ಮುಖ್ಯ ವಿಷಯಕ್ಕೆ ತೆರಳಿ
Peepal Media
ತಾಜಾ ಸುದ್ದಿ
●ಈಸಕ್ಕಿ ಆಸೆಯನ್ನೂ ಮೀರಿದ ಆಯ್ದಕ್ಕಿ ಲಕ್ಕಮ್ಮ●ಗಾಜಾ ಸ್ಮಶಾನದ ಮೇಲೆ ಮತ್ತೆ ಅರಳುತ್ತಾ ನೆತನ್ಯಾಹು ಕುರ್ಚಿ?●ಅರುಣಾಚಲದಲ್ಲಿ ಚೀನಾ ಸೈನಿಕರೊಂದಿಗೆ ಮುಖಾಮುಖಿ: ಕೇಂದ್ರದ ಮೌನವನ್ನು ಪ್ರಶ್ನಿಸಿದ ಕಾಂಗ್ರೆಸ್‌ನ ಜೈರಾಮ್ ರಮೇಶ್●ಕಡತಗಳ ವಿಲೇವಾರಿ ಪ್ರಕ್ರಿಯೆ ಬದಲಾವಣೆ: ಚುನಾವಣಾ ಆಯುಕ್ತರಿಂದ ಕ್ಯಾಬಿನೆಟ್‌ ಕಾರ್ಯದರ್ಶಿಗೆ ಆಕ್ಷೇಪಣಾ ಪತ್ರ●ಮೋದಿ–ಅದಾನಿ ಕುರಿತ ಸಾಕ್ಷ್ಯಚಿತ್ರ ಹಂಚಿಕೊಂಡ ರಾಜ್‌ ಠಾಕ್ರೆ; ತೆಗೆದುಹಾಕುವಂತೆ ಸೂಚನೆಗಳ ನಡುವೆ ಮುಂದುವರೆದ ಚರ್ಚೆ●ಮಂಡ್ಯದಲ್ಲಿ ARAI ಪರೀಕ್ಷಾ ಕೇಂದ್ರಗಳಿಗೆ ಭೂಮಿ ಹಂಚಿಕೆ ವಿಳಂಬ: ರಾಜ್ಯ ಸರ್ಕಾರಕ್ಕೆ ಎಚ್‌.ಡಿ. ಕುಮಾರಸ್ವಾಮಿ ಪತ್ರ●ರಾಷ್ಟ್ರೀಯತೆಯ ಪಾಠ ನನಗೆ ಬೇಕಿಲ್ಲ; ನಮ್ಮ ಗುರಿ ಆಡಳಿತ, ಸಾಮಾಜಿಕ ಜಾಲತಾಣದ ಪ್ರಚಾರವಲ್ಲ: ಕೆ. ಅಣ್ಣಾಮಲೈ●ಕೇವಲ ಮದುವೆಗಾಗಿ ಧರ್ಮಾಂತರವಾಗುವುದನ್ನು ಒಪ್ಪಲು ಸಾಧ್ಯವಿಲ್ಲ: ಬಾಂಬೆ ಹೈಕೋರ್ಟ್‌●ಇನ್ನು ನೋಂದಾಯಿತ ಸಿಮ್‌ ಇದ್ದರೆ ಮಾತ್ರ ವಾಟ್ಸ್‌ಆ್ಯಪ್‌ ಬಳಕೆ ಸಾಧ್ಯ: ಜನವರಿ 1, 2027ರಿಂದ ಹೊಸ ನಿಯಮ ಜಾರಿ●ಈ-ಮುದ್ರ ಡಿಜಿಟಲ್‌ ಪ್ರಮಾಣಪತ್ರಗಳಲ್ಲಿ ಭದ್ರತಾ ಲೋಪ: ಜಾಗತಿಕ ತಂತ್ರಜ್ಞಾನ ವಲಯದಲ್ಲಿ ಆತಂಕ●ಹಾಸನ ಕಾಳಸಂತೆಗೆ ಪಡಿತರ ಅಕ್ಕಿ ಮಾರಾಟ ಯತ್ನ – ಕ್ವಿಂಟಲ್‌ ಗಟ್ಟಲೆ ಅಕ್ಕಿ, ರಾಗಿ ವಶ●ಸದ್ಯದಲ್ಲೆ ಕಬ್ಬು ಬೆಳೆಗಾರರ ಸಭೆ ಕರೆದಿದ್ದೇನೆ – ಸಿಎಂ ಡಿ.ಕೆ ಶಿವಕುಮಾರ್●ರಾಜ್ಯದಲ್ಲಿ ಐದು ದಿನಗಳಲ್ಲಿ ಮಳೆ ಸಾಧ್ಯತೆ – ಹವಾಮಾನ ಇಲಾಖೆ ಮುನ್ಸೂಚನೆ●ಸಿದ್ದರಾಮಯ್ಯ ಅವರನ್ನು ಅಧಿಕಾರದಿಂದ ಇಳಿಸಲು ವ್ಯವಸ್ಥಿತ ಸಂಚು ರೂಪಿಸಿ ಯಶಸ್ವಿಗೊಂಡಿದ್ದಾರೆ – ಸಿಎಂ ಯಡಿಯೂರಪ್ಪ●ಚುನಾವಣಾ ಆಯುಕ್ತರಿಗೆ ರಕ್ಷಣೆ ನೀಡುವ ಕಾನೂನು ರದ್ದುಗೊಳಿಸಿ – ಮಲ್ಲಿಕಾರ್ಜುನ ಖರ್ಗೆ ಆಗ್ರಹ●ದಸರಾ ವೇಳೆ ಪೊಲೀಸರ ಲಾಠಿ ಏಟಿಗೆ 4 ವರ್ಷದ ಬಾಲಕ ಗಂಭೀರ – ICUನಲ್ಲಿ ಅಂತಿಮ ಹೋರಾಟ●ಸೌದಿ ವಿಮಾನ ನಿಲ್ದಾಣದ ಮೇಲೆ ಭೀಕರ ದಾಳಿ – 8 ಮಂದಿಗೆ ಗಾಯ, ಇಬ್ಬರ ಅಂತ್ಯ●ನಂದಿಧ್ವಜ ಪೂಜೆಗೆ ಸಚಿವರಿಗೆ ಅವಕಾಶ ನಿರಾಕರಿಸಿದ ಅಧಿಕಾರಿಗಳ ವಿರುದ್ಧ ತನಿಖೆಗೆ ಆದೇಶ: ಮುಖ್ಯಮಂತ್ರಿ ಡಿ ಕೆ ಶಿವಕುಮಾರ್‌●300 ವರ್ಷಗಳಷ್ಟು ಹಳೆಯ ಐತಿಹಾಸಿಕ ರೇಸ್‌ಕೋರ್ಸ್ ಮಸೀದಿಯ ವಿದ್ಯುತ್ ಹಾಗೂ ನೀರು ಸಂಪರ್ಕ ಕಡಿತ: ತುರ್ತು ರಕ್ಷಣೆ ಕೋರಿದ ದೆಹಲಿ ವಕ್ಫ್ ಮಂಡಳಿ●ತಿಹಾರ್ ಜೈಲಿನಿಂದ ಬಿಡುಗಡೆಯಾದ ಬೆನ್ನಲ್ಲೇ ಸೌರವ್ ದಾಸ್ ಹಾಗೂ ಅಶೋತ್ ರಾಂಕಾಗೆ ದೆಹಲಿ ಅಪರಾಧ ವಿಭಾಗದಿಂದ ಸಮನ್ಸ್

ಮುಂದಿನ ನಾಲ್ಕು ತಿಂಗಳಲ್ಲಿ ಗ್ರೇಟರ್ ಬೆಂಗಳೂರು ಚುನಾವಣೆಗೆ ಸಿದ್ಧತೆ: ಡಿಸಿಎಂ ಡಿ.ಕೆ.ಶಿವಕುಮಾರ್

P

Peepal Media Desk • ಮೀಡಿಯಾ, ರಾಜಕೀಯ, ರಾಜ್ಯ

• 1 ನಿಮಿಷದ ಓದು

ಮುಂದಿನ ನಾಲ್ಕು ತಿಂಗಳಲ್ಲಿ ಗ್ರೇಟರ್ ಬೆಂಗಳೂರು ಚುನಾವಣೆಗೆ ಸಿದ್ಧತೆ: ಡಿಸಿಎಂ ಡಿ.ಕೆ.ಶಿವಕುಮಾರ್

“ಮುಂದಿನ ನಾಲ್ಕು ತಿಂಗಳಲ್ಲಿ ಗ್ರೇಟರ್ ಬೆಂಗಳೂರು ಚುನಾವಣೆಗೆ ಸಿದ್ಧತೆ ನಡೆಸಲಾಗುವುದು. ಮೊದಲು ಮೀಸಲಾತಿ ಹಾಗೂ ವಲಯವಾರು ವಿಭಾಗಗಳನ್ನು ರಚಿಸಲಾಗುವುದು. ಚುನಾವಣೆ ವಿಳಂಬ ಮಾಡುವುದರಲ್ಲಿ ಯಾವುದೇ ಅರ್ಥವಿಲ್ಲ” ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ತಿಳಿಸಿದರು.

ಮೈಸೂರಿನ ವಿಮಾನ ನಿಲ್ದಾಣದಲ್ಲಿ ಮಾಧ್ಯಮಗಳಿಗೆ ಶುಕ್ರವಾರ ಪ್ರತಿಕ್ರಿಯೆ ನೀಡಿದರು.

