ಮುಖ್ಯ ವಿಷಯಕ್ಕೆ ತೆರಳಿ
Peepal Media
ತಾಜಾ ಸುದ್ದಿ
ಈಸಕ್ಕಿ ಆಸೆಯನ್ನೂ ಮೀರಿದ ಆಯ್ದಕ್ಕಿ ಲಕ್ಕಮ್ಮಗಾಜಾ ಸ್ಮಶಾನದ ಮೇಲೆ ಮತ್ತೆ ಅರಳುತ್ತಾ ನೆತನ್ಯಾಹು ಕುರ್ಚಿ?ಅರುಣಾಚಲದಲ್ಲಿ ಚೀನಾ ಸೈನಿಕರೊಂದಿಗೆ ಮುಖಾಮುಖಿ: ಕೇಂದ್ರದ ಮೌನವನ್ನು ಪ್ರಶ್ನಿಸಿದ ಕಾಂಗ್ರೆಸ್‌ನ ಜೈರಾಮ್ ರಮೇಶ್ಕಡತಗಳ ವಿಲೇವಾರಿ ಪ್ರಕ್ರಿಯೆ ಬದಲಾವಣೆ: ಚುನಾವಣಾ ಆಯುಕ್ತರಿಂದ ಕ್ಯಾಬಿನೆಟ್‌ ಕಾರ್ಯದರ್ಶಿಗೆ ಆಕ್ಷೇಪಣಾ ಪತ್ರಮೋದಿ–ಅದಾನಿ ಕುರಿತ ಸಾಕ್ಷ್ಯಚಿತ್ರ ಹಂಚಿಕೊಂಡ ರಾಜ್‌ ಠಾಕ್ರೆ; ತೆಗೆದುಹಾಕುವಂತೆ ಸೂಚನೆಗಳ ನಡುವೆ ಮುಂದುವರೆದ ಚರ್ಚೆಮಂಡ್ಯದಲ್ಲಿ ARAI ಪರೀಕ್ಷಾ ಕೇಂದ್ರಗಳಿಗೆ ಭೂಮಿ ಹಂಚಿಕೆ ವಿಳಂಬ: ರಾಜ್ಯ ಸರ್ಕಾರಕ್ಕೆ ಎಚ್‌.ಡಿ. ಕುಮಾರಸ್ವಾಮಿ ಪತ್ರರಾಷ್ಟ್ರೀಯತೆಯ ಪಾಠ ನನಗೆ ಬೇಕಿಲ್ಲ; ನಮ್ಮ ಗುರಿ ಆಡಳಿತ, ಸಾಮಾಜಿಕ ಜಾಲತಾಣದ ಪ್ರಚಾರವಲ್ಲ: ಕೆ. ಅಣ್ಣಾಮಲೈಕೇವಲ ಮದುವೆಗಾಗಿ ಧರ್ಮಾಂತರವಾಗುವುದನ್ನು ಒಪ್ಪಲು ಸಾಧ್ಯವಿಲ್ಲ: ಬಾಂಬೆ ಹೈಕೋರ್ಟ್‌ಇನ್ನು ನೋಂದಾಯಿತ ಸಿಮ್‌ ಇದ್ದರೆ ಮಾತ್ರ ವಾಟ್ಸ್‌ಆ್ಯಪ್‌ ಬಳಕೆ ಸಾಧ್ಯ: ಜನವರಿ 1, 2027ರಿಂದ ಹೊಸ ನಿಯಮ ಜಾರಿಈ-ಮುದ್ರ ಡಿಜಿಟಲ್‌ ಪ್ರಮಾಣಪತ್ರಗಳಲ್ಲಿ ಭದ್ರತಾ ಲೋಪ: ಜಾಗತಿಕ ತಂತ್ರಜ್ಞಾನ ವಲಯದಲ್ಲಿ ಆತಂಕಹಾಸನ ಕಾಳಸಂತೆಗೆ ಪಡಿತರ ಅಕ್ಕಿ ಮಾರಾಟ ಯತ್ನ – ಕ್ವಿಂಟಲ್‌ ಗಟ್ಟಲೆ ಅಕ್ಕಿ, ರಾಗಿ ವಶಸದ್ಯದಲ್ಲೆ ಕಬ್ಬು ಬೆಳೆಗಾರರ ಸಭೆ ಕರೆದಿದ್ದೇನೆ – ಸಿಎಂ ಡಿ.ಕೆ ಶಿವಕುಮಾರ್ರಾಜ್ಯದಲ್ಲಿ ಐದು ದಿನಗಳಲ್ಲಿ ಮಳೆ ಸಾಧ್ಯತೆ – ಹವಾಮಾನ ಇಲಾಖೆ ಮುನ್ಸೂಚನೆಸಿದ್ದರಾಮಯ್ಯ ಅವರನ್ನು ಅಧಿಕಾರದಿಂದ ಇಳಿಸಲು ವ್ಯವಸ್ಥಿತ ಸಂಚು ರೂಪಿಸಿ ಯಶಸ್ವಿಗೊಂಡಿದ್ದಾರೆ – ಸಿಎಂ ಯಡಿಯೂರಪ್ಪಚುನಾವಣಾ ಆಯುಕ್ತರಿಗೆ ರಕ್ಷಣೆ ನೀಡುವ ಕಾನೂನು ರದ್ದುಗೊಳಿಸಿ – ಮಲ್ಲಿಕಾರ್ಜುನ ಖರ್ಗೆ ಆಗ್ರಹದಸರಾ ವೇಳೆ ಪೊಲೀಸರ ಲಾಠಿ ಏಟಿಗೆ 4 ವರ್ಷದ ಬಾಲಕ ಗಂಭೀರ – ICUನಲ್ಲಿ ಅಂತಿಮ ಹೋರಾಟಸೌದಿ ವಿಮಾನ ನಿಲ್ದಾಣದ ಮೇಲೆ ಭೀಕರ ದಾಳಿ – 8 ಮಂದಿಗೆ ಗಾಯ, ಇಬ್ಬರ ಅಂತ್ಯನಂದಿಧ್ವಜ ಪೂಜೆಗೆ ಸಚಿವರಿಗೆ ಅವಕಾಶ ನಿರಾಕರಿಸಿದ ಅಧಿಕಾರಿಗಳ ವಿರುದ್ಧ ತನಿಖೆಗೆ ಆದೇಶ: ಮುಖ್ಯಮಂತ್ರಿ ಡಿ ಕೆ ಶಿವಕುಮಾರ್‌300 ವರ್ಷಗಳಷ್ಟು ಹಳೆಯ ಐತಿಹಾಸಿಕ ರೇಸ್‌ಕೋರ್ಸ್ ಮಸೀದಿಯ ವಿದ್ಯುತ್ ಹಾಗೂ ನೀರು ಸಂಪರ್ಕ ಕಡಿತ: ತುರ್ತು ರಕ್ಷಣೆ ಕೋರಿದ ದೆಹಲಿ ವಕ್ಫ್ ಮಂಡಳಿತಿಹಾರ್ ಜೈಲಿನಿಂದ ಬಿಡುಗಡೆಯಾದ ಬೆನ್ನಲ್ಲೇ ಸೌರವ್ ದಾಸ್ ಹಾಗೂ ಅಶೋತ್ ರಾಂಕಾಗೆ ದೆಹಲಿ ಅಪರಾಧ ವಿಭಾಗದಿಂದ ಸಮನ್ಸ್

