ಮುಖ್ಯ ವಿಷಯಕ್ಕೆ ತೆರಳಿ
Peepal Media
ತಾಜಾ ಸುದ್ದಿ
●ಈಸಕ್ಕಿ ಆಸೆಯನ್ನೂ ಮೀರಿದ ಆಯ್ದಕ್ಕಿ ಲಕ್ಕಮ್ಮ●ಗಾಜಾ ಸ್ಮಶಾನದ ಮೇಲೆ ಮತ್ತೆ ಅರಳುತ್ತಾ ನೆತನ್ಯಾಹು ಕುರ್ಚಿ?●ಅರುಣಾಚಲದಲ್ಲಿ ಚೀನಾ ಸೈನಿಕರೊಂದಿಗೆ ಮುಖಾಮುಖಿ: ಕೇಂದ್ರದ ಮೌನವನ್ನು ಪ್ರಶ್ನಿಸಿದ ಕಾಂಗ್ರೆಸ್‌ನ ಜೈರಾಮ್ ರಮೇಶ್●ಕಡತಗಳ ವಿಲೇವಾರಿ ಪ್ರಕ್ರಿಯೆ ಬದಲಾವಣೆ: ಚುನಾವಣಾ ಆಯುಕ್ತರಿಂದ ಕ್ಯಾಬಿನೆಟ್‌ ಕಾರ್ಯದರ್ಶಿಗೆ ಆಕ್ಷೇಪಣಾ ಪತ್ರ●ಮೋದಿ–ಅದಾನಿ ಕುರಿತ ಸಾಕ್ಷ್ಯಚಿತ್ರ ಹಂಚಿಕೊಂಡ ರಾಜ್‌ ಠಾಕ್ರೆ; ತೆಗೆದುಹಾಕುವಂತೆ ಸೂಚನೆಗಳ ನಡುವೆ ಮುಂದುವರೆದ ಚರ್ಚೆ●ಮಂಡ್ಯದಲ್ಲಿ ARAI ಪರೀಕ್ಷಾ ಕೇಂದ್ರಗಳಿಗೆ ಭೂಮಿ ಹಂಚಿಕೆ ವಿಳಂಬ: ರಾಜ್ಯ ಸರ್ಕಾರಕ್ಕೆ ಎಚ್‌.ಡಿ. ಕುಮಾರಸ್ವಾಮಿ ಪತ್ರ●ರಾಷ್ಟ್ರೀಯತೆಯ ಪಾಠ ನನಗೆ ಬೇಕಿಲ್ಲ; ನಮ್ಮ ಗುರಿ ಆಡಳಿತ, ಸಾಮಾಜಿಕ ಜಾಲತಾಣದ ಪ್ರಚಾರವಲ್ಲ: ಕೆ. ಅಣ್ಣಾಮಲೈ●ಕೇವಲ ಮದುವೆಗಾಗಿ ಧರ್ಮಾಂತರವಾಗುವುದನ್ನು ಒಪ್ಪಲು ಸಾಧ್ಯವಿಲ್ಲ: ಬಾಂಬೆ ಹೈಕೋರ್ಟ್‌●ಇನ್ನು ನೋಂದಾಯಿತ ಸಿಮ್‌ ಇದ್ದರೆ ಮಾತ್ರ ವಾಟ್ಸ್‌ಆ್ಯಪ್‌ ಬಳಕೆ ಸಾಧ್ಯ: ಜನವರಿ 1, 2027ರಿಂದ ಹೊಸ ನಿಯಮ ಜಾರಿ●ಈ-ಮುದ್ರ ಡಿಜಿಟಲ್‌ ಪ್ರಮಾಣಪತ್ರಗಳಲ್ಲಿ ಭದ್ರತಾ ಲೋಪ: ಜಾಗತಿಕ ತಂತ್ರಜ್ಞಾನ ವಲಯದಲ್ಲಿ ಆತಂಕ●ಹಾಸನ ಕಾಳಸಂತೆಗೆ ಪಡಿತರ ಅಕ್ಕಿ ಮಾರಾಟ ಯತ್ನ – ಕ್ವಿಂಟಲ್‌ ಗಟ್ಟಲೆ ಅಕ್ಕಿ, ರಾಗಿ ವಶ●ಸದ್ಯದಲ್ಲೆ ಕಬ್ಬು ಬೆಳೆಗಾರರ ಸಭೆ ಕರೆದಿದ್ದೇನೆ – ಸಿಎಂ ಡಿ.ಕೆ ಶಿವಕುಮಾರ್●ರಾಜ್ಯದಲ್ಲಿ ಐದು ದಿನಗಳಲ್ಲಿ ಮಳೆ ಸಾಧ್ಯತೆ – ಹವಾಮಾನ ಇಲಾಖೆ ಮುನ್ಸೂಚನೆ●ಸಿದ್ದರಾಮಯ್ಯ ಅವರನ್ನು ಅಧಿಕಾರದಿಂದ ಇಳಿಸಲು ವ್ಯವಸ್ಥಿತ ಸಂಚು ರೂಪಿಸಿ ಯಶಸ್ವಿಗೊಂಡಿದ್ದಾರೆ – ಸಿಎಂ ಯಡಿಯೂರಪ್ಪ●ಚುನಾವಣಾ ಆಯುಕ್ತರಿಗೆ ರಕ್ಷಣೆ ನೀಡುವ ಕಾನೂನು ರದ್ದುಗೊಳಿಸಿ – ಮಲ್ಲಿಕಾರ್ಜುನ ಖರ್ಗೆ ಆಗ್ರಹ●ದಸರಾ ವೇಳೆ ಪೊಲೀಸರ ಲಾಠಿ ಏಟಿಗೆ 4 ವರ್ಷದ ಬಾಲಕ ಗಂಭೀರ – ICUನಲ್ಲಿ ಅಂತಿಮ ಹೋರಾಟ●ಸೌದಿ ವಿಮಾನ ನಿಲ್ದಾಣದ ಮೇಲೆ ಭೀಕರ ದಾಳಿ – 8 ಮಂದಿಗೆ ಗಾಯ, ಇಬ್ಬರ ಅಂತ್ಯ●ನಂದಿಧ್ವಜ ಪೂಜೆಗೆ ಸಚಿವರಿಗೆ ಅವಕಾಶ ನಿರಾಕರಿಸಿದ ಅಧಿಕಾರಿಗಳ ವಿರುದ್ಧ ತನಿಖೆಗೆ ಆದೇಶ: ಮುಖ್ಯಮಂತ್ರಿ ಡಿ ಕೆ ಶಿವಕುಮಾರ್‌●300 ವರ್ಷಗಳಷ್ಟು ಹಳೆಯ ಐತಿಹಾಸಿಕ ರೇಸ್‌ಕೋರ್ಸ್ ಮಸೀದಿಯ ವಿದ್ಯುತ್ ಹಾಗೂ ನೀರು ಸಂಪರ್ಕ ಕಡಿತ: ತುರ್ತು ರಕ್ಷಣೆ ಕೋರಿದ ದೆಹಲಿ ವಕ್ಫ್ ಮಂಡಳಿ●ತಿಹಾರ್ ಜೈಲಿನಿಂದ ಬಿಡುಗಡೆಯಾದ ಬೆನ್ನಲ್ಲೇ ಸೌರವ್ ದಾಸ್ ಹಾಗೂ ಅಶೋತ್ ರಾಂಕಾಗೆ ದೆಹಲಿ ಅಪರಾಧ ವಿಭಾಗದಿಂದ ಸಮನ್ಸ್

