ಮುಖ್ಯ ವಿಷಯಕ್ಕೆ ತೆರಳಿ
Peepal Media
ತಾಜಾ ಸುದ್ದಿ
ಈಸಕ್ಕಿ ಆಸೆಯನ್ನೂ ಮೀರಿದ ಆಯ್ದಕ್ಕಿ ಲಕ್ಕಮ್ಮಗಾಜಾ ಸ್ಮಶಾನದ ಮೇಲೆ ಮತ್ತೆ ಅರಳುತ್ತಾ ನೆತನ್ಯಾಹು ಕುರ್ಚಿ?ಅರುಣಾಚಲದಲ್ಲಿ ಚೀನಾ ಸೈನಿಕರೊಂದಿಗೆ ಮುಖಾಮುಖಿ: ಕೇಂದ್ರದ ಮೌನವನ್ನು ಪ್ರಶ್ನಿಸಿದ ಕಾಂಗ್ರೆಸ್‌ನ ಜೈರಾಮ್ ರಮೇಶ್ಕಡತಗಳ ವಿಲೇವಾರಿ ಪ್ರಕ್ರಿಯೆ ಬದಲಾವಣೆ: ಚುನಾವಣಾ ಆಯುಕ್ತರಿಂದ ಕ್ಯಾಬಿನೆಟ್‌ ಕಾರ್ಯದರ್ಶಿಗೆ ಆಕ್ಷೇಪಣಾ ಪತ್ರಮೋದಿ–ಅದಾನಿ ಕುರಿತ ಸಾಕ್ಷ್ಯಚಿತ್ರ ಹಂಚಿಕೊಂಡ ರಾಜ್‌ ಠಾಕ್ರೆ; ತೆಗೆದುಹಾಕುವಂತೆ ಸೂಚನೆಗಳ ನಡುವೆ ಮುಂದುವರೆದ ಚರ್ಚೆಮಂಡ್ಯದಲ್ಲಿ ARAI ಪರೀಕ್ಷಾ ಕೇಂದ್ರಗಳಿಗೆ ಭೂಮಿ ಹಂಚಿಕೆ ವಿಳಂಬ: ರಾಜ್ಯ ಸರ್ಕಾರಕ್ಕೆ ಎಚ್‌.ಡಿ. ಕುಮಾರಸ್ವಾಮಿ ಪತ್ರರಾಷ್ಟ್ರೀಯತೆಯ ಪಾಠ ನನಗೆ ಬೇಕಿಲ್ಲ; ನಮ್ಮ ಗುರಿ ಆಡಳಿತ, ಸಾಮಾಜಿಕ ಜಾಲತಾಣದ ಪ್ರಚಾರವಲ್ಲ: ಕೆ. ಅಣ್ಣಾಮಲೈಕೇವಲ ಮದುವೆಗಾಗಿ ಧರ್ಮಾಂತರವಾಗುವುದನ್ನು ಒಪ್ಪಲು ಸಾಧ್ಯವಿಲ್ಲ: ಬಾಂಬೆ ಹೈಕೋರ್ಟ್‌ಇನ್ನು ನೋಂದಾಯಿತ ಸಿಮ್‌ ಇದ್ದರೆ ಮಾತ್ರ ವಾಟ್ಸ್‌ಆ್ಯಪ್‌ ಬಳಕೆ ಸಾಧ್ಯ: ಜನವರಿ 1, 2027ರಿಂದ ಹೊಸ ನಿಯಮ ಜಾರಿಈ-ಮುದ್ರ ಡಿಜಿಟಲ್‌ ಪ್ರಮಾಣಪತ್ರಗಳಲ್ಲಿ ಭದ್ರತಾ ಲೋಪ: ಜಾಗತಿಕ ತಂತ್ರಜ್ಞಾನ ವಲಯದಲ್ಲಿ ಆತಂಕಹಾಸನ ಕಾಳಸಂತೆಗೆ ಪಡಿತರ ಅಕ್ಕಿ ಮಾರಾಟ ಯತ್ನ – ಕ್ವಿಂಟಲ್‌ ಗಟ್ಟಲೆ ಅಕ್ಕಿ, ರಾಗಿ ವಶಸದ್ಯದಲ್ಲೆ ಕಬ್ಬು ಬೆಳೆಗಾರರ ಸಭೆ ಕರೆದಿದ್ದೇನೆ – ಸಿಎಂ ಡಿ.ಕೆ ಶಿವಕುಮಾರ್ರಾಜ್ಯದಲ್ಲಿ ಐದು ದಿನಗಳಲ್ಲಿ ಮಳೆ ಸಾಧ್ಯತೆ – ಹವಾಮಾನ ಇಲಾಖೆ ಮುನ್ಸೂಚನೆಸಿದ್ದರಾಮಯ್ಯ ಅವರನ್ನು ಅಧಿಕಾರದಿಂದ ಇಳಿಸಲು ವ್ಯವಸ್ಥಿತ ಸಂಚು ರೂಪಿಸಿ ಯಶಸ್ವಿಗೊಂಡಿದ್ದಾರೆ – ಸಿಎಂ ಯಡಿಯೂರಪ್ಪಚುನಾವಣಾ ಆಯುಕ್ತರಿಗೆ ರಕ್ಷಣೆ ನೀಡುವ ಕಾನೂನು ರದ್ದುಗೊಳಿಸಿ – ಮಲ್ಲಿಕಾರ್ಜುನ ಖರ್ಗೆ ಆಗ್ರಹದಸರಾ ವೇಳೆ ಪೊಲೀಸರ ಲಾಠಿ ಏಟಿಗೆ 4 ವರ್ಷದ ಬಾಲಕ ಗಂಭೀರ – ICUನಲ್ಲಿ ಅಂತಿಮ ಹೋರಾಟಸೌದಿ ವಿಮಾನ ನಿಲ್ದಾಣದ ಮೇಲೆ ಭೀಕರ ದಾಳಿ – 8 ಮಂದಿಗೆ ಗಾಯ, ಇಬ್ಬರ ಅಂತ್ಯನಂದಿಧ್ವಜ ಪೂಜೆಗೆ ಸಚಿವರಿಗೆ ಅವಕಾಶ ನಿರಾಕರಿಸಿದ ಅಧಿಕಾರಿಗಳ ವಿರುದ್ಧ ತನಿಖೆಗೆ ಆದೇಶ: ಮುಖ್ಯಮಂತ್ರಿ ಡಿ ಕೆ ಶಿವಕುಮಾರ್‌300 ವರ್ಷಗಳಷ್ಟು ಹಳೆಯ ಐತಿಹಾಸಿಕ ರೇಸ್‌ಕೋರ್ಸ್ ಮಸೀದಿಯ ವಿದ್ಯುತ್ ಹಾಗೂ ನೀರು ಸಂಪರ್ಕ ಕಡಿತ: ತುರ್ತು ರಕ್ಷಣೆ ಕೋರಿದ ದೆಹಲಿ ವಕ್ಫ್ ಮಂಡಳಿತಿಹಾರ್ ಜೈಲಿನಿಂದ ಬಿಡುಗಡೆಯಾದ ಬೆನ್ನಲ್ಲೇ ಸೌರವ್ ದಾಸ್ ಹಾಗೂ ಅಶೋತ್ ರಾಂಕಾಗೆ ದೆಹಲಿ ಅಪರಾಧ ವಿಭಾಗದಿಂದ ಸಮನ್ಸ್