ಬೇರೆ ಪಕ್ಷದ ನಾಯಕರ ನಡುವೆ ವಿವಾಹ ಸಂಬಂಧದ ಕಾರಣಕ್ಕೆ ಬಿಎಸ್ಪಿ ನಾಯಕನನ್ನು ಪಕ್ಷದಿಂದ ಉಚ್ಛಾಟಿಸಿದ ಮಾಜಿ ಸಿಎಂ ಮಾಯಾವತಿ

PPeepal Media Desk

Peepal Media Desk ಮೀಡಿಯಾ, ರಾಜಕೀಯ

• 1 ನಿಮಿಷದ ಓದು

ಬೇರೆ ಪಕ್ಷದ ನಾಯಕರ ನಡುವೆ ವಿವಾಹ ಸಂಬಂಧದ ಕಾರಣಕ್ಕೆ ಬಿಎಸ್ಪಿ ನಾಯಕನನ್ನು ಪಕ್ಷದಿಂದ ಉಚ್ಛಾಟಿಸಿದ ಮಾಜಿ ಸಿಎಂ  ಮಾಯಾವತಿ

ಎರಡು ಬೇರೆ ಬೇರೆ ಪಕ್ಷ ಎಂದ ಮಾತ್ರಕ್ಕೆ ಸಂಪೂರ್ಣ ವಿರೋಧಿಗಳು ಎಂದು ಸಾಮಾನ್ಯ ಜನರು ತಿಳಿದುಕೊಂಡಿರುವುದರ ನಡುವೆ ಹಲವು ರಾಜಕೀಯ ನಾಯಕರು ಪಕ್ಷ ಬೇಧ ಮರೆತು ಸಂಬಂಧ ಬೆಸೆದು ಮದುವೆ ಕಾರ್ಯಗಳ ನಡೆಸುವುದು ಇತ್ತೀಚಿನ ದಿನಗಳಲ್ಲಿ ಸರ್ವೇ ಸಾಮಾನ್ಯವಾಗಿದೆ. ಹೀಗಿರುವಾಗ ಉತ್ತರ ಪ್ರದೇಶದಲ್ಲಿ ಎರಡು ಬೇರೆ ಬೇರೆ ಪಕ್ಷಗಳ ನಾಯಕರ ಮಕ್ಕಳ ನಡುವೆ ಮದುವೆ ಕಾರ್ಯ ನಡೆದದ್ದನ್ನೇ ಗುರಿಯಾಗಿಸಿ ಪಕ್ಷದಿಂದಲೇ ಉಚ್ಛಾಟನೆ ಮಾಡಿದ ಘಟನೆ ನಡೆದಿದೆ.

ಸಮಾಜವಾದಿ ಪಕ್ಷದ (SP) ಶಾಸಕರೊಬ್ಬರ ಪುತ್ರಿಯೊಂದಿಗೆ ತಮ್ಮ ಮಗನ ವಿವಾಹವನ್ನು ಮಾಡಿದ ಬಹುಜನ ಸಮಾಜವಾದಿ ಪಕ್ಷದ (BSP) ಹಿರಿಯ ನಾಯಕ ಸುರೇಂದ್ರ ಸಾಗರ್ ಅವರನ್ನು ಬಿಎಸ್‌ಪಿ ಮುಖ್ಯಸ್ಥೆ ಮಾಯಾವತಿ ತಮ್ಮ ಪಕ್ಷದಿಂದಲೇ ಉಚ್ಛಾಟನೆ ಮಾಡಿ ಆದೇಶ ಹೊರಡಿಸಿದ್ದಾರೆ.

ಬರೇಲಿಯ ಬಿಎಸ್‌ಪಿ ಪ್ರಭಾವಿ ನಾಯಕ ಸುರೇಂದ್ರ ಸಾಗರ್ ಅವರ ಪುತ್ರ ಅಂಕುರ್ ವಿವಾಹ ಎಸ್ಪಿ ಶಾಸಕ ತ್ರಿಭುವನ್ ದತ್ ಅವರ ಪುತ್ರಿ ಕುಸುಮ್ ದತ್ ಜೊತೆಗೆ ನಡೆದಿತ್ತು. ಬಿಎಸ್ಪಿಯ ಬರೇಲಿ ವಿಭಾಗದ ಪ್ರಮುಖ ವ್ಯಕ್ತಿಯಾಗಿರುವ ಸುರೇಂದ್ರ ಸಾಗರ್ ಐದು ಬಾರಿ ರಾಂಪುರದ ಜಿಲ್ಲಾಧ್ಯಕ್ಷರಾಗಿ ಸೇವೆ ಸಲ್ಲಿಸಿದ್ದಾರೆ ಮತ್ತು ಕ್ಯಾಬಿನೆಟ್ ಸಚಿವರಿಗೆ ಸಮಾನವಾದ ಸ್ಥಾನವನ್ನು ಅಲಂಕರಿಸಿದ್ದಾರೆ. ಬಿಎಸ್ಪಿಯ ಮಾಜಿ ಶಾಸಕ ತ್ರಿಭುವನ್ ದತ್ ಈಗ ಅಂಬೇಡ್ಕರ್ ನಗರದ ಆಲಾಪುರ್ ವಿಧಾನಸಭಾ ಕ್ಷೇತ್ರದ ಶಾಸಕರಾಗಿದ್ದಾರೆ.