ಗ್ರೇಟರ್ ಬೆಂಗಳೂರು ವಿಧೇಯಕಕ್ಕೆ ರಾಜ್ಯಪಾಲರ ಅಂಕಿತ ದೊರಕಿದ್ದು ಚುನಾವಣೆ ಯಾವಾಗ ನಡೆಸಲಾಗುತ್ತದೆ ಎಂದು ಕೇಳಿದಾಗ, “ಈ ಬಗ್ಗೆ ಸರ್ವಪಕ್ಷ ಸಭೆ ನಡೆಸಲಾಗುವುದು. ಯಾವ ರೀತಿ ವಿಭಾಗಗಳನ್ನು ಮಾಡಬೇಕು ಎಂದು ಅವರ ಬಳಿಯೂ ಸಲಹೆ ಕೇಳಲಾಗುವುದು. ಸದನದಲ್ಲಿಈ ಬಗ್ಗೆ ಎಲ್ಲರೂ ತಮ್ಮ ಸಲಹೆ ಸೂಚನೆಗಳನ್ನು ನೀಡಿದ್ದಾರೆ. ಕ್ಯಾಬಿನೆಟ್ ಉಪ ಸಮಿತಿ ರಚನೆ ಮಾಡಲಾಗಿತ್ತು. ಅವರ ಶೇ 90 ರಷ್ಟು ಅಭಿಪ್ರಾಯಗಳನ್ನು ಪರಿಗಣಿಸಲಾಗಿದೆ. ಎಲ್ಲರನ್ನು ವಿಶ್ವಾಸಕ್ಕೆ ಪಡೆದು ಚುನಾವಣೆ ನಡೆಸಲಾಗುವುದು. ಹೊಸ ಪ್ರದೇಶಗಳನ್ನು ಸೇರಿಸಲು ವಿಳಂಬವಾಗುತ್ತದೆ. ಈಗ ಹೇಗಿದೆಯೋ ಅದೇ ರೀತಿ ಮುಂದುವರೆಯಲಾಗುವುದು” ಎಂದು ತಿಳಿಸಿದರು.

ವಿಪಕ್ಷ ನಾಯಕ ಆರ್.ಅಶೋಕ್ ಅವರು ಇದನ್ನು ಕ್ವಾರ್ಟರ್ ಬೆಂಗಳೂರು ಎಂದು ಲೇವಡಿ ಮಾಡಿರುವ ಬಗ್ಗೆ ಕೇಳಿದಾಗ, “ಈ ವಿಧೇಯಕವು ಮೊದಲಿಗೆ ಬಂದಾಗಲೇ ವಿರೋಧ ವ್ಯಕ್ತಪಡಿಸಬೇಕಿತ್ತು. ಸದನದಲ್ಲೇಕೆ ಜಾರಿಗೆ ತರಲು ಒಪ್ಪಿಗೆ ಸೂಚಿಸಿದರು. ಅವರು ಕ್ವಾರ್ಟರ್ ಬೆಂಗಳೂರು, ಫುಲ್ ಬೆಂಗಳೂರು ಎಂದು ಏನಾದರು ಹೇಳಲಿ. ಆದರೆ ಅವರು ಏಕೆ ಸದನದಲ್ಲಿ ಸಲಹೆಗಳನ್ನು ನೀಡಿದರು. ವಿರೋಧ ಪಕ್ಷದವರು ಅಷ್ಟು ಮಾತನಾಡಲಿಲ್ಲ ಎಂದರೆ ಗೌರವ ಕಡಿಮೆ ಅಲ್ಲವೇ? ಹೀಗಾಗಿ ಮಾತನಾಡುತ್ತಿದ್ದಾರೆ. ಅವರು ಬೆಂಗಳೂರಿನ ಒಂದು ಭಾಗ ಅವರಿಗೆ ಏನು ಗೌರವ ನೀಡಲಾಗುವುದೋ ಅದನ್ನು ನಾವು ನೀಡುತ್ತೇವೆ” ಎಂದರು.

ಶಿವಕುಮಾರ್ ಹಿಡಿದ ಕೆಲಸ ಮಾಡಿ ಮುಗಿಸುತ್ತಾರೆ. ಆದರೆ ರಾಮನಗರ ಹೆಸರು ಬದಲಾವಣೆಯಲ್ಲಿ ತಡವಾಗುತ್ತಿರುವ ಬಗ್ಗೆ ಕೇಳಿದಾಗ, “ತಡವಾಗುತ್ತಿದೆ ಎಂದು ಹೇಳಿದವರು ಯಾರು? ಒಳ್ಳೆ ಶುಭ ಮುಹೂರ್ತ, ಶುಭ ಘಳಿಗೆಯಲ್ಲಿ ಕಾನೂನಿನ ಅಡಿಯಲ್ಲಿಯೇ ಘೋಷಣೆ ಮಾಡಲಾಗುವುದು. ಶೀಘ್ರದಲ್ಲಿಯೇ ಸಮಯ ತಿಳಿಸುತ್ತೇನೆ” ಎಂದರು.

