ್ಯ

PPeepal Media Desk

Peepal Media Desk • ಮೀಡಿಯಾ, ರಾಜಕೀಯ, ರಾಜ್ಯ

• 2 ನಿಮಿಷದ ಓದು

ದೇಶದಲ್ಲಿನ ಯಾವ ದುರಂತಕ್ಕೆ ಬಿಜೆಪಿ ನಾಯಕರು ಹೊಣೆ ಹೊತ್ತಿದ್ದಾರೆ? : ಗಂಭೀರ ಪ್ರಶ್ನೆಗಳನ್ನು ಎತ್ತಿದ ಸಿಎಂ ಸಿದ್ದರಾಮಯ್ಯ

ಚಿನ್ನಸ್ವಾಮಿ ಸ್ಟೇಡಿಯಂ ಬಳಿ ನಡೆದಿದ್ದ ಕಾಲ್ತುಳಿತ ಪ್ರಕರಣಕ್ಕೆ ಸಂಬಂಧಿಸಿದಂತೆ ನಮ್ಮ ರಾಜೀನಾಮೆ ಕೇಳುವ ಮೊದಲು ಇಂತಹದ್ದೇ ಅವಘಡಗಳು ನಡೆದಿದ್ದ ಸಂದರ್ಭದಲ್ಲಿ ರಾಜೀನಾಮೆ ನೀಡಿದ್ದ ಬಿಜೆಪಿ ನಾಯಕರ ಪಟ್ಟಿಯನ್ನು ಬಿಡುಗಡೆ ಮಾಡುವಂತೆ ರಾಜ್ಯದ ಬಿಜೆಪಿ ನಾಯಕರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಮನವಿ ಮಾಡಿದ್ದಾರೆ.

‘ಚಿನ್ನಸ್ವಾಮಿ ಸ್ಟೇಡಿಯಂ ಬಳಿ ನಡೆದಿರುವುದು ಒಂದು ಅಪಘಾತ. ಒಂದು ಜವಾಬ್ದಾರಿಯುತ ಸರ್ಕಾರವಾಗಿ ಆ ಘಟನೆಯ ಹೊಣೆಯನ್ನು ನಾವು ಹೊತ್ತಿದ್ದೇವೆ. ಬೆಂಗಳೂರು ನಗರ ಪೊಲೀಸ್ ಕಮಿಷನರ್ ಸೇರಿದಂತೆ ಹಿರಿಯ ಪೊಲೀಸ್ ಅಧಿಕಾರಿಗಳನ್ನು ಅಮಾನತುಗೊಳಿಸಿದ್ದೇವೆ, ರಾಜ್ಯ ಗುಪ್ತಚರ ಇಲಾಖೆಯ ಮುಖ್ಯಸ್ಥರನ್ನು ವರ್ಗಾವಣೆ ಮಾಡಿದ್ದೇವೆ. ನನ್ನ ರಾಜಕೀಯ ಕಾರ್ಯದರ್ಶಿಯನ್ನು ಸೇವೆಯಿಂದ ಬಿಡುಗಡೆಗೊಳಿಸಿದ್ದೇನೆ. ಈ ಪ್ರಕರಣದ ಸಮಗ್ರ ತನಿಖೆಗೆ ನಿವೃತ್ತ ನ್ಯಾಯಾಧೀಶರಾದ ಜಾನ್ ಮೈಕೆಲ್ ಕುನ್ಹಾ ಅವರ ನೇತೃತ್ವದಲ್ಲಿ ಏಕಸದಸ್ಯ ಆಯೋಗವನ್ನೂ ರಚಿಸಿದ್ದೇವೆ’ ಎಂದು ಘಟನೆ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ಕೈಗೊಂಡ ಕ್ರಮಗಳ ಬಗ್ಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರಸ್ತಾಪಿಸಿದ್ದಾರೆ.

‘ಇಷ್ಟೆಲ್ಲ ಕ್ರಮಕೈಗೊಂಡ ನಂತರವೂ ರಾಜ್ಯದ ಬಿಜೆಪಿ ನಾಯಕರು ಪ್ರತಿಭಟನೆ ನಡೆಸುತ್ತಿರುವುದು ರಾಜಕೀಯ ದುರುದ್ದೇಶದಿಂದ ಹೊರತು ಜನರ ಬಗೆಗಿನ ಕಾಳಜಿಯಿಂದ ಅಲ್ಲ ಎನ್ನುವುದು ಸ್ಪಷ್ಟವಾಗಿದೆ. ಹೆಣಗಳ ಮೇಲಿನ ರಾಜಕೀಯ ಬಿಜೆಪಿ ಪಾಲಿಗೆ ಹೊಸದೇನಲ್ಲ. ಅಪಘಾತ, ಹತ್ಯೆ, ದೌರ್ಜನ್ಯಗಳು ನಡೆದ ತಕ್ಷಣ ಸತ್ತ ಜೀವಗಳನ್ನು ಹುಡುಕಿಕೊಂಡು ಹೋಗುವ ರಣಹದ್ದುಗಳಂತೆ ಎರಗಿ ಬೀಳುವುದು ಬಿಜೆಪಿಯ ರಕ್ತದಲ್ಲಿಯೇ ಇದೆ. ತಮ್ಮ ಊಟದೆಲೆಯ ಮೇಲೆ ಆನೆ ಸತ್ತುಬಿದ್ದಿದ್ದರೂ ಎದುರಿಗಿದ್ದವರ ಎಲೆ ಮೇಲೆ ಸತ್ತು ಬಿದ್ದ ನೊಣದ ಕಡೆ ಬೊಟ್ಟುಮಾಡುವುದು ಬಿಜೆಪಿಯ ಹಳೆಯ ಚಾಳಿ ಎನ್ನುವುದನ್ನು ರಾಜ್ಯದ ಜನತೆ ಅರ್ಥಮಾಡಿಕೊಂಡಿದ್ದಾರೆ’ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.

ಬಿಜೆಪಿ ಆತ್ಮವಂಚನೆ ಬಯಲಿಗೆ
‘ಪ್ರತಿಯೊಂದು ಅಪಘಾತದ ಹಿಂದೆ ಸಾವು-ನೋವಿಗೆ ಈಡಾದವರ ಕುಟುಂಬದ ದು:ಖ ಮತ್ತು ಸಂಕಟ ಇರುವುದನ್ನು ನಾವು ಅರ್ಥಮಾಡಿಕೊಂಡಿದ್ದೇವೆ. ಇದೇ ಕಾರಣಕ್ಕಾಗಿ ನಾವು ಇಂತಹ ಪ್ರಕರಣಗಳನ್ನು ರಾಜಕೀಯಕ್ಕೆ ಬಳಸುವುದಿಲ್ಲ. ಹೀಗಿದ್ದರೂ ರಾಜ್ಯದ ಬಿಜೆಪಿ ನಾಯಕರು ಮತ್ತೆ ಮತ್ತೆ ಇಂತಹ ಪ್ರಕರಣಗಳನ್ನು ಕೆದಕಿ ಕೆದಕಿ ಜನರನ್ನು ಪ್ರಚೋದಿಸುತ್ತಿರುವ ಹಿನ್ನೆಲೆಯಲ್ಲಿ ಇವರ ಆತ್ಮವಂಚಕ ನಡವಳಿಕೆಯನ್ನು ಬಯಲು ಮಾಡುವ ಉದ್ದೇಶದಿಂದ ಬಿಜೆಪಿ ಆಡಳಿತದಲ್ಲಿನ ಕೆಲವು ಪ್ರಕರಣಗಳನ್ನು ರಾಜ್ಯದ ಜನತೆಯ ಗಮನಕ್ಕೆ ತರಲು ಇಷ್ಟಪಡುತ್ತೇನೆ’ ಎಂದು ಸಿದ್ದರಾಮಯ್ಯ ಹೇಳಿದ್ದಾರೆ.

2002ರ ಗುಜರಾತ್ ಹತ್ಯಾಕಾಂಡದಲ್ಲಿ ನರೇಂದ್ರ ಮೋದಿ ರಾಜೀನಾಮೆ ನೀಡಿದ್ದರೇ?
‘2002ರಲ್ಲಿ ಗುಜರಾತ್ ರಾಜ್ಯದಲ್ಲಿ ನಡೆದ ಹತ್ಯಾಕಾಂಡದಲ್ಲಿ ಎಲ್ಲ ಧರ್ಮಗಳಿಗೆ ಸೇರಿದ್ದ ಅಂದಾಜು ಎರಡು ಸಾವಿರ ಅಮಾಯಕರು ಪ್ರಾಣ ಕಳೆದುಕೊಂಡರು. ಆ ಘಟನೆಯ ಹೊಣೆಹೊತ್ತು ರಾಜೀನಾಮೆ ನೀಡುವಂತೆ ಅವರದ್ದೇ ಪಕ್ಷದ ಪ್ರಧಾನಿ ಅಟಲಬಿಹಾರಿ ವಾಜಪೇಯಿ ಸೂಚನೆ ನೀಡಿದರೂ ಮುಖ್ಯಮಂತ್ರಿಯಾಗಿದ್ದ ನರೇಂದ್ರ ಮೋದಿಯವರು ರಾಜೀನಾಮೆ ನೀಡಿಲ್ಲ ಮಾತ್ರವಲ್ಲ, ಇಲ್ಲಿಯ ವರೆಗೆ ಕನಿಷ್ಠ ವಿಷಾದವನ್ನೂ ಸೂಚಿಸಿಲ್ಲ. ನಮ್ಮ ರಾಜೀನಾಮೆ ಕೇಳುವವರು ಮೊದಲು ಇದಕ್ಕೆ ಉತ್ತರಿಸಿ ಎಂದು ಸಿದ್ದರಾಮಯ್ಯ ಪ್ರಶ್ನಿಸಿದ್ದಾರೆ.