ಈ ಬಾರಿ ಹಿಂದಿ ಭಾಷೆಗೆ ಅಂಕವೇ ಫಿಕ್ಸ್, ಮುಂದಿನ ಬಾರಿ ಸರ್ಕಾರದ ನಿಯಮ ಜಾರಿ: ಹೈಕೋರ್ಟ್ ನಿಲುವು

PPeepal Media Desk

Peepal Media Desk ದೇಶ, ರಾಜಕೀಯ, ರಾಜ್ಯ

• 1 ನಿಮಿಷದ ಓದು

ಈ ಬಾರಿ ಹಿಂದಿ ಭಾಷೆಗೆ ಅಂಕವೇ ಫಿಕ್ಸ್, ಮುಂದಿನ ಬಾರಿ ಸರ್ಕಾರದ ನಿಯಮ ಜಾರಿ: ಹೈಕೋರ್ಟ್ ನಿಲುವು

ಬೆಂಗಳೂರು: ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಹಿಂದಿ ಭಾಷೆಗೆ ಗ್ರೇಡ್ ಬದಲು ಅಂಕಗಳನ್ನೇ ನೀಡಬೇಕೆಂದು ಕರ್ನಾಟಕ ಹೈಕೋರ್ಟ್ ಮತ್ತೊಮ್ಮೆ ಆದೇಶ ನೀಡಿದೆ. ಸರ್ಕಾರ ಸಲ್ಲಿಸಿದ್ದ ಮರುಪರಿಶೀಲನಾ ಅರ್ಜಿಯನ್ನು ನ್ಯಾಯಾಲಯ ವಜಾಗೊಳಿಸಿದ್ದು, ರಾಜ್ಯ ಸರ್ಕಾರಕ್ಕೆ ಇದು ದೊಡ್ಡ ಹಿನ್ನಡೆಯಾಗಿದೆ.

ನ್ಯಾಯಮೂರ್ತಿ ಇಂದಿರೇಶ್ ಅವರಿದ್ದ ಹೈಕೋರ್ಟ್ ಪೀಠ ಈ ಆದೇಶ ಹೊರಡಿಸಿದ್ದು, 2025–26ನೇ ಸಾಲಿನ ಎಸ್‌ಎಸ್‌ಎಲ್‌ಸಿ ಫಲಿತಾಂಶದಲ್ಲಿ ಹಿಂದಿ ವಿಷಯಕ್ಕೆ ಅಂಕಗಳನ್ನೇ ಪರಿಗಣಿಸಬೇಕೆಂದು ಸ್ಪಷ್ಟಪಡಿಸಿದೆ.

ಹಿನ್ನೆಲೆ ಏನು?
ಈ ಬಾರಿ ಹಿಂದಿ ಪರೀಕ್ಷೆಯಲ್ಲಿ ಒಂದು ಲಕ್ಷಕ್ಕೂ ಹೆಚ್ಚು ವಿದ್ಯಾರ್ಥಿಗಳು ಅನುತ್ತೀರ್ಣರಾಗಿದ್ದರು. ಇದರಿಂದ ವಿದ್ಯಾರ್ಥಿಗಳ ಮೇಲಿನ ಒತ್ತಡ ತಗ್ಗಿಸುವ ಉದ್ದೇಶದಿಂದ ರಾಜ್ಯ ಸರ್ಕಾರ ಹಿಂದಿ ಭಾಷೆಗೆ ಅಂಕದ ಬದಲು ಗ್ರೇಡ್ ನೀಡುವ ನಿರ್ಧಾರ ತೆಗೆದುಕೊಂಡಿತ್ತು. ಆದರೆ ಈ ನಿರ್ಧಾರವನ್ನು ಪ್ರಶ್ನಿಸಿ ಹೈಕೋರ್ಟ್‌ಗೆ ಅರ್ಜಿ ಸಲ್ಲಿಕೆಯಾಗಿತ್ತು. ಆಗ ನ್ಯಾಯಾಲಯ ಅಂಕ ನೀಡಲು ಸೂಚನೆ ನೀಡಿತ್ತು. ಅದನ್ನು ಮರುಪರಿಶೀಲಿಸಲು ಸರ್ಕಾರ ಮತ್ತೆ ಅರ್ಜಿ ಸಲ್ಲಿಸಿತ್ತು. ಈ ಅರ್ಜಿಯನ್ನು ಕೂಡ ನ್ಯಾಯಾಲಯ ತಿರಸ್ಕರಿಸಿದೆ.

ಹೈಕೋರ್ಟ್ ಏನು ಹೇಳಿದೆ?
ನ್ಯಾಯಾಲಯ ತನ್ನ ಆದೇಶದಲ್ಲಿ, ಪರೀಕ್ಷೆಯ ಅಧಿಸೂಚನೆ ಹೊರಡಿಸುವ ಮೊದಲೇ ಮೌಲ್ಯಮಾಪನ ಪದ್ಧತಿ ಕುರಿತ ನಿಯಮ ರೂಪಿಸಬೇಕಿತ್ತು ಎಂದು ಸ್ಪಷ್ಟಪಡಿಸಿದೆ. ಪರೀಕ್ಷೆ ನಡೆದ ನಂತರ ಅಂಕ ಪದ್ಧತಿ ಬದಲಿಸುವುದು ಸರಿಯಲ್ಲ ಎಂದೂ ಹೇಳಿದೆ.