ಪೆಹಲ್ಗಾಮ್ ದಾಳಿಯನ್ನು ರಾಜಕೀಯಕ್ಕೆ ಬಳಸಿಕೊಳ್ಳಬಾರದು ಎಂದು ಕಾಂಗ್ರೆಸ್ ತೀರ್ಮಾನ ಮಾಡಿರುವ ಬಗ್ಗೆ ಕೇಳಿದಾಗ, “ಪಕ್ಷ, ವ್ಯಕ್ತಿಗಿಂತ ದೇಶ ದೊಡ್ಡದು ಎಂಬುದು ನಮ್ಮ ಒಮ್ಮತದ ತೀರ್ಮಾನ. ಪ್ರಧಾನಿಗಳಿಗೆ ನೀವು ಯಾವ ತೀರ್ಮಾನ ತೆಗೆದುಕೊಂಡರೂ ಬೆಂಬಲ ಸೂಚಿಸುವುದಾಗಿ, ಜೊತೆಗೆ ಯಾವ ರಾಷ್ಟ್ರಕ್ಕೂ ಮಣಿಯಬಾರದು ಎಂದು ಹೇಳಿದ್ದೆವು” ಎಂದರು.

“ನಮ್ಮ ಸಂಸದರು ಸಹಿ ಮಾಡಿ ಪ್ರಧಾನಿಗಳಿಗೆ ನೀಡುತ್ತಿದ್ದಾರೆ. ಏನು ಬೆಳವಣಿಗೆಯಾಗಿದೆ ಎಂದು ತಿಳಿಸಬೇಕು ಎಂದು ಹೇಳಿದ್ದೇವೆ. ಬೇರೆ ದೇಶದವರು ನಮ್ಮ ದೇಶದ ಸ್ವಾಭಿಮಾನದ ಬಗ್ಗೆ ಮಾತನಾಡುತ್ತಿದ್ದಾರೆ. ಇಂದಿರಾಗಾಂಧಿ ಅವರ ಕಾಲದಿಂದಲೂ ನಾವು ಯಾರ ಹಂಗಿಗೂ ಒಳಗಾದವರಲ್ಲ. ಇಂತಹ ಸಂದರ್ಭದಲ್ಲಿ ಸಂಸತ್ತಿನಲ್ಲಿ ಚರ್ಚೆ ಮಾಡಬೇಕು ಎಂದು ಕೇಳುವುದು ನಮ್ಮ ಹಕ್ಕು” ಎಂದರು.

ಕಬಿನಿ ಸಂರಕ್ಷಿತ ಪ್ರದೇಶದಲ್ಲಿ ಅಕ್ರಮ ರೆಸಾರ್ಟ್ ಗಳ ಬಗ್ಗೆ ಕೇಳಿದಾಗ, “ಈ ಬಗ್ಗೆ ಪಟ್ಟಿ ಮಾಡಿ ನನಗೆ ನೀಡಿ ಇದರ ಬಗ್ಗೆ ಚರ್ಚೆ ನಡೆಸಲಾಗುವುದು” ಎಂದರು.

63 ನೇ ಹುಟ್ಟುಹಬ್ಬ ಆಚರಣೆಗೆ ಶುಭಸುದ್ದಿ ನೀಡುವಿರಾ ಎಂದು ಕೇಳಿದಾಗ, “ನಾನು ಈ ವರ್ಷ ಹುಟ್ಟುಹಬ್ಬ ಆಚರಣೆ ಮಾಡಿಕೊಂಡಿಲ್ಲ. ಹೊರಗಡೆ ಹೋಗುವುದು ಬೇಡವೆಂದು ನಮ್ಮ ಕುಟುಂಬ ಸದಸ್ಯರ ಜೊತೆ ರಾಜ್ಯದ ಅರಣ್ಯ ಸಂಪತ್ತು ವೀಕ್ಷಣೆ ಮಾಡಿದ್ದೇನೆ. ಈ ಬಗ್ಗೆ ನಿಮ್ಮೆಲ್ಲರ ಆಶೀರ್ವಾದವಿರಲಿ” ಎಂದರು.

P

Peepal Media Desk

Peepal Media · ಮೀಡಿಯಾ ವಿಭಾಗ

ಸಂಬಂಧಿತ ಸುದ್ದಿಗಳು

Exit mobile version