ಮುಖ್ಯ ವಿಷಯಕ್ಕೆ ತೆರಳಿ
Peepal Media
ತಾಜಾ ಸುದ್ದಿ
ಈಸಕ್ಕಿ ಆಸೆಯನ್ನೂ ಮೀರಿದ ಆಯ್ದಕ್ಕಿ ಲಕ್ಕಮ್ಮಗಾಜಾ ಸ್ಮಶಾನದ ಮೇಲೆ ಮತ್ತೆ ಅರಳುತ್ತಾ ನೆತನ್ಯಾಹು ಕುರ್ಚಿ?ಅರುಣಾಚಲದಲ್ಲಿ ಚೀನಾ ಸೈನಿಕರೊಂದಿಗೆ ಮುಖಾಮುಖಿ: ಕೇಂದ್ರದ ಮೌನವನ್ನು ಪ್ರಶ್ನಿಸಿದ ಕಾಂಗ್ರೆಸ್‌ನ ಜೈರಾಮ್ ರಮೇಶ್ಕಡತಗಳ ವಿಲೇವಾರಿ ಪ್ರಕ್ರಿಯೆ ಬದಲಾವಣೆ: ಚುನಾವಣಾ ಆಯುಕ್ತರಿಂದ ಕ್ಯಾಬಿನೆಟ್‌ ಕಾರ್ಯದರ್ಶಿಗೆ ಆಕ್ಷೇಪಣಾ ಪತ್ರಮೋದಿ–ಅದಾನಿ ಕುರಿತ ಸಾಕ್ಷ್ಯಚಿತ್ರ ಹಂಚಿಕೊಂಡ ರಾಜ್‌ ಠಾಕ್ರೆ; ತೆಗೆದುಹಾಕುವಂತೆ ಸೂಚನೆಗಳ ನಡುವೆ ಮುಂದುವರೆದ ಚರ್ಚೆಮಂಡ್ಯದಲ್ಲಿ ARAI ಪರೀಕ್ಷಾ ಕೇಂದ್ರಗಳಿಗೆ ಭೂಮಿ ಹಂಚಿಕೆ ವಿಳಂಬ: ರಾಜ್ಯ ಸರ್ಕಾರಕ್ಕೆ ಎಚ್‌.ಡಿ. ಕುಮಾರಸ್ವಾಮಿ ಪತ್ರರಾಷ್ಟ್ರೀಯತೆಯ ಪಾಠ ನನಗೆ ಬೇಕಿಲ್ಲ; ನಮ್ಮ ಗುರಿ ಆಡಳಿತ, ಸಾಮಾಜಿಕ ಜಾಲತಾಣದ ಪ್ರಚಾರವಲ್ಲ: ಕೆ. ಅಣ್ಣಾಮಲೈಕೇವಲ ಮದುವೆಗಾಗಿ ಧರ್ಮಾಂತರವಾಗುವುದನ್ನು ಒಪ್ಪಲು ಸಾಧ್ಯವಿಲ್ಲ: ಬಾಂಬೆ ಹೈಕೋರ್ಟ್‌ಇನ್ನು ನೋಂದಾಯಿತ ಸಿಮ್‌ ಇದ್ದರೆ ಮಾತ್ರ ವಾಟ್ಸ್‌ಆ್ಯಪ್‌ ಬಳಕೆ ಸಾಧ್ಯ: ಜನವರಿ 1, 2027ರಿಂದ ಹೊಸ ನಿಯಮ ಜಾರಿಈ-ಮುದ್ರ ಡಿಜಿಟಲ್‌ ಪ್ರಮಾಣಪತ್ರಗಳಲ್ಲಿ ಭದ್ರತಾ ಲೋಪ: ಜಾಗತಿಕ ತಂತ್ರಜ್ಞಾನ ವಲಯದಲ್ಲಿ ಆತಂಕಹಾಸನ ಕಾಳಸಂತೆಗೆ ಪಡಿತರ ಅಕ್ಕಿ ಮಾರಾಟ ಯತ್ನ – ಕ್ವಿಂಟಲ್‌ ಗಟ್ಟಲೆ ಅಕ್ಕಿ, ರಾಗಿ ವಶಸದ್ಯದಲ್ಲೆ ಕಬ್ಬು ಬೆಳೆಗಾರರ ಸಭೆ ಕರೆದಿದ್ದೇನೆ – ಸಿಎಂ ಡಿ.ಕೆ ಶಿವಕುಮಾರ್ರಾಜ್ಯದಲ್ಲಿ ಐದು ದಿನಗಳಲ್ಲಿ ಮಳೆ ಸಾಧ್ಯತೆ – ಹವಾಮಾನ ಇಲಾಖೆ ಮುನ್ಸೂಚನೆಸಿದ್ದರಾಮಯ್ಯ ಅವರನ್ನು ಅಧಿಕಾರದಿಂದ ಇಳಿಸಲು ವ್ಯವಸ್ಥಿತ ಸಂಚು ರೂಪಿಸಿ ಯಶಸ್ವಿಗೊಂಡಿದ್ದಾರೆ – ಸಿಎಂ ಯಡಿಯೂರಪ್ಪಚುನಾವಣಾ ಆಯುಕ್ತರಿಗೆ ರಕ್ಷಣೆ ನೀಡುವ ಕಾನೂನು ರದ್ದುಗೊಳಿಸಿ – ಮಲ್ಲಿಕಾರ್ಜುನ ಖರ್ಗೆ ಆಗ್ರಹದಸರಾ ವೇಳೆ ಪೊಲೀಸರ ಲಾಠಿ ಏಟಿಗೆ 4 ವರ್ಷದ ಬಾಲಕ ಗಂಭೀರ – ICUನಲ್ಲಿ ಅಂತಿಮ ಹೋರಾಟಸೌದಿ ವಿಮಾನ ನಿಲ್ದಾಣದ ಮೇಲೆ ಭೀಕರ ದಾಳಿ – 8 ಮಂದಿಗೆ ಗಾಯ, ಇಬ್ಬರ ಅಂತ್ಯನಂದಿಧ್ವಜ ಪೂಜೆಗೆ ಸಚಿವರಿಗೆ ಅವಕಾಶ ನಿರಾಕರಿಸಿದ ಅಧಿಕಾರಿಗಳ ವಿರುದ್ಧ ತನಿಖೆಗೆ ಆದೇಶ: ಮುಖ್ಯಮಂತ್ರಿ ಡಿ ಕೆ ಶಿವಕುಮಾರ್‌300 ವರ್ಷಗಳಷ್ಟು ಹಳೆಯ ಐತಿಹಾಸಿಕ ರೇಸ್‌ಕೋರ್ಸ್ ಮಸೀದಿಯ ವಿದ್ಯುತ್ ಹಾಗೂ ನೀರು ಸಂಪರ್ಕ ಕಡಿತ: ತುರ್ತು ರಕ್ಷಣೆ ಕೋರಿದ ದೆಹಲಿ ವಕ್ಫ್ ಮಂಡಳಿತಿಹಾರ್ ಜೈಲಿನಿಂದ ಬಿಡುಗಡೆಯಾದ ಬೆನ್ನಲ್ಲೇ ಸೌರವ್ ದಾಸ್ ಹಾಗೂ ಅಶೋತ್ ರಾಂಕಾಗೆ ದೆಹಲಿ ಅಪರಾಧ ವಿಭಾಗದಿಂದ ಸಮನ್ಸ್