ಸರ್ವೇ ಇಲಾಖೆ ಸಮಸ್ಯೆ ಪರಿಹಾರಕ್ಕೆ ಸರ್ಕಾರದ ಪ್ರಾಮಾಣಿಕ ಪ್ರಯತ್ನ: ಸಚಿವ ಕೃಷ್ಣಬೈರೇಗೌಡ

P

Peepal Media Desk • ರಾಜಕೀಯ

• 1 ನಿಮಿಷದ ಓದು

ಸರ್ವೇ ಇಲಾಖೆ ಸಮಸ್ಯೆ ಪರಿಹಾರಕ್ಕೆ ಸರ್ಕಾರದ ಪ್ರಾಮಾಣಿಕ ಪ್ರಯತ್ನ: ಸಚಿವ  ಕೃಷ್ಣಬೈರೇಗೌಡ

ಬೆಂಗಳೂರು ಜುಲೈ 15: ಸರ್ವೆ ಇಲಾಖೆಯಲ್ಲಿ ಹಲವಾರು ಸಮಸ್ಯೆಗಳಿದ್ದು, ಇದರಿಂದ ರೈತರು ಸಂಕಷ್ಟಕ್ಕೀಡಾಗಿರುವುದು ನಮ್ಮ ಗಮನಕ್ಕೆ ಬಂದಿದೆ. ಜೊತೆಗೆ, ಈ ಸಮಸ್ಯೆಯನ್ನು ಪರಿಹರಿಸಲು ಸರ್ಕಾರ ಪ್ರಾಮಾಣಿಕವಾಗಿ ಪ್ರಯತ್ನಿಸುತ್ತಿದೆ ಎಂದು ಸಚಿವ ಕೃಷ್ಣ ಬೈರೇಗೌಡ ಅವರು ಪ್ರಕಟಿಸಿದರು.

