ಮುಖ್ಯ ವಿಷಯಕ್ಕೆ ತೆರಳಿ
Peepal Media
ತಾಜಾ ಸುದ್ದಿ
●ಈಸಕ್ಕಿ ಆಸೆಯನ್ನೂ ಮೀರಿದ ಆಯ್ದಕ್ಕಿ ಲಕ್ಕಮ್ಮ●ಗಾಜಾ ಸ್ಮಶಾನದ ಮೇಲೆ ಮತ್ತೆ ಅರಳುತ್ತಾ ನೆತನ್ಯಾಹು ಕುರ್ಚಿ?●ಅರುಣಾಚಲದಲ್ಲಿ ಚೀನಾ ಸೈನಿಕರೊಂದಿಗೆ ಮುಖಾಮುಖಿ: ಕೇಂದ್ರದ ಮೌನವನ್ನು ಪ್ರಶ್ನಿಸಿದ ಕಾಂಗ್ರೆಸ್‌ನ ಜೈರಾಮ್ ರಮೇಶ್●ಕಡತಗಳ ವಿಲೇವಾರಿ ಪ್ರಕ್ರಿಯೆ ಬದಲಾವಣೆ: ಚುನಾವಣಾ ಆಯುಕ್ತರಿಂದ ಕ್ಯಾಬಿನೆಟ್‌ ಕಾರ್ಯದರ್ಶಿಗೆ ಆಕ್ಷೇಪಣಾ ಪತ್ರ●ಮೋದಿ–ಅದಾನಿ ಕುರಿತ ಸಾಕ್ಷ್ಯಚಿತ್ರ ಹಂಚಿಕೊಂಡ ರಾಜ್‌ ಠಾಕ್ರೆ; ತೆಗೆದುಹಾಕುವಂತೆ ಸೂಚನೆಗಳ ನಡುವೆ ಮುಂದುವರೆದ ಚರ್ಚೆ●ಮಂಡ್ಯದಲ್ಲಿ ARAI ಪರೀಕ್ಷಾ ಕೇಂದ್ರಗಳಿಗೆ ಭೂಮಿ ಹಂಚಿಕೆ ವಿಳಂಬ: ರಾಜ್ಯ ಸರ್ಕಾರಕ್ಕೆ ಎಚ್‌.ಡಿ. ಕುಮಾರಸ್ವಾಮಿ ಪತ್ರ●ರಾಷ್ಟ್ರೀಯತೆಯ ಪಾಠ ನನಗೆ ಬೇಕಿಲ್ಲ; ನಮ್ಮ ಗುರಿ ಆಡಳಿತ, ಸಾಮಾಜಿಕ ಜಾಲತಾಣದ ಪ್ರಚಾರವಲ್ಲ: ಕೆ. ಅಣ್ಣಾಮಲೈ●ಕೇವಲ ಮದುವೆಗಾಗಿ ಧರ್ಮಾಂತರವಾಗುವುದನ್ನು ಒಪ್ಪಲು ಸಾಧ್ಯವಿಲ್ಲ: ಬಾಂಬೆ ಹೈಕೋರ್ಟ್‌●ಇನ್ನು ನೋಂದಾಯಿತ ಸಿಮ್‌ ಇದ್ದರೆ ಮಾತ್ರ ವಾಟ್ಸ್‌ಆ್ಯಪ್‌ ಬಳಕೆ ಸಾಧ್ಯ: ಜನವರಿ 1, 2027ರಿಂದ ಹೊಸ ನಿಯಮ ಜಾರಿ●ಈ-ಮುದ್ರ ಡಿಜಿಟಲ್‌ ಪ್ರಮಾಣಪತ್ರಗಳಲ್ಲಿ ಭದ್ರತಾ ಲೋಪ: ಜಾಗತಿಕ ತಂತ್ರಜ್ಞಾನ ವಲಯದಲ್ಲಿ ಆತಂಕ●ಹಾಸನ ಕಾಳಸಂತೆಗೆ ಪಡಿತರ ಅಕ್ಕಿ ಮಾರಾಟ ಯತ್ನ – ಕ್ವಿಂಟಲ್‌ ಗಟ್ಟಲೆ ಅಕ್ಕಿ, ರಾಗಿ ವಶ●ಸದ್ಯದಲ್ಲೆ ಕಬ್ಬು ಬೆಳೆಗಾರರ ಸಭೆ ಕರೆದಿದ್ದೇನೆ – ಸಿಎಂ ಡಿ.ಕೆ ಶಿವಕುಮಾರ್●ರಾಜ್ಯದಲ್ಲಿ ಐದು ದಿನಗಳಲ್ಲಿ ಮಳೆ ಸಾಧ್ಯತೆ – ಹವಾಮಾನ ಇಲಾಖೆ ಮುನ್ಸೂಚನೆ●ಸಿದ್ದರಾಮಯ್ಯ ಅವರನ್ನು ಅಧಿಕಾರದಿಂದ ಇಳಿಸಲು ವ್ಯವಸ್ಥಿತ ಸಂಚು ರೂಪಿಸಿ ಯಶಸ್ವಿಗೊಂಡಿದ್ದಾರೆ – ಸಿಎಂ ಯಡಿಯೂರಪ್ಪ●ಚುನಾವಣಾ ಆಯುಕ್ತರಿಗೆ ರಕ್ಷಣೆ ನೀಡುವ ಕಾನೂನು ರದ್ದುಗೊಳಿಸಿ – ಮಲ್ಲಿಕಾರ್ಜುನ ಖರ್ಗೆ ಆಗ್ರಹ●ದಸರಾ ವೇಳೆ ಪೊಲೀಸರ ಲಾಠಿ ಏಟಿಗೆ 4 ವರ್ಷದ ಬಾಲಕ ಗಂಭೀರ – ICUನಲ್ಲಿ ಅಂತಿಮ ಹೋರಾಟ●ಸೌದಿ ವಿಮಾನ ನಿಲ್ದಾಣದ ಮೇಲೆ ಭೀಕರ ದಾಳಿ – 8 ಮಂದಿಗೆ ಗಾಯ, ಇಬ್ಬರ ಅಂತ್ಯ●ನಂದಿಧ್ವಜ ಪೂಜೆಗೆ ಸಚಿವರಿಗೆ ಅವಕಾಶ ನಿರಾಕರಿಸಿದ ಅಧಿಕಾರಿಗಳ ವಿರುದ್ಧ ತನಿಖೆಗೆ ಆದೇಶ: ಮುಖ್ಯಮಂತ್ರಿ ಡಿ ಕೆ ಶಿವಕುಮಾರ್‌●300 ವರ್ಷಗಳಷ್ಟು ಹಳೆಯ ಐತಿಹಾಸಿಕ ರೇಸ್‌ಕೋರ್ಸ್ ಮಸೀದಿಯ ವಿದ್ಯುತ್ ಹಾಗೂ ನೀರು ಸಂಪರ್ಕ ಕಡಿತ: ತುರ್ತು ರಕ್ಷಣೆ ಕೋರಿದ ದೆಹಲಿ ವಕ್ಫ್ ಮಂಡಳಿ●ತಿಹಾರ್ ಜೈಲಿನಿಂದ ಬಿಡುಗಡೆಯಾದ ಬೆನ್ನಲ್ಲೇ ಸೌರವ್ ದಾಸ್ ಹಾಗೂ ಅಶೋತ್ ರಾಂಕಾಗೆ ದೆಹಲಿ ಅಪರಾಧ ವಿಭಾಗದಿಂದ ಸಮನ್ಸ್