ಈ ಮದುವೆ ಕಾರ್ಯಕ್ರಮಕ್ಕೆ ನಿರೀಕ್ಷೆಯಂತೆ ತಮ್ಮ ಪಕ್ಷಗಳ ರಾಜಕೀಯ ನಾಯಕರನ್ನೂ ಆಹ್ವಾನಿಸಲಾಗಿತ್ತು. ಎಸ್ಪಿ ಮುಖ್ಯಸ್ಥ ಅಖಿಲೇಶ್ ಯಾದವ್ ದತ್ ಅವರ ನಿವಾಸಕ್ಕೆ ಭೇಟಿ ನೀಡಿದ ನಂತರ ಮದುವೆ ಹೆಚ್ಚು ಗಮನ ಸೆಳೆದಿತ್ತು. ಇದನ್ನೇ ಗುರಿಯಾಗಿಸಿದ ಬಿಎಸ್ಪಿ ಪಕ್ಷ ಬರೇಲಿಯ ಬಿಎಸ್‌ಪಿ ಪ್ರಭಾವಿ ನಾಯಕ ಸುರೇಂದ್ರ ಸಾಗರ್ ಅವರ ಉಚ್ಛಾಟನೆಗೆ ಪಕ್ಷವು ಶಿಸ್ತು ಉಲ್ಲಂಘನೆ ಮತ್ತು ಪಕ್ಷ ವಿರೋಧಿ ಚಟುವಟಿಕೆಗಳು’ ಎಂದು ಕಾರಣ ನೀಡಿದೆ.

ಪಕ್ಷ ತನ್ನನ್ನು ಉಚ್ಛಾಟನೆ ಮಾಡಿರುವುದಕ್ಕೆ ಪ್ರತಿಕ್ರಿಯೆ ನೀಡಿರುವ ಸುರೇಂದ್ರ ಸಾಗರ್ ಅವರು, ಪಕ್ಷದ ಆರೋಪಗಳಿಗೆ ಪ್ರತಿಕ್ರಿಯೆಯಾಗಿ, ನಾನು ಯಾವುದೇ ಅಶಿಸ್ತಿನಲ್ಲಿ ತೊಡಗಿಲ್ಲ. ನನ್ನ ಮಗ ಅಂಕುರ್‌ನನ್ನು ಎಸ್‌ಪಿ ಶಾಸಕ ತ್ರಿಭುವನ್ ದತ್ ಅವರ ಮಗಳಿಗೆ ಮದುವೆ ಮಾಡಿಕೊಡುವುದು ಮಾತ್ರ ನನ್ನ ಕರ್ತವ್ಯವಾಗಿತ್ತು. ನನ್ನ ಮಗ ಎಸ್ಪಿ ನಾಯಕನ ಕುಟುಂಬದೊಂದಿಗೆ ಮದುವೆಯಾಗಿದ್ದೇ ಏಕೈಕ ತಪ್ಪು ಎಂದು ಹೇಳುವ ಮೂಲಕ ಪಕ್ಷದ ನಿರ್ಧಾರವನ್ನು ಖಂಡಿಸಿದ್ದಾರೆ.

ಸಾಕಷ್ಟು ಚರ್ಚೆಗಳ ನಂತರ, ಮಾಯಾವತಿ ಅವರು ಪಕ್ಷದ ನಾಯಕರು ಮದುವೆಗೆ ಹೋಗುವುದಕ್ಕೆ ನಿರಾಕರಿಸಿದರು ಎಂದು ತಿಳಿದು ಬಂದಿದೆ. ಆದರೆ ಹಲವಾರು ಎಸ್ಪಿ ನಾಯಕರು ಸಮಾರಂಭದಲ್ಲಿ ಭಾಗವಹಿಸಿದ್ದರು.

PPeepal Media Desk

Peepal Media Desk

Peepal Media · ಮೀಡಿಯಾ ವಿಭಾಗ

ಸಂಬಂಧಿತ ಸುದ್ದಿಗಳು