“ಪಿಯುಸಿಯಲ್ಲಿ ಶೇ.83ರಷ್ಟು ವಿದ್ಯಾರ್ಥಿಗಳು ಉತ್ತೀರ್ಣರಾಗುತ್ತಿದ್ದಾರೆ. ಎಸ್‌ಎಸ್‌ಎಲ್‌ಸಿಯಲ್ಲಿ ಎಲ್ಲರನ್ನೂ ಪಾಸ್ ಮಾಡಿಸುವ ಉದ್ದೇಶವಿದ್ದರೆ ಪರೀಕ್ಷೆ ಏಕೆ ಬೇಕು?” ಎಂದು ನ್ಯಾಯಾಲಯ ಪ್ರಶ್ನಿಸಿದೆ. ನಿಯಮ ರೂಪಿಸಿದ ಬಳಿಕ ಸರ್ಕಾರ ತಕ್ಕ ಕ್ರಮ ಕೈಗೊಳ್ಳಬಹುದು ಎಂದೂ ತಿಳಿಸಿದೆ.

ಸರ್ಕಾರದ ಪರ ವಕೀಲ ಜನರಲ್ ಶಶಿಕಿರಣ್ ಶೆಟ್ಟಿ ಅವರು, ಸೂಕ್ತ ತಿದ್ದುಪಡಿ ಮಾಡಿ ಕರಡು ನಿಯಮ ರೂಪಿಸಲಾಗುತ್ತಿದೆ ಎಂದು ವಾದ ಮಂಡಿಸಿದರೂ ನ್ಯಾಯಾಲಯ ಒಪ್ಪಲಿಲ್ಲ.

ಫಲಿತಾಂಶ ಯಾವಾಗ?
ಎಸ್‌ಎಸ್‌ಎಲ್‌ಸಿ ಮೌಲ್ಯಮಾಪನ ಬಹುತೇಕ ಪೂರ್ಣಗೊಂಡಿದ್ದು, ಹಿಂದಿ ಸೇರಿದಂತೆ ಎಲ್ಲ ತೃತೀಯ ಭಾಷಾ ಉತ್ತರ ಪತ್ರಿಕೆಗಳಲ್ಲಿ ಮೌಲ್ಯಮಾಪಕರು ಅಂಕಗಳನ್ನೇ ನಮೂದಿಸಿದ್ದಾರೆ. ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ (ಕೆಎಸ್‌ಇಎಬಿ) ಏಪ್ರಿಲ್ 24ರಂದು ಫಲಿತಾಂಶ ಪ್ರಕಟಿಸಲು ಯೋಜಿಸಿತ್ತು. ಈಗ ಪ್ರಕರಣ ಇತ್ಯರ್ಥವಾಗಿರುವ ಹಿನ್ನೆಲೆಯಲ್ಲಿ ಶೀಘ್ರದಲ್ಲೇ ಫಲಿತಾಂಶ ಹೊರಬೀಳುವ ನಿರೀಕ್ಷೆ ಇದೆ.

ಈ ಬಾರಿ ಒಟ್ಟು 8.30 ಲಕ್ಷ ವಿದ್ಯಾರ್ಥಿಗಳು ಎಸ್‌ಎಸ್‌ಎಲ್‌ಸಿ ಪರೀಕ್ಷೆ ಬರೆದಿದ್ದಾರೆ — ಅದರಲ್ಲಿ 4.25 ಲಕ್ಷ ಬಾಲಕರು ಮತ್ತು 4.05 ಲಕ್ಷ ಬಾಲಕಿಯರು ಸೇರಿದ್ದಾರೆ.

PPeepal Media Desk

Peepal Media Desk

Peepal Media · ದೇಶ ವಿಭಾಗ

ಸಂಬಂಧಿತ ಸುದ್ದಿಗಳು