ಅಂಕೋಲ ಗುಡ್ಡ ಕುಸಿತ ಪ್ರಕರಣವನ್ನು ಸರ್ಕಾರ ಗಂಭೀರವಾಗಿ ಪರಿಗಣಿಸಿದೆ : ಕೃಷ್ಣ ಬೈರೇಗೌಡ

PPeepal Media Desk

Peepal Media Desk • ದೇಶ, ಮೀಡಿಯಾ, ರಾಜಕೀಯ

• 2 ನಿಮಿಷದ ಓದು

ಅಂಕೋಲ ಗುಡ್ಡ ಕುಸಿತ ಪ್ರಕರಣವನ್ನು ಸರ್ಕಾರ ಗಂಭೀರವಾಗಿ ಪರಿಗಣಿಸಿದೆ : ಕೃಷ್ಣ ಬೈರೇಗೌಡ

• ಮೃತಪಟ್ಟವರಿಗೆ ತಲಾ ರೂ.5 ಲಕ್ಷ ಪರಿಹಾರ
• ಮುಂದುವರೆದ ರಕ್ಷಣಾ ಕಾರ್ಯಾಚರಣೆ
• ಸ್ಥಳದಲ್ಲೇ ಬೀಡುಬಿಟ್ಟಿರುವ ಎನ್‌ಡಿಆರ್‌ಎಫ್‌ ತಂಡ
• ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರಕ್ಕೆ ಪತ್ರ

ಉತ್ತರ ಕನ್ನಡ ಜಿಲ್ಲೆ ಅಂಕೋಲಾ ತಾಲ್ಲೂಕಿನ ಶಿರೂರು ಬಳಿಯ ರಾಷ್ಟ್ರೀಯ ಹೆದ್ದಾರಿಯಲ್ಲಿ ಗುಡ್ಡ ಕುಸಿದು ಒಂದೇ ಕುಟುಂಬದ ನಾಲ್ವರು ಸೇರಿ ಒಟ್ಟು ಏಳು ಜನ ಮಣ್ಣಿನ ಅಡಿ ಸಿಲುಕಿ ಮೃತಪಟ್ಟಿರುವ ಸಾಧ್ಯತೆ ಇದ್ದು, ಈ ಪ್ರಕರಣವನ್ನು ಸರ್ಕಾರ ಗಂಭೀರವಾಗಿ ಪರಿಗಣಿಸಿದೆ. ರಕ್ಷಣಾ ಕಾರ್ಯಾಚರಣೆ ಮುಂದುವರೆಯುತ್ತಿದ್ದು, ಮೃತಪಟ್ಟವರಿಗೆ ಕೂಡಲೇ ರೂ.5 ಲಕ್ಷ ನೀಡುವಂತೆ ಜಿಲ್ಲಾಡಳಿತಕ್ಕೆ ಸೂಚಿಸಲಾಗಿದೆ ಎಂದು ಸಚಿವ ಕೃಷ್ಣ ಬೈರೇಗೌಡ ಅವರು ಮಾಹಿತಿ ನೀಡಿದರು.

ಅಂಕೋಲ ಅಪಘಾತದ ಬಗ್ಗೆ ಮಾಹಿತಿ ನೀಡಿದ ಅವರು,”ನದಿ ಹಾಗೂ ಗುಡ್ಡದ ನಡುವೆ ರಾಷ್ಟ್ರೀಯ ಹೆದ್ದಾರಿ ಇದ್ದು, ರಸ್ತೆ ಬದಿಯಲ್ಲಿ ಅನಧಿಕೃತವಾಗಿ ಕೆಲವರು ಸಣ್ಣ ಮಟ್ಟದ ಕ್ಯಾಂಟೀನ್‌ಗಳನ್ನು ನಿರ್ಮಿಸಿಕೊಂಡಿದ್ದಾರೆ. ಇಲ್ಲಿ ಅಡುಗೆ ಅನಿಲ ಹೊತ್ತೊಯ್ಯುವ ಟ್ಯಾಂಕರ್‌ ಚಾಲಕರು ಟೀ ಕುಡಿಯಲು ವಾಹನ ನಿಲ್ಲಿಸಿದ್ದಾಗ ಅವಘಡ ಸಂಭವಿಸಿದೆ.