ಪಹಲ್ಗಾಮ್ ದಾಳಿಗೆ ನೆಹರೂ ಕಾರಣರೇ?
ಕಳೆದ ಏಪ್ರಿಲ್ ತಿಂಗಳಲ್ಲಿ ಪಹಲ್ಗಾಮ್‌ನಲ್ಲಿ ಪಾಕ್ ಉಗ್ರಗಾಮಿಗಳು ನಡೆಸಿದ್ದ ಹತ್ಯಾಕಾಂಡದಲ್ಲಿ 26 ಭಾರತೀಯರು ಪ್ರಾಣ ಕಳೆದುಕೊಂಡರು. ಈ ಘಟನೆಯ ಹೊಣೆ ಹೊತ್ತು ಪ್ರಧಾನಿ ರಾಜೀನಾಮೆ ನೀಡಬೇಕೆಂದು ನಮ್ಮ ಪಕ್ಷ ಒತ್ತಾಯಿಸಿಲ್ಲ. ಈ ಘಟನೆಯ ಚರ್ಚೆಗೆ ಕನಿಷ್ಠ ಸಂಸತ್ ನ ವಿಶೇಷ ಅಧಿವೇಶನ ಕರೆಯಬೇಕೆಂಬ ನಮ್ಮ ಪಕ್ಷದ ಬೇಡಿಕೆಯನ್ನೂ ಪ್ರಧಾನಿಯವರು ಒಪ್ಪಿಕೊಂಡಿಲ್ಲ. ದೇಶಕ್ಕೆಲ್ಲ ಸಿಂಧೂರ ಹಂಚಲು ಹೊರಟಿರುವ ಪ್ರಧಾನಿಯವರಿಗೆ ಇಲ್ಲಿಯ ವರೆಗೆ 26 ಅಮಾಯಕರ ಸಾವಿಗೆ ಕಾರಣರಾದ ನಾಲ್ಕು ಮಂದಿ ದುರುಳರು ಯಾರು ಎನ್ನುವುದನ್ನು ಪತ್ತೆ ಹಚ್ಚಲಾಗಿಲ್ಲ. ಇದು ಕೇಂದ್ರ ಸರ್ಕಾರದ ವೈಫಲ್ಯ ಅಲ್ಲವೇ? ಈ ವೈಫಲ್ಯದ ಹೊಣೆಯನ್ನು ಯಾರು ಹೊರಬೇಕು? ಪಂಡಿತ ಜವಾಹರಲಾಲ್ ನೆಹರೂ ಅವರಾ? ರಾಹುಲ್ ಗಾಂಧಿಯವರಾ? ಇಲ್ಲವೇ ಪ್ರಧಾನಿ ನರೇಂದ್ರ ಮೋದಿಯವರೇ? ಎಂದು ಬಿಜೆಪಿಗೆ ಸಿಎಂ ಸಿದ್ದರಾಮಯ್ಯ ತಿರುಗೇಟು ನೀಡಿದ್ದಾರೆ.

ಮಣಿಪುರ ಹಿಂಸಾಚಾರಕ್ಕೆ ಕೇಂದ್ರ ಗೃಹ ಸಚಿವರ ತಲೆದಂಡ ಯಾವಾಗ?
ಕಳೆದ ಎರಡು ವರ್ಷಗಳಿಂದ ದೇಶದ ಈಶಾನ್ಯ ಭಾಗದ ಮಣಿಪುರ ಹಿಂಸೆಯ ಬೆಂಕಿಯಲ್ಲಿ ಹೊತ್ತಿ ಉರಿಯುತ್ತಿದೆ. ನೂರಾರು ಮಂದಿ ಸಾವಿಗೀಡಾಗಿದ್ದಾರೆ. ಹೀಗಿದ್ದರೂ ಆ ರಾಜ್ಯದ ಬಿಜೆಪಿ ಮುಖ್ಯಮಂತ್ರಿ ಬಿರೇನ್ ಸಿಂಗ್ 20 ತಿಂಗಳ ಕಾಲ ಕುರ್ಚಿಗೆ ಅಂಟಿಕೂತಿದ್ದರು. ಕೊನೆಗೂ ಸುಪ್ರೀಂ ಕೋರ್ಟ್ ಚಾಟಿ ಬೀಸಿದ ನಂತರ ರಾಜೀನಾಮೆ ನೀಡಿದ್ದರು. ಈಗಲೂ ಅಲ್ಲಿ ಹಿಂಸಾಚಾರ ಮುಂದುವರಿದಿದೆ. ಇದರ ಹೊಣೆಯನ್ನು ಕೇಂದ್ರ ಗೃಹಸಚಿವರು ಹೊರುವುದು ಬೇಡವೇ? ಎಂದು ಸಿದ್ದರಾಮಯ್ಯ ಕಿಡಿಕಾರಿದ್ದಾರೆ