ವಿಧಾನಸಭೆ ಪ್ರಶ್ನೋತ್ತರ ಅವಧಿಯ ವೇಳೆ ರಾಯಭಾಗ ಕ್ಷೇತ್ರದ ಬಿಜೆಪಿ ಶಾಸಕ ಐಹೊಳೆ ದುರ್ಯೋಧನ ಮಹಾಲಿಂಗಪ್ಪ ಅವರು ಸರ್ವೇ ಇಲಾಖೆ ಸಮಸ್ಯೆಗಳ ಕುರಿತು ಕೇಳಿದ ಪ್ರಶ್ನೆಗೆ ಉತ್ತರಿಸಿದ ಸಚಿವರು, “ಸರ್ವೇ ಇಲಾಖೆಯಲ್ಲಿ ಸಾಕಷ್ಟು ಸಮಸ್ಯೆ ಇದೆ. ಮುಖ್ಯಮಂತ್ರಿ ಸಿದ್ದರಾಮಯ್ಯನವರ ಜನತಾ ದರ್ಶನ ಕಾರ್ಯಕ್ರಮದಲ್ಲೂ ಸರ್ವೇ ಇಲಾಖೆಗೆ ಸಂಬಂಧಿಸಿದಂತೆ ಸಾಕಷ್ಟು ದೂರುಗಳು ಬರುತ್ತಿವೆ. ಈ ಬಗ್ಗೆ ಸರ್ಕಾರ ಗಂಭೀರವಾಗಿ ಪರಿಗಣಿಸಿದ್ದು, ಈ ಸಮಸ್ಯೆಯನ್ನು ಬಗೆಹರಿಸುವ ನಿಟ್ಟಿನಲ್ಲೂ ಸರ್ಕಾರ ಪ್ರಾಮಾಣಿಕ ಪ್ರಯತ್ನ ನಡೆಸಲಾಗುತ್ತಿದೆ ಎಂದು ಅವರು ವಿವರಿಸಿದರು.

ಗ್ರಾಮ ಲೆಕ್ಕಿಗರು 1,000 ಹಾಗೂ 750 ಜನ ಸರ್ವೇಯರ್ ಭರ್ತಿ:
ಕಂದಾಯ ಇಲಾಖೆಯಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿಯ ಬಗ್ಗೆ ವಿಧಾನಸಭೆಗೆ ಮಾಹಿತಿ ನೀಡಿದ ಸಚಿವ ಕೃಷ್ಣ ಬೈರೇಗೌಡ ಅವರು, “ರಾಜ್ಯದಲ್ಲಿ 1,000 ಗ್ರಾಮ ಆಡಳಿತಾಧಿಕಾರಿಗಳು ಹಾಗೂ 750 ಸರ್ಕಾರಿ ಸರ್ವೇಯರ್ ಭರ್ತಿ ಪ್ರಕಿಯೆ ನಡೆದಿದೆ. ಇದರ ಜೊತೆಗೆ 100ಕ್ಕೂ ಅಧಿಕ ಪರವಾನಗಿ ಹೊಂದಿರುವ ಖಾಸಗಿ ಸರ್ವೇಯರ್‌ ಹಾಗೂ 35 ಎ.ಡಿ.ಎಲ್.ಆರ್ ನೇಮಕಾತಿಗೆ ಅರ್ಜಿ ಕರೆಯಲಾಗಿದೆ. ಮುಂದಿನ 3 ರಿಂದ 6 ತಿಂಗಳ ಒಳಗಾಗಿ ಈ ಎಲ್ಲಾ ಹುದ್ದೆಗಳನ್ನೂ ನ್ಯಾಯಸಮ್ಮತವಾಗಿ ಭರ್ತಿ ಮಾಡುವಂತೆ ಕೆಪಿಎಸ್‌ಸಿ ಗೆ ಸೂಚಿಸಲಾಗಿ ಎಂದು ತಿಳಿಸಿದರು.