ಗುಡ್ಡ ಕುಸಿದು ಟ್ಯಾಂಕರ್‌ ಲಾರಿ ಹಾಗೂ ಕ್ಯಾಂಟೀನ್‌ ನದಿಗೆ ಕೊಚ್ಚಿ ಹೋಗಿದೆ. ಪರಿಣಾಮ ಕ್ಯಾಂಟೀನ್‌ ನಡೆಸುತ್ತಿದ್ದ ಒಂದೇ ಕುಟುಂಬದ ನಾಲ್ವರು- ಟ್ಯಾಂಕರ್‌ ಚಾಲಕರು ಸೇರಿ ಒಟ್ಟು 10 ಕ್ಕೂ ಹೆಚ್ಚು ಮಂದಿ ಜನ ಮೃತಪಟ್ಟಿರುವ ಶಂಕೆ ಇದೆ. ಮೃತರಾದವರನ್ನು ಲಕ್ಷ್ಮಣ ನಾಯ್ಕ (47), ಶಾಂತಿ ನಾಯ್ಕ (36), ರೋಶನ್ (11), ಅವಾಂತಿಕಾ (6), ಜಗನ್ನಾಥ (55) ಎಂದು ಗುರುತಿಸಲಾಗಿದೆ. ಅಲ್ಲದೆ, ರಕ್ಷಣಾ ಕಾರ್ಯಾಚರಣೆಯ ವೇಳೆ ಶಾಂತಿ ನಾಯ್ಕ ಎಂಬ ಮಹಿಳೆಯ ಮೃತ ದೇಹವನ್ನು ಪತ್ತೆ ಮಾಡಲಾಗಿದೆ ಎಂದು ಸಚಿವ ಕೃಷ್ಣ ಬೈರೇಗೌಡ ಅವರು ಹೇಳಿದ್ದಾರೆ.

ರಕ್ಷಣಾ ಕಾರ್ಯಾಚರಣೆ ಮುಂದುವರೆಯುತ್ತಿದ್ದು, ಅಗ್ನಿಶಾಮಕ ದಳ ಹಾಗೂ ಎನ್‌ಡಿಆರ್‌ಎಫ್‌ ತುಕಡಿಯನ್ನು ಸ್ಥಳಕ್ಕೆ ಕಳುಹಿಸಲಾಗಿದೆ. ಅಲ್ಲದೆ, ಜಿಲ್ಲಾ ಉಸ್ತುವಾರಿ ಸಚಿವರೂ ಸ್ಥಳಕ್ಕೆ ಧಾವಿಸಿದ್ದಾರೆ. ಭಾರತೀಯ ಪೆಟ್ರೋಲಿಯಂ ಲಿಮಿಟೆಡ್‌ನ ಅಧಿಕಾರಿಗಳೂ ಸ್ಥಳದಲ್ಲಿ ಇದ್ದು, ನೀರಿನಲ್ಲಿ ಕೊಚ್ಚಿಹೋಗಿರುವ ಸಿಲಿಂಡರ್‌ ಅನ್ನು ಸುರಕ್ಷಿತವಾಗಿ ಹೊರತೆಗೆಯುವ ಕೆಲಸವೂ ಪ್ರಗತಿಯಲ್ಲಿದೆ ಎಂದರು.
ಅಲ್ಲದೆ, ಅಪಘಾತದಲ್ಲಿ ಮೃತಪಟ್ಟವರಿಗೆ ಕೂಡಲೇ ರೂ.5 ಲಕ್ಷ ಪರಿಹಾರ ನೀಡುವಂತೆ ಜಿಲ್ಲಾಡಳಿತಕ್ಕೆ ಸೂಚನೆ ನೀಡಲಾಗಿದೆ. ಇನ್ನೂ ವಾಹನ ಚಾಲಕರು ನಮ್ಮ ರಾಜ್ಯದವರಲ್ಲ. ಆದರೂ, ಅವರು ಕೆಲಸದ ಮೇಲೆ ನಮ್ಮ ರಾಜ್ಯಕ್ಕೆ ಬಂದಿದ್ದು, ಈ ವೇಳೆ ದುರಾದೃಷ್ಟವಶಾತ್‌ ಅಪಘಾತ ಸಂಭವಿಸಿದೆ. ಹೀಗಾಗಿ ಅವರಿಗೂ ಪರಿಹಾರ ನೀಡುವ ಬಗ್ಗೆ ಕ್ರಮ ಜರುಗಿಸಲಾಗುವುದು ಎಂದು ಅವರು ತಿಳಿಸಿದರು.

ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಜೊತೆ ಮಾತುಕತೆಯ ಭರವಸೆ

ಈ ಅಪಘಾತ ನಡೆಯಲು ಕಾರಣವೇನು? ಎಂಬ ಬಗ್ಗೆಯೂ ಸದನದಲ್ಲಿ ಧ್ವನಿ ಎತ್ತಿದ ಸಚಿವ ಕೃಷ್ಣ ಬೈರೇಗೌಡ ಅವರು, “ಕಳೆದ ವರ್ಷ ಅತಿವೃಷ್ಟಿಯ ಸಂದರ್ಭದಲ್ಲೇ ನಾನು ಈ ಭಾಗಕ್ಕೆ ತೆರಳಿದ್ದೆ. ರಾಷ್ಟ್ರೀಯ ಹೆದ್ದಾರಿಗಳು ವೈಜ್ಞಾನಿಕವಾಗಿ ನಿರ್ಮಾಣವಾಗಿಲ್ಲ. ಅಲ್ಲದೆ, ಸೀ ಬರ್ಡ್‌ ಕಾಲುವೆಗಳೂ ಕ್ರಮಬದ್ಧವಾಗಿಲ್ಲ. ಹೀಗಾಗಿ ಭೂ ಕುಸಿತ ಸಂಭವಿಸುವ ಬಗ್ಗೆ ಆಗಲೇ ಎಚ್ಚರಿಕೆ ನೀಡಿದ್ದೆ. ಆದರೆ, ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಅಧಿಕಾರಿಗಳು ನಮ್ಮ ಮಾತಿಗೆ ಕಿವಿಕೊಡುವ ಗೋಜಿಗೇ ಹೋಗಿಲ್ಲ ಎಂದು ಅವರು ಅಸಮಾಧಾನ ಹೊರಹಾಕಿದರು.

ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಅಧಿಕಾರಿಗಳು ನಮ್ಮ ಮಾತನ್ನು ಕೇಳುವುದೇ ಇಲ್ಲ. ನಾವು ಏನೇ ಹೇಳಿದರೂ, ನಮ್ಮ ಕೇಂದ್ರ ಕಚೇರಿ ದೆಹಲಿಯಲ್ಲಿದೆ, ಅಲ್ಲಿಗೆ ಪತ್ರ ಬರೆಯುತ್ತೇವೆ ಎಂದಷ್ಟೇ ಹೇಳಿ ಕೈ ತೊಳೆದುಕೊಳ್ಳುತ್ತಾರೆ. ಆದರೆ, ಈ ಪ್ರಕರಣವನ್ನು ಸರ್ಕಾರ ಗಂಭೀರವಾಗಿ ಪರಿಗಣಿಸಿದೆ. ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಅಧಿಕಾರಿಗಳನ್ನು ಇಂದೇ ಕರೆಸಿ ಘಟನೆಯ ಬಗ್ಗೆ ಮಾತನಾಡಲಾಗುವುದು. ಅಲ್ಲದೆ, ಸರ್ಕಾರದ ಮುಖ್ಯ ಕಾರ್ಯದರ್ಶಿ ಮೂಲಕ ಪತ್ರ ಬರೆಯಲಾಗುವುದು. ಮುಂದಿನ ದಿನಗಳಲ್ಲಿ ಇಂತಹ ಅಪಘಾತಗಳು ನಡೆಯದಂತೆ ತಡೆಯುವ ನಿಟ್ಟಿನಲ್ಲಿ ಎಲ್ಲಾ ಸೂಕ್ತ ಕ್ರಮಗಳನ್ನೂ ತೆಗೆದುಕೊಳ್ಳಲಾಗುವುದು ಎಂದು ಸದನಕ್ಕೆ ಸಚಿವ ಕೃಷ್ಣ ಬೈರೇಗೌಡ ಅವರು ಭರವಸೆ ನೀಡಿದರು.

PPeepal Media Desk

Peepal Media Desk

Peepal Media · ದೇಶ ವಿಭಾಗ

ಸಂಬಂಧಿತ ಸುದ್ದಿಗಳು