ನಾಳೆ ನಡೆಯಬೇಕಿದ್ದ ನಂದಿಬೆಟ್ಟದ ಸಂಪುಟ ಸಭೆಯನ್ನು ಮುಂದೂಡಿದ ರಾಜ್ಯ ಸರ್ಕಾರ

PPeepal Media Desk

Peepal Media Desk ರಾಜಕೀಯ, ರಾಜ್ಯ

• 1 ನಿಮಿಷದ ಓದು

ನಾಳೆ ನಡೆಯಬೇಕಿದ್ದ ನಂದಿಬೆಟ್ಟದ ಸಂಪುಟ ಸಭೆಯನ್ನು ಮುಂದೂಡಿದ ರಾಜ್ಯ ಸರ್ಕಾರ

ಜೂನ್ 19 ರ ಗುರುವಾರ ನಂದಿಬೆಟ್ಟದಲ್ಲಿ ನಡೆಯಬೇಕಿದ್ದ ರಾಜ್ಯ ಸಚಿವ ಸಂಪುಟ ಸಭೆಯನ್ನು ಬೆಂಗಳೂರಿನಲ್ಲೇ ನಡೆಸುವುದಾಗಿ ಸಿಎಂ ಸಿದ್ದರಾಮಯ್ಯ ಸೂಚನೆ ನೀಡಿದ್ದಾರೆ. ಹಣಕಾಸು ಇಲಾಖೆಯ ಅನುಮತಿ ಇಲ್ಲದೆ ವಿಶೇಷ ಪ್ಯಾಕೇಜ್ ಘೋಷಣೆ ಮಾಡುವುದು ಮುಂದಿನ ದಿನಗಳಲ್ಲಿ ರಾಜಕೀಯ ತಿರುವು ಪಡೆಯುವ ಹಿನ್ನೆಲೆಯಲ್ಲಿ ಸಚಿವರು ಮತ್ತು ಶಾಸಕರ ಒತ್ತಾಯದ ಮೇರೆಗೆ ನಂದಿಬೆಟ್ಟದ ಸಂಪುಟ ಸಭೆ ಮುಂದೂಡಲಾಗಿದೆ ಎಂದು ಮುಖ್ಯಮಂತ್ರಿಗಳ ಕಛೇರಿಯಿಂದ ತಿಳಿದು ಬಂದಿದೆ.

ಚಿಕ್ಕಬಳ್ಳಾಪುರ ಹಾಗೂ ಕೋಲಾರ ಜಿಲ್ಲೆಯ ಅಭಿವೃದ್ಧಿಗೆ ಸಂಬಂಧಪಟ್ಟಂತೆ ಸುಮಾರು 6000 ಕೋಟಿ ರೂ.ಗಳ ವಿವಿಧ ಯೋಜನೆಗಳ ವಿಶೇಷ ಪ್ಯಾಕೇಜ್‌ನ್ನು ಈ ಸಭೆಯಲ್ಲಿ ತೆಗೆದುಕೊಳ್ಳಲು ನಿರ್ಣಯಿಸಲಾಗಿತ್ತು. ಕ್ಷೇತ್ರವಾರು ತಯಾರಿಸಿದ ಈ ಪ್ಯಾಕೇಜ್‌ಗಳಿಗೆ ಹಣಕಾಸು ಇಲಾಖೆಯಿಂದ ಇನ್ನೂ ಪೂರ್ವಾನುಮತಿ ಲಭಿಸಿರಲಿಲ್ಲ.

ಹೀಗಾಗಿ ಯೋಜನೆಯನ್ನು ಘೋಷಣೆ ಮಾಡಿದರೂ ಪ್ರಯೋಜನವಾಗುವುದಿಲ್ಲ ಎಂದು ಸಚಿವ ಡಾ.ಎಂ.ಸಿ.ಸುಧಾಕರ್‌ ಅವರನ್ನೂ ಒಳಗೊಂಡಂತೆ ಎರಡು ಪ್ರತ್ಯೇಕ ನಿಯೋಗಗಳು ಮಂಗಳವಾರ ರಾತ್ರಿ ಸಿಎಂ ಸಿದ್ದರಾಮಯ್ಯ ಭೇಟಿ ಮಾಡಿ ಈ ಬಗ್ಗೆ ಗಮನ ಸೆಳೆದಿದ್ದರು. ಜತೆಗೆ ಬೇರೆ ಜಿಲ್ಲೆಗೆ ಸಂಬಂಧಪಟ್ಟ ಯೋಜನೆಗಳೂ ಸೇರಿದ್ದವು. ಇವೆಲ್ಲವೂ ಹಣಕಾಸು ಇಲಾಖೆಯ ಅನುಮತಿ ಸಿಗದೇ ನಿಗದಿಯಾಗಿರುವ ಹಿನ್ನೆಲೆಯಲ್ಲಿ ಅನಿವಾರ್ಯ ಕಾರಣದಿಂದ ನಂದಿ ಬೆಟ್ಟದ ಸಂಪುಟ ಸಭೆ ಮುಂದೂಡಲಾಗಿದೆ.

PPeepal Media Desk

Peepal Media Desk

Peepal Media · ರಾಜಕೀಯ ವಿಭಾಗ

ಸಂಬಂಧಿತ ಸುದ್ದಿಗಳು