ಮುಂದುವರೆದು, “ಸರ್ವೇ ಇಲಾಖೆಯಲ್ಲಿ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಿದರೆ ಸ್ವಾಭಾವಿಕವಾಗಿ ಸರ್ವೇ ಇಲಾಖೆಗೆ ಬಲ ಬರಲಿದೆ. ಈ ಹುದ್ದೆಗಳಲ್ಲದೆ, ಹೆಚ್ಚುವರಿಯಾಗಿ ಹೊಸ ಹುದ್ದೆಗಳ ಸೃಷ್ಟಿಗೂ ಮುಖ್ಯಮಂತ್ರಿಗಳ ಬಳಿ ಮನವಿ ಸಲ್ಲಿಸಿದ್ದು ಮತ್ತಷ್ಟು ಹುದ್ದೆಗಳನ್ನು ಸೃಷ್ಟಿಸಲು ಸರ್ಕಾರ ಸಿದ್ದವಾಗಿದೆ. ಇದರ ಜೊತೆಗೆ ನಮ್ಮ ಸಿಬ್ಬಂದಿಗಳ ಕೆಲಸದ ವೇಗ ಹೆಚ್ಚಾಗಲು ಮೂರು ಪಟ್ಟು ಸರ್ವೇ ಕೆಲದ ವೇಗ ಪಡೆಯಲು ಆಧುನಿಕ ಉಪಕರಣವಾದ ರೋವರ್‌ ಬಳಸಿ ಸರ್ವೇ ನಡೆಸಲೂ ಸೂಚಿಸಲಾಗಿದೆ. ಈ ಮೂಲಕ ರೈತರ ಸಮಸ್ಯೆಗಳನ್ನು ಬಗೆಹರಿಸುವ ಹಾಗೂ ಸರ್ವೇ ಇಲಾಖೆಯನ್ನು ಬಲಗೊಳಿಸುವ ನಿಟ್ಟಿನಲ್ಲಿ ಸರ್ಕಾರ ಬದ್ಧವಾಗಿದೆ ಎಂದರು.

ಅರಗ ಜ್ಞಾನೇಂದ್ರರ ಪ್ರಶ್ನೆಗೆ ಸಚಿವರ ಖಡಕ್‌ ಉತ್ತರ:
ಸಚಿವ ಕೃಷ್ಣ ಬೈರೇಗೌಡ ಅವರು ಉತ್ತರಿಸುತ್ತಿದ್ದ ವೇಳೆ ಮದ್ಯಪ್ರವೇಶಿಸಿದ ಬಿಜೆಪಿ ಶಾಸಕ ಮಾಜಿ ಗೃಹ ಸಚಿವರಾದ ಅರಗ ಜ್ಞಾನೇಂದ್ರ ಅವರು, “ಮಲೆನಾಡಿನ ರೈತರ ಸಮಸ್ಯೆ ಬೆಂಗಳೂರಿನಿಂದ ತೇರ್ಗಡೆಯಾಗಿ ಹೋದ ಸರ್ವೇಯರ್ಗೆ ಗೊತ್ತಾಗೋದೆ ಇಲ್ಲ. ಇಷ್ಟಕ್ಕೂ ಅವರು ಬೆಂಗಳೂರಿನಿಂದ ಹೊರಟು ಮಲೆನಾಡಿಗೆ ಬಂದು ತಲುಪುವುದರ ಒಳಗಾಗಿ ಡೆಪ್ಯುಟೇಷನ್ ಮೇಲೆ ಮತ್ತೆ ಬೆಂಗಳೂರಿಗೆ ಹಿಂತಿರುಗುತ್ತಾರೆ ಎಂದು ಆರೋಪಿಸಿದರು.

ಈ ಆರೋಪಕ್ಕೆ ಖಡಕ್ ಆಗಿಯೇ ಉತ್ತರ ಕೊಟ್ಟ ಸಚಿವ ಕೃಷ್ಣ ಬೈರೇಗೌಡ ಅವರು, “ಕಳೆದ ಒಂದು ವರ್ಷದಲ್ಲಿ ನಾನು ವ್ಯಯಕ್ತಿಕವಾಗಿ ಒಂದೇ ಒಂದು ಕೇಸ್ ಕೂಡ ಡೆಪ್ಯುಟೇಶನ್ ಮಾಡಿಲ್ಲ. ಡೆಪ್ಯುಟೇಷನ್ ಎನ್ನುವ ಮಾತೇ ಇಲ್ಲ. ಅಲ್ಲದೆ, ಡೆಪ್ಯಟೇಷನ್ ಮೇಲೆ ಇತರೆಡೆ ಹೋದ ಅಧಿಕಾರಿಗಳನ್ನೂ ಸಹ ಹಿಂದಕ್ಕೆ ವಾಪಸ್ ಕರೆಸಲಾಗಿದೆ” ಎಂದು ಮಾಹಿತಿ ನೀಡಿದರು.

P

Peepal Media Desk

Peepal Media · ರಾಜಕೀಯ ವಿಭಾಗ

ಸಂಬಂಧಿತ ಸುದ್ದಿಗಳು

Exit mobile version