ಗುಜರಾತ್ ಸೇತುವೆ ದುರಂತಕ್ಕೆ ಹೊಣೆ ಯಾರು?
ಗುಜರಾತ್ ನ ಮೋರ್ಬಿ ಸೇತುವೆ ಕುಸಿದು ಬಿದ್ದು 140 ಮಂದಿ ಮೃತಪಟ್ಟಿದ್ದರು. ಈ ವರ್ಷದ ಜನವರಿ ತಿಂಗಳಲ್ಲಿ ಮಹಾಕುಂಭಮೇಳದದಲ್ಲಿ  30 ಯಾತ್ರಿಕರು ಪ್ರಾಣ ಕಳೆದುಕೊಂಡರು. ಆ ರಾಜ್ಯಗಳಲ್ಲಿ ಮುಖ್ಯಮಂತ್ರಿಯಾಗಿರುವವರು ಬಿಜೆಪಿಗೆ ಸೇರಿದವರಲ್ಲವೇ? ಇವರು ರಾಜೀನಾಮೆ ನೀಡುವುದು ಬಿಡಿ, ಆ ಘಟನೆಗಳ ಬಗ್ಗೆ ಇಲ್ಲಿಯ ವರೆಗೆ ಸರಿಯಾದ ತನಿಖೆಯನ್ನೇ ಅಲ್ಲಿನ ಸರ್ಕಾರ ನಡೆಸಿಲ್ಲ. ಹೀಗಿರುವಾಗ ನಮ್ಮ ರಾಜೀನಾಮೆ ಕೇಳಲು ರಾಜ್ಯದ ಬಿಜೆಪಿ ನಾಯಕರಿಗೆ ಯಾವ ನೈತಿಕತೆ ಇದೆ? ಎಂದು ಸಿದ್ದರಾಮಯ್ಯ ಪ್ರಶ್ನಿಸಿದ್ದಾರೆ

ನಮ್ಮ ಸರ್ಕಾರ ರಾಜ್ಯದ ಏಳು ಕೋಟಿ ಜನರಿಗೆ ಉತ್ತರದಾಯಿಯಾಗಿದೆ. ಈ ಕಾರಣಕ್ಕಾಗಿ ಕಾಲ್ತುಳಿತ ಪ್ರಕರಣದಲ್ಲಿ ಕರ್ತವ್ಯಭ್ರಷ್ಟರಾಗಿದ್ದಾರೆಂದು ಮೇಲ್ನೋಟಕ್ಕೆ ಅನಿಸಿದವರ ವಿರುದ್ದ ಕ್ರಮಕೈಗೊಳ್ಳಲಾಗಿದೆ. ಉಳಿದಂತೆ ಇದರ ಬಗ್ಗೆ ಆಮೂಲಾಗ್ರವಾದ ಮತ್ತು ನಿಷ್ಪಕ್ಷಪಾತ ತನಿಖೆಗೆ ನಿವೃತ್ತ ನ್ಯಾಯಾಧೀಶರ ನೇತೃತ್ವದಲ್ಲಿ ತನಿಖಾ ಆಯೋಗ ರಚಿಸಲಾಗಿದೆ. ಆಯೋಗ ನೀಡುವ ವರದಿಯನ್ನು ಆಧರಿಸಿ ತಪ್ಪಿತಸ್ಥರ ವಿರುದ್ದ ಯಾವುದೇ ಮುಲಾಜಿಲ್ಲದೆ ಕ್ರಮಕೈಗೊಳ್ಳಲಾಗುವುದು.

ರಾಜ್ಯ ಬಿಜೆಪಿ ನಾಯಕರು ಇನ್ನಾದರೂ ಪ್ರತಿಭಟನೆಯಂತಹ ಬೀದಿ ಪ್ರಹಸನವನ್ನು ಕೈಬಿಟ್ಟು ಆತ್ಮಸಾಕ್ಷಿಗೆ ತಕ್ಕಂತೆ ನಡೆದುಕೊಳ್ಳಲಿ ಎಂದು ಸಿದ್ದರಾಮಯ್ಯನವರು ತಿಳಿಸಿದ್ದಾರೆ.

PPeepal Media Desk

Peepal Media Desk

Peepal Media · ಮೀಡಿಯಾ ವಿಭಾಗ

ಸಂಬಂಧಿತ ಸುದ್ದಿಗಳು